Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 14:12 - ಕನ್ನಡ ಸಮಕಾಲಿಕ ಅನುವಾದ

12 ಅದರಂತೆಯೇ, ನೀವು ಸಹ ಆತ್ಮಿಕ ವರಗಳನ್ನು ಬಯಸುವುದರಿಂದ, ಸಭೆಗೆ ಭಕ್ತಿವೃದ್ಧಿ ಉಂಟುಮಾಡುವ ವರಗಳನ್ನೇ ಸಮೃದ್ಧವಾಗಿ ಪ್ರಯತ್ನಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹಾಗೆಯೇ ನೀವು ಆತ್ಮೀಕವಾದ ವರಗಳಿಗಾಗಿ ಅತ್ಯಾಸಕ್ತಿಯುಳ್ಳವರಾಗಿರುವುದರಿಂದ ಸಭೆಗೆ ಹೆಚ್ಚಿನ ಅಭಿವೃದ್ಧಿ ಉಂಟಾಗುವ ಹಾಗೆ ತವಕಪಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆದ್ದರಿಂದ ಪವಿತ್ರಾತ್ಮ ವರಗಳ ಮೇಲೆ ಆಸಕ್ತಿಯುಳ್ಳ ನೀವು, ಧರ್ಮಸಭೆಯನ್ನು ಅಭಿವೃದ್ಧಿಗೊಳಿಸಬಲ್ಲ ವರಗಳ ಮೇಲೆ ಆಸಕ್ತರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಹಾಗೆಯೇ ನೀವೂ ಆತ್ಮಪ್ರೇರಿತವಾದ ನುಡಿಗಳನ್ನಾಡುವದಕ್ಕೆ ಅಪೇಕ್ಷಿಸುವವರಾಗಿರುವದರಿಂದ ಸಭೆಗೆ ಭಕ್ತಿವೃದ್ಧಿ ಉಂಟಾಗುವ ಹಾಗೆ ಅದಕ್ಕಿಂತಲೂ ಹೆಚ್ಚಾದದ್ದನ್ನು ಮಾಡುವದಕ್ಕೆ ಪ್ರಯತ್ನಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಇದು ನಿಮಗೂ ಅನ್ವಯಿಸುತ್ತದೆ. ನೀವು ಆತ್ಮಿಕ ವರಗಳನ್ನು ಬಹಳವಾಗಿ ಅಪೇಕ್ಷಿಸುತ್ತೀರಿ. ಆದ್ದರಿಂದ, ಸಭೆಯು ದೃಢವಾಗಿ ಬೆಳೆಯಲು ಸಹಾಯಕರವಾದ ವರಗಳನ್ನು ಹೊಂದಿಕೊಳ್ಳಲು ಹೆಚ್ಚಾಗಿ ಪ್ರಯತ್ನಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತಸೆಚ್ ತುಮಿಬಿ ಆತ್ಮಿಕ್ ವರಾ ಕಮ್ವುನ್ ಘೆವ್ಚೆ ಮನುನ್ ಹಾಸಿ. ತಸೆ ಮನುನ್ ದೆವಾಚ್ಯಾ ಲೊಕಾಂಚ್ಯಾ ವಾಡಾವಳಿಕ್ ಗರಜ್ ಪಡ್ತಲಿ ವರಾ ಜಾಸ್ತಿಚ್ಯಾ ಮಾಪಾನ್ ಜೊಡುನ್ ಘೆವ್ಕ್ ಕಸ್ರತ್ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 14:12
9 ತಿಳಿವುಗಳ ಹೋಲಿಕೆ  

ಹಾಗಾದರೇನು ಪ್ರಿಯರೇ? ನೀವು ಸಭೆಯಾಗಿ ಕೂಡಿಬರುವಾಗ ಪ್ರತಿಯೊಬ್ಬನಿಗೆ ಕೀರ್ತನೆಯಾಗಲಿ, ಸಂದೇಶವಾಗಲಿ, ಪ್ರಕಟನೆಯಾಗಲಿ, ಅನ್ಯಭಾಷೆಯನ್ನಾಡುವುದಾಗಲಿ, ಅನ್ಯಭಾಷೆಗಳ ಅರ್ಥವನ್ನು ಹೇಳುವ ವರವಾಗಲಿ ಇರುತ್ತದಷ್ಟೆ. ಇವೆಲ್ಲವೂ ಸಭೆಗೆ ಭಕ್ತಿವೃದ್ಧಿಗಾಗಿಯೇ ಇರಲಿ.


ಪ್ರೀತಿಯ ಮಾರ್ಗ ಅನುಸರಿಸಿರಿ, ಆತ್ಮಿಕ ವರಗಳನ್ನು, ವಿಶೇಷವಾಗಿ ಪ್ರವಾದಿಸುವ ವರವನ್ನು ಆಸಕ್ತಿಯಿಂದ ಅಪೇಕ್ಷಿಸಿರಿ.


ಆದರೆ ನೀವು ಆಸಕ್ತಿಯಿಂದ ಶ್ರೇಷ್ಠ ವರಗಳನ್ನು ಅಪೇಕ್ಷಿಸಿರಿ. ನಾನು ನಿಮಗೆ ಇನ್ನೂ ಸರ್ವೋತ್ತಮವಾದ ಮಾರ್ಗವನ್ನು ತೋರಿಸುತ್ತೇನೆ.


ಸರ್ವರ ಪ್ರಯೋಜನಕ್ಕಾಗಿ ಪವಿತ್ರಾತ್ಮರ ವರಗಳನ್ನು ಪ್ರತಿಯೊಬ್ಬರಿಗೆ ಕೊಡಲಾಗಿದೆ.


ಕ್ರಿಸ್ತ ಯೇಸು ನಮ್ಮನ್ನು ಎಲ್ಲಾ ದುಷ್ಟತನದಿಂದ ವಿಮೋಚಿಸಿ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಂತ ಜನರನ್ನು ತಮಗಾಗಿ ಪರಿಶುದ್ಧ ಮಾಡುವಂತೆ ನಮಗೋಸ್ಕರ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು.


ಆದ್ದರಿಂದ ಯಾವುದು ನಮ್ಮನ್ನು ಸಮಾಧಾನಕ್ಕೂ ಪರಸ್ಪರ ಭಕ್ತಿವೃದ್ಧಿಗೂ ನಡೆಸುತ್ತದೋ ಅದನ್ನೇ ಮಾಡೋಣ.


ನೀವೆಲ್ಲರೂ ಅನ್ಯಭಾಷೆಗಳನ್ನಾಡಬೇಕೆಂದು ಈಗ ನಾನು ಅಪೇಕ್ಷಿಸಿದರೂ, ಅದಕ್ಕಿಂತ ಹೆಚ್ಚಾಗಿ ನೀವು ಪ್ರವಾದಿಸಬೇಕೆಂದು ಅಪೇಕ್ಷಿಸುತ್ತೇನೆ. ಅನ್ಯಭಾಷೆಗಳನ್ನಾಡುವವನು ಸಭೆಗೆ ಭಕ್ತಿವೃದ್ಧಿಯಾಗುವಂತೆ ಅದರ ಅರ್ಥವನ್ನು ಹೇಳದೆ ಹೋದರೆ, ಅವನಿಗಿಂತ ಪ್ರವಾದಿಸುವವನೇ ಶ್ರೇಷ್ಠನು.


ಆದ್ದರಿಂದ, ಅನ್ಯಭಾಷೆಗಳನ್ನಾಡುವವನು ತಾನಾಡುವ ಮಾತಿನ ಅರ್ಥವನ್ನು ಹೇಳುವುದಕ್ಕೆ ದೇವರನ್ನು ಪ್ರಾರ್ಥಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು