Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 1:20 - ಕನ್ನಡ ಸಮಕಾಲಿಕ ಅನುವಾದ

20 ಜ್ಞಾನಿಯಾದ ಮನುಷ್ಯನೆಲ್ಲಿ? ಪಂಡಿತನು ಎಲ್ಲಿ? ಈ ಕಾಲದ ತತ್ವಜ್ಞಾನಿ ಎಲ್ಲಿ? ಈ ಲೋಕದ ಜ್ಞಾನವನ್ನು ದೇವರು ಬುದ್ದಿಹೀನತೆಯನ್ನಾಗಿ ಮಾಡಿದ್ದಾರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಜ್ಞಾನಿಯು ಎಲ್ಲಿ? ವಿದ್ವಾಂಸನು ಎಲ್ಲಿ? ಇಹಲೋಕದ ತರ್ಕವಾದಿ ಎಲ್ಲಿ? ದೇವರು ಇಹಲೋಕದ ಜ್ಞಾನವನ್ನು ಮೂರ್ಖತನವಾಗಿ ಮಾಡಿದ್ದಾನಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಹೀಗಿರುವಾಗ ಜ್ಞಾನಿಯೆಲ್ಲಿ? ಶಾಸ್ತ್ರಜ್ಞನೆಲ್ಲಿ? ಜಗತ್ತಿನ ತರ್ಕನಿಪುಣನೆಲ್ಲಿ? ಪ್ರಪಂಚದ ಜ್ಞಾನವನ್ನು ದೇವರು ಹುಚ್ಚುತನವಾಗಿಸಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಜ್ಞಾನಿಯು ಎಲ್ಲಿ? ಶಾಸ್ತ್ರಿಯೆಲ್ಲಿ? ಇಹಲೋಕದ ತರ್ಕವಾದಿ ಎಲ್ಲಿ? ದೇವರು ಇಹಲೋಕಜ್ಞಾನವನ್ನು ಹುಚ್ಚುತನವಾಗ ಮಾಡಿದ್ದಾನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಜ್ಞಾನಿಯು ಎಲ್ಲಿದ್ದಾನೆ? ವಿದ್ಯಾವಂತನು ಎಲ್ಲಿದ್ದಾನೆ? ಈ ಕಾಲದ ತತ್ವಜ್ಞಾನಿಯು ಎಲ್ಲಿದ್ದಾನೆ? ದೇವರು ಲೋಕದ ಜ್ಞಾನವನ್ನು ಮೂರ್ಖತನವನ್ನಾಗಿ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಶಾನೊ ಮಾನುಸ್ ಅತ್ತಾ ಖೈ ಹಾಯ್? ಶಾಸ್ತರಾ ಶಿಕ್ವುತಲೊ ಖೈ ಹಾಯ್? ಚರ್ಚಾ ಕರ್‍ತಲಿ ಅಮ್ಚ್ಯಾ ಹ್ಯಾ ಕಾಲಾಚಿ ಲೈ ಶಿಕಲ್ಲಿ ಲೊಕಾ ಖೈ ಗೆಲ್ಲಿ ಹಾತ್? ಹ್ಯಾ ಜಗಾಚೆ ಶಾನ್‍ಪಾನ್‍ ದೆವಾನ್ ಪಿಶೆಪಾನ್‍ ಸರ್ಕೆ ಕರುನ್ ಟಾಕ್ಲಾ ನ್ಹಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 1:20
28 ತಿಳಿವುಗಳ ಹೋಲಿಕೆ  

ತಾವು ಜ್ಞಾನಿಗಳೆಂದು ಹೇಳಿಕೊಂಡರೂ ಮೂಢರಾಗಿದ್ದಾರೆ.


ದೇವರು ಸಲಹೆಗಾರರನ್ನು ಸೆರೆಹಿಡಿಯುತ್ತಾರೆ; ನ್ಯಾಯಾಧಿಪತಿಗಳನ್ನು ಮೂರ್ಖರನ್ನಾಗಿ ಮಾಡುತ್ತಾರೆ.


ಏಕೆಂದರೆ ಇಹಲೋಕ ಜ್ಞಾನವು ದೇವರ ದೃಷ್ಟಿಯಲ್ಲಿ ಮೂರ್ಖತನವಾಗಿದೆ, ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ, “ದೇವರು ಜ್ಞಾನಿಗಳನ್ನು ಅವರ ಯುಕ್ತಿಯಲ್ಲಿಯೇ ಹಿಡಿಯುವರು,” ಎಂದೂ


ಏಕೆಂದರೆ, ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: “ಜ್ಞಾನಿಗಳ ಜ್ಞಾನವನ್ನು ನಾನು ನಾಶಮಾಡುವೆನು; ವಿವೇಕಿಗಳ ವಿವೇಕವನ್ನು ನಾನು ನಿರರ್ಥಕ ಮಾಡುವೆನು.”


ಸುಳ್ಳುಗಾರರ ಗುರುತುಗಳನ್ನು ನಿರರ್ಥಕ ಮಾಡುವವನೂ ಮತ್ತು ಕಣಿ ಹೇಳುವವರನ್ನು ಹುಚ್ಚರನ್ನಾಗಿ ಮಾಡುವವನೂ ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ, ಅವರ ತಿಳುವಳಿಕೆಯನ್ನು ಬುದ್ಧಿಹೀನವಾಗ ಮಾಡುವವನೂ


ದೇವರು ಭೂಮಿಯ ಮುಖ್ಯಸ್ಥರ ವಿವೇಚನೆಯನ್ನು ತೆಗೆದುಬಿಡುತ್ತಾರೆ; ಅಂಥವರು ಮಾರ್ಗವಿಲ್ಲದ ಅಲೆಯ ಮಾಡುವುದೂ ದೇವರಿಗೆ ಸಾಧ್ಯ.


ಹೀಗಿದ್ದರೂ ಪರಿಪೂರ್ಣರಲ್ಲಿ ಜ್ಞಾನದ ಬಗ್ಗೆ ಮಾತನಾಡುತ್ತೇವೆ. ಅದು ಇಹಲೋಕದ ಜ್ಞಾನವಲ್ಲ. ಅಳಿದು ಹೋಗುವ ಇಹಲೋಕದ ಅಧಿಕಾರಿಗಳ ಜ್ಞಾನವೂ ಅಲ್ಲ.


ನಮ್ಮ ಸುದ್ದಿಯನ್ನು ಯಾರು ನಂಬಿದ್ದಾರೆ? ಯೆಹೋವ ದೇವರ ಬಾಹುವು ಯಾರಿಗೆ ಪ್ರಕಟವಾಯಿತು?


ಆಗ ನೀವು ಹಿಂದಿನ ಭಯಂಕರವಾದ ವಿಷಯಗಳನ್ನು ಮನಸ್ಸಿಗೆ ತಂದುಕೊಳ್ಳುತ್ತಾ, “ಕಪ್ಪವನ್ನು ಲೆಕ್ಕಿಸಿದವನು ಎಲ್ಲಿ? ತೂಕ ಮಾಡಿದವನು ಎಲ್ಲಿ? ಗೋಪುರಗಳನ್ನು ಎಣಿಸಿದವನು ಎಲ್ಲಿ?” ಎಂದುಕೊಳ್ಳುವಿರಿ.


ದೇವರು ವಿಶ್ವಾಸಾರ್ಹ ಸಲಹೆಗಾರರನ್ನು ಮೌನಗೊಳಿಸುತ್ತಾರೆ; ವೃದ್ಧರ ವಿವೇಚನೆಯನ್ನು ತೆಗೆದುಬಿಡುತ್ತಾರೆ.


ಆದರೆ ಅಹೀತೋಫೆಲನು ತನ್ನ ಯೋಚನೆಯ ಪ್ರಕಾರ ನಡೆಯಲಿಲ್ಲವೆಂದು ನೋಡಿದಾಗ, ತನ್ನ ಕತ್ತೆಯ ಮೇಲೆ ತಡಿಯನ್ನು ಹಾಕಿ ಏರಿ, ತನ್ನ ಪಟ್ಟಣದಲ್ಲಿರುವ ತನ್ನ ಮನೆಗೆ ಹೋದನು. ಅವನು ಮನೆಯನ್ನು ಕ್ರಮಪಡಿಸಿ, ಉರುಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.


ಆಗ ಅಬ್ಷಾಲೋಮನೂ, ಇಸ್ರಾಯೇಲಿನ ಸಮಸ್ತ ಮನುಷ್ಯರೂ, “ಅಹೀತೋಫೆಲನ ಆಲೋಚನೆಗಿಂತ ಅರ್ಕಿಯನಾದ ಹೂಷೈಯ ಆಲೋಚನೆ ಒಳ್ಳೆಯದು,” ಎಂದರು. ಏಕೆಂದರೆ ತಾನು ಅಬ್ಷಾಲೋಮನ ಮೇಲೆ ಕೇಡನ್ನು ಬರಮಾಡುವ ಹಾಗೆ ಅಹೀತೋಫೆಲನ ಒಳ್ಳೆಯ ಆಲೋಚನೆಯನ್ನು ವ್ಯರ್ಥಮಾಡುವುದಕ್ಕೆ ಯೆಹೋವ ದೇವರು ಹಾಗೆ ನೇಮಿಸಿದ್ದರು.


ಆ ದಿವಸಗಳಲ್ಲಿ ಅಹೀತೋಫೆಲನು ತಿಳಿಸಿದ ಆಲೋಚನೆಯು ದೇವರನ್ನು ವಿಚಾರಿಸುವ ಹಾಗೆ ಇತ್ತು. ಅಹೀತೋಫೆಲನ ಆಲೋಚನೆಗಳನ್ನು ದಾವೀದನೂ, ಅಬ್ಷಾಲೋಮನೂ ಹಾಗೆಯೇ ಗೌರವಿಸುತ್ತಿದ್ದರು.


ಅಹೀತೋಫೆಲನು ಅಬ್ಷಾಲೋಮನ ಬಳಿಯಲ್ಲಿ ಒಳಸಂಚಿನವರ ಸಂಗಡ ಇದ್ದಾನೆಂದು ದಾವೀದನಿಗೆ ತಿಳಿಸಲಾಯಿತು. ಆಗ ದಾವೀದನು, “ಯೆಹೋವ ದೇವರೇ, ಅಹೀತೋಫೆಲನ ಆಲೋಚನೆಯನ್ನು ಹುಚ್ಚುತನವನ್ನಾಗಿ ಮಾಡಿಬಿಡು,” ಎಂದನು.


ಓ ಜನಾಂಗಗಳ ಅರಸರಾದವರೇ, ನಿಮಗೆ ಭಯಪಡದವನ್ಯಾರು? ಏಕೆಂದರೆ, ನಿಮಗೆ ಅದು ಸಲ್ಲತಕ್ಕದ್ದು. ಏಕೆಂದರೆ, ಜನಾಂಗಗಳ ಎಲ್ಲಾ ಜ್ಞಾನಿಗಳಲ್ಲಿಯೂ, ಅವುಗಳ ಎಲ್ಲಾ ರಾಜ್ಯಗಳಲ್ಲಿಯೂ ನಿಮ್ಮ ಹಾಗೆ ಯಾರೂ ಇಲ್ಲ.


ಮುಳ್ಳುಗಿಡಗಳಲ್ಲಿ ಬಿತ್ತಲಾಗಿರುವ ಬೀಜವಾಗಿರುವವರು ವಾಕ್ಯವನ್ನು ಕೇಳುತ್ತಾರೆ, ಆದರೆ ಈ ಜೀವನದ ಚಿಂತೆಗಳೂ ಐಶ್ವರ್ಯದ ವ್ಯಾಮೋಹವೂ ವಾಕ್ಯವನ್ನು ಅಡಗಿಸುವುದರಿಂದ, ವಾಕ್ಯವು ಫಲವನ್ನು ಕೊಡುವುದಿಲ್ಲ.


ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ. ಇಹಲೋಕದ ಅಧಿಪತಿಯನ್ನು ಈಗ ಹೊರಗೆ ಹಾಕಲಾಗುವುದು.


ಆದರೆ ಎಪಿಕೂರಿಯರು ಹಾಗೂ ಸ್ತೋಯಿಕರು ಎಂಬ ತತ್ವಜ್ಞಾನಿಗಳಲ್ಲಿ ಸಹ ಕೆಲವರು ಅವನೊಂದಿಗೆ ವಾಗ್ವಾದ ಮಾಡಲು ಪ್ರಾರಂಭಿಸಿ, “ಈ ಬಾಯಿಬಡುಕ ಏನು ಹೇಳಬೇಕೆಂದಿದ್ದಾನೆ?” ಎಂದರು. ಇನ್ನೂ ಕೆಲವರು, “ಅವನು ವಿದೇಶದ ದೇವರುಗಳ ಬಗ್ಗೆ ಪ್ರಸ್ತಾಪಿಸುವಂತೆ ತೋರುತ್ತದೆ,” ಎಂದರು. ಏಕೆಂದರೆ ಅವನು ಯೇಸುವನ್ನು ಮತ್ತು ಪುನರುತ್ಥಾನವನ್ನು ಕುರಿತ ಸುವಾರ್ತೆ ಸಾರುತ್ತಿದ್ದನು.


ಹೇಗೆಂದರೆ ಕಣ್ಣಿಗೆ ಕಾಣದ ಗುಣಲಕ್ಷಣಗಳಾಗಿರುವ ದೇವರ ಗುಣವೂ ನಿತ್ಯಶಕ್ತಿಯೂ ದೈವಸ್ವಭಾವವೂ ಜಗದ ಸೃಷ್ಟಿ ದಿನದಿಂದ ಅವರು ಸೃಷ್ಟಿಸಿದವುಗಳ ಮೂಲಕ ಸ್ಪಷ್ಟವಾಗಿ ಕಂಡುಬರುತ್ತಿವೆ. ಹೀಗಿರುವುದರಿಂದ ಜನರಿಗೆ ತಪ್ಪಿಸಿಕೊಳ್ಳಲು ನೆಪ ಇಲ್ಲವಾಗಿದೆ.


ಪ್ರಿಯರೇ, ನೀವು ದೇವರ ಕರೆಯನ್ನು ಹೊಂದಿದಾಗ ಏನಾಗಿದ್ದಿರೆಂಬುದನ್ನು ಆಲೋಚಿಸಿರಿ. ನಿಮ್ಮೊಳಗೆ ಲೋಕಾನುಸಾರವಾಗಿ ಜ್ಞಾನಿಗಳೂ ಅನೇಕರಿಲ್ಲ, ಪ್ರಭಾವಿಗಳೂ ಅನೇಕರಿಲ್ಲ, ಕುಲೀನರೂ ಅನೇಕರಿಲ್ಲ.


ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವಂತೆ, ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾರೆ. ದೇವರು ಬಲಿಷ್ಠರನ್ನು ನಾಚಿಕೆಪಡಿಸುವಂತೆ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾರೆ.


ದೇವರು ಈ ಲೋಕದ ಗಣ್ಯರನ್ನು ಏನೂ ಇಲ್ಲದವರನ್ನಾಗಿ ಮಾಡುವುದಕ್ಕಾಗಿ ಗಣನೆಗೆ ಬಾರದವರನ್ನೂ, ಹೀನೈಸಲಾದವರನ್ನೂ ಕೀಳಾದವರನ್ನೂ, ಆರಿಸಿಕೊಂಡಿದ್ದಾರೆ.


ಇದನ್ನು ಇಹಲೋಕದ ಅಧಿಕಾರಿಗಳಲ್ಲಿ ಒಬ್ಬರಾದರೂ ಅರಿಯಲಿಲ್ಲ. ಅರಿತಿದ್ದರೆ, ಅವರು ಮಹಿಮೆಯುಳ್ಳ ಕರ್ತದೇವರನ್ನು ಶಿಲುಬೆಗೇರಿಸುತ್ತಿರಲಿಲ್ಲ.


ನಿಮ್ಮನ್ನು ನೀವೇ ಮೋಸಪಡಿಸಿಕೊಳ್ಳಬೇಡಿರಿ. ನಿಮ್ಮಲ್ಲಿ ಯಾರಾದರೂ ಇಹಲೋಕ ದೃಷ್ಟಿಯಲ್ಲಿ ತಾನು ಜಾಣನೆಂದು ಭಾವಿಸಿಕೊಂಡರೆ, ಅಂಥವನು ಜ್ಞಾನಿಯಾಗುವಂತೆ ಮೂರ್ಖನಾಗಲಿ.


ಕರ್ತದೇವರ ಜನರು ಲೋಕಕ್ಕೆ ತೀರ್ಪುಮಾಡುವರೆಂಬುದು ನಿಮಗೆ ತಿಳಿಯದೋ? ನೀವೇ ಲೋಕವನ್ನು ನ್ಯಾಯತೀರ್ಪು ಮಾಡಬೇಕಾಗಿರುವಲ್ಲಿ, ಅತ್ಯಲ್ಪ ಸಂಗತಿಗಳನ್ನು ಕುರಿತು ತೀರ್ಪುಮಾಡುವುದಕ್ಕೆ ನೀವು ಅಯೋಗ್ಯರಾಗಿದ್ದೀರೋ?


ನಾವು ಲೋಕದವರ ಸಂಗಡ ದಂಡನೆಗೆ ಗುರಿಯಾಗಬಾರದೆಂದು, ದೇವರು ನಮ್ಮನ್ನು ಈಗ ಈ ರೀತಿಯಾಗಿ ಶಿಸ್ತಿನ ನ್ಯಾಯವಿಚಾರಣೆಗೆ ಒಳಪಡಿಸುತ್ತಾರೆ.


ವ್ಯಭಿಚಾರಿಗಳೇ, ಇಹಲೋಕ ಸ್ನೇಹವು ದೇವರೊಂದಿಗಿರುವ ಶತ್ರುತ್ವ ಎಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರಬೇಕೆಂಬುವವನು ದೇವರಿಗೆ ಶತ್ರುವಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು