Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 10:25 - ಕನ್ನಡ ಸಮಕಾಲಿಕ ಅನುವಾದ

25 ಮಾಂಸದ ಅಂಗಡಿಯಲ್ಲಿ ಮಾರುವುದು ಏನಿದ್ದರೂ ಮನಸ್ಸಾಕ್ಷಿಯನ್ನು ಪ್ರಶ್ನಿಸದೇ ತಿನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಮಾಂಸದ ಅಂಗಡಿಯಲ್ಲಿ ಮಾರುವಂಥದ್ದು ಏನಿದ್ದರೂ ಅದನ್ನು ಮನಸ್ಸಾಕ್ಷಿಯಲ್ಲಿ ಸಂಶಯ ಹುಟ್ಟಿಸುವಂತೆ ವಿಚಾರ ಮಾಡದೇ ತಿನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಮನಸ್ಸಾಕ್ಷಿಯನ್ನು ಕೆದಕುವ ಪ್ರಶ್ನೆಗಳಿಗೆ ಎಡೆಕೊಡದೆ ಮಾಂಸದ ಮಾರುಕಟ್ಟೆಯಲ್ಲಿ ಮಾರುವುದೆಲ್ಲವನ್ನೂ ನೀವು ತಂದು ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಪ್ರತಿಯೊಬ್ಬನು ತನ್ನ ಹಿತವನ್ನು ಚಿಂತಿಸದೆ ಪರಹಿತವನ್ನು ಚಿಂತಿಸಲಿ. ಕಟುಕರ ಅಂಗಡಿಯಲ್ಲಿ ಮಾರುವಂಥದು ಏನಿದ್ದರೂ ಅದನ್ನು ಮನಸ್ಸಿನಲ್ಲಿ ಸಂಶಯ ಹುಟ್ಟಿಸುವ ವಿಚಾರಣೆಮಾಡದೆ ತಿನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಮಾಂಸದ ಮಾರುಕಟ್ಟೆಯಲ್ಲಿ ಮಾರುವ ಯಾವ ಮಾಂಸವನ್ನಾದರೂ ತಿನ್ನಿರಿ. ನೀವು ತಿನ್ನಬಾರದೆಂದು ಯೋಚಿಸುವ ಮಾಂಸದಂತೆ ಅದು ತೋರಿದರೂ ಆ ಮಾಂಸದ ಬಗ್ಗೆ ಯಾವ ಪ್ರಶ್ನೆಗಳನ್ನೂ ಕೇಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಮಾಸಾಚ್ಯಾ ದುಕಾನಾತ್ನಿ ಇಕಾತ್ ಗಾವ್ತಾ ತೆ ಕಾಯ್ ಬಿ ಹೊಂವ್ದಿತ್ ತುಮಿ ಖಾವಾ, ತ್ಯಾ ವಿಶಯಾತ್ ತುಮ್ಚ್ಯಾ ಭುತ್ತುರ್ಲ್ಯಾ ಮನಾತ್ನಿ ಸಂಶಯ್ ಕರುಕ್ ಜಾವ್‍ನಕಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 10:25
7 ತಿಳಿವುಗಳ ಹೋಲಿಕೆ  

ಆದರೆ ಈ ತಿಳುವಳಿಕೆಯು ಎಲ್ಲರಲ್ಲಿಯೂ ಇಲ್ಲ. ಕೆಲವರು ಇದುವರೆಗೂ ವಿಗ್ರಹಕ್ಕೆ ಅರ್ಪಿತವಾದದ್ದನ್ನು ತಿನ್ನುವ ರೂಢಿಯಲ್ಲಿದ್ದು, ಅವರು ವಿಗ್ರಹಕ್ಕೆ ನೈವೇದ್ಯ ಮಾಡಿ ತಿನ್ನುವುದಾಗಿ ಭಾವಿಸಿಕೊಳ್ಳುತ್ತಾರೆ. ಹೀಗೆ ಅವರ ಮನಸ್ಸಾಕ್ಷಿ ಬಲಹೀನವಾಗಿರುವುದರಿಂದ, ಅದು ಅಶುದ್ಧವಾಗಿರುತ್ತದೆ.


ದೇವರು ಸೃಷ್ಟಿಸಿದ್ದೆಲ್ಲವೂ ಒಳ್ಳೆಯದಾಗಿದೆ. ಕೃತಜ್ಞತೆ ಮಾಡಿ ಸ್ವೀಕರಿಸುವ ಯಾವುದನ್ನೂ ತಿರಸ್ಕರಿಸಬೇಕಾಗಿಲ್ಲ.


ಶುದ್ಧರಿಗೆ ಎಲ್ಲವೂ ಶುದ್ಧವೇ. ಆದರೆ ಮಲಿನವಾದವರಿಗೂ ಅವಿಶ್ವಾಸಿಗಳಿಗೂ ಯಾವುದೂ ಶುದ್ಧವಲ್ಲ. ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಮಲಿನವಾಗಿವೆ.


ಯಾವುದೇ ಪದಾರ್ಥವು ತನ್ನಷ್ಟಕ್ಕೆ ಅಶುದ್ಧವಲ್ಲ ಎಂದು ನಾನು ಕರ್ತ ಆಗಿರುವ ಯೇಸುವಿನಲ್ಲಿ ನಿಶ್ಚಯವಾಗಿ ಬಲ್ಲೆನು. ಆದರೆ ಯಾರಾದರೂ ಅಶುದ್ಧವೆಂದು ಪರಿಗಣಿಸಿದರೆ ಅದು ಅವರಿಗೆ ಅಶುದ್ಧವಾಗಿರುವುದು.


ಆದ್ದರಿಂದ, ಭಯದ ನಿಮಿತ್ತದಿಂದ ಮಾತ್ರವಲ್ಲ ಮನಸ್ಸಾಕ್ಷಿಯ ನಿಮಿತ್ತವೂ ಅಧಿಕಾರಿಗಳಿಗೆ ಅಧೀನನಾಗಿರುವುದು ಅಗತ್ಯವಾಗಿರುತ್ತದೆ.


ವಾಣಿಯು ಎರಡನೆಯ ಬಾರಿಗೆ, “ದೇವರು ಶುದ್ಧೀಕರಿಸಿದ ಯಾವುದನ್ನೂ ಅಶುದ್ಧವೆನ್ನಬೇಡ,” ಎಂದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು