Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 10:18 - ಕನ್ನಡ ಸಮಕಾಲಿಕ ಅನುವಾದ

18 ನೀವು ಇಸ್ರಾಯೇಲ್ ಜನರ ಕುರಿತು ಆಲೋಚಿಸಿರಿ: ಯಜ್ಞಾರ್ಪಿತವಾದದ್ದನ್ನು ತಿನ್ನುವವರು ಬಲಿಪೀಠದೊಡನೆ ಭಾಗಿಗಳಾಗಿದ್ದಾರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇಸ್ರಾಯೇಲ್ಯ ಜನರ ಕುರಿತು ಯೋಚಿಸಿರಿ. ಯಜ್ಞಮಾಡಿದ್ದನ್ನು ತಿನ್ನುವವರು ಯಜ್ಞವೇದಿಯೊಡನೆ ಪಾಲುಗಾರರಾಗಿದ್ದಾರಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇಸ್ರಯೇಲರ ಪದ್ಧತಿಯನ್ನು ಗಮನಿಸಿರಿ: ಬಲಿಯಾಗಿ ಅರ್ಪಿತವಾದುದನ್ನು ಭುಜಿಸುವವರು ಬಲಿಪೀಠದ ಸೇವೆಯಲ್ಲಿ ಭಾಗಿಯಾಗುತ್ತಾರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ವಂಶಕ್ರಮದಿಂದ ಇಸ್ರಾಯೇಲ್ಯರಾಗಿರುವವರನ್ನು ಯೋಚಿಸಿರಿ. ಯಜ್ಞಮಾಡಿದ್ದನ್ನು ತಿನ್ನುವವರು ಯಜ್ಞವೇದಿಯೊಡನೆ ಭಾಗಿಗಳಾಗಿದ್ದಾರಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಇಸ್ರೇಲ್ ಜನರ ಬಗ್ಗೆ ಯೋಚಿಸಿ. ಯಜ್ಞವಾಗಿ ಅರ್ಪಿತವಾದುದನ್ನು ತಿನ್ನುವ ಆ ಜನರು ಯಜ್ಞವೇದಿಕೆಯಲ್ಲಿ ಪಾಲುಗಾರರಾಗಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಇಸ್ರಾಯೆಲ್ ಲೊಕಾಕ್ನಿ ಯಾದ್ ಕರಾ ತೆನಿ ಬಲಿ ಮನುನ್ ಭೆಟ್ವಲ್ಲೆ ಜೆ ಕೊನ್ ಖಾತಾತ್, ತೆನಿ ಭೆಟ್ವುತಲ್ಯಾ ಅಲ್ತಾರಿಚ್ಯಾ ವೈನಾ ದೆವಾಚ್ಯಾ ಸೆವೆತ್ ಎಕ್ ಹೊತ್ಯಾತ್ ನ್ಹಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 10:18
18 ತಿಳಿವುಗಳ ಹೋಲಿಕೆ  

ಈ ಸೂತ್ರಕ್ಕೆ ಸರಿಯಾಗಿ ನಡೆಯುವವರೆಲ್ಲರ ಮೇಲೆಯೂ ದೇವರ ಇಸ್ರಾಯೇಲಿನ ಸಮಾಧಾನ ಹಾಗೂ ಕರುಣೆ ಇರಲಿ.


ಯಾಜಕರಲ್ಲಿ ಪ್ರತಿಯೊಬ್ಬ ಪುರುಷನು ಅದನ್ನು ತಿನ್ನಬೇಕು. ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಅದು ಮಹಾಪರಿಶುದ್ಧವಾದದ್ದು.


ಯಾಜಕನು ಅದನ್ನು ಬಲಿಪೀಠದ ಮೇಲೆ ಸುಡಬೇಕು. ಅದು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯ ಆಹಾರವಾಗಿರುವುದು.


ದೇವಾಲಯದಲ್ಲಿ ಸೇವೆಮಾಡುವವರು, ದೇವಾಲಯದಲ್ಲಿ ಊಟ ಪಡೆಯುತ್ತಾರೆಂಬುದೂ; ಬಲಿಪೀಠದ ಬಳಿಯಲ್ಲಿ ಸೇವೆಮಾಡುವವರು, ಆ ಬಲಿಪೀಠದ ಮೇಲೆ ಸಮರ್ಪಿಸಿದ್ದರಲ್ಲಿ ಪಾಲು ಹೊಂದುತ್ತಾರೆಂಬುದೂ ನಿಮಗೆ ತಿಳಿಯದೋ?


ನಮ್ಮ ಪಿತೃವಾದ ಅಬ್ರಹಾಮನು ಸುನ್ನತಿ ಹೊಂದಿದವರಿಗೆ ಮಾತ್ರವೇ ತಂದೆಯಾಗಿರದೆ ಅವನಿಗೆ ಸುನ್ನತಿ ಆಗುವ ಮೊದಲು ಇದ್ದ ನಂಬಿಕೆಯ ಹೆಜ್ಜೆಯಲ್ಲಿ ನಡೆಯುವವರಿಗೂ ತಂದೆಯಾಗಿರುತ್ತಾನೆ.


ಹಾಗಾದರೆ ವಂಶಾನುಕ್ರಮವಾಗಿ ನಮ್ಮ ಮೂಲ ಪಿತೃವಾಗಿರುವ ಅಬ್ರಹಾಮನು, ಈ ವಿಷಯದಲ್ಲಿ ಏನು ಕಂಡುಕೊಂಡನೆಂದು ಹೇಳಬೇಕು?


ಈ ಸುವಾರ್ತೆಯು ದೇವಪುತ್ರನ ವಿಷಯವಾದದ್ದು. ಯೇಸು ಮನುಷ್ಯತ್ವದ ಪ್ರಕಾರ ದಾವೀದನ ಸಂತಾನದವರೂ


“ ‘ಪಾಪ ಪರಿಹಾರದ ಬಲಿಯ ಹಾಗೆಯೇ ಪ್ರಾಯಶ್ಚಿತ್ತದ ಬಲಿಯೂ ಆಗಿದೆ. ಅವುಗಳಿಗೆ ಇರುವುದು ಒಂದೇ ನಿಯಮ, ಅವುಗಳಿಂದ ಪ್ರಾಯಶ್ಚಿತ್ತ ಮಾಡುವ ಯಾಜಕನೇ ಅವುಗಳನ್ನು ತೆಗೆದುಕೊಳ್ಳಬೇಕು.


ನಿಮ್ಮ ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆಗಳ ದಶಮಾಂಶವನ್ನೂ, ನಿಮ್ಮ ದನಕುರಿಗಳ ಚೊಚ್ಚಲಾದವುಗಳನ್ನೂ, ನೀವು ಮಾಡುವ ಎಲ್ಲಾ ಹರಕೆಯ ಪದಾರ್ಥಗಳನ್ನೂ, ನಿಮ್ಮ ಉಚಿತವಾದ ಕಾಣಿಕೆಗಳನ್ನೂ, ಯಾಜಕರಿಗೆ ಪ್ರತ್ಯೇಕಿಸಿದ ಅರ್ಪಣೆಗಳನ್ನೂ ನಿಮ್ಮ ಊರುಗಳಲ್ಲಿ ತಿನ್ನಬೇಡಿರಿ.


ನಮಗೊಂದು ಬಲಿಪೀಠ ಉಂಟು. ಅದರ ಪದಾರ್ಥವನ್ನು ತಿನ್ನುವುದಕ್ಕೆ ಗುಡಾರದ ಸೇವೆ ಮಾಡುವವರಿಗೆ ಹಕ್ಕಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು