1 ಅರಸುಗಳು 8:46 - ಕನ್ನಡ ಸಮಕಾಲಿಕ ಅನುವಾದ46 “ಪಾಪ ಮಾಡದವನು ಯಾವನೂ ಇಲ್ಲವಲ್ಲಾ. ಆದ್ದರಿಂದ ಅವರು ನಿಮಗೆ ವಿರೋಧವಾಗಿ ಪಾಪಮಾಡಲು, ನೀವು ಅವರ ಮೇಲೆ ಕೋಪಿಸಿಕೊಂಡು ದೂರವಾದರೂ, ಸಮೀಪವಾದರೂ ಶತ್ರುವಿನ ದೇಶಕ್ಕೆ ಅವರು ಸೆರೆಯಾಗಿ ಹೋಗುವಂತೆ ನೀವು ಅವರನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿದರೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 “ಅವರು ನಿನಗೆ ವಿರುದ್ಧವಾಗಿ ಪಾಪ ಮಾಡಬಹುದು. ಪಾಪಮಾಡದ ಮನುಷ್ಯನು ಒಬ್ಬನೂ ಇಲ್ಲ. ನೀನು ಅವರ ಮೇಲೆ ಕೋಪಗೊಂಡು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿದಾಗ ಮತ್ತು ಆ ಶತ್ರುಗಳು ಅವರನ್ನು ಸೆರೆಹಿಡಿದು ದೂರದಲ್ಲಾಗಲಿ, ಸಮೀಪದಲ್ಲಾಗಲಿ ಇರುವ ತಮ್ಮ ದೇಶಕ್ಕೆ ಅವರನ್ನು ಒಯ್ದಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)46 “ಅವರು ನಿಮಗೆ ವಿರುದ್ಧ ಪಾಪಮಾಡಬಹುದು. ಪಾಪಮಾಡದ ವ್ಯಕ್ತಿ ಒಬ್ಬನೂ ಇಲ್ಲ. ನೀವು ಅವರ ಮೇಲೆ ಕೋಪಗೊಂಡು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿದಾಗ, ಮತ್ತು ಆ ಶತ್ರುಗಳು ಅವರನ್ನು ಸೆರೆಹಿಡಿದು ದೂರದಲ್ಲಾಗಲಿ ಸಮೀಪದಲ್ಲಾಗಲಿ ಇರುವ ತಮ್ಮ ದೇಶಕ್ಕೆ ಅವರನ್ನು ಒಯ್ದಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)46 ಅವರು ನಿನಗೆ ವಿರುದ್ಧವಾಗಿ ಪಾಪಮಾಡಾರು. ಪಾಪಮಾಡದ ಮನುಷ್ಯನು ಒಬ್ಬನೂ ಇಲ್ಲವಲ್ಲಾ. ನೀನು ಅವರ ಮೇಲೆ ಕೋಪಗೊಂಡು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿದಾಗ ಮತ್ತು ಆ ಶತ್ರುಗಳು ಅವರನ್ನು ಸೆರೆಹಿಡಿದು ದೂರದಲ್ಲಾಗಲಿ ಸಮೀಪದಲ್ಲಾಗಲಿ ಇರುವ ತಮ್ಮ ದೇಶಕ್ಕೆ ಅವರನ್ನು ಒಯ್ದಾಗ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್46 “ನಿನ್ನ ಜನರು ನಿನ್ನ ವಿರುದ್ಧ ಪಾಪ ಮಾಡುತ್ತಾರೆ. ಪ್ರತಿಯೊಬ್ಬ ವ್ಯಕ್ತಿಯೂ ಪಾಪಮಾಡುತ್ತಾನೆಂಬುದು ನನಗೆ ತಿಳಿದಿದೆ. ನಿನ್ನ ಜನರ ಬಗ್ಗೆ ನೀನು ಕೋಪದಿಂದಿರುವೆ. ಅವರ ಶತ್ರುಗಳು ಅವರನ್ನು ಸೋಲಿಸುವಂತೆ ಮಾಡುವೆ. ಅವರ ಶತ್ರುಗಳು ಅವರನ್ನು ಸೆರೆಯಾಳುಗಳನ್ನಾಗಿ ಕೆಲವು ದೂರದೇಶಗಳಿಗೆ ಸಾಗಿಸುವರು. ಅಧ್ಯಾಯವನ್ನು ನೋಡಿ |