Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 11:5 - ಕನ್ನಡ ಸಮಕಾಲಿಕ ಅನುವಾದ

5 ಆದರೆ ತಲೆಯ ಮೇಲೆ ಮುಸುಕು ಹಾಕಿಕೊಳ್ಳದೆ ಪ್ರಾರ್ಥನೆ ಮಾಡುವ ಇಲ್ಲವೆ ಪ್ರವಾದನೆ ಹೇಳುವ ಪ್ರತಿ ಸ್ತ್ರೀಯು ತನ್ನ ತಲೆಯನ್ನು ಅವಮಾನ ಪಡಿಸುತ್ತಾಳೆ. ಹೀಗೆ ಮಾಡುವ ಸ್ತ್ರೀಯು ತನ್ನ ತಲೆ ಬೋಳಿಸಿಕೊಳ್ಳುವುದಕ್ಕೆ ಸಮಾನವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ತಲೆಯ ಮೇಲೆ ಮುಸುಕು ಹಾಕಿಕೊಳ್ಳದೆ ಪ್ರಾರ್ಥನೆಯನ್ನಾಗಲಿ ಪ್ರವಾದನೆಯನ್ನಾಗಲಿ ಮಾಡುವ ಸ್ತ್ರೀಯು ತನ್ನ ತಲೆಯನ್ನು ಅವಮಾನಪಡಿಸುತ್ತಾಳೆ. ಸ್ತ್ರೀಯು ಮುಸುಕಿಲ್ಲದೆ ಇರುವುದೂ ತಲೆಬೋಳಿಸಿಕೊಂಡಿರುವುದೂ ಒಂದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸ್ತ್ರೀಯು ತಲೆಯ ಮೇಲೆ ಮುಸುಕು ಹಾಕದೆ ಪ್ರಾರ್ಥಿಸುವುದಾದರೆ ಅಥವಾ ದೇವರ ವಾಕ್ಯವನ್ನು ಪ್ರವಚಿಸುವುದಾದರೆ ತನ್ನ ಶಿರಸ್ಸಾದ ಪತಿಗೆ ಅವಮಾನ ತರುತ್ತಾಳೆ. ಮುಸುಕು ಹಾಕದ ಸ್ತ್ರೀ ತಲೆಯನ್ನು ಮುಂಡನ ಮಾಡಿಸಿಕೊಂಡಂತೆಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ತಲೆಯ ಮೇಲೆ ಮುಸುಕುಹಾಕಿಕೊಳ್ಳದೆ ಪ್ರಾರ್ಥನೆಯನ್ನಾಗಲಿ ಪ್ರವಾದನೆಯನ್ನಾಗಲಿ ಮಾಡುವ ಸ್ತ್ರೀಯು ತನ್ನ ತಲೆಯನ್ನು ಅವಮಾನಪಡಿಸುತ್ತಾಳೆ. ಸ್ತ್ರೀಯು ಮುಸುಕಿಲ್ಲದಿರುವದೂ ತಲೆಬೋಳಿಸಿಕೊಂಡಿರುವದೂ ಒಂದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದರೆ ಸ್ತ್ರೀಯು ಪ್ರಾರ್ಥಿಸುವಾಗ ಅಥವಾ ಪ್ರವಾದಿಸುವಾಗ ತನ್ನ ತಲೆಗೆ ಮುಸುಕನ್ನು ಹಾಕಿಕೊಂಡಿರಬೇಕು. ಆಕೆಯು ತನ್ನ ತಲೆಗೆ ಮುಸುಕು ಹಾಕಿಲ್ಲದಿದ್ದರೆ, ಅದು ಆಕೆಯ ಶಿರಸ್ಸಾದ ಪುರುಷನಿಗೆ ಅಪಮಾನಕರವಾಗಿದೆ. ಅವಳಿಗೂ ತಲೆಯನ್ನು ಬೋಳಿಸಿಕೊಂಡಿರುವ ಸ್ತ್ರೀಗೂ ಯಾವ ವ್ಯತ್ಯಾಸವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಖರೆ ಟಕ್ಲೆ ಧಾಪಿ ನಸ್ತಾನಾ ಮಾಗ್ನಿ ಕರ್‍ತಾ ನಾಹೊಲ್ಯಾರ್ ಪ್ರವಾದ್ ಕರ್ತಾ, ತಿ ಬಾಯ್ಕೊಮನುಸ್ ಅಪ್ನಾಚ್ಯಾ ಘೊವಾಕ್ ಅವ್ಮಾನ್ ಕರ್‍ತಾ. ತೆನಿ ಟಕ್ಲೆ ಉಗ್ಡೆ ಸೊಡ್ತಲೆಬಿ ಅನಿ ತೆ ತಾಸುನ್ ಘೆಟಲ್ಲೆ ಬಿ ಸಮಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 11:5
8 ತಿಳಿವುಗಳ ಹೋಲಿಕೆ  

ಅವಳು ತಲೆ ಕ್ಷೌರಮಾಡಿಸಿಕೊಂಡು, ಉಗುರುಗಳನ್ನು ಕತ್ತರಿಸಿಕೊಂಡು,


ಅಲ್ಲಿ ಆಶೇರನ ಗೋತ್ರದ ಫನೂಯೇಲನ ಮಗಳಾದ ಅನ್ನಳೆಂಬ ಒಬ್ಬ ಬಹು ಮುಪ್ಪಿನ ಪ್ರವಾದಿನಿಯಿದ್ದಳು. ಅವಳು ಮದುವೆಯಾಗಿ ಗಂಡನೊಂದಿಗೆ ಏಳು ವರ್ಷ ಬಾಳಿದ್ದಳು.


“ದೇವರು ಹೇಳುವುದೇನೆಂದರೆ: ‘ಅಂತ್ಯ ದಿನಗಳಲ್ಲಿ ನನ್ನ ಆತ್ಮವನ್ನು ಎಲ್ಲಾ ಮನುಷ್ಯರ ಮೇಲೆ ಸುರಿಸುವೆನು, ನಿಮ್ಮ ಗಂಡು ಹೆಣ್ಣುಮಕ್ಕಳು ಪ್ರವಾದಿಸುವರು, ನಿಮ್ಮ ಯುವಜನರಿಗೆ ದರ್ಶನಗಳು ಕಾಣುವವು, ನಿಮ್ಮ ಹಿರಿಯರಿಗೆ ಕನಸುಗಳು ಬೀಳುವುವು.


ದೇವಜನರ ಎಲ್ಲಾ ಸಭೆಗಳಲ್ಲಿರುವಂತೆ ಸ್ತ್ರೀಯರು ಸಭೆಯ ಕೂಟಗಳಲ್ಲಿ ಮೌನವಾಗಿರಲಿ. ಏಕೆಂದರೆ ಮಾತನಾಡಲು ಅವರಿಗೆ ಅನುಮತಿಯಿಲ್ಲ, ನಿಯಮವು ಸಹ ಹೇಳಿರುವಂತೆ ಅವರು ಅಧೀನರಾಗಿರಬೇಕು.


ಅವನಿಗೆ ಅವಿವಾಹಿತರಾದ ನಾಲ್ಕು ಮಂದಿ ಹೆಣ್ಣು ಮಕ್ಕಳಿದ್ದರು. ಅವರು ಪ್ರವಾದಿಸುವವರಾಗಿದ್ದರು.


ಬೀಸುವ ಕಲ್ಲನ್ನು ಹಿಡಿದು, ಹಿಟ್ಟನ್ನು ಬೀಸು. ಮುಸುಕನ್ನು ತೆಗೆದುಹಾಕಿ, ನಿನ್ನ ಕಾಲನ್ನು ಬರಿದುಮಾಡಿ, ತೊಡೆಯನ್ನು ಮುಚ್ಚದೆ, ನದಿಗಳನ್ನು ಹಾದುಹೋಗು.


ತನ್ನ ತಲೆಯನ್ನು ಮುಚ್ಚಿಕೊಂಡು ಪ್ರಾರ್ಥನೆ ಮಾಡುವ ಇಲ್ಲವೆ, ಪ್ರವಾದನೆ ಹೇಳುವ ಪ್ರತಿ ಪುರುಷನೂ ತನ್ನ ತಲೆಯನ್ನು ಅವಮಾನಪಡಿಸುತ್ತಾನೆ.


ಸ್ತ್ರೀಯು ಮುಸುಕು ಹಾಕಿಕೊಳ್ಳದೆ ಇದ್ದರೆ, ಆಕೆಯು ಕೂದಲನ್ನು ಕತ್ತರಿಸಿಕೊಳ್ಳಲಿ. ಕೂದಲನ್ನು ಕತ್ತರಿಸಿಕೊಳ್ಳುವುದಾಗಲಿ, ತಲೆ ಬೋಳಿಸಿಕೊಳ್ಳವುದಾಗಲಿ ಸ್ತ್ರೀಗೆ ಅವಮಾನಕರವಾಗಿದ್ದರೆ, ಆಕೆಯು ಮುಸುಕನ್ನು ಹಾಕಿಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು