Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 14:6 - ಕನ್ನಡ ಸಮಕಾಲಿಕ ಅನುವಾದ

6 ಹೀಗಿರುವುದರಿಂದ ಪ್ರಿಯರೇ, ನಾನು ನಿಮ್ಮ ಬಳಿಗೆ ಬಂದು ಪ್ರಕಟನೆಯಿಂದಾಗಲಿ, ವಿದ್ಯೆಯಿಂದಾಗಲಿ, ಪ್ರವಾದನೆಯಿಂದಾಗಲಿ, ಉಪದೇಶದಿಂದಾಗಲಿ ಮಾತನಾಡದೆ, ಅನ್ಯಭಾಷೆಗಳಿಂದ ಮಾತನಾಡುವವನಾಗಿದ್ದರೆ, ನನ್ನಿಂದ ನಿಮಗೇನು ಪ್ರಯೋಜನ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೆ ಸಹೋದರರೇ, ನಾನು ನಿಮ್ಮ ಬಳಿಗೆ ಬಂದು ದೇವರು ತಿಳಿಸಿದ್ದನ್ನು ಪ್ರಕಟಿಸದೆ, ಜ್ಞಾನವಾಕ್ಯಗಳನ್ನಾಡದೆ, ಪ್ರವಾದನೆಯನ್ನು ಹೇಳದೆ, ಉಪದೇಶಮಾಡದೆ, ಅನ್ಯಭಾಷೆಗಳನ್ನು ಮಾತ್ರ ಮಾತನಾಡುವವನಾಗಿದ್ದರೆ ನನ್ನಿಂದ ನಿಮಗೇನು ಪ್ರಯೋಜನವಾದೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸಹೋದರರೇ, ನಾನು ನಿಮ್ಮ ಬಳಿಗೆ ಬಂದು ದೇವರ ಶ್ರುತಿಯನ್ನು, ನೈಜ ಜ್ಞಾನವನ್ನು, ದೇವರ ವಾಕ್ಯವನ್ನು, ದಿವ್ಯಬೋಧೆಯನ್ನು ನೀಡದೆ ಪರವಶಾಭಾಷೆಗಳಲ್ಲಿಯೇ ಮಾತನಾಡಿದರೆ ನಿಮಗೆ ಸಿಗುವ ಲಾಭವಾದರೂ ಏನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಹೀಗಿರುವದರಿಂದ ಸಹೋದರರೇ, ನಾನು ನಿಮ್ಮ ಬಳಿಗೆ ಬಂದು ದೇವರು ತಿಳಿಸಿದ್ದನ್ನು ಪ್ರಕಟಿಸದೆ ಜ್ಞಾನವಾಕ್ಯವನ್ನಾಡದೆ ಪ್ರವಾದನೆಯನ್ನು ಹೇಳದೆ ಉಪದೇಶಮಾಡದೆ ವಾಣಿಗಳನ್ನು ಮಾತ್ರ ಆಡುವವನಾಗಿದ್ದರೆ ನನ್ನಿಂದ ನಿಮಗೇನು ಪ್ರಯೋಜನವಾದೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಸಹೋದರ ಸಹೋದರಿಯರೇ, ನಾನು ವಿವಿಧ ಭಾಷೆಗಳನ್ನು ಮಾತಾಡುವವನಾಗಿ ನಿಮ್ಮ ಬಳಿಗೆ ಬಂದರೆ ಅದರಿಂದ ನಿಮಗೆ ಸಹಾಯವಾಗುವುದೇ? ಇಲ್ಲ! ನಾನು ನಿಮಗೆ ಹೊಸ ಸತ್ಯವನ್ನು, ಜ್ಞಾನವನ್ನು, ಪ್ರವಾದನೆಯನ್ನು ಮತ್ತು ಉಪದೇಶವನ್ನು ತಂದರೆ ಮಾತ್ರ ನಿಮಗೆ ಸಹಾಯವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಅಶೆ ರ್‍ಹಾತಾನಾ ಭಾವಾನು ಅನಿ ಭೆನಿಯಾನು, ಮಿಯಾ ದೆವಾಕ್ನಾ ಯೆಲ್ಲಿ ದಾಕ್ವನ್ ನಾಹೊಲ್ಯಾರ್ ಉಲ್ಲೆ ಶಾನೆಪಾನ್ ನಾಹೊಲ್ಯಾರ್ ಪ್ರೆರನಾನ್ ಭರಲ್ಲಿ ಬಾತ್ಮಿ, ನಾಹೊಲ್ಯಾರ್ ಉಲ್ಲಿ ಶಿಕಾಪಾ ಹಾನ್ತಲೆ ಸೊಡುನ್, ವಿಚಿತ್ರ್ ಬಾಶಾತ್ನಿ ಬೊಲುನ್ಗೆತ್ ತುಮ್ಚೆ ಮದ್ದಿ ಯೆಲ್ಯಾರ್, ಮಾಜ್ಯಾನ್ ತುಮ್ಕಾ ಕಾಯ್ ಫಾಯ್ದೊ ಹೊಯ್ ಹೊತ್ತೊ?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 14:6
32 ತಿಳಿವುಗಳ ಹೋಲಿಕೆ  

ನಮ್ಮ ಕರ್ತ ಯೇಸುಕ್ರಿಸ್ತರ ದೇವರೂ ಮಹಿಮೆಯ ತಂದೆಯಾದವರನ್ನು ನೀವು ಪೂರ್ಣವಾಗಿ ತಿಳಿದುಕೊಳ್ಳುವಂತೆ ಜ್ಞಾನದ ಮತ್ತು ಪ್ರಕಟಣೆಯ ಆತ್ಮವನ್ನು ನಿಮಗೆ ಅನುಗ್ರಹಿಸಲಿ ಎಂದು ನಿಮಗಾಗಿ ಯಾವಾಗಲೂ ಪ್ರಾರ್ಥನೆ ಮಾಡುವವನಾಗಿದ್ದೇನೆ.


ಪವಿತ್ರ ವೇದಗಳೆಲ್ಲವೂ ದೇವರ ಶ್ವಾಸದಿಂದಲೇ ಉಂಟಾದದ್ದು. ಅದು ಉಪದೇಶಕ್ಕೂ ಖಂಡನೆಗೂ ತಿದ್ದುಪಾಟಿಗೂ ನೀತಿಯ ಶಿಕ್ಷಣಕ್ಕೂ ಉಪಯುಕ್ತವಾಗಿದೆ.


ಆದರೆ ನೀವು ಪಾಪಕ್ಕೆ ಗುಲಾಮರಾಗಿದ್ದರೂ ನಿಮಗೆ ಒಪ್ಪಿಸಿದ ಬೋಧನೆಗೆ ಹೃದಯದಿಂದ ವಿಧೇಯರಾದುದ್ದಕ್ಕಾಗಿ, ದೇವರಿಗೆ ಸ್ತೋತ್ರವಾಗಲಿ.


ಪ್ರೀತಿಯ ಮಾರ್ಗ ಅನುಸರಿಸಿರಿ, ಆತ್ಮಿಕ ವರಗಳನ್ನು, ವಿಶೇಷವಾಗಿ ಪ್ರವಾದಿಸುವ ವರವನ್ನು ಆಸಕ್ತಿಯಿಂದ ಅಪೇಕ್ಷಿಸಿರಿ.


ಕ್ರಿಸ್ತ ಯೇಸುವಿನ ಬೋಧನೆಯಲ್ಲಿ ಬಾಳದೆ ಅದನ್ನು ಅತಿಕ್ರಮಿಸುವವರಿಗೆ ದೇವರಿಲ್ಲ. ಕ್ರಿಸ್ತ ಯೇಸುವಿನ ಬೋಧನೆಯಲ್ಲಿ ಬಾಳುವವರಿಗೆ ತಂದೆ ಮತ್ತು ಪುತ್ರ ಇಬ್ಬರೂಇರುತ್ತಾರೆ.


ನೀವು ಕೃಪೆಯಲ್ಲಿ ಬೆಳೆಯಿರಿ ಮತ್ತು ನಮಗೆ ಕರ್ತ ಹಾಗೂ ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಅವರಿಗೆ ಈಗಲೂ ಸರ್ವಕಾಲವೂ ಮಹಿಮೆ ಇರಲಿ! ಆಮೆನ್.


ಈ ಕಾರಣದಿಂದಲೇ ನೀವು ಪೂರ್ಣಜಾಗ್ರತೆಯಿಂದ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ


ವಿಚಿತ್ರವಾದ ವಿವಿಧ ಬೋಧನೆಗಳ ಸೆಳೆತಕ್ಕೆ ಸಿಲುಕದಿರಿ. ಏಕೆಂದರೆ ಕೃಪೆಯ ಮೂಲಕ ಹೃದಯವನ್ನು ಬಲಪಡಿಸಿಕೊಳ್ಳುವುದು ಒಳ್ಳೆಯದು. ಭೋಜನ ಪದಾರ್ಥಗಳಲ್ಲಿ ಮಗ್ನರಾದವರು, ಅವುಗಳಿಂದ ಏನೂ ಪ್ರಯೋಜನ ಹೊಂದಲಿಲ್ಲ.


ಇದು ನಂಬತಕ್ಕ ಮಾತಾಗಿದೆ. ದೇವರನ್ನು ನಂಬಿದವರು ಸತ್ಕ್ರಿಯೆಗಳನ್ನು ಮಾಡುವುದರಲ್ಲಿ ಜಾಗರೂಕರಾಗಿರುವಂತೆ ನೀನು ಇವುಗಳ ವಿಷಯವಾಗಿ ಪ್ರಾಮುಖ್ಯತೆಯನ್ನು ಕೊಡಬೇಕೆಂದು ಅಪೇಕ್ಷಿಸುತ್ತೇನೆ. ಇವು ಮನುಷ್ಯರಿಗೆ ಹಿತಕರವೂ ಪ್ರಯೋಜನಕರವೂ ಆಗಿವೆ.


ವಾಕ್ಯವನ್ನು ಸಾರು; ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಸಿದ್ಧವಾಗಿರು. ಎಲ್ಲಾ ತಾಳ್ಮೆಯಿಂದ ಉಪದೇಶಿಸಿ ಖಂಡಿಸು, ಗದರಿಸು, ಪ್ರೋತ್ಸಾಹಿಸು.


ನೀನಾದರೋ ನನ್ನ ಎಲ್ಲಾ ಬೋಧನೆ, ನನ್ನ ನಡತೆ, ನನ್ನ ಉದ್ದೇಶ, ನಂಬಿಕೆ, ದೀರ್ಘಶಾಂತಿ, ಪ್ರೀತಿ, ಸೈರಣೆ,


ಈ ವಿಷಯಗಳನ್ನು ದೇವಜನರ ನೆನಪಿಗೆ ತರಬೇಕು. ಕೇಳುವವರಿಗೆ ಯಾವ ಪ್ರಯೋಜನವನ್ನೂ ಉಂಟು ಮಾಡದೆ ಕೆಡವಿ ಹಾಕುವ ವಾಗ್ವಾದಗಳನ್ನು ಮಾಡಬಾರದೆಂದು ಅವರಿಗೆ ದೇವರ ಮುಂದೆ ಎಚ್ಚರಿಸು.


ಆದ್ದರಿಂದ ನಮ್ಮಲ್ಲಿ ಆತ್ಮಿಕ ಪರಿಪಕ್ವತೆಯುಳ್ಳವರು ಇದೇ ಮನೋಭಾವವುಳ್ಳವರಾಗಿರಬೇಕು. ಕೆಲವು ವಿಷಯಗಳ ಮೇಲೆ ಭಿನ್ನಾಭಿಪ್ರಾಯವಿದ್ದರೆ, ಅದನ್ನೂ ದೇವರು ನಿಮಗೆ ಸ್ಪಷ್ಟಪಡಿಸುವರು.


ಅದನ್ನು ನೀವು ಓದಿದರೆ ಕ್ರಿಸ್ತನ ರಹಸ್ಯದ ಕುರಿತಾಗಿ ನನಗಿರುವ ಒಳನೋಟವನ್ನು ನೀವೇ ಅರ್ಥಮಾಡಿಕೊಳ್ಳುವಿರಿ.


ಬಹು ವಿಶೇಷವಾದ ಪ್ರಕಟನೆಗಳ ಬಗ್ಗೆ ನಾನು ಗರ್ವಪಡದಂತೆ, ನನ್ನ ಶರೀರದಲ್ಲಿ ಒಂದು ಮುಳ್ಳನ್ನು ಕೊಡಲಾಗಿತ್ತು. ಅದು ನನ್ನನ್ನು ಕಾಡಿಸಲು ಕಳುಹಿಸಲಾದ ಸೈತಾನನ ದೂತನೇ ಆಗಿತ್ತು.


ನನ್ನ ಹೊಗಳಿಕೆಯಲ್ಲಿ ಪ್ರಯೋಜನವಿಲ್ಲದಿದ್ದರೂ ಅದು ಅವಶ್ಯವಾಗಿದೆ. ನಾನು ಈಗ ಕರ್ತ ಯೇಸುವಿನಿಂದ ಹೊಂದಿದ ದರ್ಶನಗಳನ್ನು ಮತ್ತು ಪ್ರಕಟನೆಗಳನ್ನು ಕುರಿತು ಹೇಳುತ್ತೇನೆ.


ನನ್ನ ಮಾತಿನಲ್ಲಿ ಚಾತುರ್ಯ ಇಲ್ಲದಿದ್ದರೂ ನನಗೆ ತಿಳುವಳಿಕೆಯಿದೆ. ಇದನ್ನು ನಾನು ಪ್ರತಿಯೊಂದು ಸಂದರ್ಭಗಳಲ್ಲಿಯೂ ಬಹಳ ಸ್ಪಷ್ಟಪಡಿಸಿರುತ್ತೇನೆ.


ನಾನಂತೂ ಎಲ್ಲರನ್ನೂ, ಎಲ್ಲದರಲ್ಲೂ ಮೆಚ್ಚಿಸಲು ಶ್ರಮಿಸುವವನಾಗಿದ್ದೇನೆ. ಏಕೆಂದರೆ, ನಾನು ನನ್ನ ಸ್ವಂತ ಹಿತವನ್ನೇ ಹುಡುಕದೆ, ಅನೇಕರು ರಕ್ಷಣೆ ಹೊಂದಬೇಕೆಂದು ಇತರರ ಹಿತಕ್ಕಾಗಿ ಶ್ರಮಿಸುವವನಾಗಿದ್ದೇನೆ.


ಪ್ರಿಯರೇ, ನೀವು ಕಲಿತುಕೊಂಡ ಬೋಧನೆಗೆ ವಿರೋಧವಾಗಿರುವ ಭೇದಗಳನ್ನೂ ಅಭ್ಯಂತರಗಳನ್ನೂ ಮಾಡುವವರ ಬಗ್ಗೆ ಎಚ್ಚರಿಕೆಯಿಂದಿರಿ. ಅಂಥವರಿಂದ ದೂರವಾಗಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ನನ್ನ ಪ್ರಿಯರೇ, ನೀವು ಒಳ್ಳೆಯತನದಿಂದ ಪೂರ್ಣವಾದವರೂ ಸಕಲ ತಿಳುವಳಿಕೆಯಿಂದ ತುಂಬಿದವರೂ ಆಗಿದ್ದು, ಒಬ್ಬರಿಗೊಬ್ಬರು ಬುದ್ಧಿ ಹೇಳುವುದಕ್ಕೆ ಶಕ್ತರಾಗಿದ್ದೀರೆಂದು ನಿಮ್ಮ ಬಗ್ಗೆ ನನಗೆ ಭರವಸೆ ಇದೆ.


ಅವರೆಲ್ಲರು ಅಪೊಸ್ತಲರ ಬೋಧನೆಯಲ್ಲಿ, ಅನ್ಯೋನ್ಯತೆಯಲ್ಲಿ, ರೊಟ್ಟಿ ಮುರಿಯುವುದರಲ್ಲಿ, ಪ್ರಾರ್ಥನೆ ಮಾಡುವುದರಲ್ಲಿ ತಮ್ಮನ್ನು ಸಮರ್ಪಿಸಿಕೊಂಡು,


ಒಬ್ಬ ವ್ಯಕ್ತಿ ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತಮ್ಮ ಸ್ವಂತ ಆತ್ಮವನ್ನೇ ನಷ್ಟಪಡಿಸಿಕೊಂಡರೆ ಅವರಿಗೆ ಲಾಭವೇನು? ಇಲ್ಲವೆ ತಮ್ಮ ಆತ್ಮಕ್ಕೆ ಬದಲಾಗಿ ಏನು ಕೊಡುವರು?


ಯೇಸು ಅವನಿಗೆ, “ಯೋನನ ಮಗ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದನ್ನು ಪ್ರಕಟಿಸಿದ್ದು ಮಾನವರಲ್ಲ. ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನು ನಿನಗೆ ಪ್ರಕಟಿಸಿದರು.


ಆ ಸಮಯದಲ್ಲಿ ಯೇಸು, “ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀವು ಈ ವಿಷಯಗಳನ್ನು ಜ್ಞಾನಿಗಳಿಂದಲೂ ಬುದ್ಧಿವಂತರಿಂದಲೂ ಮರೆಮಾಡಿ, ಶಿಶುಗಳಿಗೆ ಪ್ರಕಟ ಮಾಡಿರುವುದರಿಂದ ನಾನು ನಿಮ್ಮನ್ನು ಕೊಂಡಾಡುತ್ತೇನೆ.


ಸುಳ್ಳಿನ ಕನಸುಗಳನ್ನು ಪ್ರವಾದಿಸಿ, ತಮ್ಮ ಸುಳ್ಳುಗಳಿಂದಲೂ ತಮ್ಮ ನಿರರ್ಥಕವಾದ ವಿಚಾರಗಳಿಂದಲೂ ನನ್ನ ಜನರು ತಪ್ಪುವಂತೆ ಮಾಡುವವರಿಗೆ ವಿರೋಧವಾಗಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಅವರನ್ನು ಕಳುಹಿಸಲಿಲ್ಲ, ಅವರಿಗೆ ಅಪ್ಪಣೆ ಕೊಡಲಿಲ್ಲ. ಆದ್ದರಿಂದ ಅವರು ಹೇಗೂ ಈ ಜನರಿಗೆ ಪ್ರಯೋಜನವಾಗಿರುವುದೇ ಇಲ್ಲ,” ಎಂದು ಯೆಹೋವ ದೇವರು ನುಡಿಯುತ್ತಾರೆ.


ಓ ಯೆಹೋವ ದೇವರೇ, ನನ್ನ ಬಲವೇ, ನನ್ನ ಕೋಟೆಯೇ, ಇಕ್ಕಟ್ಟಿನ ದಿವಸದಲ್ಲಿ ನನ್ನ ಆಶ್ರಯವೇ, ಭೂಮಿಯ ಅಂತ್ಯಗಳಿಂದ ಜಗದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಬರುವುವು. “ನಮ್ಮ ಪೂರ್ವಜರು ನಿಶ್ಚಯವಾಗಿ ಸುಳ್ಳಾದದ್ದನ್ನು ಪಾರಂಪರ್ಯವಾಗಿ ಹೊಂದಿದ್ದಾರೆ. ಅವು ವ್ಯರ್ಥವೇ. ಅವುಗಳಲ್ಲಿ ಏನೂ ಪ್ರಯೋಜನವಿಲ್ಲ.


ವ್ಯರ್ಥವಾದ ವಸ್ತುಗಳ ಹಿಂದೆ ಹೋಗಬೇಡಿರಿ. ಅವು ನಿಮಗೆ ಒಳ್ಳೆಯದನ್ನು ಮಾಡಲಾರದವುಗಳೂ ನಿಮ್ಮನ್ನು ಬಿಡಿಸಲಾರದವುಗಳೂ ಆಗಿವೆ. ಏಕೆಂದರೆ ಅವು ವ್ಯರ್ಥವಾದವುಗಳಾಗಿವೆ.


ಕೊಳಲು, ವೀಣೆ ಮೊದಲಾದ ನಿರ್ಜೀವ ವಾದ್ಯಗಳ ಸ್ವರಗಳ ಹಾಗೆ, ವಿವಿಧ ಶೃತಿಗಳು ಕಂಡುಬರದಿದ್ದರೆ, ಊದಿದ್ದು ಕೊಳಲೋ ಅಥವಾ ಬಾರಿಸಿದ್ದು ವೀಣೆಯೋ ಎಂದು ತಿಳಿಯುವುದು ಹೇಗೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು