Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 11:25 - ಕನ್ನಡ ಸಮಕಾಲಿಕ ಅನುವಾದ

25 ಅದೇ ಪ್ರಕಾರ, ಭೋಜನವಾದ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗೋಸ್ಕರ ಸುರಿಸಲಾಗುವ, ನನ್ನ ರಕ್ತದಿಂದಾದ ಹೊಸ ಒಡಂಬಡಿಕೆಯಾಗಿದೆ. ನೀವು ಇದರಲ್ಲಿ ಪಾನಮಾಡುವಾಗೆಲ್ಲಾ ನನ್ನನ್ನು ಜ್ಞಾಪಿಸಿಕೊಳ್ಳುವದಕ್ಕೋಸ್ಕರ ಪಾನಮಾಡಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಊಟವಾದ ಮೇಲೆ ಆತನು ಅದೇ ರೀತಿಯಲ್ಲಿ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾನಪಾತ್ರೆಯು ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ. ನೀವು ಇದರಲ್ಲಿ ಪಾನಮಾಡುವಾಗೆಲೆಲ್ಲಾ ನನ್ನನ್ನು ನೆನಪುಮಾಡಿಕೊಳ್ಳುವುದಕ್ಕೋಸ್ಕರ ಇದನ್ನು ಪಾನಮಾಡಿರಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅಂತೆಯೇ ಭೋಜನದ ಕೊನೆಯಲ್ಲಿ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆ ನನ್ನ ರಕ್ತದಿಂದ ಮುದ್ರಿತವಾದ ಹೊಸ ಒಡಂಬಡಿಕೆ; ಇದನ್ನು ನೀವು ಪಾನಮಾಡುವಾಗಲೆಲ್ಲಾ ನನ್ನ ಸ್ಮರಣೆಗಾಗಿ ಮಾಡಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಊಟವಾದ ಮೇಲೆ ಆತನು ಅದೇ ರೀತಿಯಾಗಿ ಪಾತ್ರೆಯನ್ನು ತೆಗೆದುಕೊಂಡು - ಈ ಪಾತ್ರೆಯು ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ; ನೀವು ಇದರಲ್ಲಿ ಪಾನಮಾಡುವಾಗೆಲ್ಲಾ ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಪಾನಮಾಡಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಅದೇ ರೀತಿಯಲ್ಲಿ ಅವರು ಊಟಮಾಡಿದ ಮೇಲೆ ಯೇಸು ದ್ರಾಕ್ಷಾರಸದ ಪಾತ್ರೆಯನ್ನು ತೆಗೆದುಕೊಂಡು, “ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಹೊಸ ಒಡಂಬಡಿಕೆಯನ್ನು ಈ ದ್ರಾಕ್ಷಾರಸ ಸೂಚಿಸುತ್ತದೆ. ಈ ಹೊಸ ಒಡಂಬಡಿಕೆ ನನ್ನ ರಕ್ತದಿಂದ ಆರಂಭವಾಗುತ್ತದೆ. ನೀವು ಇದನ್ನು ಕುಡಿಯುವಾಗಲೆಲ್ಲಾ ನನ್ನನ್ನು ನೆನಸಿಕೊಳ್ಳವವರಾಗಿದ್ದೀರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತಸೆಚ್ ಜೆವಾನ್ ಹೊವ್ನಗೆತ್ ರ್‍ಹಾತಾನಾ, ತೆನಿ ಆಯ್ದಾನ್ ಘೆಟ್ಲ್ಯಾನ್ ಅನಿ ಅಸೆ ಮಟ್ಲ್ಯಾನ್, “ಹೆ ಆಯ್ದಾನ್ ಮಾಜ್ಯಾ ರಗ್ತಾನ್ ಘಟ್ಟ್ ಕರಲ್ಲೊ ನ್ಹವೊ ಕರಾರ್, ಕವ್ಡೆಂದಾ ತಿ ತುಮಿ ಫಿತ್ಯಾಶಿ ತವ್ಡೆಂದಾ ತೆ ಮಾಜ್ಯಾ ಯಾದಿಸಾಟ್ನಿ ಕರಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 11:25
11 ತಿಳಿವುಗಳ ಹೋಲಿಕೆ  

ಅದೇ ಪ್ರಕಾರ, ಭೋಜನವಾದ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗೋಸ್ಕರ ಸುರಿಸಲಾಗುವ, ನನ್ನ ರಕ್ತದಿಂದಾದ ಹೊಸ ಒಡಂಬಡಿಕೆಯಾಗಿದೆ.


ಕುರಿ ಹಿಂಡಿಗೆ ಮಹಾಕುರುಬ ಆಗಿರುವ ನಮ್ಮ ಕರ್ತ ಯೇಸುವನ್ನು ನಿತ್ಯಒಡಂಬಡಿಕೆಯ ರಕ್ತದ ಮೂಲಕ ಸಮಾಧಾನದ ದೇವರು ಸತ್ತವರೊಳಗಿಂದ ಜೀವಂತವಾಗಿ ಬರಮಾಡಿದರು.


ದೇವರು ನಮಗೆ ಹೊಸ ಒಡಂಬಡಿಕೆಯ ಸೇವಕರಾಗುವಂತೆ ಸಾಮರ್ಥ್ಯವನ್ನು ನೀಡಿರುತ್ತಾರೆ. ಇದು ಲಿಖಿತ ನಿಯಮಕ್ಕೆ ಸೇರಿದ್ದಾಗಿರದೆ, ಪವಿತ್ರಾತ್ಮನ ನಿಯಮದ ಸೇವೆಯಾಗಿರುತ್ತದೆ. ಏಕೆಂದರೆ, ಲಿಖಿತವಾದದ್ದು ಮರಣವನ್ನುಂಟುಮಾಡುತ್ತದೆ. ದೇವರಾತ್ಮನಿಂದಾದದ್ದು ಜೀವವನ್ನು ಉಂಟುಮಾಡುತ್ತದೆ.


ನಾವು ಸ್ತೋತ್ರಮಾಡಿ ಕುಡಿಯುವ ಸ್ತೋತ್ರದ ಪಾತ್ರೆಯು ಕ್ರಿಸ್ತ ಯೇಸುವಿನ ರಕ್ತದ ಅನ್ಯೋನ್ಯತೆಯಲ್ಲವೇ? ನಾವು ಮುರಿಯುವ ರೊಟ್ಟಿಯು ಕ್ರಿಸ್ತನ ದೇಹದಲ್ಲಿಯ ಅನ್ಯೋನ್ಯತೆಯಲ್ಲವೇ?


ಆದರೆ ಇಸ್ರಾಯೇಲರ ಬುದ್ಧಿ ಮಂದವಾಯಿತು. ಈ ದಿನದವರೆಗೂ ಹಳೆಯ ಒಡಂಬಡಿಕೆಯು ಓದುವಾಗಲೆಲ್ಲಾ, ಅದೇ ಮುಸುಕು ಅವರಲ್ಲಿ ಇರುತ್ತದೆ. ಅದು ಕ್ರಿಸ್ತ ಯೇಸುವಿನಲ್ಲಿ ಮಾತ್ರವೇ ತೆಗೆಯಲು ಸಾಧ್ಯ. ಆದ್ದರಿಂದ ಅದು ಈಗಲೂ ತೆಗೆದುಹಾಕಲಾಗಿಲ್ಲ.


ಮೋಶೆಯು ರಕ್ತದಲ್ಲಿ ಅರ್ಧವನ್ನು ತೆಗೆದುಕೊಂಡು ಬೋಗುಣಿಗಳಲ್ಲಿ ಹಾಕಿದನು ಮತ್ತು ರಕ್ತದಲ್ಲಿ ಮಿಕ್ಕ ಅರ್ಧವನ್ನು ಬಲಿಪೀಠದ ಮೇಲೆ ಚಿಮುಕಿಸಿದನು.


ತರುವಾಯ ಮೋಶೆಯು ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ, “ಈ ಎಲ್ಲಾ ಮಾತುಗಳ ವಿಷಯದಲ್ಲಿ ಯೆಹೋವ ದೇವರು ನಿಮ್ಮೊಂದಿಗೆ ಮಾಡಿದ ಒಡಂಬಡಿಕೆಯ ರಕ್ತ,” ಎಂದನು.


ಯೆಹೋವ ದೇವರು ಹೇಳುವುದನ್ನು ಕೇಳಿ: “ನಾನು ಇಸ್ರಾಯೇಲ್ ವಂಶದವರೊಂದಿಗೂ, ಯೆಹೂದ ವಂಶದವರೊಂದಿಗೂ ಒಂದು ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು.


ಸ್ತೋತ್ರಮಾಡಿ ಮುರಿದು, “ಇದು ನಿಮಗೋಸ್ಕರವಾಗಿರುವ ನನ್ನ ದೇಹ, ನನ್ನ ನೆನಪಿಗಾಗಿ ನೀವು ಇದನ್ನು ಮಾಡಿರಿ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು