Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 10:23 - ಕನ್ನಡ ಸಮಕಾಲಿಕ ಅನುವಾದ

23 ಎಲ್ಲಾ ಕಾರ್ಯಗಳನ್ನು ಮಾಡಲು ಸ್ವಾತಂತ್ರ್ಯವಿದೆ. ಆದರೆ ಎಲ್ಲಾ ಕಾರ್ಯಗಳೂ ಪ್ರಯೋಜನಕರವಾಗಿರುವುದಿಲ್ಲ. ಎಲ್ಲಾ ಕಾರ್ಯಗಳನ್ನು ಮಾಡಲು ಸ್ವಾತಂತ್ರ್ಯವಿದೆ ಆದರೆ, ಎಲ್ಲಾ ಕಾರ್ಯಗಳೂ ಭಕ್ತಿವೃದ್ಧಿಯನ್ನುಂಟುಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಅಧಿಕಾರವುಂಟು.” ಆದರೆ ಎಲ್ಲವೂ ಪ್ರಯೋಜನಕರವಾಗಿರುವುದಿಲ್ಲ. “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಅಧಿಕಾರವುಂಟು” ಆದರೆ ಎಲ್ಲವೂ ಜನರನ್ನು ಭಕ್ತಿಯಲ್ಲಿ ಬೆಳೆಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 “ಏನನ್ನು ಮಾಡಲೂ ಸ್ವಾತಂತ್ರ್ಯವಿದೆ,” ಎಂದು ಹೇಳುವುದುಂಟು. ಆದರೆ ಎಲ್ಲವೂ ಪ್ರಯೋಜನಕರವಲ್ಲ. ಏನನ್ನು ಮಾಡಲೂ ಸ್ವಾತಂತ್ರ್ಯವಿದೆ. ಆದರೆ ಎಲ್ಲವೂ ಅಭಿವೃದ್ಧಿಕರವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಎಲ್ಲಾ ಕಾರ್ಯಗಳನ್ನು ಮಾಡುವದಕ್ಕೆ ಸ್ವಾತಂತ್ರ್ಯವುಂಟು, ಆದರೆ ಎಲ್ಲವೂ ವಿಹಿತವಾಗಿರುವದಿಲ್ಲ. ಎಲ್ಲಾ ಕಾರ್ಯಗಳನ್ನು ಮಾಡುವದಕ್ಕೆ ಸ್ವಾತಂತ್ರ್ಯವುಂಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಸ್ವಾತಂತ್ರ್ಯವಿದೆ.” ಆದರೆ ನಾವು ಮಾಡುವ ಕಾರ್ಯಗಳೆಲ್ಲಾ ಒಳ್ಳೆಯವೆಂದು ಹೇಳುವುದು ಸರಿಯಲ್ಲ. “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಸ್ವಾತಂತ್ರ್ಯವಿದೆ.” ಆದರೆ ಕೆಲವು ಕಾರ್ಯಗಳು ಬೇರೆಯವರ ಅಭಿವೃದ್ಧಿಗೆ ಸಹಾಯಕವಾಗಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಕಾಯ್‍ ಬಿ ಕರುಕ್ ಅಮ್ಕಾ ಸ್ವತಂತ್ರ್ ಹಾಯ್ ಮನುನ್ ತುಮಿ ಮನ್ಸಿಲಾ, ಖರೆ ಸಗ್ಳೆಬಿ ಅಮ್ಚ್ಯಾ ಫಾಯ್ದ್ಯಾಕ್ ಪಡಿನಾ. ಕಾಯ್ ಬಿ ಕರುಕ್ ಅಮ್ಕಾ ಸ್ವತಂತ್ರ್ ಹಾಯ್ ಹೊಯ್, ಖರೆ ಸಗ್ಳೆಬಿ ಅಮ್ಚ್ಯಾ ಸುದಾರ್‍ನಿಕ್ ಉಪ್ಕಾರಾಕ್ ಪಡಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 10:23
14 ತಿಳಿವುಗಳ ಹೋಲಿಕೆ  

“ನನಗೆ ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೂ ಹಕ್ಕಿದೆ” ಎಂದು ನೀವು ಹೇಳುತ್ತೀರಿ. ಆದರೆ ಎಲ್ಲವೂ ನನಗೆ ಪ್ರಯೋಜನಕರವಾಗಿರುವುದಿಲ್ಲ. ನನಗೆ ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಹಕ್ಕಿದೆ; ಆದರೆ ನಾನು ಯಾವುದಕ್ಕೂ ಗುಲಾಮನಾಗಿರುವುದಿಲ್ಲ.


ಆದರೆ ಈ ನಿಮ್ಮ ಸ್ವಾತಂತ್ರ್ಯವು ಬಲಹೀನರಿಗೆ ವಿಘ್ನವಾಗದಂತೆ ಜಾಗರೂಕರಾಗಿರಿ.


ನಿಮ್ಮ ಬಾಯೊಳಗಿಂದ ಯಾವ ಕೆಟ್ಟಮಾತೂ ಹೊರಡದಿರಲಿ. ಕೇಳುವವರಿಗೆ ಆತ್ಮಿಕ ಹಿತವನ್ನುಂಟು ಮಾಡಿ, ಇತರರಿಗೆ ಅವಶ್ಯವಿರುವ ಮಾತುಗಳನ್ನು ಮಾತ್ರ ಆಡಿರಿ.


ಆದ್ದರಿಂದ ನೀವು ಈಗ ಮಾಡುತ್ತಿರುವಂತೆಯೇ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ. ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಗೊಳಿಸಿರಿ.


ನೀವು ಆಹಾರದಿಂದ ನಿಮ್ಮ ಸಹೋದರರನ್ನು ದುಃಖ ಪಡಿಸುವುದಾದರೆ ನೀವು ಪ್ರೀತಿಯಿಂದ ನಡೆದುಕೊಳ್ಳುವುದಿಲ್ಲ. ನೀವು ತಿನ್ನುವುದರ ಮೂಲಕ ಕ್ರಿಸ್ತನು ಯಾವನಿಗೋಸ್ಕರವಾಗಿ ಸತ್ತರೋ ಅಂಥವರನ್ನು ನಾಶಮಾಡಬೇಡಿರಿ.


ನೀನು ಚೆನ್ನಾಗಿ ಕೃತಜ್ಞತಾಸ್ತುತಿ ಮಾಡುತ್ತೀ ನಿಜವೇ. ಆದರೆ, ಮತ್ತೊಬ್ಬನಿಗೆ ಭಕ್ತಿವೃದ್ಧಿಯಾಗಲಿಲ್ಲ.


ಹಾಗಾದರೇನು ಪ್ರಿಯರೇ? ನೀವು ಸಭೆಯಾಗಿ ಕೂಡಿಬರುವಾಗ ಪ್ರತಿಯೊಬ್ಬನಿಗೆ ಕೀರ್ತನೆಯಾಗಲಿ, ಸಂದೇಶವಾಗಲಿ, ಪ್ರಕಟನೆಯಾಗಲಿ, ಅನ್ಯಭಾಷೆಯನ್ನಾಡುವುದಾಗಲಿ, ಅನ್ಯಭಾಷೆಗಳ ಅರ್ಥವನ್ನು ಹೇಳುವ ವರವಾಗಲಿ ಇರುತ್ತದಷ್ಟೆ. ಇವೆಲ್ಲವೂ ಸಭೆಗೆ ಭಕ್ತಿವೃದ್ಧಿಗಾಗಿಯೇ ಇರಲಿ.


ಕಟ್ಟುಕಥೆಗಳಿಗೂ ಕೊನೆಯಿಲ್ಲದ ವಂಶಾವಳಿಗಳಿಗೂ ಲಕ್ಷ್ಯ ಕೊಡಬಾರದೆಂತಲೂ ಕೆಲವರಿಗೆ ಆಜ್ಞಾಪಿಸಬೇಕೆಂದು ನಾನು ನಿನಗೆ ಖಂಡಿತವಾಗಿ ಹೇಳಿದಂತೆ ಈಗಲೂ ಹೇಳುತ್ತೇನೆ. ಅಂಥ ಕಥೆಗಳೂ ವಂಶಾವಳಿಗಳೂ ವಿವಾದಕ್ಕೆ ಆಸ್ಪದವಾಗಿವೆಯೇ ಹೊರತು ನಂಬಿಕೆಯಿಂದುಂಟಾಗುವ ದೇವರ ಕಾರ್ಯಭಾರವನ್ನು ವೃದ್ಧಿ ಮಾಡುವುದೇ ಇಲ್ಲ.


ಅದರಂತೆಯೇ, ನೀವು ಸಹ ಆತ್ಮಿಕ ವರಗಳನ್ನು ಬಯಸುವುದರಿಂದ, ಸಭೆಗೆ ಭಕ್ತಿವೃದ್ಧಿ ಉಂಟುಮಾಡುವ ವರಗಳನ್ನೇ ಸಮೃದ್ಧವಾಗಿ ಪ್ರಯತ್ನಿಸಿರಿ.


ಈಗ ವಿಗ್ರಹಕ್ಕೆ ನೈವೇದ್ಯ ಮಾಡಿದ ಆಹಾರ ಪದಾರ್ಥಗಳ ವಿಷಯ: “ನಮ್ಮೆಲ್ಲರಿಗೂ ತಿಳುವಳಿಕೆಯಿದೆ,” ಎಂದು ಬಲ್ಲೆವು. ತಿಳುವಳಿಕೆಯು ಅಹಂಕಾರಿಗಳನ್ನಾಗಿ ಮಾಡುತ್ತದೆ. ಆದರೆ ಪ್ರೀತಿಯು ಭಕ್ತಿವೃದ್ಧಿಯನ್ನುಂಟುಮಾಡುತ್ತದೆ.


ನಾವು ಇಷ್ಟು ಹೊತ್ತು ನಿಮ್ಮ ಮುಂದೆ ಪ್ರತಿವಾದ ಮಾಡುತ್ತಿದ್ದೇವೆಂದು ನೆನಸುತ್ತೀರೋ? ಹಾಗೆ ಅಲ್ಲ; ಪ್ರಿಯರೇ, ನಾವು ಮಾಡುವುದೆಲ್ಲವೂ ನಿಮ್ಮ ಭಕ್ತಿವೃದ್ಧಿಗಾಗಿ ದೇವರ ದೃಷ್ಟಿಯಲ್ಲಿ ಕ್ರಿಸ್ತ ಯೇಸುವಿನಲ್ಲಿ ಇರುವವರಂತೆ ಮಾತನಾಡುವವರಾಗಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು