Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 10:6 - ಕನ್ನಡ ಸಮಕಾಲಿಕ ಅನುವಾದ

6 ಅವರು ಕೆಟ್ಟ ವಿಷಯಗಳನ್ನು ಆಶಿಸಿದಂತೆ ನಾವೂ ಆಶಿಸುವವರಾಗಬಾರದೆಂಬುದಕ್ಕಾಗಿ ಈ ಸಂಗತಿಗಳು ಈಗ ನಮಗೆ ನಿದರ್ಶನಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರು ಕೆಟ್ಟ ವಿಷಯಗಳನ್ನು ಮೋಹಿಸದಂತೆ ನಾವು ಮೋಹಿಸುವವರಾಗಬಾರದೆಂಬುದಕ್ಕಾಗಿ ಈ ಸಂಗತಿಗಳು ನಮಗೆ ನಿದರ್ಶನಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಈ ಘಟನೆಗಳು ನಮಗೆ ಎಚ್ಚರಿಕೆ ನೀಡುವ ನಿದರ್ಶನಗಳಾಗಿವೆ. ಅವರಂತೆ ನಾವು ಕೆಟ್ಟದಾದವುಗಳನ್ನು ಆಶಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವರು ಕೆಟ್ಟ ವಿಷಯಗಳನ್ನು ಆಶಿಸಿದಂತೆ ನಾವು ಆಶಿಸುವವರಾಗಬಾರದೆಂಬದಕ್ಕಾಗಿ ಈ ಸಂಗತಿಗಳು ನಮಗೆ ನಿದರ್ಶನಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವರು ಮಾಡಿದಂತೆ ನಾವು ಕೆಟ್ಟವುಗಳನ್ನು ಆಶಿಸಬಾರದೆಂಬುದಕ್ಕೆ ಈ ಘಟನೆಗಳು ನಮಗೆ ಎಚ್ಚರಿಕೆ ನೀಡುವ ನಿದರ್ಶನಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತೆನಿ ಆಶಾ ಕರ್‍ಲ್ಯಾನಿ, ತಸೆ ಅಮಿಬಿ ಝುಟ್ಯಾ ಸಾಮಾನಾಂಚಿ ಆಶಾ ಕರುಚೆ ನ್ಹಯ್ ಮನುನ್ ಅಮ್ಕಾ ದಾಕ್ವುನ್ ದಿವ್ಕ್ ಸಾಟ್ನಿ ಹೆ ಸಗ್ಳೆ ಘಡ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 10:6
12 ತಿಳಿವುಗಳ ಹೋಲಿಕೆ  

ಸೊದೋಮ ಗೊಮೋರದವರೂ ಹಾಗೆಯೇ ಅವುಗಳ ಸುತ್ತಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಅನೈತಿಕತೆಗೆ ಒಪ್ಪಿಸಿಕೊಟ್ಟರು. ಅವರು ಸ್ವಭಾವಕ್ಕೆ ವಿರುದ್ಧ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲಾಗಿದ್ದಾರೆ.


ಆ ಮನುಷ್ಯರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನಗಳಾಗಿವೆ, ಯುಗಾಂತ್ಯಕ್ಕೆ ಬಂದಿರುವ ನಮಗೆ ಎಚ್ಚರಿಕೆಯ ಮಾತುಗಳಾಗಿವೆ.


ಆದ್ದರಿಂದ ಈ ವಿಶ್ರಾಂತಿಯನ್ನು ಪಡೆಯಲು ನಾವು ಪ್ರಯತ್ನಿಸೋಣ. ನಮ್ಮಲ್ಲಿ ಯಾರೂ ಆ ಜನರ ಅವಿಧೇಯತೆಯನ್ನು ಅನುಸರಿಸಿ, ನಾಶರಾಗದೇ ಇರೋಣ.


ಅವರೊಳಗಿದ್ದ ಮಿಶ್ರ ಗುಂಪಿನ ಜನರು ಮಾಂಸಕ್ಕಾಗಿ ದುರಾಶೆಪಟ್ಟರು. ಇಸ್ರಾಯೇಲರು ಸಹ ತಿರುಗಿ ಅಳುತ್ತಾ, “ನಮಗೆ ಮಾಂಸವನ್ನು ತಿನ್ನುವುದಕ್ಕೆ ಕೊಡುವವರು ಯಾರು?


ದೇವರು ಸೊದೋಮ ಗೊಮೋರ ಪಟ್ಟಣಗಳನ್ನು ಬೂದಿಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರ ಗತಿಗೆ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದರು.


ಈ ನೀರು ದೀಕ್ಷಾಸ್ನಾನವನ್ನು ಸೂಚಿಸುವಂತದ್ದಾಗಿದೆ. ಈ ದೀಕ್ಷಾಸ್ನಾನ ಕ್ರಿಸ್ತ ಯೇಸುವಿನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ. ಅದು ಮೈಕೊಳೆಯನ್ನು ಹೋಗಲಾಡಿಸುವಂಥದಲ್ಲ. ಆದರೆ ಒಳ್ಳೆಯ ಮನಸ್ಸಾಕ್ಷಿಯು ಬೇಕೆಂದು ದೇವರನ್ನು ಬೇಡಿಕೊಳ್ಳುವಂಥದ್ದಾಗಿದೆ.


ಆದರೂ ಮರಣವು ಆದಾಮನಿಂದ ಮೋಶೆಯವರೆಗೂ ದೊರೆತನ ಮಾಡುತ್ತಿತ್ತು. ಆದಾಮನು ಮಾಡಿದ ಅಪರಾಧಕ್ಕೆ ಸಮಾನವಾಗಿ ಪಾಪಮಾಡಿದವರ ಮೇಲೆಯೂ ಅದು ದೊರೆತನ ಮಾಡುತ್ತಿತ್ತು. ಆದಾಮನು ಮುಂದೆ ಬರಲಿಕ್ಕಿದ್ದ ಒಬ್ಬಾತನಿಗೆ ಸಂಕೇತವಾಗಿದ್ದಾನೆ.


ಏಕೆಂದರೆ ಕ್ರಿಸ್ತ ಯೇಸು ನಿಜ ದೇವಾಲಯದ ಪ್ರತಿರೂಪದಂತಿರುವ, ಕೈಯಿಂದ ಕಟ್ಟಿದ ಪವಿತ್ರ ಸ್ಥಳವನ್ನು ಪ್ರವೇಶಿಸದೆ, ದೇವರ ಸನ್ನಿಧಿಯಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳುವಂತೆ ಪರಲೋಕದಲ್ಲಿಯೇ ಪ್ರವೇಶಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು