Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 14:37 - ಕನ್ನಡ ಸಮಕಾಲಿಕ ಅನುವಾದ

37 ಯಾವನಾದರೂ ತನ್ನನ್ನು ಪ್ರವಾದಿಯೆಂದಾಗಲಿ, ಆತ್ಮನ ವರಗಳನ್ನು ಹೊದಿದವನೆಂದಾಗಲಿ ಭಾವಿಸುವುದಾದರೆ, ನಾನು ನಿಮಗೆ ಬರೆದಿರುವ ಸಂಗತಿಗಳು ಕರ್ತದೇವರ ಆಜ್ಞೆಗಳೆಂದು ಸ್ಪಷ್ಟವಾಗಿ ತಿಳಿದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಯಾವನಾದರೂ ತನ್ನನ್ನು ಪ್ರವಾದಿಯೆಂದಾಗಲಿ ಆತ್ಮೀಕನೆಂದಾಗಲಿ ಭಾವಿಸಿಕೊಂಡರೆ ನಾನು ನಿಮಗೆ ಬರೆದಿರುವುದೆಲ್ಲಾ ಕರ್ತನ ಆಜ್ಞೆ ಎಂದು ಚೆನ್ನಾಗಿ ತಿಳಿದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ನಿಮ್ಮಲ್ಲಿ ಯಾರಾದರೊಬ್ಬನು ತಾನು ದೇವರ ವಾಕ್ಯವನ್ನು ಬೋಧಿಸುವವನು ಅಥವಾ ಪವಿತ್ರಾತ್ಮ ಪ್ರೇರಣೆಯನ್ನು ಹೊಂದಿದವನು ಎಂದು ಭಾವಿಸುವುದಾದರೆ, ನಾನು ನಿಮಗೆ ಬರೆದಿರುವುದೆಲ್ಲ ಪ್ರಭುವಿನ ಆಜ್ಞೆಯೆಂದು ಚೆನ್ನಾಗಿ ತಿಳಿದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಯಾವನಾದರೂ ತನ್ನನ್ನು ಪ್ರವಾದಿಯೆಂದಾಗಲಿ ದೇವರಾತ್ಮನಿಂದ ನಡಿಸಲ್ಪಡುವವನೆಂದಾಗಲಿ ಭಾವಿಸಿಕೊಂಡರೆ ನಾನು ನಿಮಗೆ ಬರೆದಿರುವ ಸಂಗತಿಗಳು ಕರ್ತನ ವಿಧಿಯೇ ಎಂದು ಚೆನ್ನಾಗಿ ತಿಳುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಯಾವನಾದರೂ ತಾನು ಪ್ರವಾದಿಯೆಂದು ಅಥವಾ ತನ್ನಲ್ಲಿ ಆತ್ಮಿಕ ವರವಿದೆಯೆಂದು ಯೋಚಿಸುವುದಾದರೆ, ಇದು ಪ್ರಭುವಿನ ಆಜ್ಞೆಯೆಂದು ಅವನು ಅರ್ಥಮಾಡಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ಕೊನ್‍ಬಿ ಎಕ್ಲೊ ಆತ್ಮಿಕ್ ಪ್ರವಾದಿ ನಾಹೊಲ್ಯಾರ್ ಪವಿತ್ರ್ ಆತ್ಮ್ಯಾಚೆ ಪ್ರೆರನ್ ಹೊತ್ತೊ ಮನುನ್ ಚಿಂತ್ತಾ ಜಾಲ್ಯಾರ್, ತೊ ಮಿಯಾ ತುಮ್ಕಾ ಲಿವಲ್ಲೆ ತೆ, ಧನಿಯಾಚೊಚ್ ಖಾಯ್ದೊ ಮನುನ್ ವಳ್ಕುನ್ ಘೆಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 14:37
22 ತಿಳಿವುಗಳ ಹೋಲಿಕೆ  

ನಾವಂತೂ ದೇವರಿಗೆ ಸೇರಿದವರಾಗಿದ್ದೇವೆ. ದೇವರನ್ನು ಬಲ್ಲವರು ನಮ್ಮ ಮಾತನ್ನು ಕೇಳುತ್ತಾರೆ. ದೇವರಿಗೆ ಸೇರದವರು ನಮ್ಮ ಮಾತನ್ನು ಕೇಳುವುದಿಲ್ಲ. ಇದು ಸತ್ಯದ ಆತ್ಮ. ಅದು ಸುಳ್ಳಿನ ಆತ್ಮ ಎಂದು ಇದರಿಂದಲೇ ನಾವು ತಿಳಿದುಕೊಳ್ಳುತ್ತೇವೆ.


ನೀವು ಹೊರಗಿನ ತೋರಿಕೆಗಳನ್ನು ಮಾತ್ರ ತೀರ್ಪುಮಾಡುವವರಾಗಿದ್ದೀರಿ. ಯಾರಾದರೂ ತಾನು ಯೇಸುವಿಗೆ ಸೇರಿದವನು ಎಂದು ದೃಢವಾಗಿ ನಂಬುವುದಾದರೆ, ತಾನು ಹೇಗೆ ಕ್ರಿಸ್ತ ಯೇಸುವಿನವನೋ, ಹಾಗೆಯೇ ನಾವೂ ಕ್ರಿಸ್ತ ಯೇಸುವಿನವರು ಎಂದು ಅವನು ತಿಳಿದುಕೊಳ್ಳಲಿ.


ಪ್ರಿಯ ಸ್ನೇಹಿತರೇ, ನೀವಾದರೋ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಅಪೊಸ್ತಲರು ಮೊದಲು ಹೇಳಿದ ಮಾತುಗಳನ್ನು ಜ್ಞಾಪಕಮಾಡಿಕೊಳ್ಳಿರಿ.


ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ನಮಗೆ ಕರ್ತ ಹಾಗೂ ರಕ್ಷಕ ಆಗಿರುವವರು ನಿಮ್ಮ ಅಪೊಸ್ತಲರ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ನೆನಪಿನಲ್ಲಿ ಇಟ್ಟುಕೊಳ್ಳಬೇಕು ಎಂದು ಬಯಸುತ್ತೇನೆ.


ಮಾಂಸಭಾವಕ್ಕೆ ಬಿತ್ತುವವನು, ಮಾಂಸಭಾವದಿಂದ ನಾಶವನ್ನು ಕೊಯ್ಯುವನು. ಆದರೆ ದೇವರ ಆತ್ಮರನ್ನು ಮೆಚ್ಚಿಸಲು ಬಿತ್ತುವವನು, ಆತ್ಮದಿಂದ ನಿತ್ಯಜೀವವನ್ನು ಕೊಯ್ಯುವನು.


ಏಕೆಂದರೆ ಯಾವನಾದರೂ ನಿಮ್ಮ ಬಳಿಗೆ ಬಂದು ನಾನು ನಿಮಗೆ ಬೋಧಿಸದೆ ಇರುವ ಬೇರೊಬ್ಬ ಯೇಸುವಿನ ವಿಷಯ ಬೋಧಿಸಿದರೆ, ನೀವು ಸ್ವೀಕರಿಸುವಿರಿ. ನೀವು ಹೊಂದಿದ ಆತ್ಮನ ಬದಲಿಗೆ ಬೇರೊಂದು ಆತ್ಮವನ್ನು ಪಡೆಯುವಂತೆ ಮಾಡಿದರೆ, ನೀವು ಸ್ವಾಗತಿಸುತ್ತೀರಿ. ನೀವು ಕೇಳಿರುವ ಸುವಾರ್ತೆಯ ಬದಲು ಬೇರೊಂದು ಸುವಾರ್ತೆಯನ್ನು ಯಾರಾದರೂ ಬೋಧಿಸಿದರೆ, ನೀವು ಬೇಗನೇ ಒಪ್ಪಿಕೊಳ್ಳುತ್ತೀರಿ.


ತಮ್ಮನ್ನು ತಾವೇ ಹೊಗಳಿಕೊಳ್ಳುವವರೊಂದಿಗೆ ನಾವು ಹೋಲಿಸಿಕೊಳ್ಳಲು ಯತ್ನಿಸುವುದಿಲ್ಲ. ಏಕೆಂದರೆ, ಅವರು ತಮ್ಮತಮ್ಮೊಳಗೆ ತಮ್ಮನ್ನು ಅಳತೆ ಮಾಡಿಕೊಂಡು ಒಬ್ಬರೊಂದಿಗೊಬ್ಬರು ಹೋಲಿಸಿಕೊಳ್ಳುವುದರಿಂದ ವಿವೇಕವಿಲ್ಲದವರಾಗಿರುತ್ತಾರೆ.


ಯಾರಾದರೂ ತಾನು ಏನನ್ನಾದರೂ ತಿಳಿದಿರುವುದಾಗಿ ಭಾವಿಸಿದರೆ, ಅಂಥವನು ತಿಳಿಯಬೇಕಾದ ರೀತಿಯಲ್ಲಿ ಇನ್ನೂ ತಿಳಿದುಕೊಂಡಿರುವುದಿಲ್ಲ.


ಆಕೆ ಮದುವೆ ಮಾಡಿಕೊಳ್ಳದೆ ಇರುವುದು ಬಹಳ ಸಂತೋಷಕರವಾದದ್ದೆಂದು ನನ್ನ ಅಭಿಪ್ರಾಯ. ನನಗೂ ದೇವರಾತ್ಮ ಇರುವುದಾಗಿ ಭಾವಿಸುತ್ತೇನೆ.


ಕನ್ಯೆಯರನ್ನು ಕುರಿತು ಕರ್ತ ಯೇಸುವಿನಿಂದ ನನಗೆ ಯಾವ ಆಜ್ಞೆಯೂ ಇಲ್ಲ. ಆದರೂ ಕರ್ತ ಯೇಸುವಿನಿಂದ ಕರುಣೆಯನ್ನು ಪಡೆದು ನಂಬಿಗಸ್ತನಾಗಿರುವ ನಾನು ನನ್ನ ಅಭಿಪ್ರಾಯವನ್ನು ಕೊಡುತ್ತೇನೆ.


ನನಗೆ ದಯಪಾಲಿಸಿರುವ ಕೃಪೆಯಿಂದ ನಿಮ್ಮಲ್ಲಿ ಪ್ರತಿಯೊಬ್ಬರಿಗೂ ನಾನು ಹೇಳುವುದೇನೆಂದರೆ, ನೀವು ಭಾವಿಸುವುದಕ್ಕಿಂತ ಹೆಚ್ಚಾಗಿ ಯಾರೂ ನಿಮ್ಮನ್ನು ನೀವೇ ಉನ್ನತವಾಗಿ ಭಾವಿಸಿಕೊಳ್ಳಬೇಡಿರಿ. ಅದರ ಬದಲಾಗಿ ದೇವರು ನಿಮಗೆ ಅನುಗ್ರಹಿಸಿರುವ ವಿಶ್ವಾಸದ ಅಳತೆಗೆ ಅನುಸಾರವಾಗಿ ಸ್ವಸ್ಥಚಿತ್ತವುಳ್ಳವರಾಗಿ ಭಾವಿಸಿಕೊಳ್ಳಿರಿ.


“ನಿಮ್ಮ ಮಾತನ್ನು ಕೇಳುವವರು ನನ್ನ ಮಾತನ್ನು ಕೇಳುತ್ತಾರೆ; ನಿಮ್ಮನ್ನು ತಿರಸ್ಕರಿಸುವವರು ನನ್ನನ್ನು ತಿರಸ್ಕರಿಸುತ್ತಾರೆ; ಆದರೆ ನನ್ನನ್ನು ತಿರಸ್ಕರಿಸುವವರು ನನ್ನನ್ನು ಕಳುಹಿಸಿದಾತನನ್ನೇ ತಿರಸ್ಕರಿಸುತ್ತಾರೆ,” ಎಂದರು.


ದೇವರ ಮಾತುಗಳನ್ನು ಕೇಳಿದವನೂ, ಮಹೋನ್ನತನ ಜ್ಞಾನವನ್ನು ತಿಳಿದವನೂ, ಸರ್ವಶಕ್ತರ ದರ್ಶನವನ್ನು ನೋಡಿದವನೂ, ಪರವಶನಾಗಿದ್ದು ತೆರೆದ ಕಣ್ಣುಳ್ಳವನೂ ಹೇಳಿದ್ದು:


ಆದರೆ ಆತ್ಮಿಕ ಮನುಷ್ಯನು ಎಲ್ಲವನ್ನೂ ವಿವೇಚಿಸಿಕೊಳ್ಳುತ್ತಾನೆ. ಆದರೆ ಅವನಿಗೆ ಬೇರೆ ಯಾರೂ ತೀರ್ಪುಮಾಡಲಾಗದು.


ಪ್ರಿಯರೇ, ನೀವು ದೇವರಾತ್ಮರಿಗೆ ತಕ್ಕಂತೆ ಬಾಳುವವರಾಗಿ ನಾನು ನಿಮ್ಮ ಸಂಗಡ ಮಾತನಾಡುತ್ತಾ ಇಲ್ಲ. ನೀವು ಇನ್ನೂ ಕ್ರಿಸ್ತ ಯೇಸುವಿನಲ್ಲಿ ಕೂಸುಗಳೂ ಪ್ರಾಪಂಚಿಕರೂ ಆಗಿರುವಿರೆಂದು ಭಾವಿಸಿ ನಿಮ್ಮ ಸಂಗಡ ಮಾತನಾಡಬೇಕಾಯಿತು.


ಪ್ರವಾದಿಗಳು ಇಬ್ಬರಾಗಲಿ, ಮೂವರಾಗಲಿ ಮಾತಾಡಲಿ, ಇತರರರು ವಿವೇಚನೆ ಮಾಡಲಿ.


ದೇವರ ವಾಕ್ಯವು ನಿಮ್ಮಿಂದ ಹೊರಟಿತೋ? ಅಥವಾ ಅದು ತಲುಪಿದ್ದು ನಿಮಗೆ ಮಾತ್ರವೋ?


ಆದರೆ ಯಾರಾದರೂ ಇದನ್ನು ತಿರಸ್ಕಸಿದರೆ, ಅವರೂ ತಿರಸ್ಕಾರಕ್ಕೆ ಗುರಿಯಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು