Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 11:34 - ಕನ್ನಡ ಸಮಕಾಲಿಕ ಅನುವಾದ

34 ನೀವು ಒಟ್ಟಾಗಿ ಕೂಟಕ್ಕೆ ಸೇರಿಬರುವಾಗ, ನ್ಯಾಯತೀರ್ಪಿಗೆ ಒಳಗಾದಂತೆ, ಹಸಿದವರು ಮನೆಯಲ್ಲೇ ಊಟಮಾಡಲಿ. ಇನ್ನುಳಿದ ವಿಷಯಗಳನ್ನು ನಾನು ಬಂದಾಗ ಕ್ರಮಪಡಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಒಬ್ಬನು ಹಸಿದರೆ ಅವನು ಮನೆಯಲ್ಲೇ ಊಟಮಾಡಲಿ ನೀವು ಸೇರಿಬಂದದ್ದು ನ್ಯಾಯ ತೀರ್ಪಿಗೊಳಗಾಗುವುದಕ್ಕೆ ಕಾರಣವಾಗಬಾರದು. ಇನ್ನುಳಿದಿರುವ ಸಂಗತಿಗಳನ್ನು ನಾನು ಬಂದ ನಂತರ ಆದೇಶಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ನೀವು ಹಸಿವು ನೀಗಿಸಿಕೊಳ್ಳುವುದಕ್ಕಾಗಿ ಸಭೆಗೆ ಬರುವುದಾದರೆ ಮನೆಯಲ್ಲೇ ಊಟಮಾಡಿ. ಆಗ ಸಭೆಸೇರಿ ನೀವು ನ್ಯಾಯವಿಚಾರಣೆಗೆ ಗುರಿಯಾಗುವುದಿಲ್ಲ. ಇನ್ನುಳಿದ ವಿಷಯಗಳನ್ನು ನಾನು ಬಂದು ಇತ್ಯರ್ಥ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಒಬ್ಬನು ಹಸಿದರೆ ಅವನು ಮನೆಯಲ್ಲೇ ಊಟಮಾಡಲಿ; ನೀವು ಕೂಡಿ ಬಂದದ್ದು ನ್ಯಾಯತೀರ್ಪಿಗೊಳಗಾಗುವದಕ್ಕೆ ಕಾರಣವಾಗಬಾರದು. ವಿುಕ್ಕಾದ ಸಂಗತಿಗಳನ್ನು ನಾನು ಬಂದಾಗ ಕ್ರಮಪಡಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಒಬ್ಬ ವ್ಯಕ್ತಿಯು ಹಸಿವೆಗೊಂಡಿದ್ದರೆ, ಅವನು ಮನೆಯಲ್ಲಿ ಊಟಮಾಡಲಿ. ನೀವು ಹೀಗೆ ಮಾಡಿದರೆ, ನಿಮ್ಮ ಸಭಾಕೂಟವು ನಿಮ್ಮ ಮೇಲೆ ನ್ಯಾಯತೀರ್ಪನ್ನು ಬರಮಾಡುವುದಿಲ್ಲ. ಉಳಿದ ವಿಷಯಗಳ ಬಗ್ಗೆ ನೀವು ಏನು ಮಾಡಬೇಕೆಂಬುದನ್ನು ನಾನು ನಿಮ್ಮಲ್ಲಿಗೆ ಬಂದಾಗ ತಿಳಿಸಿಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಭುಕ್ ಲಾಗಲ್ಲೊ ಅಪ್ನಾಚ್ಯಾ ಘರಾತುಚ್ ಜೆವ್ನ್ ಯೆಂವ್ದಿತ್, ನಾ ಹೊಲ್ಯಾರ್ ತುಮಿ ಜಲಮಲ್ಲೆಚ್ ತುಮ್ಚ್ಯಾ ಝಡ್ತಿಕ್ ಕಾರನ್ ಹೊತಾ.ಅನಿ ಹುರಲ್ಲ್ಯಾ ಸಂಗ್ತಿಯಾಂಚ್ಯಾ ವಿಶಯಾತ್ ಸಾಂಗ್ತಲೆ ಹಾಯ್ ತೆ ಮಿಯಾ ಥೈ ಯೆಲ್ಲೆ ತನ್ನಾ ಸಮಾ ಕರ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 11:34
9 ತಿಳಿವುಗಳ ಹೋಲಿಕೆ  

ಆದರೂ ಕರ್ತದೇವರು ಪ್ರತಿಯೊಬ್ಬನಿಗೆ ನೇಮಿಸಿದಂತೆಯೂ ದೇವರು ಪ್ರತಿಯೊಬ್ಬನನ್ನು ಕರೆದಂತೆಯೂ ನಡೆದುಕೊಳ್ಳಲಿ. ಎಲ್ಲಾ ಸಭೆಗಳಲ್ಲಿಯೂ ಇರಬೇಕೆಂದು ನಾನು ಕೊಡುವ ನಿಯಮವು ಇದೇ.


ಆದರೆ ಕರ್ತದೇವರ ಚಿತ್ತವಿದ್ದರೆ, ನಾನು ಬೇಗ ನಿಮ್ಮ ಬಳಿಗೆ ಬಂದು, ಅಹಂಕಾರಿಗಳ ಮಾತನ್ನಲ್ಲ, ಅವರಿಗೆ ಎಷ್ಟು ಶಕ್ತಿ ಇದೆ ಎಂಬುವುದನ್ನು ಕಂಡುಕೊಳ್ಳುವೆನು.


ಕ್ರೇತದ್ವೀಪದಲ್ಲಿ ಪೂರ್ಣಗೊಳಿಸದ ಕಾರ್ಯಗಳನ್ನು ನೀನು ಕ್ರಮಪಡಿಸಿ ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಪ್ರತಿಯೊಂದು ಪಟ್ಟಣದಲ್ಲಿ ಹಿರಿಯರನ್ನು ನೇಮಿಸಬೇಕೆಂದು ನಿನ್ನನ್ನು ಅಲ್ಲೇ ಬಿಟ್ಟು ಬಂದೆನು.


ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಆದಾಯಕ್ಕೆ ತಕ್ಕಂತೆ ವಾರದ ಮೊದಲನೆಯ ದಿನದಲ್ಲಿ ಕೂಡಿಟ್ಟುಕೊಂಡಿರಲಿ. ಹೀಗೆ ಮಾಡಿದರೆ, ನಾನು ಬಂದಾಗ ನೀವು ಹಣ ಕೂಡಿಸುವ ಅವಶ್ಯವಿರುವುದಿಲ್ಲ.


ಮಕೆದೋನ್ಯವನ್ನು ದಾಟಿದ ಮೇಲೆ, ಅದೇ ಮಾರ್ಗವಾಗಿ ನಾನು ಪುನಃ ನಿಮ್ಮ ಬಳಿಗೆ ಬರುವೆನು.


ಇದರ ನಿಮಿತ್ತವೇ ಕರ್ತ ದೇವರಲ್ಲಿ ನಂಬಿಗಸ್ತನಾಗಿರುವ ನನ್ನ ಮಗ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೇನೆ. ಅವನು ನನಗೆ ಪ್ರಿಯನಾಗಿದ್ದಾನೆ. ನಾನು ಎಲ್ಲಾ ಕಡೆಗಳಲ್ಲಿಯೂ ಪ್ರತಿಯೊಂದು ಸಭೆಯಲ್ಲಿಯೂ ಬೋಧಿಸುವುದರ ಪ್ರಕಾರ, ಅವನು ಕ್ರಿಸ್ತ ಯೇಸುವಿನಲ್ಲಿರುವ ನನ್ನ ನಡವಳಿಕೆಯನ್ನು, ನಿಮ್ಮ ನೆನಪಿಗೆ ತರುವನು.


ಹೀಗಿರುವುದರಿಂದ ನನ್ನ ಪ್ರಿಯರೇ, ನೀವು ಭೋಜನಕ್ಕಾಗಿ ಕೂಡಿಬರುವಾಗ ಎಲ್ಲರಿಗಾಗಿ ಕಾದುಕೊಂಡಿರಿ.


ಈಗ ದೇವಜನರಿಗೋಸ್ಕರ ಹಣ ಕೂಡಿಸಿಡುವುದನ್ನು ಕುರಿತು: ನಾನು ಗಲಾತ್ಯದ ಸಭೆಗಳಿಗೆ ಹೇಳಿದ್ದನ್ನೇ ನೀವೂ ಮಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು