Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 10:12 - ಕನ್ನಡ ಸಮಕಾಲಿಕ ಅನುವಾದ

12 ಆದಕಾರಣ ದೃಢವಾಗಿ ನಿಂತಿದ್ದೇವೆಂದು ಭಾವಿಸುವ ನೀವು ಬೀಳದಿರುವಂತೆ ನೋಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳದಂತೆ ಎಚ್ಚರಿಕೆಯಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆದಕಾರಣ ಸ್ಥಿರವಾಗಿ ನಿಂತಿರುವೆನೆಂದು ಕೊಚ್ಚಿಕೊಳ್ಳುವವನೇ, ಕುಸಿದುಬೀಳದಂತೆ ಎಚ್ಚರಿಕೆಯಿಂದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳದಂತೆ ಎಚ್ಚರಿಕೆಯಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆದ್ದರಿಂದ ತಾನು ದೃಢವಾಗಿ ನಿಂತಿದ್ದೇನೆ ಎಂದು ಯೋಚಿಸುವ ವ್ಯಕ್ತಿಯು ಬೀಳದಂತೆ ಎಚ್ಚರಿಕೆಯಿಂದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಹೆಚ್ಯಾಸಾಟ್ನಿ ಜೊ ಕೊನ್ ಅಪ್ನಿ ಘಟ್ ಇಬೆ ಹಾಂವ್ ಮನುನ್ ಚಿಂತಾ, ತೊ ಅಪ್ನಿ ಪಡಿನಸಿ ಸರ್ಕೆ ಬಗುನ್ ಘೆಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 10:12
11 ತಿಳಿವುಗಳ ಹೋಲಿಕೆ  

ಅದು ನಿಜವೆ, ಆದರೆ ಅವರ ಅವಿಶ್ವಾಸದಿಂದಲೇ ಅವರನ್ನು ಮುರಿದು ಹಾಕಲಾಯಿತು. ನೀನಾದರೋ ವಿಶ್ವಾಸದಿಂದಲೇ ಇನ್ನೂ ನಿಂತಿರುವೆ. ಗರ್ವಪಡದೆ ಭಯದಿಂದಿರು.


ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂದಾಗಿ ತಿಳಿದುಕೊಂಡಿರುವುದರಿಂದ ನಿಯಮರಹಿತರ ಸೆಳೆಯುವಿಕೆಗೆ ಮರುಳಾಗಿ ನಿಮ್ಮ ಸ್ಥಿರತೆಯಿಂದ ಬಿದ್ದುಹೋಗದಂತೆ ಎಚ್ಚರಿಕೆಯಿಂದಿರಿ.


ನಾಶನಕ್ಕೆ ಮುಂದಾಗಿ ಗರ್ವ ಹೋಗುತ್ತದೆ. ಬೀಳುವಿಕೆಯ ಮುಂಚೆ ಜಂಬದ ಆತ್ಮ.


ಯಾರಾದರೂ ತಾನು ಏನನ್ನಾದರೂ ತಿಳಿದಿರುವುದಾಗಿ ಭಾವಿಸಿದರೆ, ಅಂಥವನು ತಿಳಿಯಬೇಕಾದ ರೀತಿಯಲ್ಲಿ ಇನ್ನೂ ತಿಳಿದುಕೊಂಡಿರುವುದಿಲ್ಲ.


ಯಾವಾಗಲೂ ಯೆಹೋವ ದೇವರ ಭಯಭಕ್ತಿಯಲ್ಲಿ ನಡೆದುಕೊಳ್ಳುವವನು ಧನ್ಯನು. ಆದರೆ ಹೃದಯವನ್ನು ಕಠಿಣಪಡಿಸಿಕೊಳ್ಳುವವನು ಕೇಡಿಗೆ ಸಿಕ್ಕಿಬೀಳುವನು.


ಆದ್ದರಿಂದ ನೀವು ಕೇಳುವ ವಿಷಯಗಳಲ್ಲಿ ಎಚ್ಚರಿಕೆಯಾಗಿರಿ. ಏಕೆಂದರೆ ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲಾಗುವುದು; ಇಲ್ಲದವರ ಕಡೆಯಿಂದ ತಮಗಿದೆ ಎಂದುಕೊಳ್ಳುವುದನ್ನು ಸಹ, ಅವರಿಂದ ಕಿತ್ತುಕೊಳ್ಳಲಾಗುವುದು,” ಎಂದು ಹೇಳಿದರು.


ತತ್ವಜ್ಞಾನವೂ ನಿರರ್ಥಕವೂ ವಂಚನೆಯೂ ಆಗಿರುವ ಮನುಷ್ಯರ ಸಂಪ್ರದಾಯದಿಂದ ನಿಮ್ಮಲ್ಲಿ ಯಾರಾದರೂ ಬಂದು ನಿಮ್ಮನ್ನು ವಶಪಡಿಸಿಕೊಳ್ಳದಂತೆ ಎಚ್ಚರಿಕೆಯಿಂದಿರಿ. ಅಂಥವರು ಕ್ರಿಸ್ತ ಯೇಸುವನ್ನು ಅನುಸರಿಸದೆ, ಪ್ರಾಪಂಚಿಕ ಬಾಲಬೋಧನೆಗಳನ್ನೂ ಅನುಸರಿಸುವವರಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು