1 ಕೊರಿಂಥದವರಿಗೆ 11:21 - ಕನ್ನಡ ಸಮಕಾಲಿಕ ಅನುವಾದ21 ಏಕೆಂದರೆ, ಭೋಜನ ಮಾಡುವಾಗ, ಪ್ರತಿಯೊಬ್ಬನು ಇತರರಿಗಾಗಿ ಕಾಯದೇ, ತನ್ನ ಭೋಜನವನ್ನು ಮುಂಚಿತವಾಗಿ ಆರಂಭಿಸುತ್ತಾನೆ. ಒಬ್ಬನು ಹಸಿದಿರುತ್ತಾನೆ, ಮತ್ತೊಬ್ಬನು ಕುಡಿದಿರುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಭೋಜನ ಮಾಡುವಲ್ಲಿ ಪ್ರತಿಯೊಬ್ಬನು ತಾನು ತಂದದ್ದನ್ನು ಮತ್ತೊಬ್ಬರಿಗಿಂತ ಮುಂದಾಗಿ ಊಟಮಾಡುತ್ತಾನೆ. ಹೀಗೆ ಒಬ್ಬನು ಹಸಿದಿರುತ್ತಾನೆ ಮತ್ತೊಬ್ಬನು ಕುಡಿದು ಮತ್ತನಾಗಿರುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಏಕೆಂದರೆ, ಭೋಜನ ಸಮಯದಲ್ಲಿ ಒಬ್ಬೊಬ್ಬನೂ ತಾನು ತಂದದ್ದನ್ನು ತಿನ್ನಲು ಇತರರಿಗಿಂತ ಮುಂಚಿತವಾಗಿಯೇ ಕುಳಿತುಕೊಳ್ಳುತ್ತಾನೆ. ಒಬ್ಬನು ಹಸಿದಿರುತ್ತಾನೆ; ಇನ್ನೊಬ್ಬನು ಕುಡಿದು ಮತ್ತನಾಗುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಭೋಜನವಾಗುವಲ್ಲಿ ಪ್ರತಿಯೊಬ್ಬನು ತಾನು ತಂದದ್ದನ್ನು ಮತ್ತೊಬ್ಬರಿಗಿಂತ ಮುಂದಾಗಿ ಊಟಮಾಡುತ್ತಾನೆ; ಹೀಗೆ ಒಬ್ಬನು ಹಸಿದಿರುತ್ತಾನೆ, ಮತ್ತೊಬ್ಬನು ಕುಡಿದು ಮತ್ತನಾಗಿರುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಏಕೆಂದರೆ, ನೀವು ಊಟ ಮಾಡುವಾಗ, ಇತರರಿಗೋಸ್ಕರ ಕಾಯದೆ ಪ್ರತಿಯೊಬ್ಬರು ತಮ್ಮಷ್ಟಕ್ಕೆ ತಾವೇ ಊಟ ಮಾಡುತ್ತಾರೆ. ಕೆಲವು ಜನರಲ್ಲಿ ಊಟಮಾಡಲು ಸಾಕಷ್ಟು ಆಹಾರ ಇರುವುದಿಲ್ಲ. ಇನ್ನು ಕೆಲವರಲ್ಲಿ ತಿಂದು, ಕುಡಿದು ಮತ್ತರಾಗುವಷ್ಟು ಆಹಾರವಿರುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಕಶ್ಯಾಕ್ ಮಟ್ಲ್ಯಾರ್ ಜೆವಾನ್ ಕರ್‍ತಲ್ಯಾಕ್ಡೆ ಎಕ್ಲೊ ಅನಿಎಕ್ಲ್ಯಾಕ್ ರಾಕಿ ನಸ್ತಾನಾ ಅಪ್ನಿ ಹಾನಲ್ಲೆ ಜೆವಾನ್ ಜವ್ಕ್ ಅವಸರ್ ಕರ್‍ತಾ, ಅಶೆ ಎಕ್ಲೊ ಉಪ್ಪಾಸಿ ರ್‍ಹಾತಾನಾ ಅನಿ ಎಕ್ಲೊ ಫಿವ್ನ್ ನಿಶೆತ್ ರ್‍ಹಾತಾ. ಅಧ್ಯಾಯವನ್ನು ನೋಡಿ |