1 ಅರಸುಗಳು 9:9 - ಕನ್ನಡ ಸಮಕಾಲಿಕ ಅನುವಾದ9 ಅದಕ್ಕೆ ಜನರು, ‘ತಮ್ಮ ತಂದೆಗಳನ್ನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ತಮ್ಮ ದೇವರಾದ ಯೆಹೋವ ದೇವರನ್ನು ಬಿಟ್ಟು ಅನ್ಯದೇವರುಗಳನ್ನು ಹಿಂಬಾಲಿಸಿ, ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದ ಯೆಹೋವ ದೇವರು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದಾರೆಂದು ಹೇಳುವರು,’ ” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆಗ ಈ ದೇಶದವರು ಅವರಿಗೆ, ‘ನಮ್ಮ ಪೂರ್ವಿಕರನ್ನು ಐಗುಪ್ತದಿಂದ ಬರಮಾಡಿದ ದೇವರಾದ ಯೆಹೋವನನ್ನು ಬಿಟ್ಟು, ಅನ್ಯದೇವತೆಗಳನ್ನು ಅವಲಂಬಿಸಿ, ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದಲೇ ಯೆಹೋವನು ಈ ಎಲ್ಲಾ ಆಪತ್ತನ್ನು ಬರಮಾಡಿದ್ದಾನೆ’ ಎಂಬ ಉತ್ತರ ಹೇಳುವರು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆಗ ಅವರಿಗೆ, ‘ಈ ನಾಡಿನವರು ತಮ್ಮ ಪೂರ್ವಜರನ್ನು ಈಜಿಪ್ಟಿನಿಂದ ಬರಮಾಡಿದ ದೇವರಾದ ಸರ್ವೇಶ್ವರನನ್ನು ಬಿಟ್ಟು ಅನ್ಯದೇವತೆಗಳನ್ನು ಅವಲಂಬಿಸಿ ಅವುಗಳಿಗೆ ಅಡ್ಡಬಿದ್ದು ಆರಾಧಿಸಿದ್ದರಿಂದಲೇ ಸರ್ವೇಶ್ವರ ಈ ಎಲ್ಲಾ ಆಪತ್ತು-ವಿಪತ್ತುಗಳನ್ನು ಬರಮಾಡಿದ್ದಾರೆ’ ಎಂಬ ಉತ್ತರಸಿಕ್ಕುವುದು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆಗ ಅವರಿಗೆ - ಈ ದೇಶದವರು ತಮ್ಮ ಪಿತೃಗಳನ್ನು ಐಗುಪ್ತದಿಂದ ಬರಮಾಡಿದ ದೇವರಾದ ಯೆಹೋವನನ್ನು ಬಿಟ್ಟು ಅನ್ಯದೇವತೆಗಳನ್ನು ಅವಲಂಬಿಸಿ ಅವುಗಳಿಗೆ ಅಡ್ಡಬಿದ್ದು ಸೇವಿಸಿದದರಿಂದಲೇ ಯೆಹೋವನು ಈ ಎಲ್ಲಾ ಆಪತ್ತನ್ನು ಬರಮಾಡಿದ್ದಾನೆ ಎಂಬ ಉತ್ತರವು ಸಿಕ್ಕುವದು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ‘ಇದು ಏಕೆ ಸಂಭವಿಸಿತೆಂದರೆ, ಅವರು ತಮ್ಮ ದೇವರಾದ ಯೆಹೋವನನ್ನು ತ್ಯಜಿಸಿದರು. ಆತನು ಅವರ ಪೂರ್ವಿಕರನ್ನು ಈಜಿಪ್ಟಿನಿಂದ ಬರಮಾಡಿದನು. ಆದರೆ ಅವರು ಅನ್ಯದೇವರುಗಳನ್ನು ಅನುಸರಿಸಲು ತೀರ್ಮಾನಿಸಿದರು. ಅವರು ಆ ದೇವರುಗಳ ಪೂಜೆಯನ್ನೂ ಸೇವೆಯನ್ನೂ ಮಾಡಲಾರಂಭಿಸಿದರು. ಆದಕಾರಣವೇ ಈ ಕೆಟ್ಟಕಾರ್ಯಗಳೆಲ್ಲಾ ಅವರಿಗೆ ಸಂಭವಿಸುವಂತೆ ಯೆಹೋವನು ಮಾಡಿದನು’ ಎಂದು ಅನ್ಯಜನರು ಉತ್ತರಿಸುವರು.” ಅಧ್ಯಾಯವನ್ನು ನೋಡಿ |