1 ಅರಸುಗಳು 8:63 - ಕನ್ನಡ ಸಮಕಾಲಿಕ ಅನುವಾದ63 ಸೊಲೊಮೋನನು ಯೆಹೋವ ದೇವರಿಗೆ ಸಮಾಧಾನದ ಬಲಿಗಳಾಗಿ 22,000 ಹೋರಿಗಳನ್ನೂ, 1,20,000 ಕುರಿಗಳನ್ನೂ ಅರ್ಪಿಸಿದನು. ಹೀಗೆಯೇ ಅರಸನೂ, ಇಸ್ರಾಯೇಲಿನ ಸಮಸ್ತ ಜನರೂ ಯೆಹೋವ ದೇವರ ಆಲಯವನ್ನು ಪ್ರತಿಷ್ಠೆ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201963 ಸೊಲೊಮೋನನು ಯೆಹೋವನಿಗೋಸ್ಕರ ಮಾಡಿದ ಸಮಾಧಾನಯಜ್ಞಕ್ಕಾಗಿ ವಧಿಸಿದ ಹೋರಿಗಳು ಇಪ್ಪತ್ತೆರಡು ಸಾವಿರ ಮತ್ತು ಕುರಿಗಳು ಲಕ್ಷದ ಇಪ್ಪತ್ತು ಸಾವಿರ, ಈ ಪ್ರಕಾರ ಅರಸನೂ ಎಲ್ಲಾ ಇಸ್ರಾಯೇಲರೂ ಯೆಹೋವನ ಆಲಯವನ್ನು ಪ್ರತಿಷ್ಠೆ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)63 ಸೊಲೊಮೋನನು ಸರ್ವೇಶ್ವರನಿಗೆ ಅರ್ಪಿಸಿದ ಶಾಂತಿಸಮಾಧಾನ ಬಲಿಗಾಗಿ ವಧಿಸಿದ ಹೋರಿಗಳು ಇಪ್ಪತ್ತೆರಡು ಸಾವಿರ; ಕುರಿಗಳು ಒಂದು ಲಕ್ಷದ ಇಪ್ಪತ್ತುಸಾವಿರ; ಈ ಪ್ರಕಾರ ಅರಸನೂ ಇಸ್ರಯೇಲರೆಲ್ಲರೂ ಸರ್ವೇಶ್ವರನ ಆಲಯವನ್ನು ಪ್ರತಿಷ್ಠಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)63 ಸೊಲೊಮೋನನು ಯೆಹೋವನಿಗೋಸ್ಕರ ಮಾಡಿದ ಸಮಾಧಾನಯಜ್ಞಕ್ಕಾಗಿ ವಧಿಸಿದ ಹೋರಿಗಳು ಇಪ್ಪತ್ತೆರಡು ಸಾವಿರ; ಕುರಿಗಳು ಲಕ್ಷದ ಇಪ್ಪತ್ತು ಸಾವಿರ. ಈ ಪ್ರಕಾರ ಅರಸನೂ ಎಲ್ಲಾ ಇಸ್ರಾಯೇಲ್ಯರೂ ಯೆಹೋವನ ಆಲಯವನ್ನು ಪ್ರತಿಷ್ಠಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್63 ಸೊಲೊಮೋನನು ಇಪ್ಪತ್ತೆರಡು ಸಾವಿರ ಹೋರಿಗಳನ್ನು, ಒಂದು ಲಕ್ಷದ ಇಪ್ಪತ್ತು ಸಾವಿರ ಕುರಿಗಳನ್ನು ಸಮಾಧಾನಯಜ್ಞವನ್ನಾಗಿ ಅರ್ಪಿಸಿದನು. ಹೀಗೆ ರಾಜನು ಮತ್ತು ಇಸ್ರೇಲರು ಆಲಯವನ್ನು ಯೆಹೋವನಿಗೆ ಪ್ರತಿಷ್ಠಿಸಿದರು. ಅಧ್ಯಾಯವನ್ನು ನೋಡಿ |
ನನ್ನ ದೇವರಾದ ಯೆಹೋವ ದೇವರಿಗೆ ಪ್ರತಿಷ್ಠೆ ಮಾಡುವುದಕ್ಕೂ, ದೇವಸನ್ನಿಧಿಗೆ ಪರಿಮಳ ಧೂಪವನ್ನು ಅರ್ಪಿಸುವ ನಿತ್ಯ ಸಮ್ಮುಖದ ರೊಟ್ಟಿಗೋಸ್ಕರವೂ, ಸಬ್ಬತ್ ದಿನಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ, ಇಸ್ರಾಯೇಲರಿಗೆ ನಿರಂತರವಾಗಿರಲು ನೇಮಿಸಿದ ನಮ್ಮ ದೇವರಾದ ಯೆಹೋವ ದೇವರ ಹಬ್ಬಗಳಲ್ಲಿಯೂ, ಉದಯಕಾಲದ ಸಾಯಂಕಾಲದ ದಹನಬಲಿಗಳಿಗೋಸ್ಕರವೂ ನಮ್ಮ ದೇವರಾದ ಯೆಹೋವ ದೇವರ ನಾಮಕ್ಕೆ ಆಲಯವನ್ನು ಕಟ್ಟಿಸುತ್ತೇನೆ.