Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 9:4 - ಕನ್ನಡ ಸಮಕಾಲಿಕ ಅನುವಾದ

4 “ನೀನು ನಿನ್ನ ತಂದೆಯಾದ ದಾವೀದನಂತೆ ಸಂಪೂರ್ಣ ಹೃದಯದಿಂದಲೂ, ಯಥಾರ್ಥತೆಯಿಂದಲೂ ನಾನು ನಿನಗೆ ಆಜ್ಞಾಪಿಸಿದ ನನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ನಿಷ್ಠೆಯಿಂದ ಕೈಗೊಂಡು ನಡೆದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀನು ನಿನ್ನ ತಂದೆಯಾದ ದಾವೀದನಂತೆ ಪೂರ್ಣಮನಸ್ಸಿನಿಂದಲೂ, ಯಥಾರ್ಥಚಿತ್ತದಿಂದಲೂ ನನಗೆ ನಡೆದುಕೊಂಡು ನನ್ನ ಆಜ್ಞಾವಿಧಿನ್ಯಾಯಗಳನ್ನು ಕೈಕೊಳ್ಳುತ್ತಾ ಬರುವುದಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನೀನು ನಿನ್ನ ತಂದೆ ದಾವೀದನಂತೆ ಪೂರ್ಣಮನಸ್ಸಿನಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡು, ನನ್ನ ಆಜ್ಞಾವಿಧಿನ್ಯಾಯಗಳನ್ನು ಕೈಗೊಳ್ಳುತ್ತಾ ಬಂದರೆ, ಇಸ್ರಯೇಲರಲ್ಲಿ ನಿನ್ನ ಸಿಂಹಾಸನವನ್ನು ಸದಾ ಸ್ಥಿರಪಡಿಸುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನೀನು ನಿನ್ನ ತಂದೆಯಾದ ದಾವೀದನಂತೆ ಪೂರ್ಣಮನಸ್ಸಿನಿಂದಲೂ ಯಥಾರ್ಥಚಿತ್ತದಿಂದಲೂ ನನಗೆ ನಡೆದುಕೊಂಡು ನನ್ನ ಆಜ್ಞಾವಿಧಿನ್ಯಾಯಗಳನ್ನು ಕೈಕೊಳ್ಳುತ್ತಾ ಬರುವದಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಿನ್ನ ತಂದೆಯಾದ ದಾವೀದನು ಸೇವೆಮಾಡಿದಂತೆ ನೀನೂ ನನ್ನ ಸೇವೆಮಾಡಬೇಕು, ಅವನು ನ್ಯಾಯವಂತನಾಗಿದ್ದನು ಮತ್ತು ಯಥಾರ್ಥವಂತನಾಗಿದ್ದನು; ನೀನು ನನ್ನ ನಿಯಮಗಳಿಗೆ ವಿಧೇಯನಾಗಿರಬೇಕು ಮತ್ತು ನಾನು ನಿನಗೆ ಆಜ್ಞಾಪಿಸಿದವುಗಳನ್ನೆಲ್ಲ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 9:4
31 ತಿಳಿವುಗಳ ಹೋಲಿಕೆ  

ಏಕೆಂದರೆ ದಾವೀದನು ಹಿತ್ತಿಯನಾದ ಊರೀಯನ ವಿಷಯವೊಂದನ್ನು ಬಿಟ್ಟು, ತನ್ನ ಜೀವಿತದ ಸಮಸ್ತ ದಿವಸಗಳಲ್ಲಿ ಯೆಹೋವ ದೇವರು ತನಗೆ ಆಜ್ಞಾಪಿಸಿದ ಎಲ್ಲಾದಕ್ಕೆ ತೊಲಗದೆ, ಅವರ ದೃಷ್ಟಿಗೆ ಮೆಚ್ಚಿಕೆಯಾದದ್ದನ್ನು ಮಾಡಿದನು.


ನೀನು, ನಿನ್ನ ತಂದೆ ದಾವೀದನಂತೆ ನನ್ನ ಮಾರ್ಗದಲ್ಲೇ ನಡೆದು, ನನ್ನ ಕಟ್ಟಳೆಗಳನ್ನು ಮತ್ತು ಆಜ್ಞೆಗಳನ್ನು ಕೈಗೊಂಡರೆ, ನಿನ್ನ ದಿವಸಗಳನ್ನು ಹೆಚ್ಚಿಸುವೆನು,” ಎಂದರು.


ಸೊಲೊಮೋನನು ತನ್ನ ತಂದೆ ದಾವೀದನ ಹಾಗೆ ಯೆಹೋವ ದೇವರನ್ನು ಪೂರ್ಣವಾಗಿ ಹಿಂಬಾಲಿಸದೆ ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು.


ಸೊಲೊಮೋನನು ಮುದುಕನಾದ ಕಾಲದಲ್ಲಿ ಅವನ ಪತ್ನಿಯರು ಅನ್ಯದೇವರುಗಳ ಕಡೆಗೆ ಅವನ ಹೃದಯವನ್ನು ತಿರುಗಿಸಿದರು. ಅವನ ಹೃದಯವು ತನ್ನ ತಂದೆ ದಾವೀದನ ಹೃದಯದ ಹಾಗೆ ತನ್ನ ದೇವರಾದ ಯೆಹೋವ ದೇವರ ಸಂಗಡ ಪರಿಪೂರ್ಣವಾಗಿ ಇರಲಿಲ್ಲ.


ಅಬ್ರಾಮನು ತೊಂಬತ್ತೊಂಬತ್ತು ವರ್ಷದವನಾದಾಗ, ಯೆಹೋವ ದೇವರು ಅಬ್ರಾಮನಿಗೆ ಕಾಣಿಸಿಕೊಂಡು, “ನಾನೇ ಸರ್ವಶಕ್ತ ದೇವರು. ನೀನು ನನ್ನ ಸನ್ನಿಧಿಯಲ್ಲಿಯೇ ನಡೆಯುತ್ತಾ ದೋಷವಿಲ್ಲದವನಾಗಿರು.


ಇವರಿಬ್ಬರೂ ಕರ್ತದೇವರ ಎಲ್ಲಾ ಆಜ್ಞೆಗಳನ್ನೂ ತೀರ್ಪುಗಳನ್ನೂ ತಪ್ಪಿಲ್ಲದೆ ಕೈಕೊಂಡು, ದೇವರ ಮುಂದೆ ನೀತಿವಂತರಾಗಿದ್ದರು.


“ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನೀನು ನನ್ನ ಮಾರ್ಗಗಳಲ್ಲಿ ನಡೆದು ನನ್ನ ಆಜ್ಞೆಗಳನ್ನು ಕೈಗೊಂಡರೆ, ಆಗ ನೀನು ನನ್ನ ಆಲಯಕ್ಕೂ ನ್ಯಾಯತೀರಿಸಿ, ನನ್ನ ಅಂಗಳಗಳನ್ನೂ ಕಾಯುವೆ. ಇಲ್ಲಿ ನಿಂತವರ ಬಳಿಯಲ್ಲಿ ನಡೆದಾಡುವ ಹಕ್ಕನ್ನು ನಿನಗೆ ಕೊಡುವೆನು.’


ನಿರ್ದೋಷಿಯಾಗಿ ನಡೆಯುವವನು ಸಂರಕ್ಷಣೆ ಹೊಂದುವನು. ವಕ್ರಮಾರ್ಗಿಯು ತಟ್ಟನೆ ಬೀಳುವನು.


ನಾನಾದರೋ ನನ್ನ ಯಥಾರ್ಥತೆಯಲ್ಲಿ ನಡೆಯುತ್ತೇನೆ; ನನ್ನನ್ನು ವಿಮೋಚಿಸಿರಿ; ನನಗೆ ಕರುಣೆಯುಳ್ಳವರಾಗಿರಿ.


ದಾವೀದನ ಮನೆಯಿಂದ ರಾಜ್ಯವನ್ನು ವಿಭಾಗಿಸಿ ನಿನಗೆ ಕೊಟ್ಟೆನು. ಆದರೆ ನನ್ನ ಆಜ್ಞೆಗಳನ್ನು ಕೈಗೊಂಡು, ನನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದದ್ದನ್ನು ಮಾಡಿ, ತನ್ನ ಸಂಪೂರ್ಣ ಹೃದಯದಿಂದ ನನ್ನನ್ನು ಹಿಂಬಾಲಿಸಿದ ನನ್ನ ಸೇವಕನಾದ ದಾವೀದನ ಹಾಗೆ ನೀನು ಇರಲಿಲ್ಲ.


ನಾನು ನಿನಗೆ ಆಜ್ಞಾಪಿಸಿದ್ದೆಲ್ಲಾ ನೀನು ಕೇಳಿ, ನನ್ನ ಮಾರ್ಗಗಳಲ್ಲಿ ನಡೆದು, ನನ್ನ ಸೇವಕನಾದ ದಾವೀದನು ಮಾಡಿದ ಹಾಗೆ, ನನ್ನ ತೀರ್ಪುಗಳನ್ನೂ, ನನ್ನ ಆಜ್ಞೆಗಳನ್ನೂ ಕೈಗೊಂಡು, ನನ್ನ ದೃಷ್ಟಿಗೆ ಯಥಾರ್ಥವಾದದ್ದನ್ನು ಮಾಡಿದರೆ, ನಾನು ನಿನ್ನ ಸಂಗಡ ಇದ್ದು ದಾವೀದನ ಸಂತಾನದಂತೆ ನಿನ್ನ ಸಂತಾನವನ್ನೂ ಸ್ಥಿರಪಡಿಸಿ, ಇಸ್ರಾಯೇಲನ್ನು ನಿನಗೆ ಕೊಡುವೆನು.


ಯೆಹೋವ ದೇವರೇ, ನನ್ನನ್ನು ನಿರ್ದೋಷನನ್ನಾಗಿ ನಿರ್ಣಯಿಸಿರಿ, ನಾನು ದೋಷವಿಲ್ಲದ ಜೀವನ ನಡೆಸಿದ್ದೇನೆ; ನಾನು ಯೆಹೋವ ದೇವರಲ್ಲಿ ಕದಲದೆ ಭರವಸೆ ಇಟ್ಟಿದ್ದೇನೆ.


ದೋಷವಿಲ್ಲದವರಾಗಿ ಜೀವಿಸಿ, ನೀತಿಯನ್ನು ನಡೆಸಿ, ತಮ್ಮ ಹೃದಯದಿಂದ ಸತ್ಯವನ್ನಾಡುವವರೇ;


“ಆದಕಾರಣ, ಈಗ ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ‘ನಿನ್ನ ಸಂತಾನದವರು ನಿನ್ನಂತೆ ಜಾಗ್ರತೆಯಾಗಿದ್ದು, ನನ್ನ ಮಾರ್ಗದಲ್ಲೇ ನಡೆದುಕೊಳ್ಳುವದಾದರೆ, ಅವರು ತಪ್ಪದೆ ಇಸ್ರಾಯೇಲಿನ ಸಿಂಹಾಸನದ ಮೇಲೆ ನನ್ನ ಸಮ್ಮುಖದಲ್ಲಿ ಕುಳಿತುಕೊಳ್ಳುವರು,’ ಎಂದು ನೀವು ನನ್ನ ತಂದೆಯಾದ ನಿಮ್ಮ ಸೇವಕನಾದ ದಾವೀದನಿಗೆ ವಾಗ್ದಾನ ಮಾಡಿದ್ದನ್ನು ನೆರವೇರಿಸಿರಿ.


ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತನ್ನು ಶ್ರದ್ಧೆಯಿಂದ ಕೇಳಿ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಅವರ ಎಲ್ಲಾ ಆಜ್ಞೆಗಳನ್ನು ಅನುಸರಿಸಿ ನಡೆದರೆ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಭೂಲೋಕದ ಎಲ್ಲಾ ಜನಾಂಗಗಳಿಗಿಂತ ಉನ್ನತ ಸ್ಥಿತಿಯಲ್ಲಿರಿಸುವರು.


ನೀತಿವಂತನು ನಿರ್ದೋಷವಾಗಿ ಜೀವಿಸುತ್ತಾನೆ; ಅವನನ್ನು ಅನುಸರಿಸುವ ಅವನ ಮಕ್ಕಳು ಆಶೀರ್ವಾದ ಹೊಂದುವರು.


ಯಥಾರ್ಥ ನಡತೆಯವರು ಸುರಕ್ಷಿತವಾಗಿ ಜೀವಿಸುತ್ತಾರೆ; ಆದರೆ ವಕ್ರಮಾರ್ಗಗಳಲ್ಲಿ ನಡೆಯುವವನು ಬಯಲಿಗೆ ಬರುವನು.


ಅವನು ನನಗೆ, ‘ಅವಳು ನನ್ನ ತಂಗಿ,’ ಎಂದು ಹೇಳಲಿಲ್ಲವೋ? ಅವಳೇ, ‘ಅವನು ನನ್ನ ಅಣ್ಣ,’ ಎಂದು ಹೇಳಿದ್ದಾಳೆ. ಆದ್ದರಿಂದ ನಾನು ಯಥಾರ್ಥವಾದ ಹೃದಯದಿಂದಲೂ ನಿರಪರಾಧದ ಹಸ್ತದಿಂದಲೂ ಇದನ್ನು ಮಾಡಿದ್ದೇನೆ,” ಎಂದನು.


ಸೊಲೊಮೋನನು ಯೆಹೋವ ದೇವರನ್ನು ಪ್ರೀತಿಸಿ, ತನ್ನ ತಂದೆ ದಾವೀದನ ಕಟ್ಟಳೆಯಲ್ಲಿ ನಡೆಯುತ್ತಾ ಇದ್ದನು. ಆದರೂ ತಾನು ಎತ್ತರ ಸ್ಥಳಗಳಲ್ಲಿ ಬಲಿಯನ್ನೂ, ಧೂಪವನ್ನೂ ಅರ್ಪಿಸುತ್ತಾ ಇದ್ದನು.


ಅದಕ್ಕೆ ಸೊಲೊಮೋನನು, “ನನ್ನ ತಂದೆಯಾಗಿರುವ ನಿಮ್ಮ ಸೇವಕನಾದ ದಾವೀದನು ನಿಮ್ಮ ಮುಂದೆ ನೀತಿಯಿಂದಲೂ, ಯಥಾರ್ಥವಾದ ಹೃದಯವುಳ್ಳವನಾಗಿಯೂ ನಡೆದದ್ದರಿಂದ, ನೀವು ಅವನಿಗೆ ಮಹಾಕರುಣೆಯನ್ನು ತೋರಿಸಿದ್ದೀರಿ. ಈ ಮಹಾಕರುಣೆಯನ್ನು ಮುಂದುವರೆಸುತ್ತಾ ಈ ದಿನ ಅವನ ಸಿಂಹಾಸನದ ಮೇಲೆ ಕುಳಿತುಕೊಳ್ಳಲು ಮಗನನ್ನು ಕೊಟ್ಟಿದ್ದೀರಿ.


“ನೀನು ಕಟ್ಟಿಸುವ ಈ ಆಲಯವನ್ನು ಕುರಿತು ನನ್ನ ಕಟ್ಟಳೆಗಳಲ್ಲಿ ನಡೆದು, ನನ್ನ ನ್ಯಾಯಗಳ ಪ್ರಕಾರಮಾಡಿ, ನನ್ನ ಸಕಲ ಆಜ್ಞೆಗಳಲ್ಲಿ ನಡೆದುಕೊಳ್ಳುವ ಹಾಗೆ ಅವುಗಳನ್ನು ಕೈಗೊಂಡರೆ, ನಾನು ನಿನ್ನ ತಂದೆ ದಾವೀದನಿಗೆ ಹೇಳಿದ ನನ್ನ ವಾಕ್ಯವನ್ನು ನಿನಗೆ ಸ್ಥಿರಮಾಡಿ,


“ಯೆಹೋವ ದೇವರೇ, ನಾನು ಸತ್ಯದಿಂದಲೂ, ಪೂರ್ಣಹೃದಯದಿಂದಲೂ ನಿಮ್ಮ ಮುಂದೆ ನಡೆದು, ನಿಮ್ಮ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂಬುದನ್ನು ಜ್ಞಾಪಕಕ್ಕೆ ತಂದುಕೊಳ್ಳಿರಿ,” ಎಂದು ಬೇಡಿಕೊಂಡನು. ಹೀಗೆ ಹಿಜ್ಕೀಯನು ವ್ಯಥೆಪಟ್ಟು ಅತ್ತನು.


ದಾವೀದನು ತಮ್ಮ ಹೃದಯದ ಯಥಾರ್ಥತೆಯ ಪ್ರಕಾರ ಜನರನ್ನು ಪೋಷಿಸಿ ತಮ್ಮ ಹಸ್ತ ಕೌಶಲ್ಯದಿಂದ ಅವರನ್ನು ನಡೆಸಿದನು.


ದೋಷರಹಿತ ಮಾರ್ಗದಲ್ಲಿ ನಡೆಯಲು ಜಾಗರೂಕನಾಗಿರುವೆನು; ನೀವು ಯಾವಾಗ ನನ್ನ ಬಳಿಗೆ ಬರುವಿರಿ? ನಾನು ನಿರ್ದೋಷ ಹೃದಯದಿಂದ ನನ್ನ ಮನೆಯೊಳಗೆ ನಡೆದುಕೊಳ್ಳುವೆನು.


ಯೆಹೋವ ದೇವರಿಗೆ ಭಯಪಟ್ಟು ಅವರ ಮಾರ್ಗಗಳಲ್ಲಿ ನಡೆದುಕೊಳ್ಳುವ ಪ್ರತಿಯೊಬ್ಬನು ಧನ್ಯನು.


ಏಕೆಂದರೆ ನಾನು ಯೆಹೋವ ದೇವರ ಮಾರ್ಗಗಳನ್ನು ಅನುಸರಿಸಿದ್ದೇನೆ, ನನ್ನ ದೇವರನ್ನು ಬಿಟ್ಟುಹೋಗುವ ದುಷ್ಟತ್ವವನ್ನು ನಾನು ಮಾಡಲಿಲ್ಲ.


ತನ್ನ ತಂದೆಯ ದೇವರನ್ನು ಹುಡುಕಿ, ಇಸ್ರಾಯೇಲಿನ ಕ್ರಿಯೆಗಳ ಪ್ರಕಾರ ನಡೆಯದೆ, ದೇವರ ಆಜ್ಞೆಗಳಲ್ಲಿ ನಡೆದನು.


ಸತ್ಯವನ್ನು ನಡೆಸುವುದಕ್ಕಾಗಿ ನನ್ನ ನಿಯಮಗಳಲ್ಲಿ ನಡೆದು, ನನ್ನ ನ್ಯಾಯಗಳನ್ನು ಕೈಗೊಂಡು ಸತ್ಯಪರನಾಗಿ ನಡೆದರೆ, ಅವನು ನೀತಿವಂತನು ಮತ್ತು ನಿಶ್ಚಯವಾಗಿ ಬದುಕುವನು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು