Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 11:27 - ಕನ್ನಡ ಸಮಕಾಲಿಕ ಅನುವಾದ

27 ಹೀಗಿರುವುದರಿಂದ, ಯಾರಾದರೂ ಅಯೋಗ್ಯವಾಗಿ ಕರ್ತದೇವರ ರೊಟ್ಟಿಯನ್ನು ತಿಂದರೆ, ಇಲ್ಲವೆ ಅವರ ಪಾತ್ರೆಯಲ್ಲಿ ಪಾನ ಮಾಡಿದರೆ, ಅಂಥವರು ಕರ್ತದೇವರ ದೇಹಕ್ಕೂ, ರಕ್ತಕ್ಕೂ ದ್ರೋಹ ಮಾಡಿದವರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಹೀಗಿರುವುದರಿಂದ ಯಾವನಾದರೂ ಅಯೋಗ್ಯವಾಗಿ ಕರ್ತನ ರೊಟ್ಟಿಯನ್ನು ತಿಂದರೆ ಇಲ್ಲವೆ ಆತನ ಪಾನಪಾತ್ರೆಯಲ್ಲಿ ಪಾನ ಮಾಡಿದರೆ ಅವನು ಕರ್ತನ ದೇಹಕ್ಕೂ ಮತ್ತು ಕರ್ತನ ರಕ್ತಕ್ಕೂ ಸಂಬಂಧಿಸಿದಂತೆ ದ್ರೋಹಮಾಡಿದವನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಯಾರಾದರೂ ಅಯೋಗ್ಯವಾಗಿ ಈ ರೊಟ್ಟಿಯನ್ನು ಭುಜಿಸಿದರೆ, ಅಥವಾ ಪ್ರಭುವಿನ ಪಾತ್ರೆಯಿಂದ ಪಾನಮಾಡಿದರೆ ಅವನು ಪ್ರಭುವಿನ ಶರೀರಕ್ಕೂ ರಕ್ತಕ್ಕೂ ದ್ರೋಹವೆಸಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಹೀಗಿರುವದರಿಂದ ಯಾವನಾದರೂ ಅಯೋಗ್ಯವಾಗಿ ಕರ್ತನ ರೊಟ್ಟಿಯನ್ನು ತಿಂದರೆ ಇಲ್ಲವೆ ಆತನ ಪಾತ್ರೆಯಲ್ಲಿ ಪಾನಮಾಡಿದರೆ ಅವನು ಕರ್ತನ ದೇಹಕ್ಕೂ ರಕ್ತಕ್ಕೂ ದ್ರೋಹಮಾಡಿದವನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಹೀಗಿರಲಾಗಿ ಒಬ್ಬನು ಪ್ರಭುವಿನ ರೊಟ್ಟಿಯನ್ನು ತಿನ್ನುವಾಗ, ಪಾತ್ರೆಯಲ್ಲಿ ಕುಡಿಯುವಾಗ ಇವುಗಳ ನಿಜವಾದ ಅರ್ಥವನ್ನು ಕಾರ್ಯಗಳ ಮೂಲಕ ತೋರ್ಪಡಿಸಬೇಕು, ಇಲ್ಲವಾದರೆ ಅವನು ಪ್ರಭುವಿನ ದೇಹಕ್ಕೂ ರಕ್ತಕ್ಕೂ ದೋಷಿಯಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ತಸೆ ಮನುನ್ ಜೆ ಕೊನ್ ಯೊಗ್ಯ್ ನಸ್ತಾನಾ ಹಿ ಭಾಕ್ರಿ ಖಾತಾ, ನಾ ಹೊಲ್ಯಾರ್ ಧನಿಯಾಚ್ಯಾ ಆಂಗಾ ಅನಿ ರಗ್ತಾಚ್ಯಾ ವಿರೊದ್ ಚುಕ್ ಕರ್‍ತಾ ಅನಿ ತೊ ಚುಕಿದಾರ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 11:27
11 ತಿಳಿವುಗಳ ಹೋಲಿಕೆ  

ನಾನೇ ಪರಲೋಕದಿಂದ ಬಂದ ಜೀವದ ರೊಟ್ಟಿ. ಈ ರೊಟ್ಟಿಯನ್ನು ಯಾರು ತಿನ್ನುವರೋ ಅವರು ಸದಾಕಾಲವೂ ಬದುಕುವರು. ಲೋಕದ ಜೀವಕ್ಕಾಗಿ ನಾನು ಕೊಡುವ ರೊಟ್ಟಿಯು ನನ್ನ ಮಾಂಸವೇ,” ಎಂದರು.


ನೀವು ಕರ್ತದೇವರ ಪಾತ್ರೆಯಲ್ಲಿಯೂ ದೆವ್ವಗಳ ಪಾತ್ರೆಯಲ್ಲಿಯೂ ಕುಡಿಯಲಾರಿರಿ. ನೀವು ಕರ್ತದೇವರ ಪಂಕ್ತಿಯಲ್ಲಿಯೂ ದೆವ್ವಗಳ ಪಂಕ್ತಿಯಲ್ಲಿಯೂ ಭಾಗಿಗಳಾಗಿರಲಾರಿರಿ.


ಯಾವನು ದೇವಪುತ್ರರನ್ನೇ ತುಳಿದು ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಪವಿತ್ರಾತ್ಮ ದೇವರನ್ನು ತಿರಸ್ಕಾರ ಮಾಡಿದ್ದಾನೋ, ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗುವನೆಂಬುದನ್ನು ಯೋಚಿಸಿರಿ.


ಆದರೆ ಒಬ್ಬ ಮನುಷ್ಯನೂ ಆಚಾರವಾಗಿ ಶುದ್ಧನಾದವನು, ಪ್ರಯಾಣ ಮಾಡದವನಾಗಿದ್ದು ಪಸ್ಕವನ್ನು ಆಚರಿಸಲು ತಪ್ಪಿದರೆ, ಅವನನ್ನು ಅವನ ಜನರೊಳಗಿಂದ ತೆಗೆದುಹಾಕಬೇಕು. ಅವನು ಯೆಹೋವ ದೇವರ ಅರ್ಪಣೆಯನ್ನು ಅದರ ಸಮಯದಲ್ಲಿ ತರದಿದ್ದ ಕಾರಣ ಆ ಮನುಷ್ಯನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು.


ನೀನು ಇಸ್ರಾಯೇಲರಿಗೆ, “ನಿಮ್ಮಲ್ಲಿಯೂ, ನಿಮ್ಮ ಸಂತತಿಯಲ್ಲಿಯೂ ಯಾವನಾದರೂ ಶವದ ಸೋಂಕಿನಿಂದ ಅಶುದ್ಧನಾಗಿದ್ದರೂ, ಇಲ್ಲವೆ ದೂರ ಪ್ರಯಾಣದಲ್ಲಿದ್ದರೂ ಯೆಹೋವ ದೇವರಿಗೆ ಪಸ್ಕಹಬ್ಬವನ್ನು ಆಚರಿಸಬೇಕು.


“ಅನಂತರ ಅರಸನು ಅತಿಥಿಗಳನ್ನು ನೋಡುವುದಕ್ಕಾಗಿ ಒಳಗೆ ಬಂದಾಗ, ಅಲ್ಲಿ ಮದುವೆಯ ವಸ್ತ್ರವಿಲ್ಲದೆ ಇದ್ದ ಒಬ್ಬ ಮನುಷ್ಯನನ್ನು ಕಂಡನು.


ಏಕೆಂದರೆ, ಯಾರಾದರು ಕ್ರಿಸ್ತನ ದೇಹವೆಂದು ವಿವೇಚಿಸದೆ ತಿಂದು ಕುಡಿದರೆ, ಹಾಗೆ ತಿಂದು ಕುಡಿಯುವುದರಿಂದ ನ್ಯಾಯತೀರ್ಪಿಗೊಳಗಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು