Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 11:17 - ಕನ್ನಡ ಸಮಕಾಲಿಕ ಅನುವಾದ

17 ನಿಮ್ಮನ್ನು ಹೊಗಳುವುದಕ್ಕಾಗಿ ಈ ಮಾರ್ಗದರ್ಶನಗಳನ್ನು ನಾನು ನಿಮಗೆ ತಿಳಿಸುತ್ತಾಯಿಲ್ಲ. ಏಕೆಂದರೆ, ನಿಮ್ಮ ಕೂಟಗಳಿಂದ ಮೇಲಾಗುವುದಕ್ಕಿಂತ ಹೆಚ್ಚು ಕೇಡಾಗುತ್ತಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಾನು ಇನ್ನು ನಿಮಗೆ ಅಪ್ಪಣೆಕೊಡುವಲ್ಲಿ ನಿಮ್ಮನ್ನು ಹೊಗಳುವುದಿಲ್ಲ. ಯಾಕೆಂದರೆ ನೀವು ಒಟ್ಟಾಗಿ ಸೇರಿಬರುತ್ತಿರುವುದು ಕೇಡಿಗಾಗಿಯೇ ಹೊರತು ಮೇಲಿಗಾಗಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಈಗ ನಾನು ಹೇಳಲಿರುವ ವಿಷಯದಲ್ಲಿ ನಿಮ್ಮನ್ನು ಮೆಚ್ಚಲಾರೆ. ನೀವು ಸಭೆ ಸೇರುವುದು ಒಳಿತಿಗಿಂತಲೂ ಹೆಚ್ಚಾಗಿ ಕೇಡನ್ನೆ ಉಂಟುಮಾಡುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಾನು ಹೀಗೆ ನಿಮಗೆ ಅಪ್ಪಣೆಕೊಡುವಲ್ಲಿ ನಿಮ್ಮನ್ನು ಹೊಗಳುವದಿಲ್ಲ; ಯಾಕಂದರೆ ನೀವು ಕೂಡಿಬರುವದರಿಂದ ಕೇಡಾಗುತ್ತದೆಯೇ ಹೊರತು ಮೇಲಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಈಗ ನಾನು ನಿಮಗೆ ಹೇಳಲಿರುವ ವಿಷಯದಲ್ಲಿ ನಿಮ್ಮನ್ನು ಹೊಗಳುವುದಿಲ್ಲ. ನಿಮ್ಮ ಸಭಾಕೂಟಗಳು ನಿಮಗೆ ಒಳ್ಳೆಯದನ್ನು ಮಾಡುವುದಕ್ಕಿಂತಲೂ ಹೆಚ್ಚು ಕೇಡುಗಳನ್ನೇ ಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಅತ್ತಾ ತುಮ್ಕಾ ಉಲ್ಲೆ ಹುಕುಮ್ ದಿತಾನಾ ಮಿಯಾ ತುಮ್ಚೊ ಸಿಪಾರತ್ ಬೊಲುಕ್ ಹೊಯ್ನಾ ಕಶ್ಯಾಕ್ ಮಟ್ಲ್ಯಾರ್ ತುಮಿ ಎಕ್ ತಾಂಡೊ ಹೊವ್ನ್ ಗೊಳಾ ಹೊಲ್ಲ್ಯಾ ತನ್ನಾ ಬರೆ ಹೊತಲ್ಯಾ ಬದ್ಲಾಕ್, ಬುರ್ಶೆಚ್ ಜಾಸ್ತಿ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 11:17
14 ತಿಳಿವುಗಳ ಹೋಲಿಕೆ  

ರಾಜ್ಯಪಾಲರು ಕೆಟ್ಟವರನ್ನು ದಂಡಿಸುವುದಕ್ಕೆ ಒಳ್ಳೆಯವರನ್ನು ಪ್ರೋತ್ಸಾಹಪಡಿಸುವುದಕ್ಕೆ ಅರಸನಿಂದ ಅವರು ಕಳುಹಿಸಲಾದವರೆಂದೂ ತಿಳಿದು ಅವರಿಗೆ ಅಧೀನರಾಗಿರಿ.


ಸಭೆಯಾಗಿ ಸೇರುವುದನ್ನು ಕೆಲವರಿಗೆ ರೂಢಿಯಾಗಿ ಬಿಟ್ಟಂತೆ, ನಾವು ಹಾಗೆ ಮಾಡದಿರೋಣ. ಕರ್ತ ಯೇಸುವಿನ ಪ್ರತ್ಯಕ್ಷತೆಯ ದಿನವು ಸಮೀಪಿಸುತ್ತಾ ಬರುತ್ತದೆ ಎಂದು ನೀವು ತಿಳಿದಿರುವುದರಿಂದ ಒಬ್ಬರನ್ನೊಬ್ಬರು ಪ್ರೋತ್ಸಾಹಗೊಳಿಸುವುದನ್ನು ಇನ್ನೂ ಹೆಚ್ಚಾಗಿ ಮಾಡಿರಿ.


ಆದಕಾರಣ ಸಭೆಯೆಲ್ಲವೂ ಕೂಡಿಬಂದಾಗ ಎಲ್ಲರೂ ಅನ್ಯಭಾಷೆಗಳನ್ನಾಡಿದರೆ, ಅಜ್ಞಾನಿಗಳು ಇಲ್ಲವೆ ಅವಿಶ್ವಾಸಿಗಳು ಒಳಗೆ ಬಂದು, ನೀವು ಹುಚ್ಚರೆಂದು ಹೇಳುವುದಿಲ್ಲವೇ?


ಉಣ್ಣುವುದಕ್ಕೂ, ಕುಡಿಯುವುದಕ್ಕೂ ನಿಮಗೆ ಮನೆಗಳಿಲ್ಲವೇ? ಅಥವಾ ದೇವರ ಸಭೆಯನ್ನು ಹೀನೈಸಿ ಏನೂ ಇಲ್ಲದವರನ್ನು ನಾಚಿಕೆಪಡಿಸುತ್ತೀರಾ? ನಾನು ನಿಮಗೇನು ಹೇಳಲಿ? ಇದಕ್ಕಾಗಿ ನಾನು ನಿಮ್ಮನ್ನು ಹೊಗಳಬೇಕೆ? ಖಂಡಿತ ಇಲ್ಲ.


ಹಾಗಾದರೇನು ಪ್ರಿಯರೇ? ನೀವು ಸಭೆಯಾಗಿ ಕೂಡಿಬರುವಾಗ ಪ್ರತಿಯೊಬ್ಬನಿಗೆ ಕೀರ್ತನೆಯಾಗಲಿ, ಸಂದೇಶವಾಗಲಿ, ಪ್ರಕಟನೆಯಾಗಲಿ, ಅನ್ಯಭಾಷೆಯನ್ನಾಡುವುದಾಗಲಿ, ಅನ್ಯಭಾಷೆಗಳ ಅರ್ಥವನ್ನು ಹೇಳುವ ವರವಾಗಲಿ ಇರುತ್ತದಷ್ಟೆ. ಇವೆಲ್ಲವೂ ಸಭೆಗೆ ಭಕ್ತಿವೃದ್ಧಿಗಾಗಿಯೇ ಇರಲಿ.


ನೀವು ಎಲ್ಲದರಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಂಡು, ನಾನು ನಿಮಗೆ ಒಪ್ಪಿಸಿಕೊಟ್ಟ ಉಪದೇಶಗಳನ್ನು ಬಿಗಿಯಾಗಿ ಅನುಸರಿಸುತ್ತಿರೆಂದು ನಿಮ್ಮನ್ನು ಹೊಗಳುತ್ತೇನೆ.


“ ‘ನಿನ್ನ ಹೃದಯದಲ್ಲಿ ನಿನ್ನ ಸಹೋದರನನ್ನು ದ್ವೇಷಿಸಬೇಡ, ನಿನ್ನ ನೆರೆಯವನ ಪಾಪವು ನಿನ್ನ ಮೇಲೆ ಬಾರದಂತೆ ಅವನನ್ನು ತಪ್ಪದೆ ಗದರಿಸು.


ನೀವು ಒಟ್ಟಾಗಿ ಕೂಟಕ್ಕೆ ಸೇರಿಬರುವಾಗ, ನ್ಯಾಯತೀರ್ಪಿಗೆ ಒಳಗಾದಂತೆ, ಹಸಿದವರು ಮನೆಯಲ್ಲೇ ಊಟಮಾಡಲಿ. ಇನ್ನುಳಿದ ವಿಷಯಗಳನ್ನು ನಾನು ಬಂದಾಗ ಕ್ರಮಪಡಿಸುತ್ತೇನೆ.


ನೀವು ಒಟ್ಟಾಗಿ ಕೂಡಿಬರುವಾಗ, ನೀವು ಮಾಡುವ ಭೋಜನವು ಕರ್ತದೇವರ ಭೋಜನವಲ್ಲ.


ರಹಸ್ಯವಾದ ಪ್ರೀತಿಗಿಂತಲೂ ಬಹಿರಂಗವಾದ ಗದರಿಕೆಯೇ ಲೇಸು.


ಕೆಟ್ಟದ್ದನ್ನು ಮಾಡುವವನಿಗೆ ಅಧಿಪತಿಗಳ ಭಯವಿರುವುದೇ ಹೊರತು, ಒಳ್ಳೆಯದನ್ನು ಮಾಡುವವನಿಗೆ ಅಲ್ಲ. ಅಧಿಕಾರಿಗಳಿಗೆ ಭಯಪಡಬಾರದೇ? ಒಳ್ಳೆಯದನ್ನು ಮಾಡು. ಅದರಿಂದ ನಿನಗೆ ಪ್ರಶಂಸೆ ದೊರಕುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು