Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 14:8 - ಕನ್ನಡ ಸಮಕಾಲಿಕ ಅನುವಾದ

8 ತುತೂರಿಯನ್ನು ಸ್ಪಷ್ಟವಾಗಿ ಊದದಿದ್ದರೆ, ಯಾರು ತಾನೇ ಯುದ್ಧಕ್ಕೆ ಸನ್ನದ್ಧರಾಗುವರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ತುತ್ತೂರಿಯು ಅಸ್ಪಷ್ಟ ಶಬ್ದವನ್ನು ಮೊಳಗಿಸಿದರೆ ಯಾರು ಯುದ್ಧಕ್ಕೆ ಸಿದ್ಧಮಾಡಿಕೊಳ್ಳುವರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ರಣಕಹಳೆಯು ನಿರ್ದಿಷ್ಟವಾದ ಧ್ವನಿಯನ್ನು ಮೊಳಗಿಸದಿದ್ದರೆ ಯಾರು ತಾನೇ ಯುದ್ಧಸನ್ನದ್ಧರಾಗುತ್ತಾರೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ತುತೂರಿಯು ಗೊತ್ತಿಲ್ಲದ ಶಬ್ದವನ್ನು ಕೊಟ್ಟರೆ ಯಾರು ಯುದ್ಧಕ್ಕೆ ಸಿದ್ಧಮಾಡಿಕೊಳ್ಳುವರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಇದಲ್ಲದೆ ಯುದ್ಧದಲ್ಲಿ ಕಹಳೆಯನ್ನು ಸ್ಪಷ್ಟವಾಗಿ ಊದದಿದ್ದರೆ, ಇದು ಯುದ್ಧಕ್ಕೆ ಸಿದ್ಧರಾಗುವ ಸಮಯವೆಂಬುದು ಸೈನಿಕರಿಗೆ ತಿಳಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತಸೆಚ್ ಎಕ್ ಮೊಟೊ ಪೊಂವೊ ಆಯ್ಕುಕ್ ನಸ್ಲ್ಯಾರ್, ಕೊನ್ ಮಾರಾಮಾರಿಕ್ ತಯಾರ್ ಹೊವ್ಕ್ ಹೊತಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 14:8
12 ತಿಳಿವುಗಳ ಹೋಲಿಕೆ  

ನಿಮ್ಮ ದೇಶದಲ್ಲಿ ನಿಮ್ಮನ್ನು ಉಪದ್ರವಪಡಿಸುವ ವೈರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಡುವಾಗ ಜನರನ್ನು ಎಚ್ಚರಿಸುವಂತೆ ತುತೂರಿಗಳನ್ನು ಆರ್ಭಟವಾಗಿ ಊದಬೇಕು. ಆಗ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ನೆನಪು ಮಾಡಿಕೊಂಡು ಶತ್ರುಗಳಿಂದ ನಿಮ್ಮನ್ನು ಬಿಡಿಸುವನು.


ಓ, ನನ್ನ ಕರುಳು, ನನ್ನ ಕರುಳು! ನಾನು ನೋವಿನಿಂದ ನರಳುತ್ತೇನೆ. ನನ್ನ ಹೃದಯವು ನನ್ನಲ್ಲಿ ತಳಮಳಗೊಂಡಿದೆ. ನಾನು ಮೌನವಾಗಿರಲಾರೆನು; ಓ ನನ್ನ ಪ್ರಾಣವೇ, ತುತೂರಿ ಶಬ್ದವನ್ನೂ, ಯುದ್ಧದ ಆರ್ಭಟವನ್ನೂ ಕೇಳುತ್ತಿರುವೆ.


ಪಟ್ಟಣದಲ್ಲಿ ಕಹಳೆಯನ್ನು ಊದಿದರೆ, ಜನರು ಹೆದರುವುದಿಲ್ಲವೇ? ಯೆಹೋವ ದೇವರಿಂದಲ್ಲದೆ ಪಟ್ಟಣಕ್ಕೆ ಕೇಡು ತಟ್ಟುವುದುಂಟೇ?


ನೀವು ಚೀಯೋನಿನಲ್ಲಿ ಕೊಂಬು ಊದಿರಿ. ನನ್ನ ಪರಿಶುದ್ಧ ಪರ್ವತದಲ್ಲಿ ಆರ್ಭಟಿಸಿರಿ. ದೇಶದ ನಿವಾಸಿಗಳೆಲ್ಲರು ನಡುಗಲಿ. ಏಕೆಂದರೆ ಯೆಹೋವ ದೇವರ ದಿವಸವು ಬರುತ್ತದೆ. ಅದು ಸಮೀಪವಾಗಿದೆ.


ಆ ದಿನದಲ್ಲಿ ದೊಡ್ಡ ತುತೂರಿಯು ಊದಲಾಗುವುದು. ಆಗ ಅಸ್ಸೀರಿಯ ದೇಶದಲ್ಲಿ ಚದರಿಹೋದವರೂ, ಈಜಿಪ್ಟ್ ದೇಶದಲ್ಲಿ ಗಡೀಪಾರಾದವರೂ, ಯೆರೂಸಲೇಮಿನ ಪರಿಶುದ್ಧ ಪರ್ವತದ ಬಳಿಗೆ ಬಂದು ಯೆಹೋವ ದೇವರನ್ನು ಆರಾಧಿಸುವರು.


ಕೊಳಲು, ವೀಣೆ ಮೊದಲಾದ ನಿರ್ಜೀವ ವಾದ್ಯಗಳ ಸ್ವರಗಳ ಹಾಗೆ, ವಿವಿಧ ಶೃತಿಗಳು ಕಂಡುಬರದಿದ್ದರೆ, ಊದಿದ್ದು ಕೊಳಲೋ ಅಥವಾ ಬಾರಿಸಿದ್ದು ವೀಣೆಯೋ ಎಂದು ತಿಳಿಯುವುದು ಹೇಗೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು