1 ಕೊರಿಂಥದವರಿಗೆ 13:4 - ಕನ್ನಡ ಸಮಕಾಲಿಕ ಅನುವಾದ4 ಪ್ರೀತಿ ತಾಳ್ಮೆಯುಳ್ಳದ್ದು, ಪ್ರೀತಿ ದಯೆಯುಳ್ಳದ್ದು, ಪ್ರೀತಿ ಅಸೂಯೆಪಡುವುದಿಲ್ಲ, ಪ್ರೀತಿ ಹೊಗಳಿಕೊಳ್ಳುವುದಿಲ್ಲ, ಗರ್ವಪಡುವುದಿಲ್ಲ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಪ್ರೀತಿಯು ಬಹು ತಾಳ್ಮೆಯುಳ್ಳದ್ದು, ದಯೆಯುಳ್ಳದ್ದು. ಪ್ರೀತಿಯು ಹೊಟ್ಟೆಕಿಚ್ಚುಪಡುವುದಿಲ್ಲ, ಹೊಗಳಿಕೊಳ್ಳುವುದಿಲ್ಲ. ಅದು ಗರ್ವಪಡುವುದಿಲ್ಲ, ಅಸಭ್ಯವಾಗಿ ನಡೆಯುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4-6 ಸಹನೆ ಸೈರಣೆ, ದಯೆದಾಕ್ಷಿಣ್ಯ ಪ್ರೀತಿಯಲ್ಲಿವೆ. ಎಡೆಯಿಲ್ಲ ಅದರಲಿ ಗರ್ವಕೆ, ಮರ್ಮಕೆ, ಮೆರೆತಕೆ, ಮತ್ಸರಕೆ, ಸಿಡುಕಿಗೆ, ಸೊಕ್ಕಿಗೆ, ಸ್ವಾರ್ಥಕೆ, ಸೇಡುಗಳೆಣಿಕೆಗೆ. ನಲಿಯದು ಪ್ರೀತಿ ಅನೀತಿಯಲಿ ನಲಿಯದಿರದದು ಸತ್ಯದ ಜಯದಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಪ್ರೀತಿ ಬಹು ತಾಳ್ಮೆಯುಳ್ಳದ್ದು, ಪ್ರೀತಿ ದಯೆ ತೋರಿಸುವದು. ಪ್ರೀತಿಯು ಹೊಟ್ಟೆಕಿಚ್ಚುಪಡುವದಿಲ್ಲ, ಹೊಗಳಿಕೊಳ್ಳುವದಿಲ್ಲ, ಉಬ್ಬಿಕೊಳ್ಳುವದಿಲ್ಲ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಪ್ರೀತಿಯು ತಾಳ್ಮೆಯುಳ್ಳದ್ದು, ದಯೆಯುಳ್ಳದ್ದು. ಪ್ರೀತಿಯು ಅಸೂಯೆಪಡುವುದಿಲ್ಲ; ಹೊಗಳಿಕೊಳ್ಳುವುದಿಲ್ಲ; ಗರ್ವಪಡುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಪ್ರೆಮ್ ಸೊಸುನ್ ಘೆವ್ನ್ ಜಾತಾ, ಪ್ರೆಮ್ ದಯಾಳ್, ಅನಿಎಕ್ಲ್ಯಾಕ್ ಬಗುನ್ ಜಳಿ ನಾ, ಅಪ್ನಾಚಿಚ್ ಬಡಾಯ್ ಬೊಲಿನಾ, ಗರುಕಿನ್ ಭರಿನಾ; ಅಧ್ಯಾಯವನ್ನು ನೋಡಿ |
ಅವರು ನಿಮ್ಮ ಸ್ವರವನ್ನು ಕೇಳದೆಯೂ, ನೀವು ಅವರ ನಡುವೆ ಮಾಡಿದ ಅದ್ಭುತಕಾರ್ಯಗಳನ್ನು ಜ್ಞಾಪಕಮಾಡದೆ ಹೋದರು. ಅವರು ತಮ್ಮ ಹೃದಯವನ್ನು ಕಠಿಣ ಮಾಡಿಕೊಂಡು, ನಿಮಗೆ ಎದುರುಬಿದ್ದು, ತಮ್ಮ ದಾಸತ್ವಕ್ಕೆ ತಿರುಗಿ ಹೋಗುವಹಾಗೆ ನಾಯಕನನ್ನು ನೇಮಿಸಿಕೊಂಡರು. ಆದರೆ ನೀವು ಮನ್ನಿಸುವ ದೇವರಾಗಿಯೂ, ಕೃಪಾಪೂರ್ಣರೂ, ಅನುಕಂಪವುಳ್ಳವರೂ, ದೀರ್ಘಶಾಂತರೂ, ಪ್ರೀತಿಯಲ್ಲಿ ಸಮೃದ್ಧರೂ ಆಗಿರುವುದರಿಂದ ಅವರನ್ನು ಕೈಬಿಡಲಿಲ್ಲ.