Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 14:2 - ಕನ್ನಡ ಸಮಕಾಲಿಕ ಅನುವಾದ

2 ಅನ್ಯಭಾಷೆಗಳನ್ನು ಆಡುವವನು ಮನುಷ್ಯರ ಸಂಗಡವಲ್ಲ, ದೇವರೊಂದಿಗೆ ಮಾತನಾಡುತ್ತಾನೆ. ಅವನು ಮಾತನಾಡುವುದನ್ನು ಯಾರೂ ಅರ್ಥಮಾಡಿಕೊಳ್ಳುವುದಿಲ್ಲ. ಏಕೆಂದರೆ ಅವನು ಆತ್ಮದಲ್ಲಿ ರಹಸ್ಯಗಳನ್ನು ಮಾತನಾಡುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅನ್ಯಭಾಷೆಗಳನ್ನಾಡುವವನು ದೇವರ ಸಂಗಡ ಮಾತನಾಡುತ್ತಾನೆಯೇ ಹೊರತು ಮನುಷ್ಯರ ಸಂಗಡ ಅಲ್ಲ. ಅವನು ಆತ್ಮ ಪ್ರೇರಿತನಾಗಿ ಗುಪ್ತ ವಿಷಯಗಳನ್ನಾಡುತ್ತಾನೆ. ಅವನು ಮಾತನಾಡುವ ಮಾತುಗಳನ್ನು ಯಾರೂ ಅರ್ಥಮಾಡಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಪರವಶಾಭಾಷೆಯನ್ನು ಆಡುವವನು ಮಾನವನೊಡನಲ್ಲ, ದೇವರೊಡನೆ ಮಾತನಾಡುತ್ತಾನೆ. ಪವಿತ್ರಾತ್ಮರ ಪ್ರೇರಣೆಯಿಂದ ನಿಗೂಢ ವಿಷಯಗಳ ಬಗ್ಗೆ ಮಾತನಾಡುವುದರಿಂದ ಯಾರೂ ಆತನ ಮಾತನ್ನು ಅರ್ಥಮಾಡಿಕೊಳ್ಳಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ವಾಣಿಯನ್ನಾಡುವವನು ದೇವರ ಸಂಗಡ ಮಾತಾಡುತ್ತಾನೆ ಹೊರತು ಮನುಷ್ಯರ ಸಂಗಡ ಆಡುವದಿಲ್ಲ. ಅವನು ಆತ್ಮಪ್ರೇರಿತನಾಗಿ ರಹಸ್ಯಾರ್ಥಗಳನ್ನು ನುಡಿಯುತ್ತಿದ್ದರೂ ಯಾರೂ ತಿಳುಕೊಳ್ಳುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅದಕ್ಕೆ ಕಾರಣವೇನೆಂದರೆ: ಪರಭಾಷೆಯಲ್ಲಿ ಮಾತಾಡುವ ವರವನ್ನು ಹೊಂದಿರುವವನು ಜನರೊಂದಿಗೆ ಮಾತಾಡುವುದಿಲ್ಲ. ಅವನು ದೇವರೊಂದಿಗೆ ಮಾತಾಡುತ್ತಾನೆ. ಯಾರೂ ಅವನನ್ನು ಅರ್ಥಮಾಡಿಕೊಳ್ಳುವುದಿಲ್ಲ. ಏಕೆಂದರೆ ಅವನು ಪವಿತ್ರಾತ್ಮನ ಮೂಲಕವಾಗಿ ರಹಸ್ಯ ಸಂಗತಿಗಳನ್ನು ಮಾತಾಡುತ್ತಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಕಶ್ಯಾಕ್ ಮಟ್ಲ್ಯಾರ್ ದುಸ್ರ್ಯಾ, ದುಸ್ರ್ಯಾ ಬಾಶಾನಿ ಬೊಲ್ತಾ ತೊ ದೆವಾಕ್ಡೆ ಬೊಲ್ತಾ ಸಿವಾಯ್ ಮಾನ್ಸಾಕ್ಡೆ ಬೊಲಿನಾ; ಆತ್ಮ್ಯಾಚ್ಯಾ ವೈನಾ ಪ್ರೆರಿತ್ ಹೊವ್ನ್ ಘುಟಾನ್ ಹೊತ್ತಿ ಸಂಗ್ತಿಯಾ ತೊ ಬೊಲ್ತಾ, ಜಾಲ್ಯಾರ್ಬಿ ತೊ ಬೊಲ್ತಾ ತೆ ಕೊನಾಕ್ಬಿ ಕಳಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 14:2
33 ತಿಳಿವುಗಳ ಹೋಲಿಕೆ  

ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವುವು: ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಓಡಿಸುವರು, ಅವರು ಹೊಸ ಭಾಷೆಗಳಲ್ಲಿ ಮಾತನಾಡುವರು.


ಪೌಲನು ಅವರ ಮೇಲೆ ತನ್ನ ಕೈಗಳನ್ನಿಡಲು, ಅವರ ಮೇಲೆ ಪವಿತ್ರಾತ್ಮ ಬಂದರು. ಆಗ ಅವರು ಅನ್ಯಭಾಷೆಗಳಲ್ಲಿ ಮಾತನಾಡಿದರು ಹಾಗೂ ಪ್ರವಾದಿಸಿದರು.


ಏಕೆಂದರೆ ಅವರು ಅನ್ಯಭಾಷೆಗಳಲ್ಲಿ ಮಾತನಾಡುತ್ತಾ ದೇವರನ್ನು ಕೊಂಡಾಡುತ್ತಿದ್ದುದನ್ನು ಅವರು ಕೇಳಿಸಿಕೊಂಡರು, ಆಗ ಪೇತ್ರನು,


ನನಗೆ ಪ್ರವಾದನ ವರವಿದ್ದರೂ ನಾನು ಎಲ್ಲಾ ರಹಸ್ಯಗಳನ್ನೂ, ಸಕಲ ವಿದ್ಯೆಯನ್ನು ತಿಳಿದಿದ್ದರೂ ಬೆಟ್ಟಗಳನ್ನು ಕದಲಿಸುವಷ್ಟು ನಂಬಿಕೆಯಿದ್ದರೂ ನನಗೆ ಪ್ರೀತಿಯಿಲ್ಲದಿದ್ದರೆ, ಶೂನ್ಯನಾಗಿದ್ದೇನೆ.


ನಮಗಾದರೋ ದೇವರು ತಮ್ಮ ಪವಿತ್ರಾತ್ಮರ ಮೂಲಕ ಇವುಗಳನ್ನು ಪ್ರಕಟಿಸಿದ್ದಾರೆ. ಪವಿತ್ರಾತ್ಮರು ಎಲ್ಲಾ ವಿಷಯಗಳನ್ನು ಹಾಗೂ ದೇವರ ಆಳವಾದ ರಹಸ್ಯಗಳನ್ನು ಪರಿಶೋಧಿಸುವವರಾಗಿದ್ದಾರೆ.


ಆದರೆ ಏಳನೆಯ ದೇವದೂತನು ತನ್ನ ತುತೂರಿಯನ್ನು ಊದಬೇಕೆಂದಿರುವ ದಿನಗಳಲ್ಲಿ ದೇವರು ತನ್ನ ಸೇವಕರಾದ ಪ್ರವಾದಿಗಳಿಗೆ ಪ್ರಕಟಿಸಿದಂತೆಯೇ, ದೇವರ ರಹಸ್ಯವು ನೆರವೇರುವುದು.”


ಎಲ್ಲಾ ಪ್ರಶ್ನೆಗಳಿಂದ ಹೆಚ್ಚಾಗಿ ದೈವ ಭಕ್ತಿಯ ರಹಸ್ಯವು ದೊಡ್ಡದಾದದ್ದು ಅದು ಯಾವುದೆಂದರೆ: “ದೇವರು ಮನುಷ್ಯ ರೂಪದಲ್ಲಿ ಪ್ರತ್ಯಕ್ಷರಾದರು. ಆತ್ಮದಲ್ಲಿ ರುಜುಪಡಿಸಲಾದರು. ದೂತರಿಗೆ ಕಾಣಿಸಿಕೊಂಡರು, ಯೆಹೂದ್ಯರಲ್ಲದವರಿಗೆ ಸಾರಲಾದರು, ಲೋಕದಲ್ಲಿ ನಂಬಲಾದರು, ಮಹಿಮೆಗೆ ಒಯ್ಯಲಾದರು!”


ನಂಬಿಕೆಯ ರಹಸ್ಯವನ್ನು ಶುದ್ಧಮನಸ್ಸಾಕ್ಷಿಯಿಂದ ಹಿಡಿದುಕೊಂಡವರಾಗಿರಬೇಕು.


ಅವರು ಹೃದಯದಲ್ಲಿ ಉತ್ತೇಜನಗೊಂಡು, ಪ್ರೀತಿಯಲ್ಲಿ ಒಂದಾಗಿ, ದೇವರ ರಹಸ್ಯವಾಗಿರುವ ಕ್ರಿಸ್ತ ಯೇಸುವನ್ನು ತಿಳಿದುಕೊಳ್ಳುವಂತೆ ಪೂರ್ಣಜ್ಞಾನದ ಸರ್ವ ಐಶ್ವರ್ಯವನ್ನು ದೃಢವಾಗಿ ಹೊಂದಬೇಕೆಂಬುದೇ ನನ್ನ ಗುರಿಯಾಗಿದೆ.


ನಾನು ಬಾಯಿ ತೆರೆಯುವಾಗ ಸುವಾರ್ತೆಯ ರಹಸ್ಯವನ್ನು ಧೈರ್ಯವಾಗಿ ತಿಳಿಯಪಡಿಸುವುದಕ್ಕೆ ಮಾತನ್ನು ನನಗೆ ದಯಪಾಲಿಸಬೇಕೆಂದು ಪ್ರಾರ್ಥಿಸಿರಿ.


ನಾನು ರಹಸ್ಯವಾಗಿದ್ದ ಸಂಗತಿಯನ್ನು ನಿಮಗೆ ಹೇಳುತ್ತೇನೆ ಕೇಳಿರಿ: ನಾವೆಲ್ಲರೂ ನಿದ್ರೆ ಹೋಗುವುದಿಲ್ಲ, ನಾವೆಲ್ಲರೂ ರೂಪಾಂತರವಾಗುವೆವು.


ನಾವು ದೇವರ ರಹಸ್ಯ ಜ್ಞಾನವನ್ನು ಕುರಿತು ಮಾತನಾಡುತ್ತೇವೆ. ಅದು ದೇವರು ನಮ್ಮ ಮಹಿಮೆಗಾಗಿ ಯುಗಗಳ ಮುಂಚೆಯೇ ನೇಮಿಸಿ, ಮರೆಮಾಡಿದ ಜ್ಞಾನವೇ ಆಗಿರುತ್ತದೆ.


ನನ್ನ ಸುವಾರ್ತೆಯು ಹೇಳುವಂತೆಯೇ ನಿಮ್ಮನ್ನು ಬಲಪಡಿಸುವ ದೇವರಿಗೆ ಈಗ ಎಲ್ಲಾ ಮಹಿಮೆಯಾಗಲಿ. ಕ್ರಿಸ್ತ ಯೇಸುವಿನ ಕುರಿತಾಗಿರುವ ಈ ಸಂದೇಶವು ಆದಿಯಿಂದಲೂ ಗುಪ್ತವಾಗಿರುವ ರಹಸ್ಯದ ದೇವರ ಯೋಜನೆಯು ಯೆಹೂದ್ಯರಲ್ಲದವರಾದ ನಿಮಗಾಗಿ ಈಗ ಪ್ರಕಟವಾಗಿದೆ.


ನನ್ನ ಜೊತೆಯಲ್ಲಿದ್ದವರು ಬೆಳಕನ್ನು ಕಂಡರು. ಆದರೆ ನನ್ನ ಕೂಡ ಮಾತನಾಡುತ್ತಿದ್ದ ಸ್ವರವು ಅವರಿಗೆ ಕೇಳಿಸಲಿಲ್ಲ.


ಅದಕ್ಕೆ ಯೇಸು, “ದೇವರ ರಾಜ್ಯದ ರಹಸ್ಯವನ್ನು ತಿಳಿದುಕೊಳ್ಳುವ ಜ್ಞಾನ ನಿಮಗೆ ಕೊಡಲಾಗಿದೆ. ಆದರೆ ಹೊರಗಿನವರಿಗೆ ಎಲ್ಲವೂ ಸಾಮ್ಯದ ರೂಪದಲ್ಲಿ ಹೇಳಲಾಗಿದೆ.


ಯೇಸು ಅದಕ್ಕೆ ಉತ್ತರವಾಗಿ ಹೇಳಿದ್ದು: “ಪರಲೋಕ ರಾಜ್ಯದ ರಹಸ್ಯಗಳನ್ನು ತಿಳಿದುಕೊಳ್ಳುವ ಜ್ಞಾನವು ನಿಮಗೆ ಕೊಡಲಾಗಿದೆ, ಆದರೆ ಅವರಿಗಲ್ಲ.


ನಾನು ಸಾಮ್ಯವನ್ನು ಹೇಳಲು ನನ್ನ ಬಾಯಿ ತೆರೆಯುವೆನು. ಪೂರ್ವದಿಂದಿರುವ ಗುಪ್ತವಾದವುಗಳನ್ನು ನುಡಿಯುವೆನು.


ಯೆಹೋವ ದೇವರು ದೂರದಿಂದ ಅಂದರೆ, ಭೂಮಿಯ ಕೊನೆಯಿಂದ ರಣಹದ್ದು ಹೇಗೆ ಹಾರಿಬರುವುದೋ ಹಾಗೆಯೇ, ನಿಮಗೆ ತಿಳಿಯದ ಭಾಷೆಯನ್ನಾಡುವ ಒಂದು ಜನಾಂಗವನ್ನು ನಿಮ್ಮ ಮೇಲೆ ಬರುವಂತೆ ಮಾಡುವರು.


ಆದರೆ ಯೋಸೇಫನು ಅವರು ಆಡಿದ್ದನ್ನು ತಿಳಿದುಕೊಳ್ಳುತ್ತಿದ್ದನು ಎಂಬುದು ಅವರಿಗೆ ಗೊತ್ತಾಗಲಿಲ್ಲ. ಏಕೆಂದರೆ ಯೋಸೇಫನು ಅನುವಾದಕನ ಮುಖಾಂತರ ಅವರ ಸಂಗಡ ಮಾತಾಡುತ್ತಿದ್ದನು.


ನಾವು ಇಳಿದು ಹೋಗಿ, ಇವರು ಒಬ್ಬರ ಮಾತನ್ನು ಒಬ್ಬರು ತಿಳಿಯದಂತೆ, ಇವರ ಭಾಷೆಯನ್ನು ಗಲಿಬಿಲಿ ಮಾಡೋಣ,” ಎಂದರು.


ನೀನು ಆತ್ಮದಲ್ಲಿ ಮಾತ್ರ ಸ್ತೋತ್ರ ಮಾಡಿದರೆ, ತಿಳುವಳಿಕೆ ಇಲ್ಲದೆ ಕುಳಿತಿರುವವನು ನಿನ್ನ ಕೃತಜ್ಞತಾಸ್ತುತಿಗೆ, “ಆಮೆನ್” ಎಂದು ಹೇಳುವುದು ಹೇಗೆ?


ಆಗ ಹಿಲ್ಕೀಯನ ಮಗ ಎಲ್ಯಾಕೀಮ್, ಶೆಬ್ನ, ಯೋವ ಎಂಬುವರು ರಬ್ಷಾಕೆಗೆ, “ನೀನು ಮಾತನಾಡುವುದು ಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ ಆದ್ದರಿಂದ ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಅರಾಮ್ಯ ಭಾಷೆಯಲ್ಲಿ ಮಾತನಾಡು: ಅದು ನಮಗೆ ತಿಳಿಯುತ್ತದೆ ಆದರೆ ಹಿಬ್ರಿಯ ಭಾಷೆಯಲ್ಲಿ ಮಾತನಾಡಬೇಡ,” ಎಂದು ಹೇಳಿದರು.


ಒಬ್ಬನಿಗೆ ಅದ್ಭುತಕಾರ್ಯಗಳ ಶಕ್ತಿಯೂ ಒಬ್ಬನಿಗೆ ಪ್ರವಾದನೆಯೂ ಒಬ್ಬನಿಗೆ ಆತ್ಮಗಳನ್ನು ವಿವೇಚಿಸುವ ವರವೂ ಒಬ್ಬನಿಗೆ ವಿವಿಧ ಭಾಷೆಗಳನ್ನಾಡುವ ಶಕ್ತಿಯೂ ಮತ್ತೊಬ್ಬನಿಗೆ ಅನ್ಯಭಾಷೆಗಳ ಅರ್ಥವನ್ನು ಹೇಳುವ ವರವೂ ಕೊಡಲಾಗುತ್ತದೆ.


ದೇವರು ತಮ್ಮ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ನೇಮಿಸಿದ್ದಾರೆ. ಅನಂತರ ಅದ್ಭುತಕಾರ್ಯಗಳನ್ನು ಮಾಡುವವರನ್ನು, ರೋಗಗಳನ್ನು ಗುಣಪಡಿಸುವ ವರವನ್ನು, ಪರೋಪಕಾರಿಗಳನ್ನು, ಆಡಳಿತಗಾರರನ್ನು, ವಿವಿಧ ವಾಣಿಗಳನ್ನಾಡುವವರನ್ನು ನೇಮಿಸಿದ್ದಾರೆ.


ನಾನು ಮನುಷ್ಯರ ಭಾಷೆಗಳನ್ನೂ, ದೇವದೂತರ ಭಾಷೆಗಳನ್ನೂ ಮಾತನಾಡುವವನಾದರೂ ನನಗೆ ಪ್ರೀತಿಯಿಲ್ಲದಿದ್ದರೆ, ನಾದ ಕೊಡುವ ಕಂಚೂ ಗಣಗಣಿಸುವ ತಾಳವೂ ಆಗಿದ್ದೇನೆ.


ಹಾಗಾದರೇನು ಪ್ರಿಯರೇ? ನೀವು ಸಭೆಯಾಗಿ ಕೂಡಿಬರುವಾಗ ಪ್ರತಿಯೊಬ್ಬನಿಗೆ ಕೀರ್ತನೆಯಾಗಲಿ, ಸಂದೇಶವಾಗಲಿ, ಪ್ರಕಟನೆಯಾಗಲಿ, ಅನ್ಯಭಾಷೆಯನ್ನಾಡುವುದಾಗಲಿ, ಅನ್ಯಭಾಷೆಗಳ ಅರ್ಥವನ್ನು ಹೇಳುವ ವರವಾಗಲಿ ಇರುತ್ತದಷ್ಟೆ. ಇವೆಲ್ಲವೂ ಸಭೆಗೆ ಭಕ್ತಿವೃದ್ಧಿಗಾಗಿಯೇ ಇರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು