1 ಕೊರಿಂಥದವರಿಗೆ 13:12 - ಕನ್ನಡ ಸಮಕಾಲಿಕ ಅನುವಾದ12 ಈಗ ನಾವು ಕನ್ನಡಿಯಲ್ಲಿ ಮೊಬ್ಬಾಗಿ ನೋಡುತ್ತೇವೆ. ಆಗ ಮುಖಾಮುಖಿಯಾಗಿ ನೋಡುವೆವು. ಈಗ ಸ್ವಲ್ಪ ಮಾತ್ರ ನನಗೆ ತಿಳಿದಿದೆ. ಆಗ ದೇವರು ನನ್ನನ್ನು ಸಂಪೂರ್ಣವಾಗಿ ತಿಳಿದುಕೊಂಡಂತೆ, ನಾನು ಸಂಪೂರ್ಣವಾಗಿ ತಿಳಿದುಕೊಳ್ಳುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಈಗ ಕನ್ನಡಿಯಲ್ಲಿ ಕಾಣಿಸುವಂತೆ ದೇವರ ಮುಖವು ನಮಗೆ ಮೊಬ್ಬಾಗಿ ಕಾಣಿಸುತ್ತದೆ, ಆದರೆ ಆಗ ನೇರವಾಗಿ ಮುಖಾಮುಖಿಯಾಗಿ ಆತನನ್ನು ನೋಡುವೆವು. ಈಗ ಅಪೂರ್ಣವಾಗಿ ನನಗೆ ತಿಳಿದಿದೆ. ಆದರೆ ಆಗ ದೇವರು ನನ್ನನ್ನು ಸಂಪೂರ್ಣವಾಗಿ ತಿಳಿದುಕೊಂಡಂತೆ ನಾನು ಸಂಪೂರ್ಣವಾಗಿ ತಿಳಿದುಕೊಳ್ಳುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನಾವೀಗ ಕಾಂಬುದು ದರ್ಪಣದ ಬಿಂಬವನು ಮುಸುಕಾಗಿ ತರುವಾಯ ಕಾಂಬೆವು ದೇವರನು ಮುಖಾಮುಖಿಯಾಗಿ. ಈಗಿರುವುದೆನ್ನ ಅರಿವು ತುಂಡುತುಂಡಾಗಿ ನಂತರ ದೇವನೆನ್ನ ಅರಿತಂತೆ ಈ ಮೂರಲಿ ನಾನರಿವೆನು ಅಖಂಡವಾಗಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಈಗ ಕಂಚಿನ ದರ್ಪಣದಲ್ಲಿ ಕಾಣಿಸುವಂತೆ [ದೇವರ ಮುಖವು] ನಮಗೆ ಮೊಬ್ಬಾಗಿ ಕಾಣಿಸುತ್ತದೆ; ಆಗ ಮುಖಾಮುಖಿಯಾಗಿ ಆತನನ್ನು ನೋಡುವೆವು. ಈಗ ಸ್ವಲ್ಪ ಮಾತ್ರ ನನಗೆ ತಿಳಿದದೆ; ಆಗ ದೇವರು ನನ್ನನ್ನು ಸಂಪೂರ್ಣವಾಗಿ ತಿಳುಕೊಂಡಂತೆ ನಾನು ಸಂಪೂರ್ಣವಾಗಿ ತಿಳುಕೊಳ್ಳುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಮಗೂ ಸಹ ಇದು ಅನ್ವಯಿಸುತ್ತದೆ. ಕನ್ನಡಿಯಲ್ಲಿ ಕೇವಲ ಪ್ರತಿಬಿಂಬ ಕಾಣುವಂತೆ ಈಗ ನಾವು ನೋಡುತ್ತಿದ್ದೇವೆ. ಆದರೆ ಮುಂದಿನ ಕಾಲದಲ್ಲಿ ನಾವು ಮುಖಾಮುಖಿಯಾಗಿ ಕಾಣುತ್ತೇವೆ. ಈಗ ನನಗೆ ತಿಳಿದಿರುವುದು ಕೇವಲ ಒಂದು ಭಾಗವಷ್ಟೆ, ಆದರೆ ಆ ಕಾಲದಲ್ಲಿ ದೇವರು ನನ್ನನ್ನು ತಿಳಿದಿರುವಂತೆ ನಾನು ಸಂಪೂರ್ಣವಾಗಿ ತಿಳಿದುಕೊಳ್ಳುವೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಖರೆ ಅತ್ತಾ ಅಮ್ಕಾ ಆರ್ಶ್ಯಾತ್ನಾ ರುಪ್ ದಿಸ್ಲೆ ಸಾರ್ಕೆ ದಿಸ್ತಾ; ಖರೆ ಮಾನಾ ಅಮಿ ಮುಖಾ ಮುಖಿ ಬಗ್ತಾವ್; ಅತ್ತಾ ಮಾಕಾ ಉಲ್ಲೆ ಉಲ್ಲೆ ಎವ್ಡೆಚ್ ಗೊತ್ತ್ ಹಾಯ್; ಖರೆ ಮಾನಾ ದೆವ್ ಮಾಕಾ ಕಸೊ ವಳಕ್ತಾ ತಸೆಚ್ ಮಿಯಾ ತೆಕಾ ವಳಕ್ತಾ. ಅಧ್ಯಾಯವನ್ನು ನೋಡಿ |