Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 11:2 - ಕನ್ನಡ ಸಮಕಾಲಿಕ ಅನುವಾದ

2 ನೀವು ಎಲ್ಲದರಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಂಡು, ನಾನು ನಿಮಗೆ ಒಪ್ಪಿಸಿಕೊಟ್ಟ ಉಪದೇಶಗಳನ್ನು ಬಿಗಿಯಾಗಿ ಅನುಸರಿಸುತ್ತಿರೆಂದು ನಿಮ್ಮನ್ನು ಹೊಗಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನೀವು ಎಲ್ಲಾದರಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಂಡು ನಾನು ನಿಮಗೆ ತಿಳಿಸಿಕೊಟ್ಟ ಕಟ್ಟಳೆಗಳನ್ನು ಅನುಸರಿಸಿ ನಡೆಯುತ್ತೀರೆಂದು ನಿಮ್ಮನ್ನು ಹೊಗಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನೀವು ಸದಾ ನನ್ನನ್ನು ಸ್ಮರಿಸಿಕೊಂಡು ನಾನು ನಿಮಗೆ ತಿಳಿಸಿಕೊಟ್ಟ ಸಾಂಪ್ರದಾಯಿಕ ರೀತಿನೀತಿಗಳನ್ನು ಸರಿಯಾಗಿ ಪಾಲಿಸಿಕೊಂಡು ಬರುತ್ತಿದ್ದೀರಿ; ಇದಕ್ಕಾಗಿ ನಿಮ್ಮನ್ನು ಮೆಚ್ಚುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀವು ಎಲ್ಲಾದರಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಂಡು ನಾನು ನಿಮಗೆ ತಿಳಿಸಿಕೊಟ್ಟ ಕಟ್ಟಳೆಗಳನ್ನು ಅನುಸರಿಸಿ ನಡಿಯುತ್ತೀರೆಂದು ನಿಮ್ಮನ್ನು ಹೊಗಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನೀವು ಎಲ್ಲಾ ವಿಷಯಗಳಲ್ಲಿ ನನ್ನನ್ನು ಜ್ಞಾಪಿಸಿಕೊಳುವುದರಿಂದ ನಿಮ್ಮನ್ನು ಹೊಗಳುತ್ತೇನೆ. ನಾನು ನಿಮಗೆ ಕೊಟ್ಟ ಉಪದೇಶಗಳನ್ನು ನೀವು ಸೂಕ್ಷ್ಮವಾಗಿ ಅನುಸರಿಸುತ್ತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತುಮಿ ಕನ್ನಾಬಿ ಮಾಜಿ ಯಾದ್ ಕಾಡ್ತ್ಯಾಸಿ ಅನಿ ಮಿಯಾ ತುಮ್ಕಾ ಸಾಂಗಲ್ಲಿ ಪದ್ದತಿಯಾ ತುಮಿ ಸಂಬಾಳುನ್ ಧರ್‍ಲ್ಯಾಸಿ ಮನುನ್ ಮಿಯಾ ತುಮ್ಕಾ ಹೊಗಳ್ತಾ

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 11:2
12 ತಿಳಿವುಗಳ ಹೋಲಿಕೆ  

ಹೀಗಿರುವುದರಿಂದ ಪ್ರಿಯರೇ, ದೃಢವಾಗಿ ನಿಲ್ಲಿರಿ. ನಾವು ಮಾತಿನಿಂದಾಗಲಿ, ಪತ್ರದಿಂದಾಗಲಿ ನಿಮಗೆ ಕಲಿಸಿದ ಬೋಧನೆಗಳನ್ನು ನೀವು ಭದ್ರವಾಗಿ ಪಾಲಿಸಿರಿ.


ಇದರ ನಿಮಿತ್ತವೇ ಕರ್ತ ದೇವರಲ್ಲಿ ನಂಬಿಗಸ್ತನಾಗಿರುವ ನನ್ನ ಮಗ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೇನೆ. ಅವನು ನನಗೆ ಪ್ರಿಯನಾಗಿದ್ದಾನೆ. ನಾನು ಎಲ್ಲಾ ಕಡೆಗಳಲ್ಲಿಯೂ ಪ್ರತಿಯೊಂದು ಸಭೆಯಲ್ಲಿಯೂ ಬೋಧಿಸುವುದರ ಪ್ರಕಾರ, ಅವನು ಕ್ರಿಸ್ತ ಯೇಸುವಿನಲ್ಲಿರುವ ನನ್ನ ನಡವಳಿಕೆಯನ್ನು, ನಿಮ್ಮ ನೆನಪಿಗೆ ತರುವನು.


ಪ್ರಿಯರೇ, ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುವುದೇನೆಂದರೆ, ನಮ್ಮಿಂದ ಸ್ವೀಕರಿಸಿದ ಬೋಧನೆಯನ್ನು ಅನುಸರಿಸದೆ, ಸೋಮಾರಿಯಾಗಿ ಅಶಿಸ್ತಿನಿಂದ ನಡೆಯುವ ಪ್ರತಿ ವಿಶ್ವಾಸಿಗೆ ನೀವು ದೂರವಾಗಿರಬೇಕು.


ನಾನು ಸಾರಿದ ಈ ಸುವಾರ್ತೆಯ ವಾಕ್ಯವನ್ನು ನೀವು ಬಿಗಿಯಾಗಿ ಹಿಡಿದುಕೊಂಡರೆ, ನಿಮಗೆ ರಕ್ಷಣೆಯಾಗುತ್ತದೆ. ಇಲ್ಲದಿದ್ದರೆ, ನಿಮ್ಮ ನಂಬಿಕೆ ವ್ಯರ್ಥವಾಗಿ ಹೋಗುತ್ತದೆ.


ಉಣ್ಣುವುದಕ್ಕೂ, ಕುಡಿಯುವುದಕ್ಕೂ ನಿಮಗೆ ಮನೆಗಳಿಲ್ಲವೇ? ಅಥವಾ ದೇವರ ಸಭೆಯನ್ನು ಹೀನೈಸಿ ಏನೂ ಇಲ್ಲದವರನ್ನು ನಾಚಿಕೆಪಡಿಸುತ್ತೀರಾ? ನಾನು ನಿಮಗೇನು ಹೇಳಲಿ? ಇದಕ್ಕಾಗಿ ನಾನು ನಿಮ್ಮನ್ನು ಹೊಗಳಬೇಕೆ? ಖಂಡಿತ ಇಲ್ಲ.


ನಿಮ್ಮನ್ನು ಹೊಗಳುವುದಕ್ಕಾಗಿ ಈ ಮಾರ್ಗದರ್ಶನಗಳನ್ನು ನಾನು ನಿಮಗೆ ತಿಳಿಸುತ್ತಾಯಿಲ್ಲ. ಏಕೆಂದರೆ, ನಿಮ್ಮ ಕೂಟಗಳಿಂದ ಮೇಲಾಗುವುದಕ್ಕಿಂತ ಹೆಚ್ಚು ಕೇಡಾಗುತ್ತಲಿದೆ.


ಇವರಿಬ್ಬರೂ ಕರ್ತದೇವರ ಎಲ್ಲಾ ಆಜ್ಞೆಗಳನ್ನೂ ತೀರ್ಪುಗಳನ್ನೂ ತಪ್ಪಿಲ್ಲದೆ ಕೈಕೊಂಡು, ದೇವರ ಮುಂದೆ ನೀತಿವಂತರಾಗಿದ್ದರು.


ತಿಮೊಥೆಯನು ಈಗಲೇ ನಿಮ್ಮಿಂದ ನಮ್ಮ ಬಳಿಗೆ ಬಂದು ನಿಮ್ಮ ವಿಶ್ವಾಸ ಹಾಗೂ ಪ್ರೀತಿಯ ವಿಷಯವಾಗಿ ಒಳ್ಳೆಯ ವರ್ತಮಾನವನ್ನು ತಂದಿದ್ದಾನೆ. ನೀವು ನಮ್ಮನ್ನು ಯಾವಾಗಲೂ ಚೆನ್ನಾಗಿ ನೆನಪಿಸಿಕೊಂಡು, ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ನಮ್ಮನ್ನು ನೋಡುವುದಕ್ಕೆ ಹಾರೈಸುತ್ತೀರೆಂಬುದನ್ನು ತಿಳಿಸಿದ್ದಾನೆ.


ಆದರೂ ಕರ್ತದೇವರು ಪ್ರತಿಯೊಬ್ಬನಿಗೆ ನೇಮಿಸಿದಂತೆಯೂ ದೇವರು ಪ್ರತಿಯೊಬ್ಬನನ್ನು ಕರೆದಂತೆಯೂ ನಡೆದುಕೊಳ್ಳಲಿ. ಎಲ್ಲಾ ಸಭೆಗಳಲ್ಲಿಯೂ ಇರಬೇಕೆಂದು ನಾನು ಕೊಡುವ ನಿಯಮವು ಇದೇ.


ನೀವು ಬಹು ಹಿಂಸೆಯಿಂದಲೂ ಪವಿತ್ರಾತ್ಮ ಪ್ರೇರಿತ ಆನಂದದಿಂದಲೂ ವಾಕ್ಯವನ್ನು ಅಂಗೀಕರಿಸಿ ನಮ್ಮನ್ನೂ ಕರ್ತ ಯೇಸುವನ್ನೂ ಅನುಸರಿಸುವವರಾಗಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು