Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 10:7 - ಕನ್ನಡ ಸಮಕಾಲಿಕ ಅನುವಾದ

7 “ಅವರಲ್ಲಿ ಕೆಲವರು ವಿಗ್ರಹಾರಾಧಕರಾಗಿ ಉಣ್ಣುವುದಕ್ಕೂ, ಕುಡಿಯುವುದಕ್ಕೂ ಕುಳಿತುಕೊಂಡರು, ಕುಣಿದಾಡುವುದಕ್ಕೆ ಎದ್ದರು,” ಎಂದು ಬರೆದಿರುವಂತೆ ನೀವೂ ವಿಗ್ರಹಾರಾಧಕರಾಗಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರಲ್ಲಿ ಕೆಲವರು ವಿಗ್ರಹಾರಾಧಕರಾಗಿದ್ದರು, “ಜನರು ತಿನ್ನುವುದಕ್ಕೂ, ಕುಡಿಯುವುದಕ್ಕೂ ಕುಳಿತುಕೊಂಡರು. ಕಾಮಾಭಿಲಾಷೆಯಿಂದ ಕುಣಿದಾಡುವುದಕ್ಕೆ ಎದ್ದರು” ಎಂದು ಬರೆದಿದೆಯಲ್ಲಾ. ನೀವು ಅವರ ಹಾಗೆ ವಿಗ್ರಹಾರಾಧಕರಾಗಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅವರಲ್ಲಿ ಕೆಲವರು ವಿಗ್ರಹಾರಾಧಕರಾದಂತೆ ನಾವು ಆಗಬಾರದು. ಇವರನ್ನು ಕುರಿತೇ : “ತಿನ್ನಲೆಂದು ಕುಡಿಯಲೆಂದು ಕುಳಿತರು ಕುಣಿಯಲೆಂದು ಕಾಮವೆದ್ದು ನಿಂತರು ಈ ಜನರು” - ಎಂದು ಬರೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರಲ್ಲಿ ಕೆಲವರು ವಿಗ್ರಹಾರಾಧಕರಾಗಿದ್ದರು; ಜನರು ಉಣ್ಣುವದಕ್ಕೂ ಕುಡಿಯುವದಕ್ಕೂ ಕೂತುಕೊಂಡರು, ಕುಣಿದಾಡುವದಕ್ಕೆ ಎದ್ದರು ಎಂದು ಬರೆದದೆಯಲ್ಲಾ; ನೀವು ವಿಗ್ರಹಾರಾಧಕರಾಗಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅವರಲ್ಲಿ ಕೆಲವರು ಮಾಡಿದಂತೆ ನೀವು ವಿಗ್ರಹಗಳನ್ನು ಪೂಜಿಸಬೇಡಿ. “ಜನರು ತಿನ್ನಲು, ಕುಡಿಯಲು ಕುಳಿತುಕೊಂಡರು; ನೃತ್ಯ ಮಾಡಲು ಎದ್ದುನಿಂತರು” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತೆಂಚ್ಯಾತ್ಲ್ಯಾ ಉಲ್ಲ್ಯಾನಿ ಮುರ್ತಿಚಿ ಫುಜ್ಯಾ ಕರ್‍ಲ್ಯಾನಿ, ತಸೆ ತುಮಿ ಕರುಚೆ ನ್ಹಯ್. ಪವಿತ್ರ್ ಪುಸ್ತಕಾತ್ ಲಿವಲ್ಲೆ ಹಾಯ್, “ತೆನಿಚ್ ಖಾವ್ಕ್ ಅನಿ ಫಿವ್ಕ್ ಬಸ್ಲೆ ಅನಿ ಬುರ್ಶಿ ಆಂಗಾಚೆ ಸಮಂದ್ ವಿಶಯಾತ್ ನಾಚುಕ್ ಅನಿ ಖೆಳ್ ಕರುಕ್ ಲಾಗ್ಲ್ಯಾನಿ”

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 10:7
14 ತಿಳಿವುಗಳ ಹೋಲಿಕೆ  

ಅನ್ಯಾಯಗಾರರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ: ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಸಲಿಂಗಕಾಮಿಗಳು,


ಆದ್ದರಿಂದ ನನ್ನ ಪ್ರಿಯ ಸ್ನೇಹಿತರೇ, ವಿಗ್ರಹಾರಾಧನೆಯನ್ನು ಬಿಟ್ಟು ಓಡಿಹೋಗಿರಿ.


ಆಗ ಯೆಹೋವ ದೇವರು, “ಎದ್ದು ಇಲ್ಲಿಂದ ಬೇಗ ಇಳಿದು ಹೋಗು. ಏಕೆಂದರೆ ನೀನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ನಿನ್ನ ಜನರು ಕೆಟ್ಟು ಹೋದರು. ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಬಿಟ್ಟು ತಮಗೆ ಎರಕ ಹೊಯ್ದ ವಿಗ್ರಹವನ್ನು ಮಾಡಿಕೊಂಡಿದ್ದಾರೆ,” ಎಂದು ನನಗೆ ಹೇಳಿದರು.


ಆದರೆ ಸಹೋದರಿ ಅಥವಾ ಸಹೋದರನೆನಿಸಿಕೊಂಡವನು ಜಾರನಾದರೂ ಲೋಭಿಯಾದರೂ ವಿಗ್ರಹಾರಾಧಕನಾದರೂ ಪರನಿಂದಕನಾದರೂ ಕುಡುಕನಾದರೂ ಸುಲಿಗೆ ಮಾಡುವವನಾದರೂ ಆಗಿದ್ದರೆ, ಅಂಥವರ ಸಹವಾಸ ಮಾಡಬೇಡಿರಿ. ಅಂಥವರ ಸಂಗಡ ಊಟ ಮಾಡಲೂ ಬೇಡಿರಿ ಎಂದು ಈಗ ಬರೆಯುತ್ತಿದ್ದೇನೆ.


ಪ್ರಿಯ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ.


ಇದಾದ ಮೇಲೆ ಮೋಶೆ ಪಾಳೆಯದ ಸಮೀಪಕ್ಕೆ ಬಂದು ಆ ಕರುವನ್ನೂ, ಅವರ ಕುಣಿದಾಟವನ್ನೂ ನೋಡಿದಾಗ, ಮೋಶೆಯು ಕೋಪಗೊಂಡು ಕೈಯಲ್ಲಿದ್ದ ಹಲಗೆಗಳನ್ನು ಬೆಟ್ಟದ ಅಡಿಯಲ್ಲಿ ಬಿಸಾಡಿ ಅವುಗಳನ್ನು ಒಡೆದುಬಿಟ್ಟನು.


ಯೆಹೋಶುವನು ಜನರು ಕೂಗುತ್ತಿದ್ದ ಶಬ್ದವನ್ನು ಕೇಳಿ ಮೋಶೆಗೆ, “ಪಾಳೆಯದ ಕಡೆಯಿಂದ ಯುದ್ಧದ ಶಬ್ದವು ಕೇಳಿಸುತ್ತದೆ,” ಎಂದು ಹೇಳಿದನು.


ಅವನು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು, ಉಳಿಯಿಂದ ರೂಪಿಸಿ, ಎರಕ ಹೊಯ್ದು, ಕರುವಾಗಿ ಮಾಡಿದನು. ಆಗ ಅವರು, “ಇಸ್ರಾಯೇಲರೇ, ನಿಮ್ಮನ್ನು ಈಜಿಪ್ಟ್ ದೇಶದೊಳಗಿನಿಂದ ಬರಮಾಡಿದ ನಿಮ್ಮ ದೇವರುಗಳು ಇವೇ,” ಎಂದರು.


ಆದರೆ ಈ ತಿಳುವಳಿಕೆಯು ಎಲ್ಲರಲ್ಲಿಯೂ ಇಲ್ಲ. ಕೆಲವರು ಇದುವರೆಗೂ ವಿಗ್ರಹಕ್ಕೆ ಅರ್ಪಿತವಾದದ್ದನ್ನು ತಿನ್ನುವ ರೂಢಿಯಲ್ಲಿದ್ದು, ಅವರು ವಿಗ್ರಹಕ್ಕೆ ನೈವೇದ್ಯ ಮಾಡಿ ತಿನ್ನುವುದಾಗಿ ಭಾವಿಸಿಕೊಳ್ಳುತ್ತಾರೆ. ಹೀಗೆ ಅವರ ಮನಸ್ಸಾಕ್ಷಿ ಬಲಹೀನವಾಗಿರುವುದರಿಂದ, ಅದು ಅಶುದ್ಧವಾಗಿರುತ್ತದೆ.


ಅದರ ಬದಲಾಗಿ ನಾವು ಅವರಿಗೆ, ದೇವರಲ್ಲದವುಗಳಿಂದ ಮಲಿನವಾದ ಆಹಾರದಿಂದಲೂ ಅನೈತಿಕತೆಯಿಂದಲೂ ರಕ್ತವನ್ನೂ ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಯ ಮಾಂಸದಿಂದಲೂ ರಕ್ತದಿಂದಲೂ ದೂರವಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು