Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 10:4 - ಕನ್ನಡ ಸಮಕಾಲಿಕ ಅನುವಾದ

4 ಅವರೆಲ್ಲರೂ ಒಂದೇ ಆತ್ಮಿಕವಾದ ಪಾನವನ್ನು ಕುಡಿದರು. ಅವರು ತಮ್ಮೊಂದಿಗೆ ಬಂದ ದೈವಿಕವಾದ ಬಂಡೆಯೊಳಗಿಂದ ಬಂದ ನೀರನ್ನು ಕುಡಿದರು. ಕ್ರಿಸ್ತ ಯೇಸುವೇ ಆ ಬಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರೆಲ್ಲರೂ ದೈವಿಕವಾದ ಒಂದೇ ನೀರನ್ನು ಕುಡಿದರು. ಹೇಗೆಂದರೆ ಅವರನ್ನು ಹಿಂಬಾಲಿಸುತ್ತಿದ್ದ ದೈವಿಕವಾದ ಬಂಡೆಯೊಳಗಿಂದ ಬಂದ ನೀರನ್ನು ಕುಡಿಯುತ್ತಿದ್ದರು. ಆ ಬಂಡೆ ಕ್ರಿಸ್ತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅದೂ ತಮ್ಮೊಡನೆ ಬರುತ್ತಿದ್ದ ದೈವಿಕ ಬಂಡೆಯಿಂದ ಕುಡಿದರು. ಕ್ರಿಸ್ತಯೇಸುವೇ ಆ ಬಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವರೆಲ್ಲರೂ ದೈವಿಕವಾದ ಒಂದೇ ನೀರನ್ನು ಕುಡಿದರು; ಹೇಗಂದರೆ ಅವರ ಹಿಂದೆ ಹೋಗುತ್ತಿದ್ದ ದೈವಿಕವಾದ ಬಂಡೆಯೊಳಗಿಂದ ಬಂದ ನೀರನ್ನು ಕುಡಿಯುತ್ತಿದ್ದರು; ಆ ಬಂಡೆ ಕ್ರಿಸ್ತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ತಮ್ಮೊಂದಿಗಿದ್ದ ಆತ್ಮಿಕ ಬಂಡೆಯ ನೀರನ್ನು ಕುಡಿದರು. ಆ ಬಂಡೆಯೇ ಕ್ರಿಸ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಅನಿ ಸಗ್ಳ್ಯಾನಿ ಎಕುಚ್ ಆತ್ಮಿಕ್ ಫಿವನ್ ಫಿಲ್ಯಾನಿ. ಅಪ್ನಾಚ್ಯಾ ವಾಂಗ್ಡಾ ವಾಟೆಕ್ ಜಾತಲ್ಯಾ ಮೊಟ್ಯಾ ಗುಂಡ್ಯಾತ್ಲೆ ಪಾನಿ ತೆನಿ ಫಿಲ್ಯಾನಿ. ತೊ ಗುಂಡೊ ಮಟ್ಲ್ಯಾರ್ ಕ್ರಿಸ್ತುಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 10:4
23 ತಿಳಿವುಗಳ ಹೋಲಿಕೆ  

ಅಲ್ಲಿ, ನಾನು ಹೋರೇಬಿನಲ್ಲಿ ಬಂಡೆಯ ಮೇಲೆ ನಿನ್ನ ಮುಂದೆ ನಿಂತುಕೊಳ್ಳುವೆನು, ನೀನು ಬಂಡೆಯನ್ನು ಹೊಡೆಯಬೇಕು. ಆಗ ಜನರು ಕುಡಿಯುವಂತೆ ನೀರು ಹೊರಗೆ ಬರುವುದು,” ಎಂದರು. ಮೋಶೆಯು ಇಸ್ರಾಯೇಲರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.


ಹಬ್ಬದ ಆ ಮಹಾದಿವಸವಾದ ಕಡೆಯ ದಿನದಲ್ಲಿ ಯೇಸು ನಿಂತುಕೊಂಡು, “ಯಾರಿಗಾದರೂ ಬಾಯಾರಿಕೆಯಾಗಿದ್ದರೆ ಅವರು ನನ್ನ ಬಳಿಗೆ ಬಂದು ಕುಡಿಯಲಿ.


ದೇವರು ಅವರನ್ನು ಮರುಭೂಮಿಯಲ್ಲಿ ನಡಿಸಿದಾಗ, ಅವರಿಗೆ ದಾಹವಾಗಲಿಲ್ಲ. ದೇವರು ಅವರಿಗಾಗಿ ನೀರನ್ನು ಬಂಡೆಯೊಳಗಿಂದ ಹರಿಸಿದರು. ದೇವರು ಬಂಡೆಯನ್ನು ಸೀಳಲು, ನೀರು ರಭಸದಿಂದ ಹೊರಗೆ ಬಂತು.


ಆದರೆ ನಾನು ಕೊಡುವ ನೀರನ್ನು ಕುಡಿಯುವವರಿಗೆ ಎಂದೆಂದಿಗೂ ದಾಹವಾಗದು. ನಾನು ಅವರಿಗೆ ಕೊಡುವ ನೀರು ಅವರಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬುಗ್ಗೆಯಾಗಿರುವುದು,” ಎಂದರು.


ದೇವರು ಬಂಡೆಯನ್ನು ತೆರೆಯಲು ನೀರು ಹೊರಟಿತು; ಅದು ಮರುಭೂಮಿಯಲ್ಲಿ ನದಿಯಾಗಿ ಹರಿಯಿತು.


ಇಗೋ, ದೇವರು ಬಂಡೆಯನ್ನು ಹೊಡೆಯಲಾಗಿ, ನೀರು ಚಿಮ್ಮಿ ಹೊರಟಿತು. ಹಳ್ಳಗಳು ದಡಮೀರಿ ಹರಿದವು. ಅರಣ್ಯದಲ್ಲಿ, ರೊಟ್ಟಿಯನ್ನು ಸಹ ಕೊಡಬಲ್ಲನೋ? ತಮ್ಮ ಜನರಿಗೆ ಮಾಂಸವನ್ನು ಸಿದ್ಧಮಾಡುವನೋ?” ಎಂದರು.


ಮರುಭೂಮಿಯಲ್ಲಿ ದೇವರು ಬಂಡೆಗಳನ್ನು ಸೀಳಿ, ಜನರಿಗೆ ಮಹಾ ಜಲಾಗಾಧಗಳ ಹಾಗೆ ನೀರನ್ನು ಕುಡಿಯಲು ಕೊಟ್ಟರು.


ಮೋಶೆಯು ತನ್ನ ಕೈಯನ್ನು ಎತ್ತಿ, ತನ್ನ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು. ಆಗ ಬಹಳ ನೀರು ಹೊರಗೆ ಬಂತು, ಜನರೂ ಅವರ ಪಶುಗಳೂ ಕುಡಿದರು.


ಯೇಸು ಆಕೆಗೆ, “ದೇವರ ವರವನ್ನೂ, ‘ಕುಡಿಯುವುದಕ್ಕೆ ನೀರು ಕೊಡು,’ ಎಂದು ಕೇಳುವ ನಾನು ಯಾರೆಂಬುದನ್ನೂ ನೀನು ತಿಳಿದಿದ್ದರೆ ನೀನೇ ನನ್ನಿಂದ ನೀರನ್ನು ಕೇಳುತ್ತಿದ್ದೆ. ನಾನು ನಿನಗೆ ಜೀವಜಲವನ್ನು ಕೊಡುತ್ತಿದ್ದೆನು,” ಎಂದು ಹೇಳಿದರು.


ಕಾಡುಮೃಗಗಳು, ನರಿಗಳು, ಗೂಬೆಗಳು ನನ್ನನ್ನು ಸನ್ಮಾನಿಸುತ್ತವೆ. ಅಡವಿಯಲ್ಲಿ ನೀರನ್ನು, ಮರುಭೂಮಿಯಲ್ಲಿ ನದಿಗಳನ್ನು ನಾನು ಆಯ್ದುಕೊಂಡ ನನ್ನ ಪ್ರಜೆಗಳಿಗೆ ಕುಡಿಯುವುದಕ್ಕೆ ಕೊಟ್ಟೆನು.


ಇವು ಬರಬೇಕಾಗಿದ್ದವುಗಳ ಛಾಯೆಯಾಗಿವೆ, ಆದರೆ ನಿಜಸ್ವರೂಪವು ಕ್ರಿಸ್ತ ಯೇಸುವೇ.


ದೇವರಾತ್ಮ ಹಾಗು ವಧುವೂ “ಬಾ” ಎನ್ನುತ್ತಾರೆ, ಕೇಳುವವರು, “ಬಾ” ಎನ್ನಲಿ. ಬಾಯಾರಿದವರು ಬರಲಿ, ಇಷ್ಟವುಳ್ಳವರು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.


ಮೋಶೆಯ ನಿಯಮವು ಬರಬೇಕಾಗಿದ್ದ ವಸ್ತುಗಳ ಛಾಯೆಯಾಗಿದೆ ಹೊರತು ಅವುಗಳ ನಿಜಸ್ವರೂಪವಲ್ಲ. ಈ ಕಾರಣದಿಂದ ಅದು ಪ್ರತಿವರ್ಷ ಯಾವಾಗಲೂ ಯಜ್ಞಗಳನ್ನು ಅರ್ಪಿಸುವುದಕ್ಕೆ ಬರುವವರನ್ನು ಮೋಶೆಯ ನಿಯಮವು ಎಂದಿಗೂ ಪರಿಪೂರ್ಣತೆಗೆ ತರಲಾರದು.


ಇದಲ್ಲದೆ ನೀವು ಯಾವದರ ಮೂಲಕ ಪಾಪವನ್ನು ಮಾಡಿದ್ದೀರೋ ಆ ಚಿನ್ನದ ಕರುವನ್ನು ನಾನು ತೆಗೆದುಕೊಂಡು, ಬೆಂಕಿಯಿಂದ ಸುಟ್ಟು, ಒಡೆದು, ಅರೆದು, ಧೂಳುಮಾಡಿ, ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ಬಿಸಾಡಿದೆನು.


ಹಾಗರ್ ಅರೇಬಿಯಾದಲ್ಲಿರುವ ಸೀನಾಯಿ ಪರ್ವತ. ಅದು ಈಗಿನ ಯೆರೂಸಲೇಮಿಗೆ ಸರಿಹೊಂದುತ್ತಾಳೆ. ಏಕೆಂದರೆ ಆಕೆಯು ಈಗಲೂ ತನ್ನ ಮಕ್ಕಳ ಸಹಿತ ದಾಸ್ಯದಲ್ಲಿದ್ದಾಳೆ.


ಜನರನ್ನು, ಭೂಮಿಯ ಮೃಗಗಳನ್ನು, ಆಕಾಶದ ಪಕ್ಷಿಗಳನ್ನು, ಜೀವಿಸುವಂಥಾದ್ದೆಲ್ಲವನ್ನೂ ನಿನ್ನ ಕೈಯಲ್ಲಿ ಕೊಟ್ಟು, ಅವೆಲ್ಲವುಗಳಿಗೆ ನಿನ್ನನ್ನು ಆಳುವವನಾಗಿ ಮಾಡಿದ್ದಾರೆ. ಆ ಬಂಗಾರದ ತಲೆಯು ನೀನೇ.


ಆ ಏಳು ಒಳ್ಳೆಯ ಹಸುಗಳು ಏಳು ವರ್ಷಗಳು; ಏಳು ಒಳ್ಳೆಯ ತೆನೆಗಳೂ, ಏಳು ವರ್ಷಗಳೇ. ಇವೆರಡು ಕನಸುಗಳ ಅರ್ಥ ಒಂದೇ.


ಅದಕ್ಕೆ ಯೋಸೇಫನು, “ಅದರ ಅರ್ಥ ಏನೆಂದರೆ, ಆ ಮೂರು ಕೊಂಬೆಗಳು ಮೂರು ದಿನಗಳಾಗಿವೆ.


‘ಈ ದೊಡ್ಡ ಮೃಗಗಳು ಭೂಮಿಯಿಂದ ಹುಟ್ಟುವ ನಾಲ್ಕು ಅರಸರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು