Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 10:14 - ಕನ್ನಡ ಸಮಕಾಲಿಕ ಅನುವಾದ

14 ಆದ್ದರಿಂದ ನನ್ನ ಪ್ರಿಯ ಸ್ನೇಹಿತರೇ, ವಿಗ್ರಹಾರಾಧನೆಯನ್ನು ಬಿಟ್ಟು ಓಡಿಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದ್ದರಿಂದ ಪ್ರಿಯರೇ, ವಿಗ್ರಹಾರಾಧನೆಯನ್ನು ಬಿಟ್ಟು ದೂರವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆದ್ದರಿಂದ ಪ್ರಿಯರೇ, ವಿಗ್ರಹಾರಾಧನೆಯನ್ನು ತೊರೆದುಬಿಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆದದರಿಂದ ಪ್ರಿಯ ಸಹೋದರರೇ, ವಿಗ್ರಹಾರಾಧನೆಯ ಗೊಡವೆಯನ್ನು ಸಂಪೂರ್ಣವಾಗಿ ತೊರೆದುಬಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದ್ದರಿಂದ, ನನ್ನ ಪ್ರಿಯ ಸ್ನೇಹಿತರೇ, ವಿಗ್ರಹಗಳ ಪೂಜೆಯ ಬಗ್ಗೆ ಯೋಚಿಸಲೂಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತಸೆ ಮನುನ್ ಮಾಜ್ಯಾ ಪ್ರೆಮಾಚ್ಯಾ ಭಾವಾನು ಅನಿ ಭೆನಿಯಾನು, ಮುರ್ತಿ ಫುಜ್ಯಾ ಧುರ್ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 10:14
21 ತಿಳಿವುಗಳ ಹೋಲಿಕೆ  

ಆದರೆ ಹೇಡಿಗಳು, ನಂಬದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ, ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು!” ಎಂದು ನನಗೆ ಹೇಳಿದರು.


ಪ್ರಿಯ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ.


ಪ್ರಿಯರೇ, ಈ ಲೋಕದಲ್ಲಿ ಪರದೇಶಸ್ಥರೂ ಪ್ರವಾಸಿಗಳೂ ಆಗಿರುವ ನೀವು ನಿಮ್ಮ ಆತ್ಮಕ್ಕೆ ವಿರೋಧವಾಗಿ ಯುದ್ಧಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆಗಾರರೂ ವಿಗ್ರಹಾರಾಧಕರೂ ಸುಳ್ಳನ್ನು ಪ್ರೀತಿಸಿ ಅನುಸರಿಸುವರೆಲ್ಲರೂ ಹೊರಗಿರುವರು.


ಪ್ರಿಯರೇ, ಇಂಥಾ ವಾಗ್ದಾನಗಳು ನಮಗಿರುವುದರಿಂದ ನಮ್ಮ ದೇಹಾತ್ಮಗಳನ್ನು ಮಲಿನಗೊಳಿಸುವ ಎಲ್ಲಾ ವಿಷಯಗಳಿಂದ ನಮ್ಮನ್ನು ಶುದ್ಧಮಾಡಿ, ದೇವರ ಮೇಲಿನ ಭಯಭಕ್ತಿಯಿಂದ ನಮ್ಮ ಪವಿತ್ರತೆಯನ್ನು ಪರಿಪೂರ್ಣಗೊಳಿಸೋಣ.


ಆದ್ದರಿಂದ, “ಅವರ ನಡುವೆಯಿಂದ ಹೊರಟುಬಂದು ಪ್ರತ್ಯೇಕವಾಗಿರಿ. ಅಶುದ್ಧವಾದ ಯಾವುದನ್ನೂ ಮುಟ್ಟದಿರಿ, ನಾನು ನಿಮ್ಮನ್ನು ಸ್ವೀಕರಿಸುವೆನು ಎಂದು ಕರ್ತದೇವರು ಹೇಳುತ್ತಾರೆ.”


ಜಗದುತ್ಪತ್ತಿಗೆ ಮೊದಲೇ ಕೊಯ್ಯಲಾದ ಕುರಿಮರಿಯವರ ಜೀವಗ್ರಂಥದಲ್ಲಿ ಯಾರ‍್ಯಾರ ಹೆಸರುಗಳು ಬರೆದಿರುವುದಿಲ್ಲವೋ, ಆ ಭೂನಿವಾಸಿಗಳೆಲ್ಲರೂ ಆ ಮೃಗವನ್ನು ಆರಾಧಿಸುವರು.


ಆದರೂ ನಿನಗೆ ವಿರೋಧವಾಗಿ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂ ವ್ಯಭಿಚಾರ ಮಾಡುವುದರಲ್ಲಿಯೂ ಇಸ್ರಾಯೇಲರು ಮುಗ್ಗರಿಸಿ ಬೀಳುವಂತೆ ಬಿಳಾಮನು ಬಾಲಾಕನಿಗೆ ಕಲಿಸಿದ ಬೋಧನೆಯನ್ನು ಹಿಡಿದುಕೊಂಡಿರುವವರು ನಿನ್ನಲ್ಲಿದ್ದಾರೆ.


“ಅವರಲ್ಲಿ ಕೆಲವರು ವಿಗ್ರಹಾರಾಧಕರಾಗಿ ಉಣ್ಣುವುದಕ್ಕೂ, ಕುಡಿಯುವುದಕ್ಕೂ ಕುಳಿತುಕೊಂಡರು, ಕುಣಿದಾಡುವುದಕ್ಕೆ ಎದ್ದರು,” ಎಂದು ಬರೆದಿರುವಂತೆ ನೀವೂ ವಿಗ್ರಹಾರಾಧಕರಾಗಬೇಡಿರಿ.


ಏಕೆ? ನಾನು ನಿಮ್ಮನ್ನು ಪ್ರೀತಿ ಇಲ್ಲದ್ದರಿಂದಲೋ? ನಾನು ಪ್ರೀತಿಸುತ್ತೇನೆಂದು ದೇವರಿಗೆ ಗೊತ್ತುಂಟು!


ಪ್ರಿಯರೇ, ಮುಯ್ಯಿಗೆ ಮುಯ್ಯಿ ತೀರಿಸದೆ, ಅದನ್ನು ದೇವರ ಕೋಪಕ್ಕೆ ಬಿಟ್ಟುಬಿಡಿರಿ. ಏಕೆಂದರೆ, “ಮುಯ್ಯಿ ತೀರಿಸುವುದು ನನಗೆ ಸೇರಿದ್ದು. ನಾನು ಅದನ್ನು ತೀರಿಸುವೆನು, ಎಂದು ಕರ್ತನು ಹೇಳುತ್ತಾರೆ,” ಎಂದು ಪವಿತ್ರ ವೇದದಲ್ಲಿ ಬರೆಯಲಾಗಿದೆ.


ಹೀಗಿರಲಾಗಿ, ನನಗೆ ಆಪ್ತರೂ ನಾನು ಹಂಬಲಿಸುವವರೂ ಆದ ನನ್ನ ಪ್ರಿಯರೇ, ನನ್ನ ಆನಂದವೂ ಕಿರೀಟವೂ ಆಗಿರುವ ಸ್ನೇಹಿತರೇ, ಈಗಲೂ ಕರ್ತ ದೇವರಲ್ಲಿ ದೃಢವಾಗಿ ನಿಲ್ಲಿರಿ!


ನಾನಂತೂ ನನಗಿರುವುದೆಲ್ಲವನ್ನೂ ನಿಮ್ಮ ಆತ್ಮಗಳಿಗೋಸ್ಕರ ಬಹು ಸಂತೋಷದಿಂದ ವೆಚ್ಚಮಾಡುತ್ತೇನೆ. ನನ್ನನ್ನು ಕೂಡ ನಿಮಗೋಸ್ಕರ ವೆಚ್ಚಮಾಡಲು ಸಿದ್ಧನಾಗಿದ್ದೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ, ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುವಿರೋ?


ಸುವಾರ್ತೆಯನ್ನು ಸಾರಿದ್ದರಿಂದ ಕ್ರಿಸ್ತ ಯೇಸುವಿನ ಸೆರೆಯಾಳಾಗಿರುವ ಪೌಲನೂ ನಮ್ಮ ಸಹೋದರನಾದ ತಿಮೊಥೆಯನೂ, ನಮಗೆ ಪ್ರಿಯನೂ ಜೊತೆಗೆಲಸದವನೂ ಆಗಿರುವ ಫಿಲೆಮೋನನಿಗೂ


ನಾವು ಇಷ್ಟು ಹೊತ್ತು ನಿಮ್ಮ ಮುಂದೆ ಪ್ರತಿವಾದ ಮಾಡುತ್ತಿದ್ದೇವೆಂದು ನೆನಸುತ್ತೀರೋ? ಹಾಗೆ ಅಲ್ಲ; ಪ್ರಿಯರೇ, ನಾವು ಮಾಡುವುದೆಲ್ಲವೂ ನಿಮ್ಮ ಭಕ್ತಿವೃದ್ಧಿಗಾಗಿ ದೇವರ ದೃಷ್ಟಿಯಲ್ಲಿ ಕ್ರಿಸ್ತ ಯೇಸುವಿನಲ್ಲಿ ಇರುವವರಂತೆ ಮಾತನಾಡುವವರಾಗಿದ್ದೇವೆ.


ಅದರ ಬದಲಾಗಿ ನಾವು ಅವರಿಗೆ, ದೇವರಲ್ಲದವುಗಳಿಂದ ಮಲಿನವಾದ ಆಹಾರದಿಂದಲೂ ಅನೈತಿಕತೆಯಿಂದಲೂ ರಕ್ತವನ್ನೂ ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಯ ಮಾಂಸದಿಂದಲೂ ರಕ್ತದಿಂದಲೂ ದೂರವಿರಬೇಕು.


ಆದರೆ ಸಹೋದರಿ ಅಥವಾ ಸಹೋದರನೆನಿಸಿಕೊಂಡವನು ಜಾರನಾದರೂ ಲೋಭಿಯಾದರೂ ವಿಗ್ರಹಾರಾಧಕನಾದರೂ ಪರನಿಂದಕನಾದರೂ ಕುಡುಕನಾದರೂ ಸುಲಿಗೆ ಮಾಡುವವನಾದರೂ ಆಗಿದ್ದರೆ, ಅಂಥವರ ಸಹವಾಸ ಮಾಡಬೇಡಿರಿ. ಅಂಥವರ ಸಂಗಡ ಊಟ ಮಾಡಲೂ ಬೇಡಿರಿ ಎಂದು ಈಗ ಬರೆಯುತ್ತಿದ್ದೇನೆ.


ವಿವೇಕಿಗಳಿಗೆ ಹೇಳಿದಂತೆ, ನಾನು ಹೇಳುವುದನ್ನು ನೀವು ವಿವೇಚಿಸಿರಿ.


ಹಾಗಾದರೆ ನಾನು ಹೇಳುವುದೇನು? ವಿಗ್ರಹಕ್ಕೆ ಅರ್ಪಿಸಿದ್ದು ಅಥವಾ ವಿಗ್ರಹಕ್ಕೆ ಏನಾದರೂ ಮಹತ್ವವಿರುತ್ತದೆಯೋ? ನಿಶ್ಚಯವಾಗಿಯೂ ಇಲ್ಲ.


ಪ್ರಿಯರೇ, ನಾವು ಈ ರೀತಿಯಾಗಿ ಮಾತನಾಡಿದರೂ ನಿಮ್ಮ ವಿಷಯವಾಗಿಯೂ ನೀವು ಉತ್ತಮವಾದವುಗಳನ್ನೂ ರಕ್ಷಣೆಯ ಕಾರ್ಯಗಳನ್ನೂ ಹೊಂದಿದ್ದೀರಿ ಎಂಬ ನಿಶ್ಚಯ ನಮಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು