Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 10:20 - ಕನ್ನಡ ಸಮಕಾಲಿಕ ಅನುವಾದ

20 ಆದರೆ ಯೆಹೂದ್ಯರಲ್ಲದವರು ಅರ್ಪಿಸುವ ಯಜ್ಞ ದೇವರಿಗಲ್ಲ, ದೆವ್ವಗಳಿಗೆ ಅರ್ಪಿಸುವಂತದ್ದಾಗಿದೆ. ನೀವು ದೆವ್ವಗಳೊಂದಿಗೆ ಭಾಗಿಗಳಾಗಿರಬೇಕೆಂಬುದು ನನ್ನ ಇಷ್ಟವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆದರೆ ಅನ್ಯಜನರು ತಾವು ಅರ್ಪಿಸುವ ಬಲಿಗಳನ್ನು ದೇವರಿಗಲ್ಲ, ದೆವ್ವಗಳಿಗೆ ಅರ್ಪಿಸುತ್ತಾರೆಂಬುದು ನನ್ನ ಅಭಿಪ್ರಾಯವು. ನೀವು ದೆವ್ವಗಳೊಡನೆ ಪಾಲುಗಾರರಾಗಿರಬೇಕೆಂಬುದು ನನ್ನ ಇಷ್ಟವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಯಾವುದೂ ಅಲ್ಲ. ನಾನು ಹೇಳುವುದೇನೆಂದರೆ : ಅನ್ಯಜನರು ಬಲಿಯನ್ನು ದೆವ್ವಗಳಿಗೆ ಅರ್ಪಿಸುತ್ತಾರೆ ಹೊರತು ದೇವರಿಗಲ್ಲ. ಹೀಗೆ ನೀವು ದೆವ್ವಗಳೊಂದಿಗೆ ಭಾಗಿಯಾಗುವುದನ್ನು ನಾನೆಂದಿಗೂ ಇಷ್ಟಪಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆದರೆ ಅನ್ಯಜನರು ತಾವು ಅರ್ಪಿಸುವ ಬಲಿಗಳನ್ನು ದೇವರಿಗಲ್ಲ ದೆವ್ವಗಳಿಗೆ ಅರ್ಪಿಸುತ್ತಾರೆಂದು ನನ್ನ ಅಭಿಪ್ರಾಯವು. ನೀವು ದೆವ್ವಗಳೊಡನೆ ಭಾಗಿಗಳಾಗಿರಬೇಕೆಂಬದು ನನ್ನ ಇಷ್ಟವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಾನು ಹೇಳುತ್ತಿರುವುದೇನೆಂದರೆ, ಜನರು ವಿಗ್ರಹಗಳಿಗೆ ಅರ್ಪಿಸಿದ ಪದಾರ್ಥಗಳು ದೆವ್ವಗಳಿಗೆ ಅರ್ಪಿತವಾದುವುಗಳೇ ಹೊರತು ದೇವರಿಗಲ್ಲ. ನೀವು ದೆವ್ವಗಳೊಂದಿಗೆ ಯಾವ ವಿಷಯದಲ್ಲಿಯೂ ಪಾಲು ಹೊಂದಬಾರದೆಂಬುದು ನನ್ನ ಆಸೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ವಿಶ್ವಾಸಾತ್ ನಸಲ್ಲಿ ಲೊಕಾ ಭೆಟ್ವುತಾತ್ ತಿ ಬಲಿ ದೆವಾಕ್ ನ್ಹಯ್ ಮ್ಹಾರ್‍ವಾಕ್ನಿ ಭೆಟ್ವುತಾತ್ ಮನುನ್ ಮಿಯಾ ಮನ್ತಾ. ತುಮಿ ಮ್ಹಾರ್‍ವಾಂಚ್ಯಾ ವಾಂಗ್ಡಾ ಎಕ್ ಹೊವ್ನ್ ರ್‍ಹಾತಲೆ ಬಗುಕ್ ಮಾಕಾ ನಕ್ಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 10:20
10 ತಿಳಿವುಗಳ ಹೋಲಿಕೆ  

ಈ ಉಪದ್ರವಗಳಿಂದ ಸಾಯದೆ ಉಳಿದ ಮನುಷ್ಯರು ಇನ್ನೂ ತಮ್ಮ ದುಷ್ಟಕೃತ್ಯಗಳನ್ನು ಬಿಟ್ಟು ಪಶ್ಚಾತ್ತಾಪ ಪಡಲಿಲ್ಲ. ಅವರು ದೆವ್ವಗಳನ್ನೂ, ನೋಡಲು, ಕೇಳಲು, ನಡೆಯಲು ಆಗದ ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳ ವಿಗ್ರಹಗಳನ್ನು ಆರಾಧಿಸುವುದನ್ನೂ ನಿಲ್ಲಿಸಲಿಲ್ಲ.


ಈ ಲೋಕದ ದೇವರು ನಂಬದವರ ಮನಸ್ಸನ್ನು ಕುರುಡುಮಾಡಿರುತ್ತಾನೆ. ಆದ್ದರಿಂದ ದೇವರ ಸ್ವರೂಪವಾಗಿರುವ ಕ್ರಿಸ್ತ ಯೇಸುವಿನ ಸುವಾರ್ತೆಯ ಮಹಿಮೆಯ ಬೆಳಕನ್ನು ಅವರು ಕಾಣಲಾರರು.


ಉನ್ನತ ಸ್ಥಳಗಳಿಗೋಸ್ಕರವೂ ದೆವ್ವಗಳಿಗೋಸ್ಕರವೂ, ಯಾರೊಬ್ಬಾಮನು ಮಾಡಿದ ಕರುಗಳ ಮೂರ್ತಿಪೂಜೆಗಾಗಿ ತಾನೇ ಯಾಜಕರನ್ನು ನೇಮಿಸಿದ್ದರಿಂದ,


ಜಾರತ್ವ ಮಾಡುವಂತೆ ಅವರು ಇದುವರೆಗೆ ಪೂಜಿಸುತ್ತಿದ್ದ ಆ ಮೇಕೆ ದೇವತೆಗಳಿಗೆ ಇನ್ನೆಂದಿಗೂ ತಮ್ಮ ಯಜ್ಞಗಳನ್ನು ಸಮರ್ಪಿಸಬಾರದು. ಇದು ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾದ ನಿಯಮ.’


“ನೀನು ಅಡ್ಡಬಿದ್ದು ನನ್ನನ್ನು ಆರಾಧಿಸಿದರೆ ಇವೆಲ್ಲವನ್ನು ನಿನಗೆ ಕೊಡುವೆನು,” ಎಂದನು.


ಮುಂಚೆ ನೀವು ದೇವರನ್ನು ಅರಿಯದವರಾಗಿದ್ದಾಗ, ಸ್ವಾಭಾವಿಕವಾಗಿ ದೇವರಲ್ಲದವುಗಳಿಗೆ ನೀವು ಗುಲಾಮರಾಗಿದ್ದೀರಿ.


ಆದರೂ ನಿನಗೆ ವಿರೋಧವಾಗಿ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂ ವ್ಯಭಿಚಾರ ಮಾಡುವುದರಲ್ಲಿಯೂ ಇಸ್ರಾಯೇಲರು ಮುಗ್ಗರಿಸಿ ಬೀಳುವಂತೆ ಬಿಳಾಮನು ಬಾಲಾಕನಿಗೆ ಕಲಿಸಿದ ಬೋಧನೆಯನ್ನು ಹಿಡಿದುಕೊಂಡಿರುವವರು ನಿನ್ನಲ್ಲಿದ್ದಾರೆ.


ಆದರೆ ನಿನ್ನ ಮೇಲೆ ಒಂದು ತಪ್ಪು ಹೊರಿಸಬೇಕಾಗುತ್ತದೆ. ಅದೇನೆಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ವ್ಯಭಿಚಾರ ಮಾಡಬಹುದೆಂದೂ ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ನಡೆಸುತ್ತಿದ್ದರೂ ನೀನು ಅವಳನ್ನು ತಡೆಯದೆ ಬಿಟ್ಟಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು