1 ಕೊರಿಂಥದವರಿಗೆ 14:26 - ಕನ್ನಡ ಸಮಕಾಲಿಕ ಅನುವಾದ26 ಹಾಗಾದರೇನು ಪ್ರಿಯರೇ? ನೀವು ಸಭೆಯಾಗಿ ಕೂಡಿಬರುವಾಗ ಪ್ರತಿಯೊಬ್ಬನಿಗೆ ಕೀರ್ತನೆಯಾಗಲಿ, ಸಂದೇಶವಾಗಲಿ, ಪ್ರಕಟನೆಯಾಗಲಿ, ಅನ್ಯಭಾಷೆಯನ್ನಾಡುವುದಾಗಲಿ, ಅನ್ಯಭಾಷೆಗಳ ಅರ್ಥವನ್ನು ಹೇಳುವ ವರವಾಗಲಿ ಇರುತ್ತದಷ್ಟೆ. ಇವೆಲ್ಲವೂ ಸಭೆಗೆ ಭಕ್ತಿವೃದ್ಧಿಗಾಗಿಯೇ ಇರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಹಾಗಾದರೇನು, ಸಹೋದರರೇ? ನೀವು ಸಭೆಯಲ್ಲಿ ಸೇರಿಬರುವಾಗ ಒಬ್ಬನು ಹಾಡುವುದೂ, ಒಬ್ಬನು ಉಪದೇಶಮಾಡುವುದೂ, ಒಬ್ಬನು ತನಗೆ ಪ್ರಕಟವಾದದ್ದನ್ನು ತಿಳಿಸುವುದೂ, ಇನ್ನೂ ಒಬ್ಬನು ಅನ್ಯಭಾಷೆಯನ್ನಾಡುವುದೂ, ಒಬ್ಬನು ಅದರ ಅರ್ಥವನ್ನು ಹೇಳುವುದುಂಟು. ನೀವು ಏನು ಮಾಡಿದರೂ ಸಭೆಯ ಭಕ್ತಿವೃದ್ಧಿಗಾಗಿಯೇ ಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಹಾಗಾದರೆ ಪ್ರಿಯ ಸಹೋದರರೇ, ನಾವು ನಡೆದುಕೊಳ್ಳಬೇಕಾದ ಬಗೆ ಹೇಗೆ? ನೀವು ಸಭೆ ಸೇರಿದಾಗ ನಿಮ್ಮಲ್ಲಿ ಒಬ್ಬನು ಹಾಡುತ್ತಾನೆ; ಇನ್ನೊಬ್ಬನು ಉಪದೇಶ ಮಾಡುತ್ತಾನೆ; ಮತ್ತೊಬ್ಬನು ದೇವರು ತನಗೆ ಶ್ರುತಪಡಿಸಿದ್ದನ್ನು ತಿಳಿಸುತ್ತಾನೆ; ಇನ್ನೂ ಒಬ್ಬನು ಪರವಶಾಭಾಷೆಯನ್ನಾಡುತ್ತಾನೆ; ಮಗದೊಬ್ಬನು ಅದಕ್ಕೆ ಅರ್ಥ ಹೇಳುತ್ತಾನೆ ಎಂದಿಟ್ಟುಕೊಳ್ಳೋಣ. ನೀವು ಏನು ಮಾಡಿದರೂ ಧರ್ಮಸಭೆಯ ಅಭಿವೃದ್ಧಿಗಾಗಿಯೇ ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಹಾಗಾದರೇನು, ಸಹೋದರರೇ? ನೀವು ಕೂಡಿ ಬಂದಿರುವಾಗ ಒಬ್ಬನು ಹಾಡುವದೂ, ಒಬ್ಬನು ಉಪದೇಶಮಾಡುವದೂ, ಒಬ್ಬನು ತನಗೆ ಪ್ರಕಟವಾದದ್ದನ್ನು ತಿಳಿಸುವದೂ, ಒಬ್ಬನು ವಾಣಿಯನ್ನಾಡುವದೂ, ಒಬ್ಬನು ಅದರ ಅರ್ಥವನ್ನು ಹೇಳುವದೂ ಉಂಟಷ್ಟೆ. ನೀವು ಏನೂ ನಡಿಸಿದರೂ ಭಕ್ತಿವೃದ್ಧಿಗಾಗಿಯೇ ನಡಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆದ್ದರಿಂದ ಸಹೋದರ ಸಹೋದರಿಯರೇ, ನೀವು ಮಾಡತಕ್ಕದ್ದೇನು? ನೀವು ಸಭೆಸೇರಿದಾಗ, ಒಬ್ಬನು ಹಾಡುತ್ತಾನೆ; ಒಬ್ಬನು ಉಪದೇಶ ಮಾಡುತ್ತಾನೆ; ಒಬ್ಬನು ದೇವರಿಂದ ಹೊಸ ಸತ್ಯವನ್ನು ತಿಳಿಸುತ್ತಾನೆ; ಒಬ್ಬನು ಪರಭಾಷೆಯಲ್ಲಿ ಮಾತಾಡುತ್ತಾನೆ; ಒಬ್ಬನು ಆ ಪರಭಾಷೆಯನ್ನು ಅನುವಾದಿಸುತ್ತಾನೆ. ಸಭೆಯು ದೃಢವಾಗಿ ಬೆಳೆಯಬೇಕೆಂಬುದೇ ಇವುಗಳ ಉದ್ದೇಶವಾಗಿರಬೇಕು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ತಸೆ ಹೊಲ್ಯಾರ್ ಭಾವಾನು ಅನಿ ಭೆನಿಯಾನು, ಅತ್ತಾ ಕಾಯ್ ಸಾಂಗು? ತುಮಿ ಎಕಾಕ್ಡೆ ಗೊಳಾ ಹೊಲ್ಲ್ಯಾ ತನ್ನಾ, ಎಕ್ಲ್ಯಾನ್ ಎಕ್ ಗಿತ್ ಗಾವುಕ್ ಹೊತಾ ನಾ ಹೊಲ್ಯಾರ್ ಶಿಕಾಪ್ ದಿವ್ಕ್ ಹೊತಾ, ಎಕ್ ಕಾಯ್‍ತರ್ ಸೊಡ್ಸುನ್ ಸಾಂಗುಕ್ ಹೊತಾ, ನಾ ಹೊಲ್ಯಾರ್ ವಿಚಿತ್ರ್ ಬಾಶೆತ್ ಬೊಲುಕ್ ಹೊತಾ, ನಾ ಹೊಲ್ಯಾರ್ ವಿಚಿತ್ರ್ ಬಾಶೆಚೊ ಅರ್ಥ್ ಸಾಂಗುಕ್ ಹೊತಾ, ಖರೆ ಹೆ ಸಗ್ಳೆ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ವಾಡಾವಳಿಸಾಟ್ನಿ ಕರುಕ್ ಬಗಾ. ಅಧ್ಯಾಯವನ್ನು ನೋಡಿ |