1 ಅರಸುಗಳು 9:16 - ಕನ್ನಡ ಸಮಕಾಲಿಕ ಅನುವಾದ16 ಈಜಿಪ್ಟಿನ ಅರಸನಾದ ಫರೋಹನು ಹೊರಟುಹೋಗಿ, ಗೆಜೆರನ್ನು ತೆಗೆದುಕೊಂಡು, ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟು, ಪಟ್ಟಣದಲ್ಲಿ ವಾಸವಾಗಿದ್ದ ಕಾನಾನ್ಯರನ್ನು ಕೊಂದು, ಸೊಲೊಮೋನನ ಹೆಂಡತಿಯಾದ ತನ್ನ ಮಗಳಿಗೆ ಅದನ್ನು ಬಹುಮಾನವಾಗಿ ಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಐಗುಪ್ತದ ಅರಸನಾದ ಫರೋಹನು ಗೆಜೆರ್ ಪಟ್ಟಣವನ್ನು ಹಿಡಿದು ಅದಕ್ಕೆ ಬೆಂಕಿಹೊತ್ತಿಸಿ, ಅದರಲ್ಲಿದ್ದ ಕಾನಾನ್ಯರನ್ನು ಹತಿಸಿ, ಅದನ್ನು ವಶಮಾಡಿಕೊಂಡು ಸೊಲೊಮೋನನ ಹೆಂಡತಿಯಾದ ತನ್ನ ಮಗಳಿಗೆ ಮದುವೆಯ ಉಡುಗೊರೆಯಾಗಿ ಕೊಟ್ಟಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಈಜಿಪ್ಟಿನ ಅರಸ ಫರೋಹನು, ಗೆಜೆರ್ ಪಟ್ಟಣವನ್ನು ಹಿಡಿದು ಅದನ್ನು ವಶಮಾಡಿಕೊಂಡು, ಸೊಲೊಮೋನನ ಹೆಂಡತಿಯಾದ ತನ್ನ ಮಗಳಿಗೆ ಉಡುಗೊರೆಯಾಗಿ ಕೊಟ್ಟಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಐಗುಪ್ತದ ಅರಸನಾದ ಫರೋಹನು ಗೆಜೆರ್‍ಪಟ್ಟಣವನ್ನು ಹಿಡಿದು ಅದಕ್ಕೆ ಬೆಂಕಿಹೊತ್ತಿಸಿ ಅದರಲ್ಲಿದ್ದ ಕಾನಾನ್ಯರನ್ನು ಹತಿಸಿ ಅದನ್ನು ವಶಮಾಡಿಕೊಂಡು ಸೊಲೊಮೋನನ ಹೆಂಡತಿಯಾದ ತನ್ನ ಮಗಳಿಗೆ ಬಳುವಳಿಯಾಗಿ ಕೊಟ್ಟಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಹಿಂದೊಮ್ಮೆ, ಈಜಿಪ್ಟಿನ ರಾಜನು ಗೆಜೆರ್ ನಗರದ ವಿರುದ್ದ ಹೋರಾಟಮಾಡಿ, ಅದನ್ನು ಸುಟ್ಟುಹಾಕಿದ್ದನು. ಅವನು ಅಲ್ಲಿ ನೆಲೆಸಿದ್ದ ಕಾನಾನ್ಯ ಜನರನ್ನು ಕೊಂದು ಹಾಕಿದ್ದನು. ಸೊಲೊಮೋನನು ಫರೋಹನ ಮಗಳನ್ನು ಮದುವೆಯಾದನು. ಆದ್ದರಿಂದ ಫರೋಹನು ಆ ನಗರವನ್ನು ಸೊಲೊಮೋನನಿಗೆ ಮದುವೆಯ ಕೊಡುಗೆಯಾಗಿ ಕೊಟ್ಟನು. ಅಧ್ಯಾಯವನ್ನು ನೋಡಿ |