Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 9:26 - ಕನ್ನಡ ಸಮಕಾಲಿಕ ಅನುವಾದ

26 ಇದಲ್ಲದೆ ಅರಸನಾದ ಸೊಲೊಮೋನನು ಎದೋಮ್ ದೇಶದ ಕೆಂಪು ಸಮುದ್ರತೀರದ ಏಲೋತ್ ಎಂಬ ಊರ ಬಳಿಯಲ್ಲಿರುವ ಎಚ್ಯೋನ್ ಗೆಬೆರಿನಲ್ಲಿ ಹಡಗುಗಳನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಇದಲ್ಲದೆ ಅರಸನಾದ ಸೊಲೊಮೋನನು ಎದೋಮ್ ದೇಶದಲ್ಲಿ ಏಲೋತಿನ ಹತ್ತಿರ ಕೆಂಪುಸಮುದ್ರದ ತೀರದಲ್ಲಿರುವ ಎಚ್ಯೋನ್ಗೆಬೆರಿನಲ್ಲಿ ಹಡಗುಗಳನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಎದೋಮ್ ದೇಶದಲ್ಲಿ ಎಲೋತಿನ ಹತ್ತಿರ ಕೆಂಪುಸಮುದ್ರದ ತೀರದಲ್ಲಿರುವ ಎಚ್ಯೋನ್ಗೆಬೆರಿನಲ್ಲಿ ಅರಸ ಸೊಲೊಮೋನನು ಹಡಗುಗಳನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಇದಲ್ಲದೆ ಅರಸನಾದ ಸೊಲೊಮೋನನು ಎದೋಮ್‍ ದೇಶದಲ್ಲಿ ಏಲೋತಿನ ಹತ್ತಿರ ಕೆಂಪುಸಮುದ್ರದ ತೀರದಲ್ಲಿರುವ ಎಚ್ಯೋನ್ಗೆಬೆರಿನಲ್ಲಿ ಹಡಗುಗಳನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ರಾಜನಾದ ಸೊಲೊಮೋನನು ಏಚ್ಯೋನ್ಗೆಬೆರಿನಲ್ಲಿ ಹಡಗುಗಳನ್ನು ಸಹ ನಿರ್ಮಿಸಿದನು. ಈ ಪಟ್ಟಣವು ಎದೋಮ್ ದೇಶದಲ್ಲಿ ಕೆಂಪು ಸಮುದ್ರತೀರದ ಏಲೋತಿನ ಹತ್ತಿರದಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 9:26
9 ತಿಳಿವುಗಳ ಹೋಲಿಕೆ  

ಯೆಹೋಷಾಫಾಟನು ಬಂಗಾರಕ್ಕೋಸ್ಕರ ಓಫೀರಿಗೆ ಹೋಗುವುದಕ್ಕೆ ತಾರ್ಷೀಷ್ ಹಡಗುಗಳನ್ನು ಮಾಡಿಸಿದನು. ಆದರೆ ಅವು ಹೋಗಲಿಲ್ಲ. ಆ ಹಡಗುಗಳು ಎಚ್ಯೋನ್ ಗೆಬೆರಿನ ಬಳಿಯಲ್ಲಿ ಒಡೆದುಹೋದವು.


ಈ ಪ್ರಕಾರ ನಾವು ಸೇಯೀರಿನಲ್ಲಿ ವಾಸಮಾಡುವ ನಮ್ಮ ಸಹೋದರರಾದ ಏಸಾವನ ಮಕ್ಕಳ ಕಡೆಯಿಂದ ಓರೆಯಾಗಿ ತಿರುಗಿಕೊಂಡು ಅರಾಬಾದ ಮಾರ್ಗವನ್ನು ಬಿಟ್ಟು ಏಲತ್, ಎಚ್ಯೋನ್ ಗೆಬೆರ್ ಎಂಬ ಪಟ್ಟಣಗಳಿಂದ ಪ್ರಯಾಣಮಾಡಿ, ಮೋವಾಬಿನ ಮರುಭೂಮಿಯ ಮಾರ್ಗವಾಗಿ ಹಾದು ಹೋದೆವು.


ಅಬ್ರೋನಾದಿಂದ ಹೊರಟು ಎಚ್ಯೋನ್ ಗೆಬೆರಿನಲ್ಲಿ ಇಳಿದುಕೊಂಡರು.


ಅಮಚ್ಯನು ಮೃತನಾಗಿ ತನ್ನ ಪಿತೃಗಳ ಸಂಗಡ ಸೇರಿದ ತರುವಾಯ, ಅಜರ್ಯನು ಏಲತನ್ನು ಪುನಃ ಕಟ್ಟಿಸಿ, ಅದನ್ನು ಯೆಹೂದಕ್ಕೆ ತಿರುಗಿ ಸೇರಿಸಿಕೊಂಡನು.


ಹೀರಾಮನ ಹಡಗುಗಳ ಜೊತೆಯಲ್ಲಿ ಅರಸನ ಹಡಗುಗಳು ತಾರ್ಷೀಷಿಗೆ ಹೋಗಿ ಮೂರು ವರ್ಷಕ್ಕೆ ಒಂದು ಸಾರಿ ಬಂಗಾರ, ಬೆಳ್ಳಿ, ದಂತ, ಕೋತಿ, ನವಿಲು ಇವುಗಳನ್ನೂ ತರುತ್ತಿದ್ದವು.


ಆಗ ಅಹಾಬನ ಮಗ ಅಹಜ್ಯನು ಯೆಹೋಷಾಫಾಟನಿಗೆ, “ನನ್ನ ಸೇವಕರು, ನಿನ್ನ ಸೇವಕರ ಸಂಗಡ ಹಡಗುಗಳಲ್ಲಿ ಹೋಗಲಿ,” ಎಂದನು. ಆದರೆ ಯೆಹೋಷಾಫಾಟನು ಸಮ್ಮತಿಸಲಿಲ್ಲ.


ಆಕೆಯು ವರ್ತಕರ ಹಡಗುಗಳಂತೆ ಇರುವಳು; ದೂರದಿಂದ ಆಹಾರವನ್ನು ಆಕೆಯು ತರುವಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು