Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 10:16 - ಕನ್ನಡ ಸಮಕಾಲಿಕ ಅನುವಾದ

16 ನಾವು ಸ್ತೋತ್ರಮಾಡಿ ಕುಡಿಯುವ ಸ್ತೋತ್ರದ ಪಾತ್ರೆಯು ಕ್ರಿಸ್ತ ಯೇಸುವಿನ ರಕ್ತದ ಅನ್ಯೋನ್ಯತೆಯಲ್ಲವೇ? ನಾವು ಮುರಿಯುವ ರೊಟ್ಟಿಯು ಕ್ರಿಸ್ತನ ದೇಹದಲ್ಲಿಯ ಅನ್ಯೋನ್ಯತೆಯಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾವು ದೇವರ ಸ್ತೋತ್ರಮಾಡಿ ಪಾನಪಾತ್ರೆಯಲ್ಲಿ ಪಾನ ಮಾಡುವುದು ಕ್ರಿಸ್ತನ ರಕ್ತದಲ್ಲಿ ಪಾಲುಗಾರರಾಗಿದ್ದೇವೆಂಬುದನ್ನು ಸೂಚಿಸುತ್ತದಲ್ಲವೇ? ನಾವು ರೊಟ್ಟಿಯನ್ನು ಮುರಿದು ತಿನ್ನುವುದು ಕ್ರಿಸ್ತನ ದೇಹದಲ್ಲಿ ಪಾಲುಗಾರರಾಗಿದ್ದೇವೆಂಬುದನ್ನು ಸೂಚಿಸುತ್ತದಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಾವು ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ ಪಾನಪಾತ್ರೆಯಿಂದ ಕುಡಿಯುವಾಗ ಕ್ರಿಸ್ತಯೇಸುವಿನ ರಕ್ತದಲ್ಲಿ ಪಾಲುಗೊಳ್ಳುತ್ತೇವಲ್ಲವೇ? ರೊಟ್ಟಿಯನ್ನು ಮುರಿದು ತಿನ್ನುವಾಗ ಕ್ರಿಸ್ತಯೇಸುವಿನ ಶರೀರದಲ್ಲಿ ಪಾಲುಗೊಳ್ಳುತ್ತೇವಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಾವು ದೇವಸ್ತೋತ್ರಮಾಡಿ ಪಾತ್ರೆಯಲ್ಲಿ ಪಾನಮಾಡುವದು ಕ್ರಿಸ್ತನ ರಕ್ತದಲ್ಲಿ ಪಾಲುಗಾರರಾಗಿದ್ದೇವೆಂಬದನ್ನು ಸೂಚಿಸುತ್ತದಲ್ಲವೇ. ನಾವು ರೊಟ್ಟಿಯನ್ನು ಮುರಿದು ತಿನ್ನುವದು ಕ್ರಿಸ್ತನ ದೇಹದಲ್ಲಿ ಪಾಲುಗಾರರಾಗಿದ್ದೇವೆಂಬದನ್ನು ಸೂಚಿಸುತ್ತದಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಾವು ದ್ರಾಕ್ಷಾರಸದ ಪಾತ್ರೆಗಾಗಿ ದೇವರಿಗೆ ಸ್ತೋತ್ರ ಸಲ್ಲಿಸಿ ಕುಡಿಯುವಾಗ ಕ್ರಿಸ್ತನ ರಕ್ತದಲ್ಲಿ ಪಾಲುಗಾರರಾಗಲಿಲ್ಲವೇ? ನಾವು ರೊಟ್ಟಿಯನ್ನು ಮುರಿದು ತಿನ್ನುವಾಗ ಕ್ರಿಸ್ತನ ದೇಹದಲ್ಲಿ ಪಾಲುಗಾರರಾಗಲಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಅಮಿ ಧನಿಯಾಚ್ಯಾ ಜೆವ್ನಾಕ್ ಧನ್ಯವಾದ್ ದಿವ್ನ್ ಫಿತಾಂವ್ ತೆ ಧನ್ಯವಾದಾಚೆ ಆಯ್ದಾನ್ ಕ್ರಿಸ್ತಾಚ್ಯಾ ರಗ್ತಾತ್ ಅಮ್ಕಾ ಭಾಗಿದಾರ್ ಕರ್‍ತಾ ನ್ಹಯ್? ಅನಿ ಅಮಿ ಮೊಡ್ತಾಂವ್ ತಿ ಭಾಕ್ರಿ ಕ್ರಿಸ್ತಾಚ್ಯಾ ಮಾಸಾತ್ ಅಮ್ಕಾ ವಾಟೊ ಭಾಗಿದಾರ್ ಕರ್ತಾ ನ್ಹಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 10:16
17 ತಿಳಿವುಗಳ ಹೋಲಿಕೆ  

ಅವರೆಲ್ಲರು ಅಪೊಸ್ತಲರ ಬೋಧನೆಯಲ್ಲಿ, ಅನ್ಯೋನ್ಯತೆಯಲ್ಲಿ, ರೊಟ್ಟಿ ಮುರಿಯುವುದರಲ್ಲಿ, ಪ್ರಾರ್ಥನೆ ಮಾಡುವುದರಲ್ಲಿ ತಮ್ಮನ್ನು ಸಮರ್ಪಿಸಿಕೊಂಡು,


ದೇವರು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ಬಾಳಿದರೆ, ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ, ಆಗ ದೇವರ ಮಗನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.


ಮೊದಲಿನಿಂದಿರುವ ನಮ್ಮ ನಿರೀಕ್ಷೆಯನ್ನು ಅಂತ್ಯದವರೆಗೂ ನಾವು ದೃಢವಾಗಿ ಹಿಡಿದುಕೊಳ್ಳುವುದಾದರೆ ಕ್ರಿಸ್ತ ಯೇಸುವಿನ ಭಾಗಿಗಳಾಗಿದ್ದೇವಲ್ಲಾ!


ಪ್ರತಿದಿನವೂ ದೇವಾಲಯದಲ್ಲಿ ಒಮ್ಮನಸ್ಸಿನಿಂದ ಸಭೆ ಕೂಡಿಬರುವುದನ್ನು ಕ್ರಮವಾಗಿ ಮುಂದುವರೆಸಿದರು. ತಮ್ಮ ಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಆನಂದದಿಂದಲೂ ಸರಳ ಹೃದಯದಿಂದಲೂ ಊಟಮಾಡುತ್ತಿದ್ದರು.


ತಮ್ಮ ಪುತ್ರರೂ ನಮ್ಮ ಕರ್ತ ದೇವರೂ ಆಗಿರುವ ಕ್ರಿಸ್ತ ಯೇಸುವಿನ ಅನ್ಯೋನ್ಯತೆಗೆ ನಿಮ್ಮನ್ನು ಕರೆದ ದೇವರು ಪ್ರಾಮಾಣಿಕರು.


ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರಬೇಕೆಂದು, ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡವೂ ಅವರ ಮಗನಾದ ಕ್ರಿಸ್ತ ಯೇಸುವಿನ ಸಂಗಡವೂ ಇರುವಂಥದ್ದು.


ವಾರದ ಮೊದಲನೆಯ ದಿನ ನಾವು ರೊಟ್ಟಿ ಮುರಿಯಲು ಒಂದಾಗಿ ಕೂಡಿಬಂದೆವು. ಪೌಲನು ಅಲ್ಲಿ ಬೋಧನೆ ಮಾಡಿದನು. ಮರುದಿನ ಅವನು ಹೊರಡಬೇಕಾದ್ದರಿಂದ ಮಧ್ಯರಾತ್ರಿಯವರೆಗೆ ಮಾತನಾಡುತ್ತಲೇ ಇದ್ದನು.


ಯೆಹೂದ್ಯರಾಗಲಿ, ಗ್ರೀಕರಾಗಲಿ, ದಾಸರಾಗಲಿ, ಸ್ವತಂತ್ರರಾಗಲಿ ಒಂದೇ ದೇಹವಾಗುವಂತೆ, ನಾವೆಲ್ಲರೂ ಒಬ್ಬರೇ ಆತ್ಮದಿಂದ ಸ್ನಾನ ಮಾಡಿಸಿಕೊಂಡೆವು. ನಮ್ಮೆಲ್ಲರಿಗೂ ಒಬ್ಬ ಆತ್ಮವನ್ನು ಪಾನವಾಗಿ ಕೊಡಲಾಗಿದೆ.


ಅನಂತರ ಪೌಲನು ಮೇಲಂತಸ್ತಿಗೆ ಹೋಗಿ ವಿಶ್ವಾಸಿಗಳೊಂದಿಗೆ ರೊಟ್ಟಿ ಮುರಿದು ಊಟಮಾಡಿ, ಬೆಳಗಾಗುವವರೆಗೆ ಅವರೊಡನೆ ಮಾತನಾಡಿ, ಅಲ್ಲಿಂದ ಹೊರಟನು.


ಅನಂತರ ಯೇಸು ಪಾನಪಾತ್ರೆಯನ್ನು ತೆಗೆದುಕೊಂಡು, ಸ್ತೋತ್ರಮಾಡಿ, “ಇದನ್ನು ತೆಗೆದುಕೊಳ್ಳಿರಿ ಮತ್ತು ನಿಮ್ಮೊಳಗೆ ಹಂಚಿಕೊಳ್ಳಿರಿ.


ವಿವೇಕಿಗಳಿಗೆ ಹೇಳಿದಂತೆ, ನಾನು ಹೇಳುವುದನ್ನು ನೀವು ವಿವೇಚಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು