1 ಅರಸುಗಳು 9:22 - ಕನ್ನಡ ಸಮಕಾಲಿಕ ಅನುವಾದ22 ಆದರೆ ಸೊಲೊಮೋನನು ಇಸ್ರಾಯೇಲರನ್ನು ದಾಸರಾಗಿ ಮಾಡಲಿಲ್ಲ. ಅವರು ಯುದ್ಧಭಟರಾಗಿಯೂ, ಅವನ ಅಧಿಪತಿಯಾಗಿಯೂ, ತನ್ನ ಕೈಕೆಳಗಿರುವ ಅವನ ಪ್ರಧಾನರಾಗಿಯೂ, ಅಧಿಕಾರಿಗಳಾಗಿಯೂ, ತನ್ನ ರಥಗಳ ಮೇಲೆಯೂ, ರಾಹುತರ ಮೇಲೆಯೂ ಅಧಿಪತಿಗಳಾಗಿಯೂ ಇದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆದರೆ ಅವನು ಇಸ್ರಾಯೇಲರನ್ನು ಬಿಟ್ಟೀಹಿಡಿಯಲಿಲ್ಲ. ಅವರನ್ನು ಸೈನಿಕರನ್ನಾಗಿಯೂ, ಪರಿವಾರದವರನ್ನಾಗಿಯೂ ಅಧಿಪತಿಗಳನ್ನಾಗಿಯೂ, ಸರದಾರರನ್ನಾಗಿಯೂ, ರಥಾಶ್ವಬಲಗಳ ನಾಯಕರನ್ನಾಗಿಯೂ ನೇಮಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆದರೆ ಅವನು ಇಸ್ರಯೇಲರನ್ನು ಬಿಟ್ಟಿಹಿಡಿಯಲಿಲ್ಲ; ಅವರನ್ನು ಸೈನಿಕರನ್ನಾಗಿ, ಪರಿವಾರದವರನ್ನಾಗಿ, ಅಧಿಪತಿಗಳನ್ನಾಗಿ, ಸರದಾರರನ್ನಾಗಿ, ಹಾಗೂ ರಥಾಶ್ವಬಲಗಳ ನಾಯಕರನ್ನಾಗಿ ನೇಮಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆದರೆ ಅವನು ಇಸ್ರಾಯೇಲ್ಯರನ್ನು ಬಿಟ್ಟಿಹಿಡಿಯಲಿಲ್ಲ; ಅವರನ್ನು ಸೈನಿಕರನ್ನಾಗಿಯೂ ಪರಿವಾರದವರನ್ನಾಗಿಯೂ ಅಧಿಪತಿಗಳನ್ನಾಗಿಯೂ ಸರದಾರರನ್ನಾಗಿಯೂ ರಥಾಶ್ವಬಲಗಳ ನಾಯಕರನ್ನಾಗಿಯೂ ನೇವಿುಸಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಸೊಲೊಮೋನನು ಇಸ್ರೇಲರಾದ ಯಾರನ್ನೂ ತನ್ನ ಗುಲಾಮರಾಗಲು ಬಲಾತ್ಕರಿಸಲಿಲ್ಲ. ಇಸ್ರೇಲಿನ ಜನರು ಸೈನಿಕರಾಗಿದ್ದರು; ಸರ್ಕಾರದ ನೌಕರರಾಗಿದ್ದರು; ಅಧಿಕಾರಿಗಳಾಗಿದ್ದರು; ಸೇನಾಪತಿಗಳಾಗಿದ್ದರು; ರಥಾಶ್ವಗಳಿಗೂ ಅಶ್ವಪೇದೆಗೂ ಮಹಾ ಸೇನಾಧಿಪತಿಗಳಾಗಿದ್ದರು. ಅಧ್ಯಾಯವನ್ನು ನೋಡಿ |