1 ಅರಸುಗಳು 9:25 - ಕನ್ನಡ ಸಮಕಾಲಿಕ ಅನುವಾದ25 ವರುಷಕ್ಕೆ ಮೂರು ಸಾರಿ ಸೊಲೊಮೋನನು ಯೆಹೋವ ದೇವರಿಗೆ ತಾನು ಕಟ್ಟಿಸಿದ ಬಲಿಪೀಠದ ಮೇಲೆ ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿ, ಯೆಹೋವ ದೇವರ ಮುಂದಿರುವ ಪೀಠದ ಮೇಲೆ ಧೂಪವನ್ನು ಸುಡುತ್ತಿದ್ದನು. ಹೀಗೆ ಆಲಯದ ಅರ್ಪಣೆಗಳನ್ನು ಪೂರೈಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಸೊಲೊಮೋನನು ಯೆಹೋವನ ಆಲಯದ ಮುಂದೆ ತಾನು ಯೆಹೋವನಿಗೋಸ್ಕರ ಕಟ್ಟಿಸಿದ ಯಜ್ಞವೇದಿಯ ಮೇಲೆ ವರ್ಷಕ್ಕೆ ಮೂರು ಸಾರಿ ಸರ್ವಾಂಗಹೋಮ, ಸಮಾಧಾನಯಜ್ಞ ಇವುಗಳನ್ನು ಸಮರ್ಪಿಸಿ ಧೂಪಹಾಕುತ್ತಿದ್ದನು. ಹೀಗೆ ಅವನು ದೇವಾಲಯವನ್ನು ಕಟ್ಟಿ ಸಂಪೂರ್ಣಗೊಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಸೊಲೊಮೋನನು ಸರ್ವೇಶ್ವರನ ಆಲಯದ ಮುಂದೆ ಸರ್ವೇಶ್ವರನಿಗಾಗಿ ತಾನು ಕಟ್ಟಿಸಿದ ಬಲಿಪೀಠದ ಮೇಲೆ ವರ್ಷಕ್ಕೆ ಮೂರು ಸಾರಿ ದಹನಬಲಿ ಹಾಗು ಶಾಂತಿಸಮಾಧಾನಬಲಿಗಳನ್ನು ಸಮರ್ಪಿಸಿ ಧೂಪಾರತಿ ಎತ್ತುತ್ತಿದ್ದನು. ಹೀಗೆ ಅವನು ಮಹಾದೇವಾಲಯವನ್ನು ಕಟ್ಟಿಸಿಮುಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅನಂತರ ಸೊಲೊಮೋನನು ವಿುಲ್ಲೋಕೋಟೆಯನ್ನು ಕಟ್ಟಿಸಿದನು. ಸೊಲೊಮೋನನು ಯೆಹೋವನ ಆಲಯದ ಮುಂದೆ ತಾನು ಯೆಹೋವನಿಗೋಸ್ಕರ ಕಟ್ಟಿಸಿದ ಯಜ್ಞವೇದಿಯ ಮೇಲೆ ವರುಷಕ್ಕೆ ಮೂರು ಸಾರಿ ಸರ್ವಾಂಗಹೋಮ, ಸಮಾಧಾನಯಜ್ಞ ಇವುಗಳನ್ನು ಸಮರ್ಪಿಸಿ ಧೂಪಸುಡುತ್ತಿದ್ದನು. ದೇವಾಲಯವನ್ನು ಕಟ್ಟಿಸಿ ತೀರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಸೊಲೊಮೋನನು ಪ್ರತಿವರ್ಷದಲ್ಲೂ ಮೂರು ಸಲ ಸರ್ವಾಂಗಹೋಮಗಳನ್ನು, ಸಮಾಧಾನಯಜ್ಞಗಳನ್ನು ಯಜ್ಞವೇದಿಕೆಯ ಮೇಲೆ ಅರ್ಪಿಸುತ್ತಿದ್ದನು. ಈ ಯಜ್ಞವೇದಿಕೆಯನ್ನು ಸೊಲೊಮೋನನು ಯೆಹೋವನಿಗಾಗಿ ನಿರ್ಮಿಸಿದನು. ರಾಜನಾದ ಸೊಲೊಮೋನನು ಯೆಹೋವನ ಮುಂದೆ ಸುಗಂಧ ಧೂಪವನ್ನು ಸುಡುತ್ತಿದ್ದನು. ಅವನು ಆಲಯಕ್ಕೆ ಬೇಕಾದ ವಸ್ತುಗಳನ್ನು ಕೊಡುತ್ತಿದ್ದನು. ಅಧ್ಯಾಯವನ್ನು ನೋಡಿ |