Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 10:1 - ಕನ್ನಡ ಸಮಕಾಲಿಕ ಅನುವಾದ

1 ಪ್ರಿಯರೇ, ನಮ್ಮ ಪಿತೃಗಳೆಲ್ಲರೂ ಮೇಘದ ನೆರಳಿನಲ್ಲಿದ್ದರು, ಅವರೆಲ್ಲರೂ ಸಮುದ್ರವನ್ನು ಹಾದುಹೋದರು ಎಂಬ ವಿಷಯದಲ್ಲಿ ನೀವು ಅಜ್ಞಾನಿಗಳಾಗಿರಬಾರದೆಂದು ಅಪೇಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸಹೋದರರೇ, ನಾನು ನಿಮಗೆ ತಿಳಿಸಲು ಅಪೇಕ್ಷಿಸುವ ಸಂಗತಿ ಏನೆಂದರೆ, ನಮ್ಮ ಪೂರ್ವಿಕರೆಲ್ಲರೂ ಮೇಘದ ಅಡಿಯಲ್ಲಿದ್ದು ಸಮುದ್ರವನ್ನು ದಾಟಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಪ್ರಿಯ ಸಹೋದರರೇ, ನಮ್ಮ ಪೂರ್ವಜರಿಗೆ ಸಂಭವಿಸಿದವುಗಳತ್ತ ನಿಮ್ಮ ಗಮನವನ್ನು ಸೆಳೆಯಬೇಕೆಂದಿದ್ದೇನೆ. ಅವರೆಲ್ಲರೂ ಮೋಡದ ನೆರಳಿನಲ್ಲಿಯೇ ನಡೆದರು. ಎಲ್ಲರೂ ಸಮುದ್ರವನ್ನು ಸುರಕ್ಷಿತವಾಗಿ ದಾಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸಹೋದರರೇ, ಮುಂದಿನ ಸಂಗತಿಯಲ್ಲಿ ನೀವು ಲಕ್ಷ್ಯವಿಡಬೇಕೆಂದು ನಾನು ಅಪೇಕ್ಷಿಸುತ್ತೇನೆ. ಅದೇನಂದರೆ, ನಮ್ಮ ಪಿತೃಗಳೆಲ್ಲರೂ ಮೇಘದ ನೆರಳಿನಲ್ಲಿದ್ದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸಹೋದರ ಸಹೋದರಿಯರೇ, ಮೋಶೆಯನ್ನು ಅನುಸರಿಸಿದ ನಮ್ಮ ಪಿತೃಗಳಿಗೆ ಏನು ಸಂಭವಿಸಿತೆಂಬುದನ್ನು ನೀವು ತಿಳಿದುಕೊಳ್ಳಬೇಕೆಂದು ನಾನು ಅಪೇಕ್ಷಿಸುತ್ತೇನೆ. ಅವರೆಲ್ಲರೂ ಮೋಡದ ಕೆಳಗಿದ್ದರು; ಸಮುದ್ರದ ಮೂಲಕ ನಡೆದುಕೊಂಡು ಹೋದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಮಾಜ್ಯಾ ಭಾವಾನು ಅನಿ ಭೆನಿಯಾನು, ಮೊಯ್ಜೆಚ್ಯಾ ಫಾಟ್ನಾ ಗೆಲ್ಲ್ಯಾ ಅಮ್ಚ್ಯಾ ವಾಡ್ ವಡ್ಲಾಕ್ನಿ ಕಾಯ್ ಘಡ್ಲೆ ಮನುನ್ ತುಮಿ ಇಸ್ರುಚೆ ನ್ಹಯ್, ತೆನಿ ಸಗ್ಳೆ ಜಾನಾ ಮೊಡಾಚ್ಯಾ ಸಾವ್ಳಿಕ್ ಹೊತ್ತೆ ಅನಿ ಸಮುಂದರಾತ್ನಾ ಸಮೆತ್ ಉತ್ರುನ್ ಗೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 10:1
29 ತಿಳಿವುಗಳ ಹೋಲಿಕೆ  

ಆದರೆ ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿದ್ದ ಒಣಗಿದ ನೆಲದ ಮೇಲೆ ನಡೆದುಹೋದರು. ನೀರು ಅವರಿಗೆ ಎಡಗಡೆ ಮತ್ತು ಬಲಗಡೆಗಳಲ್ಲಿ ಗೋಡೆಯಂತಿತ್ತು.


ದೇವರು ಇಸ್ರಾಯೇಲರ ನೆರಳಿಗೋಸ್ಕರ ಮೇಘವನ್ನೂ, ರಾತ್ರಿಯಲ್ಲಿ ಬೆಳಕಿಗೋಸ್ಕರ ಬೆಂಕಿಯನ್ನೂ ಏರ್ಪಡಿಸಿದರು.


ನಂಬಿಕೆಯಿಂದಲೇ ಇಸ್ರಾಯೇಲರು ಒಣ ಭೂಮಿಯನ್ನು ದಾಟುವಂತೆ ಕೆಂಪು ಸಮುದ್ರವನ್ನು ದಾಟಿದರು. ಈಜಿಪ್ಟಿನವರು ಅದನ್ನು ದಾಟುವುದಕ್ಕೆ ಪ್ರಯತ್ನಿಸಿ ಮುಳುಗಿ ಹೋದರು.


ಆದರೆ ಯಾರಾದರೂ ಇದನ್ನು ತಿರಸ್ಕಸಿದರೆ, ಅವರೂ ತಿರಸ್ಕಾರಕ್ಕೆ ಗುರಿಯಾಗುವರು.


ಜನರನ್ನು ಸುರಕ್ಷಿತವಾಗಿ ನಡೆಸಿದ ಕಾರಣ ಅವರು ಹೆದರಲಿಲ್ಲ. ಆದರೆ ಸಮುದ್ರವು ಅವರ ಶತ್ರುಗಳನ್ನು ಮುಚ್ಚಿಬಿಟ್ಟಿತು.


ದೇವರು ಸಮುದ್ರವನ್ನು ಒಣ ಭೂಮಿಯನ್ನಾಗಿ ಮಾಡಿದರು. ಜನರು ಕಾಲಿನಿಂದ ನದಿಯನ್ನು ದಾಟಿದರು. ಬನ್ನಿರಿ, ದೇವರಲ್ಲಿ ಆನಂದಿಸೋಣ.


“ಆದರೆ ನೀವು ನಿಮ್ಮ ಬಹು ಕರುಣೆಯಿಂದ ಮರುಭೂಮಿಯಲ್ಲಿ ಅವರನ್ನು ಕೈಬಿಡಲಿಲ್ಲ. ಹಗಲಿನಲ್ಲಿ ಅವರಿಗೆ ಮೇಘಸ್ತಂಭವು ದಾರಿ ತೋರಿಸದೆ ಇರಲಿಲ್ಲ. ರಾತ್ರಿಯಲ್ಲಿ ಅವರಿಗೆ ಬೆಳಕನ್ನೂ, ಅವರು ನಡೆಯತಕ್ಕ ಮಾರ್ಗವನ್ನೂ ತೋರಿಸುವ ಅಗ್ನಿ ಸ್ತಂಭವು ಅವರನ್ನು ಬಿಟ್ಟುಹೋಗಲಿಲ್ಲ.


ನೀವು ಯೊರ್ದನ್ ನದಿ ನೀರನ್ನು ದಾಟಿ ಬರುವವರೆಗೂ, ನಿಮ್ಮ ದೇವರಾದ ಯೆಹೋವ ದೇವರು ಆ ನದಿಯ ನೀರನ್ನು ಒಣಗಿ ಹೋಗುವಂತೆ ಮಾಡಿದರು. ಕೆಂಪು ಸಮುದ್ರವನ್ನು ನಾವು ದಾಟುವವರೆಗೂ ನಮ್ಮ ಮುಂದೆ ಬತ್ತಿಸಿದಂತೆ, ಯೊರ್ದನ್ ನದಿ ನೀರನ್ನೂ ಬತ್ತಿಸಿದರು.


ಅವರೇ ನಿಮಗೆ ಇಳಿದುಕೊಳ್ಳುವುದಕ್ಕೆ ಸ್ಥಳವನ್ನು ಗೊತ್ತುಮಾಡಿ ನೀವು ಹೋಗತಕ್ಕ ಮಾರ್ಗವನ್ನು ನಿಮಗೆ ತೋರಿಸಲು ರಾತ್ರಿ ಹೊತ್ತು ಬೆಂಕಿಯಲ್ಲಿಯೂ ಹಗಲು ಹೊತ್ತು ಮೇಘದಲ್ಲಿಯೂ ನಿಮ್ಮ ಮುಂದೆ ಹೋದರು.


ಪೀಹಹೀರೋತಿನಿಂದ ಹೊರಟು ಸಮುದ್ರದೊಳಗಿಂದ ಮರುಭೂಮಿಗೆ ದಾಟಿದರು. ಆಗ ಅವರು ಮೂರು ದಿವಸದ ಪ್ರಯಾಣಮಾಡಿ ಏತಾಮೆಂಬ ಮರುಭೂಮಿಯಲ್ಲಿ ನಡೆದು ಮಾರಾದಲ್ಲಿ ಇಳಿದರು.


ಅವರು ಈ ದೇಶದ ನಿವಾಸಿಗಳಿಗೆ ಅದನ್ನು ಹೇಳುವರು. ನೀವು ಈ ಜನರ ಸಂಗಡ ಇದ್ದೀಯೆಂದೂ, ಯೆಹೋವ ದೇವರಾದ ನೀವೇ ಮುಖಾಮುಖಿಯಾಗಿ ಕಾಣಿಸಿಕೊಳ್ಳುತ್ತೀರಿ ಎಂದೂ ನೀವು ಹಗಲು ಹೊತ್ತಿನಲ್ಲಿ ಮೇಘಸ್ತಂಭದಲ್ಲಿಯೂ, ರಾತ್ರಿಯಲ್ಲಿ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ನಡೆಯುತ್ತೀರಿ ಎಂದೂ ನೀವಿರುವ ಮೇಘವು ಇಸ್ರಾಯೇಲರ ಮೇಲೆ ಇರುವುದಾಗಿಯೂ ಎಂದೂ ಅವರು ಈಗಾಗಲೇ ಕೇಳಿದ್ದಾರೆ.


ಆಗ ಮೇಘವು ದೇವದರ್ಶನದ ಗುಡಾರವನ್ನು ಮುಚ್ಚಿಕೊಂಡು, ಯೆಹೋವ ದೇವರ ಮಹಿಮೆಯು ದೇವದರ್ಶನದ ಗುಡಾರವನ್ನು ತುಂಬಿಕೊಂಡಿತು.


ಪ್ರಿಯರೇ, ಈಗ ಆತ್ಮಿಕ ವರಗಳನ್ನು ಕುರಿತು ನೀವು ಅಜ್ಞಾನಿಗಳಾಗಿರಬಾರದೆಂದು ಅಪೇಕ್ಷಿಸುತ್ತೇನೆ.


ಹೌದು, ಸುನ್ನತಿಯಾಗುವ ಮೊದಲೇ ಅಬ್ರಹಾಮನಿಗಿದ್ದ ನಂಬಿಕೆಯಿಂದ ಅವನು ನೀತಿಯ ಮುದ್ರೆಯನ್ನು ಹೊಂದಿದನು. ಹೀಗಿರುವಲ್ಲಿ, ಸುನ್ನತಿಯಿಲ್ಲದೆ ನಂಬುವವರೆಲ್ಲರಿಗೂ ಅಬ್ರಹಾಮನು ತಂದೆಯಾಗಿರುತ್ತಾನೆ. ಹೀಗೆ ಅವರಿಗೆ ನೀತಿಯು ಎಣಿಕೆಯಾಗುವುದು.


ಆದರೆ ನೀವು ಕ್ರಿಸ್ತನವರಾಗಿದ್ದರೆ, ಅಬ್ರಹಾಮನ ಸಂತತಿಯವರಾಗಿದ್ದೀರಿ ಮಾತ್ರವಲ್ಲದೆ ವಾಗ್ದಾನಕ್ಕನುಸಾರವಾಗಿ ವಾರಸುದಾರರೂ ಆಗಿದ್ದೀರಿ.


ಏಕೆಂದರೆ ದೇವರು ಹುಟ್ಟು ಕೊಂಬೆಗಳನ್ನು ಉಳಿಸದಿದ್ದ ಮೇಲೆ ನಿನ್ನನ್ನೂ ಉಳಿಸುವುದಿಲ್ಲ.


ನಮ್ಮ ಪಿತೃಗಳು ಈ ಬೆಟ್ಟದ ಮೇಲೆ ದೇವರನ್ನು ಆರಾಧಿಸಿದರು. ಆದರೆ, ‘ಆರಾಧಿಸತಕ್ಕ ಸ್ಥಳವು ಯೆರೂಸಲೇಮಿನಲ್ಲಿಯೇ’ ಎಂದು ಯೆಹೂದ್ಯರಾದ ನೀವು ಹೇಳುತ್ತೀರಲ್ಲಾ,” ಎಂದಳು.


ಪ್ರಿಯರೇ, ನನ್ನ ಸೇವೆಯು ಯೆಹೂದ್ಯರಲ್ಲದವರಲ್ಲಿ ಫಲಉಂಟಾದಂತೆ ನಿಮ್ಮಲ್ಲಿಯೂ ಫಲಉಂಟಾಗಬೇಕೆಂದು ನಿಮ್ಮ ಬಳಿಗೆ ಬರುವುದಕ್ಕೆ ಅನೇಕಾವರ್ತಿ ಉದ್ದೇಶಿಸಿದೆನು. ಆದರೆ ಅದಕ್ಕೆ ಇಂದಿನವರೆಗೂ ಅಡ್ಡಿಯಾಯಿತೆಂದು ನಿಮಗೆ ತಿಳಿದಿರಬೇಕೆಂಬುದು ನನ್ನ ಅಪೇಕ್ಷೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು