1 ಅರಸುಗಳು 8:43 - ಕನ್ನಡ ಸಮಕಾಲಿಕ ಅನುವಾದ43 ನೀವು ವಾಸಮಾಡುವ ಪರಲೋಕದಿಂದ ಕೇಳಿ, ಪರದೇಶಿಯು ಕೇಳಿದ್ದೆಲ್ಲವನ್ನು ನೆರವೇರಿಸಿರಿ. ಆಗ ಭೂಲೋಕದ ಎಲ್ಲಾ ಜನರೂ ನಿಮ್ಮ ನಾಮವನ್ನು ತಿಳಿದು, ನಿಮ್ಮ ಜನರಾದ ಇಸ್ರಾಯೇಲರಂತೆ ನಿಮಗೆ ಭಯಭಕ್ತಿಯುಳ್ಳವರಾಗಿ, ನಾನು ಕಟ್ಟಿಸಿದ ಈ ಆಲಯವು ನಿಮ್ಮ ಹೆಸರಿನಿಂದ ಕರೆಯಲಾಗಿದೆ ಎಂದು ತಿಳಿದುಕೊಳ್ಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ನಿನ್ನ ನಿವಾಸವಾಗಿರುವ ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ, ಅವನು ಬೇಡಿಕೊಂಡದ್ದನ್ನು ಅನುಗ್ರಹಿಸು. ಆಗ ಪರರಾಜ್ಯದವರೂ, ಲೋಕದ ಎಲ್ಲಾ ಜನರು ನಿನ್ನ ನಾಮಮಹತ್ತನ್ನು ತಿಳಿದು, ನಿನ್ನ ಜನರಾದ ಇಸ್ರಾಯೇಲರಂತೆ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನಾನು ನಿನ್ನ ಹೆಸರಿಗಾಗಿ ಈ ಆಲಯವನ್ನು ಕಟ್ಟಸಿದ್ದೇನೆಂದು ತಿಳಿದುಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ನಿಮ್ಮ ನಿವಾಸವಾಗಿರುವ ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ ಅವನು ಬೇಡಿಕೊಂಡದ್ದನ್ನು ಅನುಗ್ರಹಿಸಿರಿ; ಆಗ ಲೋಕದ ಎಲ್ಲಾ ಜನರು ನಿಮ್ಮ ನಾಮಮಹತ್ತನ್ನು ತಿಳಿದು, ನಿಮ್ಮ ಜನರಾದ ಇಸ್ರಯೇಲರಂತೆ ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿ, ನಾನು ನಿಮ್ಮ ಹೆಸರಿಗಾಗಿ ಈ ಆಲಯವನ್ನು ಕಟ್ಟಿಸಿದೆನೆಂದು ತಿಳಿದುಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ನಿನ್ನ ನಿವಾಸವಾಗಿರುವ ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ ಅವನು ಬೇಡಿಕೊಂಡದ್ದನ್ನು ಅನುಗ್ರಹಿಸು; ಆಗ ಲೋಕದ ಎಲ್ಲಾ ಜನರೂ ನಿನ್ನ ನಾಮಮಹತ್ತನ್ನು ತಿಳಿದು ನಿನ್ನ ಜನರಾದ ಇಸ್ರಾಯೇಲ್ಯರಂತೆ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ ನಾನು ನಿನ್ನ ಹೆಸರಿಗಾಗಿ ಈ ಆಲಯವನ್ನು ಕಟ್ಟಿಸಿದ್ದೇನೆಂದು ತಿಳಿದುಕೊಳ್ಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 ನಿನ್ನ ನಿವಾಸವಾದ ಪರಲೋಕದಿಂದಲೇ ಅವರ ಪ್ರಾರ್ಥನೆಗಳನ್ನು ದಯವಿಟ್ಟು ಆಲಿಸು, ಅನ್ಯ ಸ್ಥಳದವರಾದ ಆ ಜನರು ನಿನ್ನಲ್ಲಿ ಬೇಡುವುದನ್ನೆಲ್ಲ ದಯವಿಟ್ಟು ಈಡೇರಿಸು. ಆಗ, ಇಸ್ರೇಲಿನ ಜನರಂತೆ ಭೂಲೋಕದವರೆಲ್ಲರಿಗೂ ನಿನ್ನ ಹೆಸರು ಗೊತ್ತಾಗುವುದು ಮತ್ತು ಅವರು ನಿನಗೆ ಭಯಪಡುವರು. ಈ ಆಲಯವನ್ನು ನಿನ್ನ ಗೌರವಕ್ಕಾಗಿ ನಾನು ಕಟ್ಟಿಸಿದೆನೆಂಬುದು ಆಗ ಎಲ್ಲಾ ಕಡೆಯ ಜನರಿಗೂ ತಿಳಿಯುವುದು. ಅಧ್ಯಾಯವನ್ನು ನೋಡಿ |