Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 9:11 - ಕನ್ನಡ ಸಮಕಾಲಿಕ ಅನುವಾದ

11 ಸೊಲೊಮೋನನ ಇಷ್ಟದ ಪ್ರಕಾರ ಟೈರಿನ ಅರಸನಾದ ಹೀರಾಮನು ದೇವದಾರು ಮರಗಳನ್ನೂ, ತುರಾಯಿ ಮರಗಳನ್ನೂ, ಚಿನ್ನವನ್ನೂ ಕೊಟ್ಟಿದ್ದರಿಂದ ಸೊಲೊಮೋನನು ಟೈರಿನ ಅರಸನಾದ ಹೀರಾಮನಿಗೆ ಗಲಿಲಾಯ ದೇಶದಲ್ಲಿನ ಇಪ್ಪತ್ತು ಪಟ್ಟಣಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆನಂತರ ಅವನು ತನಗೆ ಬೇಕಾದಷ್ಟು ದೇವದಾರುಮರಗಳನ್ನೂ, ತುರಾಯಿಮರಗಳನ್ನೂ ಮತ್ತು ಬಂಗಾರವನ್ನೂ ಕೊಟ್ಟಂಥ ತೂರಿನ ಅರಸನಾದ ಹೀರಾಮನಿಗೆ ಗಲಿಲಾಯ ಪ್ರಾಂತ್ಯದಲ್ಲಿ ಇಪ್ಪತ್ತು ಪಟ್ಟಣಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ತನಗೆ ಬೇಕಾದಷ್ಟು ದೇವದಾರು ಮರಗಳನ್ನು, ತುರಾಯಿ ಮರಗಳನ್ನು ಹಾಗು ಬಂಗಾರವನ್ನು ಕೊಟ್ಟಿದ್ದ ಟೈರಿನ ಅರಸ ಹೀರಾಮನಿಗೆ, ಗಲಿಲೇಯ ಪ್ರಾಂತ್ಯದಲ್ಲಿನ ಇಪ್ಪತ್ತು ಪಟ್ಟಣಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ತನಗೆ ಬೇಕಾದಷ್ಟು ದೇವದಾರು ಮರಗಳನ್ನೂ ತುರಾಯಿ ಮರಗಳನ್ನೂ ಬಂಗಾರವನ್ನೂ ಕೊಟ್ಟಂಥ ತೂರಿನ ಅರಸನಾದ ಹೀರಾಮನಿಗೆ ಗಲಿಲಾಯ ಪ್ರಾಂತದಲ್ಲಿನ ಇಪ್ಪತ್ತು ಪಟ್ಟಣಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ರಾಜನಾದ ಸೊಲೊಮೋನನು ಇಪ್ಪತ್ತು ವರ್ಷಗಳ ತರುವಾಯ ಗಲಿಲಾಯದ ಇಪ್ಪತ್ತು ಪಟ್ಟಣಗಳನ್ನು ತೂರಿನ ರಾಜನಾದ ಹೀರಾಮನಿಗೆ ಬಿಟ್ಟುಕೊಟ್ಟನು. ಆಲಯವನ್ನು ಮತ್ತು ಅರಮನೆಯನ್ನು ನಿರ್ಮಿಸಲು ಹೀರಾಮನು ಸಹಾಯ ಮಾಡಿದ್ದರಿಂದ ಸೊಲೊಮೋನನು ಹೀರಾಮನಿಗೆ ಈ ಪಟ್ಟಣಗಳನ್ನು ಕೊಟ್ಟನು. ಸೊಲೊಮೋನನು ಅಪೇಕ್ಷಿಸಿದ ದೇವದಾರು ಮರಗಳನ್ನು, ತುರಾಯಿ ಮರಗಳನ್ನು ಮತ್ತು ಬಂಗಾರವನ್ನು ಹೀರಾಮನು ಕೊಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 9:11
9 ತಿಳಿವುಗಳ ಹೋಲಿಕೆ  

ಹೀರಾಮನು ಸೊಲೊಮೋನನಿಗೆ ತಿರುಗಿ ಕೊಟ್ಟ ಪಟ್ಟಣಗಳನ್ನು ಸೊಲೊಮೋನನು ಕಟ್ಟಿಸಿ, ಇಸ್ರಾಯೇಲರನ್ನು ಅಲ್ಲಿ ನಿವಾಸವಾಗಿರುವಂತೆ ಮಾಡಿದನು.


ಇದಲ್ಲದೆ ನಾವು ಲೆಬನೋನಿನಲ್ಲಿ ನಿನಗೆ ಬೇಕಾದಷ್ಟು ಮರಗಳನ್ನು ಕಡಿದು ತೆಪ್ಪಗಳಲ್ಲಿ ಸಮುದ್ರದ ಮಾರ್ಗವಾಗಿ ಯೊಪ್ಪಕ್ಕೆ ತೆಗೆದುಕೊಂಡು ಬರುತ್ತೇವೆ. ನೀನು ಅವುಗಳನ್ನು ಯೆರೂಸಲೇಮಿಗೆ ಒಯ್ಯಬಹುದು.”


ಅದರಂತೆ ನಫ್ತಾಲಿಯ ಬೆಟ್ಟದ ಗಲಿಲಾಯದಲ್ಲಿ ಇರುವ ಕೆದೆಷನ್ನೂ, ಎಫ್ರಾಯೀಮನ ಬೆಟ್ಟಗಳಲ್ಲಿರುವ ಶೆಕೆಮನ್ನೂ, ಯೆಹೂದದ ಬೆಟ್ಟಗಳಲ್ಲಿರುವ ಹೆಬ್ರೋನ್ ಎಂಬ ಕಿರ್ಯತ್ ಅರ್ಬವನ್ನೂ ನೇಮಿಸಿದರು.


ಅರಸನಾದ ಸೊಲೊಮೋನನು ಇಪ್ಪತ್ತು ವರ್ಷಗಳಲ್ಲಿ ಆ ಎರಡು ಮನೆಗಳನ್ನು ಅಂದರೆ, ಯೆಹೋವ ದೇವರ ಆಲಯವನ್ನೂ, ಅರಮನೆಯನ್ನೂ ಕಟ್ಟಿಸಿ ತೀರಿಸಿದ ತರುವಾಯ


ಆಗ ಹೀರಾಮನು ಟೈರಿನಿಂದ ಸೊಲೊಮೋನನು ತನಗೆ ಕೊಟ್ಟ ಪಟ್ಟಣಗಳನ್ನು ನೋಡಲು ಬಂದನು. ಆದರೆ ಅವು ಅವನಿಗೆ ಮೆಚ್ಚಿಕೆಯಾಗಿರಲಿಲ್ಲ.


ಹೀರಾಮನು ಅರಸನಿಗೆ ನಾಲ್ಕು ಸಾವಿರ ಕಿಲೋಗ್ರಾಂ ಚಿನ್ನವನ್ನು ಕಳುಹಿಸಿದನು.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಟೈರ್ ಪಟ್ಟಣದ ಜನರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ಸಹೋದರರ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳದೆ ಸೆರೆಯಾಳುಗಳ ಸಂಪೂರ್ಣ ಸಮುದಾಯಗಳನ್ನು ಎದೋಮಿಗೆ ಮಾರಿಬಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು