Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 8:61 - ಕನ್ನಡ ಸಮಕಾಲಿಕ ಅನುವಾದ

61 ಇಂದಿನ ಹಾಗೆಯೇ ಅವರ ಕಟ್ಟಳೆಗಳಲ್ಲಿ ನಡೆಯಲೂ, ಅವರ ಆಜ್ಞೆಗಳನ್ನು ಕೈಗೊಳ್ಳಲೂ, ನಮ್ಮ ದೇವರಾದ ಯೆಹೋವ ದೇವರಿಗೆ ನಿಮ್ಮ ಹೃದಯಗಳು ಪೂರ್ಣವಾಗಿ ಒಪ್ಪಿಸಿಕೊಟ್ಟದ್ದಾಗಿರಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

61 ನೀವಾದರೋ ಈಗಿನಂತೆ ಮುಂದೆಯೂ ನಮ್ಮ ದೇವರಾದ ಯೆಹೋವನಲ್ಲಿ ಪೂರ್ಣ ಭಯಭಕ್ತಿಯುಳ್ಳವರಾಗಿ, ಆತನ ವಿಧಿಗಳನ್ನು ಅನುಸರಿಸಿ, ಆತನ ಆಜ್ಞೆಗಳನ್ನು ಕೈಕೊಳ್ಳಿರಿ” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

61 ನೀವಾದರೋ ಈಗಿನಂತೆ ಮುಂದೆಯೂ ನಮ್ಮ ದೇವರಾದ ಸರ್ವೇಶ್ವರನಲ್ಲಿ ಪೂರ್ಣಭಯಭಕ್ತಿಯುಳ್ಳವರಾಗಿ ಅವರ ವಿಧಿಗಳನ್ನು ಅನುಸರಿಸಿ ಆತನ ಆಜ್ಞೆಗಳನ್ನು ಕೈಗೊಳ್ಳಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

61 ನೀವಾದರೋ ಈಗಿನಂತೆ ಮುಂದೆಯೂ ನಮ್ಮ ದೇವರಾದ ಯೆಹೋವನಲ್ಲಿ ಪೂರ್ಣಭಯಭಕ್ತಿಯುಳ್ಳವರಾಗಿ ಆತನ ವಿಧಿಗಳನ್ನು ಅನುಸರಿಸಿ ಆತನ ಆಜ್ಞೆಗಳನ್ನು ಕೈಕೊಳ್ಳಿರಿ ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

61 ನಮ್ಮ ದೇವರಾದ ಯೆಹೋವನಿಗೆ ನೀವು ಪೂರ್ಣ ಭಯಭಕ್ತಿಯುಳ್ಳವರಾಗಿದ್ದು ಆತನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಸದಾ ಅನುಸರಿಸಿರಿ; ಅವುಗಳಿಗೆ ವಿಧೇಯರಾಗಿರಿ. ಈಗ ನೀವು ವಿಧೇಯರಾಗಿರುವಂತೆಯೇ ಇನ್ನು ಮುಂದೆಯೂ ಆತನಿಗೆ ವಿಧೇಯರಾಗಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 8:61
14 ತಿಳಿವುಗಳ ಹೋಲಿಕೆ  

ಸೊಲೊಮೋನನು ಮುದುಕನಾದ ಕಾಲದಲ್ಲಿ ಅವನ ಪತ್ನಿಯರು ಅನ್ಯದೇವರುಗಳ ಕಡೆಗೆ ಅವನ ಹೃದಯವನ್ನು ತಿರುಗಿಸಿದರು. ಅವನ ಹೃದಯವು ತನ್ನ ತಂದೆ ದಾವೀದನ ಹೃದಯದ ಹಾಗೆ ತನ್ನ ದೇವರಾದ ಯೆಹೋವ ದೇವರ ಸಂಗಡ ಪರಿಪೂರ್ಣವಾಗಿ ಇರಲಿಲ್ಲ.


“ಯೆಹೋವ ದೇವರೇ, ನಾನು ಸತ್ಯದಿಂದಲೂ, ಪೂರ್ಣಹೃದಯದಿಂದಲೂ ನಿಮ್ಮ ಮುಂದೆ ನಡೆದು, ನಿಮ್ಮ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂಬುದನ್ನು ಜ್ಞಾಪಕಕ್ಕೆ ತಂದುಕೊಳ್ಳಿರಿ,” ಎಂದು ಬೇಡಿಕೊಂಡನು. ಹೀಗೆ ಹಿಜ್ಕೀಯನು ವ್ಯಥೆಪಟ್ಟು ಅತ್ತನು.


ಪ್ರಿಯರೇ, ಇಂಥಾ ವಾಗ್ದಾನಗಳು ನಮಗಿರುವುದರಿಂದ ನಮ್ಮ ದೇಹಾತ್ಮಗಳನ್ನು ಮಲಿನಗೊಳಿಸುವ ಎಲ್ಲಾ ವಿಷಯಗಳಿಂದ ನಮ್ಮನ್ನು ಶುದ್ಧಮಾಡಿ, ದೇವರ ಮೇಲಿನ ಭಯಭಕ್ತಿಯಿಂದ ನಮ್ಮ ಪವಿತ್ರತೆಯನ್ನು ಪರಿಪೂರ್ಣಗೊಳಿಸೋಣ.


ಅವನು ಪೂಜಾಸ್ಥಳಗಳನ್ನು ತೆಗೆದು ಹಾಕದಿದ್ದರೂ ಆಸನ ಹೃದಯವು ತನ್ನ ಜೀವಮಾನದಲ್ಲೆಲ್ಲಾ ಯೆಹೋವ ದೇವರ ದೃಷ್ಟಿಯಲ್ಲಿ ದೋಷವಿಲ್ಲದ್ದಾಗಿತ್ತು.


ಆಗ ಯೆಹೋವ ದೇವರು ಸೈತಾನನಿಗೆ, “ನನ್ನ ಸೇವಕ ಯೋಬನನ್ನು ಗಮನಿಸಿದೆಯಾ? ಅವನು ನಿರ್ದೋಷಿಯೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ತೊರೆಯುವವನೂ ಆಗಿದ್ದಾನೆ. ಅವನ ಹಾಗೆ ಭೂಲೋಕದಲ್ಲಿ ಒಬ್ಬರೂ ಇಲ್ಲ,” ಎಂದರು.


“ಇದಲ್ಲದೆ ನನ್ನ ಮಗ ಸೊಲೊಮೋನನೇ, ನೀನು ನಿನ್ನ ತಂದೆಯ ದೇವರನ್ನು ಅರಿತುಕೊಂಡು, ಪೂರ್ಣಹೃದಯದಿಂದಲೂ, ಪೂರ್ಣಮನಸ್ಸಿನಿಂದಲೂ ದೇವರನ್ನು ಸೇವಿಸು. ಏಕೆಂದರೆ, ಯೆಹೋವ ದೇವರು ಸಕಲ ಹೃದಯಗಳನ್ನು ಪರಿಶೋಧಿಸಿ, ಯೋಚನೆಗಳ ಕಲ್ಪನೆಯನ್ನೆಲ್ಲಾ ತಿಳಿದಿದ್ದಾರೆ. ನೀನು ದೇವರನ್ನು ಹುಡುಕಿದರೆ, ದೇವರು ನಿನಗೆ ಸಿಕ್ಕುವರು. ನೀನು ದೇವರನ್ನು ಬಿಟ್ಟುಬಿಟ್ಟರೆ, ದೇವರು ಸಹ ನಿನ್ನನ್ನು ಎಂದೆಂದಿಗೂ ತೊರೆದುಬಿಡುವರು.


ಅಬಿಯಾಮನು, ತನ್ನ ಪಿತೃವಾದ ದಾವೀದನ ಹೃದಯದ ಪ್ರಕಾರ, ಅವನ ಹೃದಯವು ತನ್ನ ದೇವರಾದ ಯೆಹೋವ ದೇವರ ಮುಂದೆ ಪೂರ್ಣವಾಗಿರದೆ, ತನಗೆ ಮುಂಚೆ ಇದ್ದ ತನ್ನ ತಂದೆ ಮಾಡಿದ ಸಮಸ್ತ ಪಾಪಗಳಲ್ಲಿ ನಡೆದನು.


ನೀವು ನಿಮ್ಮ ದೇವರಾದ ಯೆಹೋವ ದೇವರ ಮುಂದೆ ನಿರ್ದೋಷಿಯಾಗಿರಬೇಕು.


ಅಬ್ರಾಮನು ತೊಂಬತ್ತೊಂಬತ್ತು ವರ್ಷದವನಾದಾಗ, ಯೆಹೋವ ದೇವರು ಅಬ್ರಾಮನಿಗೆ ಕಾಣಿಸಿಕೊಂಡು, “ನಾನೇ ಸರ್ವಶಕ್ತ ದೇವರು. ನೀನು ನನ್ನ ಸನ್ನಿಧಿಯಲ್ಲಿಯೇ ನಡೆಯುತ್ತಾ ದೋಷವಿಲ್ಲದವನಾಗಿರು.


ನಿರ್ದೋಷಿಯನ್ನು ಗಮನಿಸು; ಯಥಾರ್ಥನನ್ನು ನೋಡು; ಸಮಾಧಾನ ಹುಡುಕುವವರಿಗೆ ಒಳ್ಳೆಯ ಭವಿಷ್ಯವಿದೆ.


ಊಚ್ ದೇಶದಲ್ಲಿ ಯೋಬ ಎಂಬ ಮನುಷ್ಯನಿದ್ದನು. ಅವನು ನಿರ್ದೋಷಿಯೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೆಟ್ಟದ್ದನ್ನು ತೊರೆಯುವವನೂ ಆಗಿದ್ದನು.


ಆಗ ಜನರು ಸಂತೋಷವಾಗಿ ಕಾಣಿಕೆಗಳನ್ನು ಅರ್ಪಿಸಿದ್ದರಿಂದ, ಜನರು ಸಂತೋಷಪಟ್ಟರು. ಏಕೆಂದರೆ ಅವರು ಪೂರ್ಣಮನಸ್ಸಿನಿಂದ ಮನಃಪೂರ್ವಕವಾಗಿ ಯೆಹೋವ ದೇವರಿಗೆ ಅರ್ಪಿಸಿದರು. ಅರಸನಾದ ದಾವೀದನು ಮಹಾ ಸಂತೋಷಪಟ್ಟನು.


ಸೊಲೊಮೋನನು ಯೆಹೋವ ದೇವರನ್ನು ಪ್ರೀತಿಸಿ, ತನ್ನ ತಂದೆ ದಾವೀದನ ಕಟ್ಟಳೆಯಲ್ಲಿ ನಡೆಯುತ್ತಾ ಇದ್ದನು. ಆದರೂ ತಾನು ಎತ್ತರ ಸ್ಥಳಗಳಲ್ಲಿ ಬಲಿಯನ್ನೂ, ಧೂಪವನ್ನೂ ಅರ್ಪಿಸುತ್ತಾ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು