Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 1:8 - ಕನ್ನಡ ಸಮಕಾಲಿಕ ಅನುವಾದ

8 ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ದಿನದಲ್ಲಿ ನೀವು ನಿರ್ದೋಷಿಗಳಾಗಿರುವಂತೆ ಅವರು ಕೊನೆಯತನಕವೂ ನಿಮ್ಮನ್ನು ಬಲಪಡಿಸಿ ಕಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ನೀವು ನಿರಪರಾಧಿಗಳಾಗಿರುವಂತೆ ಆತನು ನಿಮ್ಮನ್ನು ಕಡೆಯವರೆಗೂ ದೃಢಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಮ್ಮ ಪ್ರಭು ಯೇಸುಕ್ರಿಸ್ತರ ದಿನದಂದು ನೀವು ನಿರ್ದೋಷಿಗಳಾಗಿರುವಂತೆ ಆ ದೇವರೇ, ನಿಮ್ಮನ್ನು ಕಡೆಯವರೆಗೂ ಸ್ಥಿರವಾಗಿ ಕಾಪಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ಯಾರೂ ನಿಮ್ಮ ಮೇಲೆ ತಪ್ಪು ಹೊರಿಸಲಾಗದಂತೆ ಆತನು ನಿಮ್ಮನ್ನು ಕಡೇವರೆಗೂ ದೃಢಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೇಸುವು ನಿಮ್ಮನ್ನು ಕೊನೆಯವರೆಗೂ ದೃಢಪಡಿಸಿ ಕಾಪಾಡುವನು. ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಮತ್ತೆ ಬಂದಾಗ ನೀವು ನಿರ್ದೋಷಿಗಳಾಗಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತೊ ತುಮ್ಕಾ ಆಕ್ರಿ ಪತರ್ ಘಟ್ ಸಂಬಾಳ್ತಾ, ಅಶೆ ತುಮಿ ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ದಿಸಾ ದಿಸಿ ಕಸ್ಲ್ಯಾಬಿ ಚುಕೆತ್ ರ್‍ಹಾಯ್ನ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 1:8
29 ತಿಳಿವುಗಳ ಹೋಲಿಕೆ  

ನಮಗೆ ಕರ್ತ ಆಗಿರುವ ಯೇಸುವು ತಮ್ಮ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ, ನೀವು ತಂದೆ ದೇವರ ಮುಂದೆ ಪರಿಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ನಿಮ್ಮ ಹೃದಯಗಳನ್ನು ಬಲಪಡಿಸಲಿ!


ಈಗಲಾದರೋ ದೇವರು ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ನಿಂದಾರಹಿತರನ್ನಾಗಿಯೂ ತಮ್ಮ ಸನ್ನಿಧಿಯಲ್ಲಿ ನಿಲ್ಲಿಸಿಕೊಳ್ಳುವಂತೆ, ಕ್ರಿಸ್ತನ ಮಾಂಸದೇಹದ ಮರಣದಿಂದ ಈಗ ನಿಮ್ಮನ್ನು ಸಂಧಾನಪಡಿಸಿಕೊಂಡಿದ್ದಾರೆ.


ಒಳ್ಳೆಯ ಕೆಲಸಗಳನ್ನು ನಿಮ್ಮಲ್ಲಿ ಪ್ರಾರಂಭಿಸಿದ ದೇವರು ಅದನ್ನು ಕ್ರಿಸ್ತ ಯೇಸುವಿನ ಪುನರಾಗಮನ ದಿನದವರೆಗೆ ಪೂರೈಸುವರು ಎಂಬುದೇ ನನ್ನ ದೃಢ ವಿಶ್ವಾಸವಾಗಿದೆ.


ಆದರೆ ಕರ್ತ ಯೇಸು ನಂಬಿಗಸ್ತರು, ಅವರು ನಿಮ್ಮನ್ನು ದೃಢಪಡಿಸಿ ನಿಮ್ಮನ್ನು ಕೆಡುಕನಿಂದ ತಪ್ಪಿಸುವರು.


ಅದನ್ನು ಕಳಂಕ, ಸುಕ್ಕು ಇಂಥದ್ದು ಯಾವುದೂ ಇಲ್ಲದೆ ಪರಿಶುದ್ಧವೂ ದೋಷವಿಲ್ಲದ್ದೂ ಆಗಿರುವ ಮಹಿಮೆಯುಳ್ಳ ಸಭೆಯನ್ನಾಗಿ ತಮ್ಮ ಮುಂದೆ ನಿಲ್ಲಿಸಿಕೊಳ್ಳಬೇಕೆಂದು ತಮ್ಮನ್ನೇ ಒಪ್ಪಿಸಿಕೊಟ್ಟರು.


ನನ್ನ ಸುವಾರ್ತೆಯು ಹೇಳುವಂತೆಯೇ ನಿಮ್ಮನ್ನು ಬಲಪಡಿಸುವ ದೇವರಿಗೆ ಈಗ ಎಲ್ಲಾ ಮಹಿಮೆಯಾಗಲಿ. ಕ್ರಿಸ್ತ ಯೇಸುವಿನ ಕುರಿತಾಗಿರುವ ಈ ಸಂದೇಶವು ಆದಿಯಿಂದಲೂ ಗುಪ್ತವಾಗಿರುವ ರಹಸ್ಯದ ದೇವರ ಯೋಜನೆಯು ಯೆಹೂದ್ಯರಲ್ಲದವರಾದ ನಿಮಗಾಗಿ ಈಗ ಪ್ರಕಟವಾಗಿದೆ.


ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತಮ್ಮ ನಿತ್ಯ ಪ್ರಭಾವಕ್ಕೆ ಕರೆದ ಕೃಪಾಪೂರ್ಣ ಆಗಿರುವ ದೇವರು ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ತಾವೇ ನಿಮ್ಮನ್ನು ಪರಿಪೂರ್ಣಮಾಡಿ, ಸ್ಥಿರಪಡಿಸಿ, ಬಲಪಡಿಸಿ ನೆಲೆಗೊಳಿಸುವರು.


ಆಗ, ಅತ್ಯುತ್ತಮ ಕಾರ್ಯಗಳನ್ನು ನೀವು ವಿವೇಚಿಸಿಕೊಳ್ಳುವಿರಿ. ಕ್ರಿಸ್ತನ ಪುನರಾಗಮನ ದಿನದವರೆಗೆ ನೀವು ಪರಿಶುದ್ಧರಾಗಿಯೂ ನಿರ್ದೋಷಿಗಳಾಗಿಯೂ ಇರಬೇಕೆಂತಲೂ


ಆದಕಾರಣ ಪ್ರಿಯ ಸ್ನೇಹಿತರೇ, ನೀವು ಇಂಥವುಗಳನ್ನು ಎದುರು ನೋಡುವವರಾಗಿರುವುದರಿಂದ ಸಮಾಧಾನದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಅವರಿಗೆ ಕಾಣಿಸಿಕೊಳ್ಳುವಂತೆ ಜಾಗ್ರತೆಯುಳ್ಳವರಾಗಿರಿ.


ಬೇರೊಬ್ಬನ ಮನೆಗೆಲಸದವನನ್ನು ತೀರ್ಪುಮಾಡಲು ನೀನು ಯಾರು? ಅವನು ನಿಂತರೂ ಬಿದ್ದರೂ ಅದು ಅವನ ಯಜಮಾನನಿಗೆ ಸೇರಿದ್ದು. ಅವನನ್ನು ನಿಲ್ಲುವಂತೆ ಮಾಡಲು ಕರ್ತನು ಶಕ್ತನಾಗಿರುವುದರಿಂದ ಅವನು ಎದ್ದು ನಿಲ್ಲುವನು.


ಏಕೆಂದರೆ ಯೆಹೋವ ದೇವರು ನ್ಯಾಯವನ್ನು ಪ್ರೀತಿಸುತ್ತಾರೆ; ತಮ್ಮ ನಂಬಿಗಸ್ತ ಜನರನ್ನು ತೊರೆದುಬಿಡರು. ನೀತಿವಂತರು ಸದಾಕಾಲಕವೂ ಸುರಕ್ಷಿತರಾಗಿರುವರು; ಆದರೆ ದುಷ್ಟರ ಸಂತತಿಯು ಅಳಿದುಹೋಗುವುದು.


ಆದರೂ ಕರ್ತ ಯೇಸುವಿನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗುವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು.


ನೀವೂ ನಾವೂ ಕ್ರಿಸ್ತ ಯೇಸುವಿನಲ್ಲಿ ದೃಢವಾಗಿ ನಿಲ್ಲುವಂತೆ ದೇವರು ನಮ್ಮನ್ನು ಸ್ಥಿರಪಡಿಸುತ್ತಾರೆ. ದೇವರು ನಮ್ಮನ್ನು ಅಭಿಷೇಕಿಸಿ,


ಏಕೆಂದರೆ ದುಷ್ಟರ ತೋಳುಗಳು ಮುರಿದುಹೋಗುವವು, ಆದರೆ ನೀತಿವಂತರನ್ನು ಯೆಹೋವ ದೇವರು ಉದ್ಧಾರ ಮಾಡುವರು.


ಈಗ ನೀವು ನಮ್ಮನ್ನು ಸ್ವಲ್ಪಮಟ್ಟಿಗೆ ಅರಿತುಕೊಂಡಿದ್ದೀರಿ. ಆದರೆ ಕರ್ತ ಆಗಿರುವ ಯೇಸುವಿನ ಪುನರಾಗಮನ ದಿನದಲ್ಲಿ ನಾವು ನಿಮ್ಮ ಬಗ್ಗೆ ಹೆಮ್ಮೆ ಪಡುವಂತೆ, ನಮ್ಮ ಬಗ್ಗೆ ಹೆಮ್ಮೆ ಪಡಲು ನೀವು ಸಂಪೂರ್ಣವಾಗಿ ನಮ್ಮನ್ನು ಅರಿತುಕೊಳ್ಳುವಿರೆಂಬ ನಿರೀಕ್ಷೆ ನಮಗಿದೆ.


ಕರ್ತ ಯೇಸುವಿನ ಪುನರಾಗಮನ ದಿನದಲ್ಲಿ ಆ ಮನುಷ್ಯನ ಆತ್ಮವು ರಕ್ಷಣೆ ಹೊಂದುವಂತೆಯೂ ಅವನ ಪಾಪಭರಿತ ಶರೀರವು ನಾಶವಾಗುವಂತೆಯೂ ಅವನನ್ನು ಸೈತಾನನಿಗೆ ಒಪ್ಪಿಸಿ ಬಿಡುತ್ತೇನೆ.


ಏಕೆಂದರೆ ಮಿಂಚು ಆಕಾಶದ ಒಂದು ಭಾಗದಲ್ಲಿ ಮಿಂಚಿ ಮತ್ತೊಂದು ಭಾಗದಲ್ಲಿ ಹೇಗೆ ಹೊಳೆಯುತ್ತದೆಯೋ ಹಾಗೆಯೇ ಮನುಷ್ಯಪುತ್ರನಾದ ನಾನು ಬರುವ ದಿನದಲ್ಲಿ ಕಾಣಿಸಿಕೊಳ್ಳುವೆನು.


“ಮನುಷ್ಯಪುತ್ರನಾದ ನನ್ನ ಪ್ರತ್ಯಕ್ಷತೆಯ ದಿನದಲ್ಲಿಯೂ ಹಾಗೆ ಇರುವುದು.


ದೇವರ ಮಕ್ಕಳ ಪ್ರತ್ಯಕ್ಷತೆಯನ್ನು ಸೃಷ್ಟಿಯು ಆತುರದಿಂದ ಎದುರು ನೋಡುತ್ತಿದೆ.


ಕ್ರಿಸ್ತ ಯೇಸುವಿನ ದಿನವು ಇದನ್ನು ಬಹಿರಂಗಕ್ಕೆ ತರುವಾಗ, ಅವನವನ ಕೆಲಸವು ಏನಾಗಿರುವುದೆಂಬುದು ವ್ಯಕ್ತವಾಗುವುದು. ಏಕೆಂದರೆ ಅದು ಬೆಂಕಿಯಿಂದ ಪ್ರಕಟವಾಗುವುದು. ಪ್ರತಿಯೊಬ್ಬನ ಕೆಲಸದ ಯೋಗ್ಯತೆಯನ್ನು ಬೆಂಕಿಯೇ ಪರೀಕ್ಷಿಸುವುದು.


ನಿಮಗೆ ಓದಲು ಅಥವಾ ಅರ್ಥಮಾಡಿಕೊಳ್ಳಲು ಅಸಾಧ್ಯವಾದ ಯಾವುದನ್ನೂ ನಾವು ಬರೆಯಲಿಲ್ಲ.


ನೀವು ಕ್ರಿಸ್ತ ಯೇಸುವಿನಲ್ಲಿ ಬೇರೂರಿದವರಾಗಿಯೂ ಕಟ್ಟಲಾದವರಾಗಿಯೂ ಇದ್ದು, ನಿಮಗೆ ಬೋಧನೆ ನೀಡಿದ ಪ್ರಕಾರ ನಿಮ್ಮ ವಿಶ್ವಾಸದಲ್ಲಿ ಬಲಹೊಂದಿ ಕೃತಜ್ಞತೆಯಿಂದ ತುಂಬಿ ಪ್ರವಾಹಿಸುವವರಾಗಿರಿ.


ರಾತ್ರಿಯಲ್ಲಿ ಕಳ್ಳನು ಬರುವಂತೆ ಕರ್ತ ಯೇಸುವಿನ ದಿನವು ಬರುವುದೆಂದು ನೀವೇ ಚೆನ್ನಾಗಿ ಬಲ್ಲಿರಿ.


ಕ್ರಿಸ್ತ ಯೇಸುವಿನ ದಿನವು ಈಗಾಗಲೇ ಬಂದಿದೆಯೆಂದು ಪ್ರವಾದನೆಯಿಂದಾಗಲಿ, ಪ್ರಸಂಗದಿಂದಾಗಲಿ ಅಥವಾ ನಮ್ಮ ಪತ್ರದಿಂದಾಗಲಿ ತಿಳಿದು ನೀವು ಬೇಗನೆ ಚಂಚಲರಾಗಿ ಕಳವಳಪಡಬೇಡಿರಿ.


ಇದಕ್ಕಾಗಿಯೇ ನಾನು ಈ ಶ್ರಮೆಗಳನ್ನು ಅನುಭವಿಸುತ್ತಿದ್ದೇನೆ. ಆದರೆ ನಾನು ನಾಚಿಕೆಪಡುವುದಿಲ್ಲ. ಏಕೆಂದರೆ ನಾನು ನಂಬಿರುವ ಕ್ರಿಸ್ತ ಯೇಸುವನ್ನು ಬಲ್ಲೆನು. ನಾನು ಕ್ರಿಸ್ತ ಯೇಸುವಿಗೆ ಒಪ್ಪಿಸಿದ್ದನ್ನು ಅವರು ಆ ದಿನಕ್ಕಾಗಿ ಕಾಪಾಡುವುದಕ್ಕೆ ಶಕ್ತರಾಗಿದ್ದಾರೆಂಬ ದೃಢವಿಶ್ವಾಸ ನನಗಿದೆ.


ಅವನು ಆ ದಿನದಲ್ಲಿ ಕರ್ತ ಯೇಸುವಿನಿಂದ ಕರುಣೆಯನ್ನು ಕಂಡುಕೊಳ್ಳುವಂತೆ ಕರ್ತ ಯೇಸುವೇ ಅವನಿಗೆ ಅನುಗ್ರಹ ಮಾಡಲಿ. ಎಫೆಸದಲ್ಲಿ ಅವನು ನನಗೆ ಎಷ್ಟು ಸಹಾಯಮಾಡಿದನೆಂಬುದು ನಿನಗೆ ಚೆನ್ನಾಗಿ ಗೊತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು