Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 10:13 - ಕನ್ನಡ ಸಮಕಾಲಿಕ ಅನುವಾದ

13 ಮನುಷ್ಯರಿಗಾಗುವ ಶೋಧನೆಯೇ ಹೊರತು, ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲ. ಆದರೆ ದೇವರು ನಂಬಿಗಸ್ತರು. ನಿಮ್ಮ ಶಕ್ತಿಗೆ ಮೀರಿದ ಶೋಧನೆಗಳನ್ನು ಅವರು ನಿಮ್ಮ ಮೇಲೆ ಬರುವಂತೆ ಮಾಡುವುದಿಲ್ಲ. ಆದರೆ ನಿಮಗೆ ಶೋಧನೆಗಳು ಬಂದಾಗ, ಅವುಗಳನ್ನು ಜಯಿಸುವುದಕ್ಕೆ ಶಕ್ತರಾಗುವಂತೆ, ಅವುಗಳಿಂದ ತಪ್ಪಿಸಿಕೊಳ್ಳುವ ಮಾರ್ಗವನ್ನು ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಮನುಷ್ಯರಿಗೆ ಸಾಧಾರಣವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲವಲ್ಲ. ದೇವರು ನಂಬಿಗಸ್ತನು. ನಿಮ್ಮ ಶಕ್ತಿಗೆ ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವುದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಮಾನವರಿಂದ ಜಯಿಸಲಾಗದ ಶೋಧನೆಗಳೇನೂ ನಿಮಗೆ ಬಂದಿಲ್ಲ. ದೇವರು ಕೊಟ್ಟಮಾತಿಗೆ ತಪ್ಪಲಾರರು. ಗೆಲ್ಲಲಾಗದ ಶೋಧನೆಗಳಿಗೆ ನಿಮ್ಮನ್ನೆಂದೂ ಗುರಿಪಡಿಸಲಾರರು. ಶೋಧನೆಗಳು ಬಂದಾಗ ಅವುಗಳನ್ನು ಸಹಿಸಿಕೊಳ್ಳುವ ಶಕ್ತಿಯನ್ನೂ ತಪ್ಪಿಸಿಕೊಳ್ಳುವ ಮಾರ್ಗವನ್ನೂ ಅವರೇ ಒದಗಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಮನುಷ್ಯರು ಸಹಿಸಬಹುದಾದ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ. ದೇವರು ನಂಬಿಗಸ್ಥನು; ನಿಮ್ಮ ಶಕ್ತಿಯನ್ನು ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಎಲ್ಲಾ ಜನರಿಗೆ ಬರುವಂತೆ ನಿಮಗೂ ಶೋಧನೆಗಳು ಬರುತ್ತವೆ. ಆದರೆ ದೇವರು ನಂಬಿಗಸ್ತನಾಗಿದ್ದಾನೆ. ನೀವು ಸಹಿಸಿಕೊಳ್ಳಲಾರದ ಶೋಧನೆಯನ್ನು ಆತನು ನಿಮಗೆ ಬರಗೊಡಿಸುವುದಿಲ್ಲ. ಶೋಧನೆಗಳು ಬಂದಾಗ, ಅವುಗಳಿಂದ ಪಾರಾಗುವ ಮಾರ್ಗವನ್ನು ಸಹ ದೇವರು ನಿಮಗೆ ಒದಗಿಸುತ್ತಾನೆ. ಆಗ ನೀವು ಅದನ್ನು ಸಹಿಸಿಕೊಳ್ಳುವುದಕ್ಕೆ ಶಕ್ತರಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಮಾನ್ಸಾಚ್ಯಾನ್ ಜಿಕುಕ್ ಹೊಯ್ನಾ ತಸ್ಲಿ ಪರಿಕ್ಷಾ ಅಮ್ಕಾ ಅಜುನ್ ಪತರ್ ಯೆವ್ಕ್ ನಾ. ದೆವ್ ವಿಶ್ವಾಸಿ, ತೊ ಅಮ್ಕಾ ಆಟ್ಪಿನಾ ತಸ್ಲಿ ಪರಿಕ್ಷಾ ಯೆವ್ಕ್ ಸೊಡಿ ನಾ; ಪರಿಕ್ಷಾ ಯೆಲ್ಲ್ಯಾ ವೆಳಾರ್ ತೆಚೆ ವೈರ್ ಜಿಕುಕ್ ಉಪಾಯ್ ಅನಿ ಘಟ್ ರ್‍ಹಾವ್ಕ್ ತಾಕತ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 10:13
48 ತಿಳಿವುಗಳ ಹೋಲಿಕೆ  

ಕರ್ತದೇವರು ಭಕ್ತರನ್ನು ಸಂಕಟದೊಳಗಿಂದ ತಪ್ಪಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವರಾಗಿದ್ದಾರೆ.


ನನ್ನನ್ನು ಪ್ರತಿಯೊಂದು ದುಷ್ಟದಾಳಿಯಿಂದ ಕರ್ತ ಯೇಸು ತಪ್ಪಿಸಿ, ತಮ್ಮ ಪರಲೋಕ ರಾಜ್ಯಕ್ಕೆ ನನ್ನನ್ನು ಸುರಕ್ಷಿತವಾಗಿ ತರುವರು. ಯುಗಯುಗಾಂತರಗಳಲ್ಲಿಯೂ ಅವರಿಗೆ ಮಹಿಮೆ. ಆಮೆನ್.


ಆದರೆ ಕರ್ತ ಯೇಸು ನಂಬಿಗಸ್ತರು, ಅವರು ನಿಮ್ಮನ್ನು ದೃಢಪಡಿಸಿ ನಿಮ್ಮನ್ನು ಕೆಡುಕನಿಂದ ತಪ್ಪಿಸುವರು.


ನೀವು ಪಾಪಕ್ಕೆ ವಿರೋಧವಾಗಿ ಹೋರಾಡುವುದರಲ್ಲಿ, ಇನ್ನೂ ರಕ್ತವನ್ನು ಸುರಿಸುವಷ್ಟು ಅದನ್ನು ಎದುರಿಸಲಿಲ್ಲ.


ನಿಮ್ಮನ್ನು ಕರೆಯುವ ದೇವರು ನಂಬಿಗಸ್ತರು, ಅವರೇ ಅದನ್ನು ಸಾಧಿಸುವವರೂ ಆಗಿದ್ದಾರೆ.


“ನೀವು ನಿದ್ರೆ ಮಾಡುವುದು ಏಕೆ? ಶೋಧನೆಗೆ ಒಳಗಾಗದಂತೆ ಎದ್ದು ಪ್ರಾರ್ಥಿಸಿರಿ,” ಎಂದರು.


ನಾನು ನಿಮ್ಮನ್ನು ಕುರಿತು ಮಾಡುವ ಯೋಜನೆಗಳನ್ನು ಬಲ್ಲೆನು. ಅವು ಕೇಡಿಗಲ್ಲ, ಹಿತಕ್ಕಾಗಿರುವ ಯೋಜನೆಗಳು. ನಿಮಗೆ ಭವಿಷ್ಯವನ್ನೂ, ನಿರೀಕ್ಷೆಯನ್ನೂ ಕೊಡುವುದಕ್ಕಿವೆ.


ಒಂದು ವೇಳೆ ಹಾಗೆ ಇದ್ದರೆ, ನಿಶ್ಚಯವಾಗಿ ನಾವು ಆರಾಧಿಸುವ ನಮ್ಮ ದೇವರು ಉರಿಯುವ ಬೆಂಕಿಯ ಕುಲುಮೆಯೊಳಗಿಂದ ನಮ್ಮನ್ನು ತಪ್ಪಿಸಲು ಸಮರ್ಥರಾಗಿದ್ದಾರೆ. ಅರಸನೇ, ನಿನ್ನ ಕೈಯಿಂದಲೂ ನಮ್ಮನ್ನು ತಪ್ಪಿಸುವರು.


ಹೀಗಿರುವುದರಿಂದ ನಿಮ್ಮ ದೇವರಾದ ಯೆಹೋವ ದೇವರು ಒಬ್ಬರೇ ದೇವರು; ಅವರೇ ನಂಬಿಗಸ್ತರಾದ ದೇವರು; ತಮ್ಮನ್ನು ಪ್ರೀತಿಸಿ, ತಮ್ಮ ಆಜ್ಞೆಗಳನ್ನು ಕೈಗೊಳ್ಳುವವರಿಗೆ, ಅವರು ತಮ್ಮ ಒಡಂಬಡಿಕೆಯ ಪ್ರೀತಿಯನ್ನು ಸಾವಿರ ತಲೆಗಳವರೆಗೂ ತೋರಿಸುವರು.


ನಾವು ಭರವಸೆಯಿಟ್ಟ ದೇವರು ಅಂಥಾ ಮರಣಕರ ಅಪಾಯದಿಂದ ನಮ್ಮನ್ನು ತಪ್ಪಿಸಿದ್ದಾರೆ ಮತ್ತು ಮುಂದೆಯೂ ಅಪಾಯಗಳಿಂದ ನಮ್ಮನ್ನು ಪಾರುಮಾಡುವರು.


ನೀನು ನನ್ನ ವಾಕ್ಯವನ್ನು ಸಹನೆಯಿಂದ ಕಾಪಾಡಿಕೊಂಡಿದ್ದರಿಂದ, ಭೂನಿವಾಸಿಗಳನ್ನು ಪರೀಕ್ಷಿಸಲು ಇಡೀ ಲೋಕದಲ್ಲೆಲ್ಲಾ ಬರಲಿರುವ ಶೋಧನೆಯ ಸಮಯದಲ್ಲಿ ನಾನು ಸಹ ನಿನ್ನನ್ನು ಸುರಕ್ಷಿತವಾಗಿಡುವೆನು.


ಅವು ಪ್ರತಿ ಮುಂಜಾನೆಯೂ ಹೊಸದಾಗಿರುವುವು. ನಿನ್ನ ನಂಬಿಗಸ್ತಿಕೆಯು ಮಹತ್ತಾದದ್ದು.


ನಿನಗೆ ಸಂಭವಿಸುವುದಕ್ಕಿರುವ ಬಾಧೆಗಳಿಗೆ ಭಯಪಡಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು, ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕೆ ಇದ್ದಾನೆ. ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವವರೆಗೆ ನಂಬಿಗಸ್ತನಾಗಿರು. ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.


ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡುವವರು ತಮ್ಮ ಆತ್ಮಗಳನ್ನು ನಂಬಿಗಸ್ತ ಆಗಿರುವ ಸೃಷ್ಟಿಕರ್ತ ದೇವರಿಗೆ ಒಪ್ಪಿಸಿ, ಒಳ್ಳೆಯದನ್ನು ಮಾಡಲಿ.


ನಾವು ನಮ್ಮ ಪಾಪಗಳನ್ನು ದೇವರಿಗೆ ಅರಿಕೆಮಾಡಿದರೆ ಅವರು ನಂಬಿಗಸ್ತರೂ ನೀತಿವಂತರೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ, ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವರು.


ತಮ್ಮ ಪುತ್ರರೂ ನಮ್ಮ ಕರ್ತ ದೇವರೂ ಆಗಿರುವ ಕ್ರಿಸ್ತ ಯೇಸುವಿನ ಅನ್ಯೋನ್ಯತೆಗೆ ನಿಮ್ಮನ್ನು ಕರೆದ ದೇವರು ಪ್ರಾಮಾಣಿಕರು.


ನಂಬಿಕೆಯಿಂದಲೇ ಸಾರಳು ಸಹ ವಾಗ್ದಾನ ಮಾಡಿದ ದೇವರು ನಂಬಿಗಸ್ತರು ಎಂದೆಣಿಸಿ ತಾನು ಪ್ರಾಯಮೀರಿದವಳಾಗಿದ್ದರೂ ಗರ್ಭವತಿಯಾಗುವುದಕ್ಕೆ ಸಾಮರ್ಥ್ಯ ಹೊಂದಿ, ಒಂದು ಮಗುವನ್ನು ಹೆತ್ತಳು.


ನಾವು ನಮ್ಮ ನಿರೀಕ್ಷೆಯ ಅರಿಕೆಯನ್ನು ಚಂಚಲರಾಗದೆ ಬಿಗಿಯಾಗಿ ಹಿಡಿಯೋಣ. ಏಕೆಂದರೆ ವಾಗ್ದಾನ ಮಾಡಿದವರು ನಂಬಿಗಸ್ತರು.


ನಮಗೆ ಪಾಪಮಾಡಿದವರನ್ನು, ನಾವು ಕ್ಷಮಿಸಿದಂತೆಯೇ ನಮ್ಮ ಪಾಪಗಳನ್ನು ಕ್ಷಮಿಸಿರಿ. ನಮ್ಮನ್ನು ಶೋಧನೆಯೊಳಗೆ ಸೇರಿಸದೆ, ಕೇಡಿನಿಂದ ನಮ್ಮನ್ನು ತಪ್ಪಿಸಿ.”


ನೀತಿವಂತರು ತಮ್ಮ ಕೈಗಳನ್ನು ಅನ್ಯಾಯಕ್ಕೆ ಚಾಚದ ಹಾಗೆ, ದುಷ್ಟನ ಕೋಲು ನೀತಿವಂತರ ಸ್ವಾಸ್ತ್ಯದ ಮೇಲೆ ನೆಲೆಯಾಗಿರುವುದಿಲ್ಲ.


ದೇವರ ವಾಗ್ದಾನ ಮತ್ತು ಆಣೆ ಇವೆರಡೂ ಬದಲಾಗದ ಆಧಾರಗಳು. ಇವುಗಳ ವಿಷಯವಾಗಿ ದೇವರು ನಮಗೆ ಸುಳ್ಳಾಡುವವರಲ್ಲ. ಇದರಿಂದಾಗಿ, ದೇವರ ಆಶ್ರಯವನ್ನು ಹೊಂದುವುದಕ್ಕೆ ಓಡಿಬಂದಿರುವ ನಾವು, ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಳ್ಳಲು ಬಲವಾದ ಉತ್ತೇಜನ ಉಂಟಾಯಿತು.


ನಾವು ಬೇಟೆಗಾರರ ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತೆ ಇದ್ದೇವೆ. ನಾವು ಹರಿದುಹೋದ ಬಲೆಯಿಂದ ತಪ್ಪಿಸಿಕೊಂಡೆವು.


ನೀತಿಯೇ ಅವರಿಗೆ ನಡುಕಟ್ಟು, ನಂಬಿಗಸ್ತಿಕೆಯೇ ಅವರ ಸೊಂಟದ ಪಟ್ಟಿ.


ಆದರೂ ನನ್ನ ಪ್ರೀತಿ, ಕರುಣೆಯನ್ನು ಆತನಿಂದ ಸಂಪೂರ್ಣವಾಗಿ ತೊಲಗಿಸೆನು. ಇಲ್ಲವೆ ನನ್ನ ನಂಬಿಗಸ್ತಿಕೆಯಿಂದ ನಾನು ಜಾರಿಹೋಗೆನು.


ಈಜಿಪ್ಟಿನ ವ್ಯಥೆಯಿಂದ ಬಿಡಿಸಿ ನಿಮ್ಮನ್ನು ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ಇರುವ ಹಾಲು ಜೇನು ಹರಿಯುವ ದೇಶಕ್ಕೆ ಬರಮಾಡುವೆನೆಂದು ವಾಗ್ದಾನ ಮಾಡಿದ್ದೇನೆ,’ ಎಂದು ಅವರಿಗೆ ತಿಳಿಸು.


ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಇಗೋ, ಬಿಳಿಯ ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವರ ಹೆಸರು, ನಂಬಿಗಸ್ತರು ಮತ್ತು ಸತ್ಯವಂತರು ಎಂಬುದು. ಅವರ ನೀತಿಯಿಂದ ನ್ಯಾಯವಿಚಾರಿಸುತ್ತಾ ಯುದ್ಧಮಾಡುತ್ತಾರೆ.


ನಾನು ನಿನ್ನನ್ನು ನಂಬಿಗಸ್ತಿಕೆಯಿಂದಲೇ ನಿಶ್ಚಿತಾರ್ಥ ಮಾಡಿಕೊಳ್ಳುವೆನು. ಆಗ ನೀನು ಯೆಹೋವ ದೇವರನ್ನು ತಿಳಿದುಕೊಳ್ಳುವೆ.


ಯೆಹೋವ ದೇವರೇ, ನೀವೇ ನನ್ನ ದೇವರು. ನೀವು ಸತ್ಯ ಪ್ರಾಮಾಣಿಕತೆಗಳನ್ನು ಆಲೋಚಿಸಿ, ಅನುಸರಿಸಿ ಆದಿಸಂಕಲ್ಪಗಳನ್ನು ನೆರವೇರಿಸುತ್ತಾ, ಅದ್ಭುತಕಾರ್ಯಗಳನ್ನು ನಡೆಸಿದ ಕಾರಣ ನಿಮ್ಮನ್ನು ಉನ್ನತಪಡಿಸಿ, ನಿಮ್ಮ ನಾಮವನ್ನು ಕೊಂಡಾಡುವೆನು.


ಇದಲ್ಲದೆ ಇಲ್ಲಿಂದ ನಿಮ್ಮ ಕಡೆಗೆ ದಾಟಬೇಕೆಂದಿರುವವರು ದಾಟದ ಹಾಗೆಯೂ ಅಲ್ಲಿಂದ ನಮ್ಮ ಕಡೆಗೆ ಬರಬೇಕೆಂದಿರುವವರು ಬಾರದಂತೆಯೂ ನಮಗೂ ನಿಮಗೂ ನಡುವೆ ಒಂದು ದೊಡ್ಡ ಅಂತರ ಸ್ಥಾಪಿಸಿದೆ,’ ಎಂದನು.


“ಕಾಲಾಳುಗಳ ಸಂಗಡ ಓಡುವಾಗ ನಿನಗೆ ಆಯಾಸವಾದರೆ, ಕುದುರೆಗಳ ಸಂಗಡ ಹೇಗೆ ಹೋರಾಡುವೆ? ನೀನು ಸುರಕ್ಷಿತವಾದ ದೇಶದಲ್ಲಿ ಎಡವಿದರೆ, ಯೊರ್ದನಿನ ದಟ್ಟ ಅಡವಿಯಲ್ಲಿ ಹೇಗೆ ಸುಧಾರಿಸುವೆ?


ಮನಃಪೂರ್ವಕವಾಗಿ ತಿರಸ್ಕೃತನಾದವನೂ ಜನಾಂಗಕ್ಕೆ ಅಸಹ್ಯನೂ, ಅಧಿಕಾರಿಗಳ ಸೇವಕನಿಗೆ ಇಸ್ರಾಯೇಲಿನ ವಿಮೋಚಕನೂ ಮತ್ತು ಅವನ ಪರಿಶುದ್ಧನಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯೆಹೋವ ದೇವರ ನಂಬಿಗಸ್ತಿಕೆಯನ್ನೂ, ನೀನು ಆಯ್ದುಕೊಂಡ ಇಸ್ರಾಯೇಲಿನ ಪರಿಶುದ್ಧನನ್ನೂ ಕಂಡು ಅರಸರು ಎದ್ದು ನಿಲ್ಲುತ್ತಾರೆ, ಅಧಿಪತಿಗಳು ಸಹ ಆರಾಧಿಸುವರು.”


ಕೆಲವರು ಹಲಗೆಗಳ ಮೇಲೆ ಮತ್ತು ಕೆಲವರು ನೌಕೆಯ ತುಂಡುಗಳ ಸಹಾಯದಿಂದ ದಡ ಸೇರಬೇಕೆಂದು ಆಜ್ಞಾಪಿಸಿದನು. ಹೀಗೆ ಎಲ್ಲರೂ ಸುರಕ್ಷಿತವಾಗಿ ದಡ ಸೇರಿದರು.


ಯೆಹೋವ ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಯು ಆಕಾಶವನ್ನು ಮುಟ್ಟುತ್ತದೆ; ನಿಮ್ಮ ನಂಬಿಗಸ್ತಿಕೆಯು ಮೇಘಗಳವರೆಗೆ ಮುಟ್ಟಿದೆ.


ನಮ್ಮನ್ನು ಶೋಧನೆಗೆ ಸೇರಿಸದೆ, ಕೇಡಿನಿಂದ ತಪ್ಪಿಸಿರಿ. ಏಕೆಂದರೆ ರಾಜ್ಯವೂ ಬಲವೂ ಮಹಿಮೆಯೂ ಸದಾಕಾಲ ನಿಮ್ಮದೇ. ಆಮೆನ್.’


ಆದ್ದರಿಂದ ನಾಳೆ ಉದಯಕ್ಕೆ ಎದ್ದು ನಿನ್ನ ಸಂಗಡ ಬಂದ ನಿನ್ನ ಯಜಮಾನನ ಸೇವಕರನ್ನು ಕರಕೊಂಡು, ಅವರ ಸಂಗಡ ಉದಯದಲ್ಲಿ ಬೆಳಕು ಆಗುವಾಗ ಹೊರಟು ಹೋಗು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು