Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 12:3 - ಕನ್ನಡ ಸಮಕಾಲಿಕ ಅನುವಾದ

3 ಹೀಗಿರುವುದರಿಂದ ನಾನು ನಿಮಗೆ ತಿಳಿಸುವುದನ್ನು ಕೇಳಿರಿ: ದೇವರಾತ್ಮರಿಂದ ಮಾತನಾಡುವ ಯಾವನೂ, “ಯೇಸು ಶಾಪಗ್ರಸ್ತನು,” ಎಂದು ಹೇಳುವುದಿಲ್ಲ. ಪವಿತ್ರಾತ್ಮರಿಂದಲೇ ಹೊರತು, ಯಾವನೂ, “ಯೇಸು ಕರ್ತದೇವರು,” ಎಂದು ಹೇಳಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹೀಗಿರುವುದರಿಂದ ನಾನು ನಿಮಗೆ ತಿಳಿಸುವುದನ್ನು ಕೇಳಿರಿ. ದೇವರಾತ್ಮನ ಪ್ರೇರಣೆಯಿಂದ ಮಾತನಾಡುವ ಯಾವ ಮನುಷ್ಯನಾದರೂ “ಯೇಸುವನ್ನು ಶಾಪಗ್ರಸ್ತನೆಂದು” ಹೇಳುವುದಿಲ್ಲ. ಮತ್ತು ಪವಿತ್ರಾತ್ಮನ ಪ್ರೇರಣೆಯಿಂದಲೇ ಹೊರತು ಯಾವ ಮನುಷ್ಯನಾದರೂ “ಯೇಸುವನ್ನು ಕರ್ತನೆಂದು” ಹೇಳಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇಷ್ಟುಮಾತ್ರ ನಿಮಗೆ ಸ್ಪಷ್ಟವಾಗಿ ತಿಳಿದಿರಲಿ; ಪವಿತ್ರಾತ್ಮ ಪ್ರೇರಣೆಯಿಂದ ಮಾತನಾಡುವ ಯಾವಾತನೂ, “ಯೇಸುವಿಗೆ ಧಿಕ್ಕಾರ!” ಎನ್ನಲಾರನು. ಅಂತೆಯೇ, ಪವಿತ್ರಾತ್ಮ ಪ್ರೇರಣೆಯಿಂದಲ್ಲದೆ ಯಾವಾತನೂ, “ಯೇಸುವೇ ಪ್ರಭು,” ಎಂದು ಒಪ್ಪಿಕೊಳ್ಳಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಹೀಗಿರುವದರಿಂದ ನಾನು ನಿಮಗೆ ತಿಳಿಸುವದನ್ನು ಕೇಳಿರಿ; ದೇವರಾತ್ಮನ ಪ್ರೇರಣೆಯಿಂದ ಮಾತಾಡುವ ಯಾವ ಮನುಷ್ಯನಾದರೂ ಯೇಸುವನ್ನು ಶಾಪಗ್ರಸ್ತನೆಂದು ಹೇಳುವದಿಲ್ಲ, ಮತ್ತು ಪವಿತ್ರಾತ್ಮನ ಪ್ರೇರಣೆಯಿಂದಲೇ ಹೊರತು ಯಾವ ಮನುಷ್ಯನಾದರೂ ಯೇಸುವನ್ನು ಕರ್ತನೆಂದು ಹೇಳಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಹೀಗಿರಲಾಗಿ, ನಾನು ನಿಮಗೆ ಹೇಳುವುದೇನೆಂದರೆ, ದೇವರಾತ್ಮನ ಸಹಾಯದಿಂದ ಮಾತಾಡುವ ಯಾವ ವ್ಯಕ್ತಿಯೇ ಆಗಲಿ, “ಯೇಸು ಶಾಪಗ್ರಸ್ತನಾಗಲಿ” ಎಂದು ಹೇಳುವುದಿಲ್ಲ. ಅಂತೆಯೇ ಪವಿತ್ರಾತ್ಮನ ಸಹಾಯವಿಲ್ಲದೆ ಯಾವ ವ್ಯಕ್ತಿಯೇ ಆಗಲಿ, “ಯೇಸುವೇ ಪ್ರಭು” ಎಂದು ಹೇಳಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಹೆಚ್ಯಾ ಸಾಟ್ನಿ ಮಿಯಾ ತುಮ್ಕಾ ಸಾಂಗ್ತಾ, ದೆವಾಚ್ಯಾ ಆತ್ಮ್ಯಾಚ್ಯಾ ಪ್ರೆರನಾಚ್ಯಾ ವೈನಾ ಬೊಲ್ತಲ್ಲೊ ಕೊನ್‍ಬಿ ಮಾನುಸ್ ಜೆಜು ಸರಾಪ್ ಪಡಲ್ಲೊ ಮನಿನಾ! ತಸೆಚ್ ಪವಿತ್ರ್ ಆತ್ಮ್ಯಾಚೊ ಪ್ರಭಾವ್ ನಸ್ತಾನಾ ಕೊನ್‍ಬಿ ಮಾನುಸ್ “ಜೆಜುಕ್ ಧನಿ” ಮನುನ್ ಸಾಂಗುಕ್ ಸಕಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 12:3
19 ತಿಳಿವುಗಳ ಹೋಲಿಕೆ  

ನಮ್ಮಿಂದಲೇ ಉಂಟಾಯಿತು ಎಂದು ಹೇಳಿಕೊಳ್ಳುವುದಕ್ಕೆ ನಮಗೆ ಯಾವ ಸಾಮರ್ಥ್ಯವೂ ಇಲ್ಲ. ನಮ್ಮ ಸಾಮರ್ಥ್ಯವು ದೇವರಿಂದಲೇ ಬರುತ್ತದೆ.


ನೀನು, “ಯೇಸುವೇ ಕರ್ತ,” ಎಂದು ಬಾಯಿಂದ ಅರಿಕೆಮಾಡಿ, ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದರೆಂದು ಹೃದಯದಲ್ಲಿ ನಂಬಿದರೆ ನೀನು ರಕ್ಷಣೆ ಹೊಂದುವೆ.


ನೀವು ನನ್ನನ್ನು ‘ಬೋಧಕರೇ’ ಮತ್ತು ‘ಕರ್ತಾ’ ಎಂದು ಕರೆಯುತ್ತೀರಿ. ನೀವು ಹೇಳುವುದು ಸರಿ. ಹೌದು, ನಾನು ಅಂಥವನೇ ಆಗಿದ್ದೇನೆ.


ನಮಗಾದರೋ ತಂದೆ ದೇವರು ಒಬ್ಬರೇ ಇರುತ್ತಾರೆ. ಅವರಿಂದಲೇ ಸಮಸ್ತವೂ ಉಂಟಾಯಿತು. ಅವರಿಗಾಗಿಯೇ ನಾವು ಜೀವಿಸುತ್ತೇವೆ. ನಮಗಿರುವ ಕರ್ತದೇವರು ಒಬ್ಬರೇ. ಅವರೇ ಕ್ರಿಸ್ತ ಯೇಸು. ಅವರಿಂದಲೇ ಸಮಸ್ತವೂ ಉಂಟಾಯಿತು. ಅವರ ಮುಖಾಂತರವೇ ನಾವು ಜೀವಿಸುತ್ತೇವೆ.


“ಆದರೂ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಆ ಸಹಾಯಕರೊಬ್ಬರು ನಿಮ್ಮ ಬಳಿಗೆ ಬರುವರು. ಆಗ ತಂದೆಯಿಂದ ಬರುವ ಆ ಸತ್ಯದ ಆತ್ಮವಾಗಿರುವವರೇ ನನ್ನ ವಿಷಯವಾಗಿ ಸಾಕ್ಷಿಕೊಡುವರು.


“ಹಾಗಾದರೆ ದಾವೀದನು ಆತ್ಮದಲ್ಲಿ ಆತನಿಗೆ, ‘ಕರ್ತನು’ ಎಂದು ಕರೆದು,


ಅದಕ್ಕೆ ಯೇಸು, “ಅವನನ್ನು ತಡೆಯಬೇಡಿರಿ; ನನ್ನ ಹೆಸರಿನಲ್ಲಿ ಅದ್ಭುತಕಾರ್ಯವನ್ನು ಮಾಡಿದವನು, ನನ್ನ ವಿಷಯದಲ್ಲಿ ಕೆಟ್ಟದ್ದನ್ನು ಮಾತನಾಡಲಾರನು.


ಯಾವನಾದರೂ ಕರ್ತನನ್ನು ಪ್ರೀತಿಸದಿದ್ದರೆ, ಅವನು ಶಾಪಗ್ರಸ್ತನಾಗಲಿ! ಕರ್ತನೇ, ಬಾ!


ಅವನ ಶವ ರಾತ್ರಿಯಲ್ಲಿ ಮರದ ಮೇಲಿರಬಾರದು. ಅವನನ್ನು ಅದೇ ದಿವಸದಲ್ಲಿ ಹೂಣಬೇಕು. ಏಕೆಂದರೆ ಮರಕ್ಕೆ ತೂಗಹಾಕಲಾದವನು ದೇವರ ಶಾಪವನ್ನು ಹೊಂದಿದವನು. ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು.


ಏಕೆಂದರೆ ಯಾವನಾದರೂ ನಿಮ್ಮ ಬಳಿಗೆ ಬಂದು ನಾನು ನಿಮಗೆ ಬೋಧಿಸದೆ ಇರುವ ಬೇರೊಬ್ಬ ಯೇಸುವಿನ ವಿಷಯ ಬೋಧಿಸಿದರೆ, ನೀವು ಸ್ವೀಕರಿಸುವಿರಿ. ನೀವು ಹೊಂದಿದ ಆತ್ಮನ ಬದಲಿಗೆ ಬೇರೊಂದು ಆತ್ಮವನ್ನು ಪಡೆಯುವಂತೆ ಮಾಡಿದರೆ, ನೀವು ಸ್ವಾಗತಿಸುತ್ತೀರಿ. ನೀವು ಕೇಳಿರುವ ಸುವಾರ್ತೆಯ ಬದಲು ಬೇರೊಂದು ಸುವಾರ್ತೆಯನ್ನು ಯಾರಾದರೂ ಬೋಧಿಸಿದರೆ, ನೀವು ಬೇಗನೇ ಒಪ್ಪಿಕೊಳ್ಳುತ್ತೀರಿ.


ನನ್ನ ಸ್ವಂತ ಜನರಾದ ನನ್ನ ಯೆಹೂದ್ಯ ಸಹೋದರರಿಗಾಗಿ, ಸಾಧ್ಯವಾದರೆ ನಾನೇ ಕ್ರಿಸ್ತ ಯೇಸುವಿನಿಂದ ದೂರಹೋಗಿ ಶಾಪಗ್ರಸ್ತನಾಗಲು ಸಿದ್ಧನಾಗಿದ್ದೇನೆ.


ನಾನು ಕರ್ತ ಯೇಸುವಿನ ದಿನದಲ್ಲಿ ಆತ್ಮಭರಿತನಾಗಿರಲು ನನ್ನ ಹಿಂದೆ ತುತೂರಿಯ ಶಬ್ದದಂತಿರುವ ಮಹಾಧ್ವನಿಯನ್ನು ಕೇಳಿದೆನು.


ಪವಿತ್ರ ವೇದದಲ್ಲಿ, “ಮರಕ್ಕೆ ತೂಗುಹಾಕಲಾದ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಬರೆದಿರುವಂತೆ ಕ್ರಿಸ್ತ ಯೇಸು ಮರಕ್ಕೆ ತೂಗುಹಾಕಲಾಗಿ ನಮಗೋಸ್ಕರ ಶಾಪಗ್ರಸ್ಥರಾಗಿ ನಿಯಮದ ಶಾಪದೊಳಗಿಂದ ನಮ್ಮನ್ನು ವಿಮೋಚಿಸಿದರು.


ಹಾಗಾದರೆ ನಿಮ್ಮ ಕರ್ತನೂ ಬೋಧಕನೂ ಆಗಿರುವ ನಾನೇ ನಿಮ್ಮ ಪಾದಗಳನ್ನು ತೊಳೆದಿರುವಾಗ ನೀವು ಸಹ ಒಬ್ಬರ ಪಾದಗಳನ್ನೊಬ್ಬರು ತೊಳೆಯಬೇಕು.


ಇದು ನನಗೆ ವಿರೋಧವಾಗಿ ಕೇಡು ಮಾತಾಡುವ ನನ್ನ ಎದುರಾಳಿಗಳಿಗೆ ಯೆಹೋವ ದೇವರಿಂದ ಪ್ರತಿಫಲವಾಗಿರಲಿ.


“ನೀನು ಪೂರ್ಣಹೃದಯದಿಂದ ನಂಬಿದರೆ ನಿನಗೆ ದೀಕ್ಷಾಸ್ನಾನವಾಗಬಹುದು,” ಎಂದು ಫಿಲಿಪ್ಪನು ಹೇಳಿದನು. “ಕ್ರಿಸ್ತ ಯೇಸುವೇ ದೇವಪುತ್ರರು ಎಂದು ನಾನು ನಂಬುತ್ತೇನೆ,” ಎಂದು ಕಂಚುಕಿಯು ಪ್ರಕಟಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು