Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 14:32 - ಕನ್ನಡ ಸಮಕಾಲಿಕ ಅನುವಾದ

32 ಪ್ರವಾದಿಗಳ ಆತ್ಮಗಳು ಪ್ರವಾದಿಗಳ ಸ್ವಾಧೀನದಲ್ಲಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಪ್ರವಾದಿಗಳ ಆತ್ಮಗಳು ಪ್ರವಾದಿಗಳ ಸ್ವಾಧೀನದಲ್ಲಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ದೇವರ ವಾಕ್ಯವನ್ನು ಬೋಧಿಸುವವರು ತಮ್ಮ ವಾಕ್ಚಾತುರ್ಯವನ್ನು ಸ್ವಾಧೀನದಲ್ಲಿಟ್ಟುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಪ್ರವಾದಿಗಳ ಆತ್ಮಗಳು ಪ್ರವಾದಿಗಳ ಸ್ವಾಧೀನದಲ್ಲಿ ಅವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಪ್ರವಾದಿಗಳ ಜೀವಾತ್ಮಗಳು ಪ್ರವಾದಿಗಳ ಸ್ವಾಧೀನದಲ್ಲಿಯೇ ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಪ್ರವಾದ್ ಕರುನ್ ಬೊಲ್ತಲ್ಯಾಂಚೆ ಪ್ರೆರನ್ ತೆಂಚ್ಯಾ ಹತೊಟಿತ್ ರ್‍ಹಾವ್ಕ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 14:32
14 ತಿಳಿವುಗಳ ಹೋಲಿಕೆ  

ಪ್ರಿಯ ಸ್ನೇಹಿತರೇ, ಅನೇಕ ಸುಳ್ಳು ಪ್ರವಾದಿಗಳು ಲೋಕದೊಳಗೆ ಹೋಗಿರುವುದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.


“ಆಗ ನಾನು ಆತನನ್ನು ಕುರಿತು ಏನೂ ಹೇಳುವುದಿಲ್ಲ. ಆತನ ಹೆಸರಿನಲ್ಲಿ ಇನ್ನು ಮಾತನಾಡುವುದೇ ಇಲ್ಲ,” ಎಂದು ಅಂದುಕೊಂಡೆನು. ಆದರೆ ಆತನ ವಾಕ್ಯವು ನನ್ನ ಎಲುಬುಗಳಲ್ಲಿ ಮುಚ್ಚಲಾಗಿರುವ ಸುಡುವ ಬೆಂಕಿಯ ಹಾಗೆ ನನ್ನ ಹೃದಯದಲ್ಲಿ ಇತ್ತು. ಬಿಗಿ ಹಿಡಿದು ದಣಿದೆನು. ನನ್ನಿಂದ ಆಗದೆ ಹೋಯಿತು.


ಆಗ ಯೆರಿಕೋವಿನಲ್ಲಿರುವ ಪ್ರವಾದಿಗಳ ಗುಂಪು ಎಲೀಷನ ಬಳಿಗೆ ಬಂದು ಅವನಿಗೆ, “ಯೆಹೋವ ದೇವರು ಇಂದು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತೆಗೆದುಕೊಳ್ಳುವನೆಂದು ತಿಳಿದಿದ್ದೀಯೋ?” ಎಂದರು. ಅದಕ್ಕವನು, “ನಾನು ಕೂಡಾ ಬಲ್ಲೆ, ಸುಮ್ಮನೆ ಇರಿ,” ಎಂದನು.


ಆಗ ಬೇತೇಲಿನಲ್ಲಿರುವ ಪ್ರವಾದಿಗಳ ಗುಂಪು ಎಲೀಷನ ಬಳಿಗೆ ಬಂದು ಅವನಿಗೆ, “ಇಂದು ಯೆಹೋವ ದೇವರು ನಿನ್ನ ಯಜಮಾನನನ್ನು ನಿನ್ನಿಂದ ತೆಗೆದುಕೊಳ್ಳುವರೆಂದು ತಿಳಿದಿದ್ದೀಯೋ?” ಎಂದರು. ಅದಕ್ಕವನು, “ಹೌದು, ನಾನು ಕೂಡಾ ಬಲ್ಲೆ, ಸುಮ್ಮನೆ ಇರಿ,” ಎಂದನು.


ಅಂತಿಯೋಕ್ಯದ ಸಭೆಯಲ್ಲಿ, ಪ್ರವಾದಿಗಳೂ ಬೋಧಕರೂ ಇದ್ದರು. ಅವರು ಯಾರೆಂದರೆ ಬಾರ್ನಬನು, ನೀಗರ ಎಂದು ಕರೆಯಲಾಗುತ್ತಿದ್ದ ಸಿಮೆಯೋನ, ಕುರೇನೆದ ಲೂಕ್ಯ, ಚತುರಾಧಿಪತಿ ಹೆರೋದನೊಂದಿಗೆ ಬೆಳೆದ ಮೆನಹೇನ ಮತ್ತು ಸೌಲ ಮುಂತಾದವರೇ.


ಎಲ್ಲರೂ ಕಲಿತುಕೊಳ್ಳುವಂತೆಯೂ, ಎಲ್ಲರೂ ಪ್ರೋತ್ಸಾಹ ಹೊಂದುವಂತೆಯೂ, ನೀವೆಲ್ಲರು ಒಬ್ಬೊಬ್ಬರಾಗಿ ಪ್ರವಾದಿಸಿರಿ.


ದೇವಜನರ ಎಲ್ಲಾ ಸಭೆಗಳಲ್ಲಿರುವಂತೆ, ದೇವರು ಗಲಿಬಿಲಿಯ ದೇವರಲ್ಲ, ಸಮಾಧಾನದ ದೇವರಾಗಿದ್ದಾರೆ.


ಕ್ರಿಸ್ತ ಯೇಸುವಿನ ದಿನವು ಈಗಾಗಲೇ ಬಂದಿದೆಯೆಂದು ಪ್ರವಾದನೆಯಿಂದಾಗಲಿ, ಪ್ರಸಂಗದಿಂದಾಗಲಿ ಅಥವಾ ನಮ್ಮ ಪತ್ರದಿಂದಾಗಲಿ ತಿಳಿದು ನೀವು ಬೇಗನೆ ಚಂಚಲರಾಗಿ ಕಳವಳಪಡಬೇಡಿರಿ.


ಆಮೇಲೆ ದೇವದೂತನು ನನಗೆ, “ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ!” ಎಂದನು. ಪ್ರವಾದಿಗಳಿಗೆ ಆತ್ಮಪ್ರೇರಣೆಯನ್ನು ನೀಡುವ ಕರ್ತದೇವರು ಬೇಗನೆ ಸಂಭವಿಸತಕ್ಕ ಸಂಗತಿಗಳನ್ನು ತಮ್ಮ ದಾಸರಿಗೆ ತೋರಿಸುವುದಕ್ಕಾಗಿಯೇ ತಮ್ಮ ದೇವದೂತನನ್ನು ಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು