1 ಅರಸುಗಳು 8:58 - ಕನ್ನಡ ಸಮಕಾಲಿಕ ಅನುವಾದ58 ನಮ್ಮ ಪಿತೃಗಳಿಗೆ ಕೊಟ್ಟ ಆಜ್ಞೆಗಳನ್ನು, ಅಪ್ಪಣೆಗಳನ್ನು, ನಿಯಮಗಳನ್ನು ಕೈಗೊಂಡು ಅವರ ಎಲ್ಲಾ ಮಾರ್ಗಗಳಲ್ಲಿ ನಡೆಯಲು ಅವರು ನಮ್ಮ ಹೃದಯಗಳನ್ನು ಅವರ ಕಡೆಗೆ ತಿರುಗಿಸಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201958 ನಾವು ನಮ್ಮ ಪೂರ್ವಿಕರಿಗೆ ಕೊಡಲ್ಪಟ್ಟ ಆಜ್ಞಾನಿಯಮವಿಧಿಗಳನ್ನು ಕೈಕೊಂಡು ಆತನ ಮಾರ್ಗದಲ್ಲಿ ನಡೆಯುವಂತೆ ನಮ್ಮ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿಕೊಳ್ಳಿಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)58 ನಮ್ಮ ಪೂರ್ವಜರಿಗೆ ಕೊಡಲಾದ ಆಜ್ಞಾನಿಯಮ ವಿಧಿಗಳನ್ನು ನಾವು ಕೈಗೊಂಡು, ದೈವಮಾರ್ಗದಲ್ಲಿ ನಡೆಯುವಂತೆ ನಮ್ಮ ಮನಸ್ಸನ್ನು ತಮ್ಮ ಕಡೆಗೆ ತಿರುಗಿಸಿಕೊಳ್ಳಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)58 ನಾವು ನಮ್ಮ ಪಿತೃಗಳಿಗೆ ಕೊಡಲ್ಪಟ್ಟ ಆಜ್ಞಾನಿಯಮ ವಿಧಿಗಳನ್ನು ಕೈಕೊಂಡು ಆತನ ಮಾರ್ಗದಲ್ಲಿ ನಡೆಯುವಂತೆ ನಮ್ಮ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿಕೊಳ್ಳಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್58 ಈ ರೀತಿಯಲ್ಲಿ ನಾವು ಆತನ ಕಡೆಗೆ ತಿರುಗಿ, ಆತನನ್ನು ಅನುಸರಿಸುವಂತೆ ಆತನು ಮಾಡಲಿ. ಆತನು ನಮ್ಮ ಪೂರ್ವಿಕರಿಗೆ ನೀಡಿದ ಎಲ್ಲ ಕಟ್ಟಳೆಗಳಿಗೆ, ತೀರ್ಪುಗಳಿಗೆ ಮತ್ತು ಆಜ್ಞೆಗಳಿಗೆ ವಿಧೇಯರಾಗಿರಲು ಆಗ ನಮಗೆ ಸಾಧ್ಯವಾಗುತ್ತದೆ. ಅಧ್ಯಾಯವನ್ನು ನೋಡಿ |
ಇದಲ್ಲದೆ ಯೆಹೋವ ದೇವರು ತಾವೇ ದೇವರಾಗಿದ್ದಾರೆ. ಅವರ ಹೊರತು ಬೇರೊಬ್ಬರಿಲ್ಲವೆಂದು ಭೂಲೋಕದ ಜನರೆಲ್ಲರೂ ತಿಳಿಯುವ ಹಾಗೆ, ಕಾರ್ಯಕ್ಕೆ ತಕ್ಕದ್ದಾಗಿ ಸಕಲ ಕಾಲಗಳಲ್ಲಿ ತಮ್ಮ ಸೇವಕನ ನ್ಯಾಯವನ್ನೂ, ತಮ್ಮ ಜನರಾದ ಇಸ್ರಾಯೇಲಿನ ನ್ಯಾಯವನ್ನೂ ತೀರಿಸುವ ಹಾಗೆ, ನಾನು ಯೆಹೋವ ದೇವರ ಮುಂದೆ ವಿಜ್ಞಾಪನೆ ಮಾಡಿದ ಈ ನನ್ನ ಮಾತುಗಳು, ರಾತ್ರಿ ಹಗಲು ನಮ್ಮ ದೇವರಾದ ಯೆಹೋವ ದೇವರ ಬಳಿಯಲ್ಲಿ ಇರಲಿ.