Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:52 - ಕನ್ನಡ ಸಮಕಾಲಿಕ ಅನುವಾದ

52 “ನಿಮ್ಮ ಸೇವಕನ ವಿಜ್ಞಾಪನೆಗೂ, ನಿಮ್ಮ ಜನರಾದ ಇಸ್ರಾಯೇಲರ ವಿಜ್ಞಾಪನೆಗೂ ನಿಮ್ಮ ಕಣ್ಣುಗಳು ತೆರೆದಿರಲಿ. ಅವರು ನಿಮ್ಮನ್ನು ಬೇಡಿಕೊಳ್ಳುವಾಗಲೆಲ್ಲಾ ಅವರ ವಿಜ್ಞಾಪನೆಗಳಿಗೆ ಕಿವಿಗೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

52 ನಿನ್ನ ಸೇವಕನ ಮೇಲೆಯೂ, ನಿನ್ನ ಪ್ರಜೆಗಳಾದ ಇಸ್ರಾಯೇಲರ ಮೇಲೆಯೂ ಕಟಾಕ್ಷವಿಟ್ಟು ಅವರು ಪ್ರಾರ್ಥಿಸುವಾಗೆಲ್ಲಾ ಅವರ ವಿಜ್ಞಾಪನೆಗಳನ್ನು ಲಾಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

52 “ಹೇ ಸರ್ವೇಶ್ವರಾ, ನಿಮ್ಮ ದಾಸನಾದ ಅರಸನ ಮೇಲೆಯೂ ಪ್ರಜೆಗಳಾದ ಇಸ್ರಯೇಲರ ಮೇಲೆಯೂ ಕಟಾಕ್ಷವಿಟ್ಟು, ಅವರು ಪ್ರಾರ್ಥಿಸುವಾಗೆಲ್ಲಾ, ಅವರ ವಿಜ್ಞಾಪನೆಗಳನ್ನು ಆಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

52 ನಿನ್ನ ಸೇವಕನ ಮೇಲೆಯೂ ಪ್ರಜೆಗಳಾದ ಇಸ್ರಾಯೇಲ್ಯರ ಮೇಲೆಯೂ ಕಟಾಕ್ಷವಿಟ್ಟು ಅವರು ಪ್ರಾರ್ಥಿಸುವಾಗೆಲ್ಲಾ ಅವರ ವಿಜ್ಞಾಪನೆಗಳನ್ನು ಲಾಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

52 “ದೇವರಾದ ಯೆಹೋವನೇ, ನನ್ನ ಪ್ರಾರ್ಥನೆಗಳನ್ನು ಮತ್ತು ಇಸ್ರೇಲಿನ ನಿನ್ನ ಜನರ ಪ್ರಾರ್ಥನೆಗಳನ್ನು ದಯವಿಟ್ಟು ಆಲಿಸು. ಅವರು ಸಹಾಯಕ್ಕಾಗಿ ಯಾವ ಘಳಿಗೆಯಲ್ಲಾದರೂ ನಿನಗೆ ಮೊರೆಯಿಟ್ಟರೆ ಅದನ್ನು ಆಲಿಸು,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:52
5 ತಿಳಿವುಗಳ ಹೋಲಿಕೆ  

ಯೆಹೋವ ದೇವರನ್ನು ಕರೆಯುವವರು ಯಥಾರ್ಥವಾಗಿ ಕರೆಯುವುದಾದರೆ, ಅವರು ಅವರಿಗೆ ಸಮೀಪವಾಗಿದ್ದಾರೆ.


ನಿಮ್ಮ ಸೇವಕನು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಯನ್ನು ನೀವು ಕೇಳುವ ಹಾಗೆ, ‘ಇಲ್ಲಿ ನನ್ನ ನಾಮಪ್ರಭಾವ ಇರುವುದು,’ ಎಂದು ನೀವು ಹೇಳಿದ ಈ ಆಲಯದ ಮೇಲೆ ರಾತ್ರಿ ಹಗಲೂ ನಿಮ್ಮ ಕಟಾಕ್ಷವಿರಲಿ.


ಯೆಹೋವ ದೇವರೇ, ನೀವು ಒಳ್ಳೆಯವರೂ ಕ್ಷಮಿಸುವುದಕ್ಕೆ ಸಿದ್ಧರೂ ಆಗಿದ್ದೀರಿ. ನಿಮ್ಮನ್ನು ಬೇಡುವವರೆಲ್ಲರಿಗೆ ಪ್ರೀತಿಯಲ್ಲಿ ಸಮೃದ್ಧಿವಂತರೂ ಆಗಿರುವಿರಿ.


“ಈಗ ನನ್ನ ದೇವರೇ, ಈ ಸ್ಥಳದಲ್ಲಿ ಮಾಡಿದ ಪ್ರಾರ್ಥನೆಗೆ ನಿಮ್ಮ ಕಣ್ಣುಗಳು ತೆರೆದಿರಲಿ. ನಿಮ್ಮ ಕಿವಿಗಳು ಆಲಿಸುತ್ತಾ ಇರಲಿ.


ನೀವು ಈಜಿಪ್ಟಿನಿಂದ ನಮ್ಮ ಪಿತೃಗಳನ್ನು ಹೊರಗೆ ತಂದಾಗ ನಿಮ್ಮ ಸೇವಕನಾದ ಮೋಶೆಯ ಮುಖಾಂತರವಾಗಿ ಹೇಳಿದ ಹಾಗೆಯೇ ಸಾರ್ವಭೌಮ ಯೆಹೋವ ದೇವರೇ, ಅವರನ್ನು ನಿಮ್ಮ ಬಾಧ್ಯತೆಯಾಗಿ ಭೂಮಿಯ ಸಮಸ್ತ ಜನರೊಳಗಿಂದ ಪ್ರತ್ಯೇಕಿಸಿರಿ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು