Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 14:15 - ಕನ್ನಡ ಸಮಕಾಲಿಕ ಅನುವಾದ

15 ಹಾಗಾದರೇನು? ನಾನು ಆತ್ಮದಿಂದ ಪ್ರಾರ್ಥಿಸುವೆನು, ಬುದ್ಧಿಯಿಂದಲೂ ಪ್ರಾರ್ಥಿಸುವೆನು. ಆತ್ಮದಿಂದ ಹಾಡುವೆನು, ಬುದ್ಧಿಯಿಂದಲೂ ಹಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದ್ದರಿಂದ ನಾನಾದರೋ ಆತ್ಮನಿಂದಲೂ ಪ್ರಾರ್ಥಿಸುವೆನು, ಬುದ್ಧಿಯಿಂದಲೂ ಪ್ರಾರ್ಥಿಸುವೆನು; ಆತ್ಮನಿಂದ ಹಾಡುವೆನು, ಬುದ್ಧಿಯಿಂದಲೂ ಹಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಹಾಗಾದರೆ ಈಗ ನಾನೇನು ಮಾಡಬೇಕು? ಆತ್ಮದಿಂದಲೂ ಪ್ರಾರ್ಥಿಸಬೇಕು, ಮನಸ್ಸಿನಿಂದಲೂ ಪ್ರಾರ್ಥಿಸಬೇಕು, ಆತ್ಮದಿಂದಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಹಾಗಾದರೇನು? ನಾನು ಆತ್ಮದಿಂದ ಪ್ರಾರ್ಥಿಸುವೆನು, ಬುದ್ಧಿಯಿಂದಲೂ ಪ್ರಾರ್ಥಿಸುವೆನು; ಆತ್ಮದಿಂದ ಹಾಡುವೆನು, ಬುದ್ಧಿಯಿಂದಲೂ ಹಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದ್ದರಿಂದ ನಾನೇನು ಮಾಡಬೇಕು? ನಾನು ನನ್ನ ಆತ್ಮದಿಂದಲೂ ಮನಸ್ಸಿನಿಂದಲೂ ಪ್ರಾರ್ಥಿಸುವೆನು; ನನ್ನ ಜೀವಾತ್ಮದೊಂದಿಗೂ ಮನಸ್ಸಿನೊಂದಿಗೂ ಹಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತಸೆ ಹೊಲ್ಯಾರ್ ಮಿಯಾ ಕಾಯ್ ಕರು? ಮಿಯಾ ಮಾಜ್ಯಾ ಆತ್ಮ್ಯಾನ್ ಮಾಗ್ನೆ ಕರ್‍ತಾ ಅನಿ ಮಾಜ್ಯಾ ಸಮ್ಜನಿನ್‍ಬಿ ಮಾಗ್ನೆ ಕರ್‍ತಾ, ಮಾಜ್ಯಾ ಆತ್ಮ್ಯಾನ್ ಮಿಯಾ ಗಿತ್ ಗಾವ್ತಾ, ಮನಾನ್‍ಬಿ ಗಿತ್ ಗಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 14:15
17 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸುವಿನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಆ ವಾಕ್ಯದಿಂದಲೇ, ನೀವು ಸಕಲ ಜ್ಞಾನದಲ್ಲಿ ಕೃತಜ್ಞತೆಯೊಂದಿಗೆ ನಿಮ್ಮ ಹೃದಯಗಳಲ್ಲಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಿಕ ಹಾಡುಗಳಿಂದಲೂ ಕರ್ತ ಯೇಸುವನ್ನು ಕೊಂಡಾಡುತ್ತಾ ಒಬ್ಬರಿಗೊಬ್ಬರು ಉಪದೇಶಿಸುತ್ತಾ, ಬುದ್ಧಿ ಹೇಳುತ್ತಾ ಇರಿ.


ನೀವು ಪವಿತ್ರಾತ್ಮ ದೇವರಲ್ಲಿ ಎಲ್ಲಾ ಸಮಯಗಳಲ್ಲಿಯೂ ಸಕಲ ವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಕರ್ತನ ಜನರೆಲ್ಲರಿಗಾಗಿ ಪ್ರಾರ್ಥನೆ ಮಾಡುತ್ತಾ ಎಚ್ಚರವಾಗಿರಿ.


ಪ್ರಿಯರೇ, ನೀವಾದರೋ ನಿಮಗಿರುವ ಅತಿಪರಿಶುದ್ಧವಾದ ನಂಬಿಕೆಯಲ್ಲಿ ನಿಮ್ಮನ್ನು ನಿರ್ಮಿಸಿಕೊಂಡವರಾಗಿ ಪರಿಶುದ್ಧಾತ್ಮ ದೇವರಲ್ಲಿ ಪ್ರಾರ್ಥಿಸಿರಿ.


ಏಕೆಂದರೆ, ದೇವರು ಭೂಮಿಗೆಲ್ಲಾ ಮಹಾರಾಜರು. ದೇವರನ್ನು ಸ್ತೋತ್ರದ ಕೀರ್ತನೆಯಿಂದ ಕೀರ್ತಿಸಿರಿ.


ಆದರೂ ಸಭೆಯಲ್ಲಿ ಅನ್ಯಭಾಷೆಗಳಿಂದ ಹತ್ತು ಸಾವಿರ ಮಾತುಗಳನ್ನಾಡುವುದಕ್ಕಿಂತ, ನನ್ನ ಬುದ್ಧಿಯಿಂದ ಐದೇ ಮಾತುಗಳನ್ನಾಡಿ, ಇತರರಿಗೆ ಉಪದೇಶ ಮಾಡುವುದನ್ನೇ ನಾನು ಇಷ್ಟಪಡುತ್ತೇನೆ.


ಹಾಗಾದರೆ ನಾನು ಹೇಳುವುದೇನು? ವಿಗ್ರಹಕ್ಕೆ ಅರ್ಪಿಸಿದ್ದು ಅಥವಾ ವಿಗ್ರಹಕ್ಕೆ ಏನಾದರೂ ಮಹತ್ವವಿರುತ್ತದೆಯೋ? ನಿಶ್ಚಯವಾಗಿಯೂ ಇಲ್ಲ.


ಹೀಗೆ ನಮ್ಮ ಅನೀತಿಯೂ ದೇವರ ನೀತಿಯನ್ನು ಪ್ರಸಿದ್ಧಿಗೆ ತರುವುದಾದರೆ, ಕೋಪವನ್ನು ಸುರಿಸುವ ದೇವರು ಅನ್ಯಾಯಗಾರರೇನು? ನಾನು ಮಾನವ ರೀತಿಯಲ್ಲಿ ಮಾತನಾಡಿದ್ದೇನೆ.


ದೇವಪುತ್ರನ ಸುವಾರ್ತೆಯನ್ನು ಸಾರುವುದರಿಂದ ದೇವರನ್ನೇ ನನ್ನ ಆತ್ಮದಲ್ಲಿ ಸೇವೆ ಮಾಡುವವನಾಗಿದ್ದೇನೆ. ಇದಕ್ಕೆ ದೇವರೇ ನನ್ನ ಸಾಕ್ಷಿ.


ಹೇಗಾದರೇನು? ಕಪಟದಿಂದಾಗಲಿ, ಸತ್ಯದಿಂದಾಗಲಿ ಯಾವ ರೀತಿಯಿಂದಾದರೂ ಕ್ರಿಸ್ತನನ್ನು ಅವರು ಸಾರುತ್ತಿರುವುದೇ ನನಗೆ ಸಂತೋಷ. ಹೌದು ಮುಂದೆಯೂ ಸಂತೋಷಿಸುವೆನು.


ಹಾಗಾದರೆ, ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಪರವಾಗಿ ಇದ್ದರೆ ನಮ್ಮನ್ನು ವಿರೋಧಿಸುವವರು ಯಾರು?


ಹೀಗಿರುವಲ್ಲಿ ನಾವೇನು ಮಾಡೋಣ? ನೀನು ಇಲ್ಲಿಗೆ ಬಂದಿರುವ ವಿಷಯವೂ ಅವರಿಗೆ ಗೊತ್ತಾಗುವುದು.


ಏಕೆಂದರೆ ನಾನು ಅನ್ಯಭಾಷೆಗಳಲ್ಲಿ ಪ್ರಾರ್ಥಿಸಿದರೆ, ನನ್ನ ಆತ್ಮವು ಪ್ರಾರ್ಥಿಸುವುದು. ಆದರೆ ನನ್ನ ಬುದ್ಧಿ ನಿಷ್ಫಲವಾಗಿರುವುದು.


ಹಾಗಾದರೇನು ಪ್ರಿಯರೇ? ನೀವು ಸಭೆಯಾಗಿ ಕೂಡಿಬರುವಾಗ ಪ್ರತಿಯೊಬ್ಬನಿಗೆ ಕೀರ್ತನೆಯಾಗಲಿ, ಸಂದೇಶವಾಗಲಿ, ಪ್ರಕಟನೆಯಾಗಲಿ, ಅನ್ಯಭಾಷೆಯನ್ನಾಡುವುದಾಗಲಿ, ಅನ್ಯಭಾಷೆಗಳ ಅರ್ಥವನ್ನು ಹೇಳುವ ವರವಾಗಲಿ ಇರುತ್ತದಷ್ಟೆ. ಇವೆಲ್ಲವೂ ಸಭೆಗೆ ಭಕ್ತಿವೃದ್ಧಿಗಾಗಿಯೇ ಇರಲಿ.


ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದಾನೋ? ಅವನು ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷ ಪಡುವವನಿದ್ದಾನೋ? ಅವನು ಕೀರ್ತನೆಗಳನ್ನು ಹಾಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು