Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:10 - ಕನ್ನಡ ಸಮಕಾಲಿಕ ಅನುವಾದ

10 ಆದರೆ ನಾನು ಎಂಥವನಾಗಿದ್ದೇನೋ, ಅದು ದೇವರ ಕೃಪೆಯಿಂದಲೇ ಆಗಿರುತ್ತದೆ. ನನಗುಂಟಾದ ದೇವರ ಕೃಪೆಯು ನಿಷ್ಫಲವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದರೆ ನಾನು ಈಗ ಎಂಥವನಾಗಿದ್ದೇನೊ ಅದು ದೇವರ ಕೃಪೆಯಿಂದಲೇ ಮತ್ತು ಆತನ ಕೃಪೆಯು ನನ್ನಲ್ಲಿ ನಿಷ್ಫಲವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿರುವ ದೇವರ ಕೃಪೆಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಾನು ಈಗ ಈ ಸ್ಥಿತಿಯಲ್ಲಿ ಇರುವುದು ದೇವರ ಅನುಗ್ರಹದಿಂದಲೇ. ಅವರ ಅನುಗ್ರಹ ನನ್ನಲ್ಲಿ ವ್ಯರ್ಥವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚು ಶ್ರಮಪಟ್ಟು ಸೇವೆಮಾಡಿದ್ದೇನೆ. ಅದನ್ನು ಮಾಡಿದವನು ನಾನಲ್ಲ, ನನ್ನಲ್ಲಿರುವ ದೇವರ ಅನುಗ್ರಹವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ. ನನಗುಂಟಾದ ಆತನ ಕೃಪೆಯು ನಿಷ್ಫಲವಾಗಲಿಲ್ಲ; ನಾನು ಅವರೆಲ್ಲರಿಗಿಂತಲೂ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿರುವ ದೇವರ ಕೃಪೆಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದರೆ, ದೇವರ ಕೃಪೆಯಿಂದ ನಾನು ಅಪೊಸ್ತಲನಾಗಿದ್ದೇನೆ. ಆತನು ನನಗೆ ತೋರಿದ ಕೃಪೆಯು ನಿಷ್ಛಲವಾಗಲಿಲ್ಲ. ಉಳಿದೆಲ್ಲ ಅಪೊಸ್ತಲರಿಗಿಂತ ನಾನು ಹೆಚ್ಚು ಕಷ್ಟಪಟ್ಟು ಸೇವೆ ಮಾಡಿದ್ದೇನೆ. (ಆದರೆ ಸೇವೆ ಮಾಡುತ್ತಿದ್ದವನು ನಿಜವಾಗಿಯೂ ನಾನಲ್ಲ ದೇವರ ಕೃಪೆಯೇ ನನ್ನೊಂದಿಗಿತ್ತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಹೊಲ್ಯಾರ್ಬಿ ಮಿಯಾ ಅತ್ತಾ ಕಾಯ್ ತರ್ ಹೊವ್ನ್ ಹಾವ್ ಮಟ್ಲ್ಯಾರ್ ತೆ ದೆವಾಚ್ಯಾ ಕುರ್ಪೆಚ್ಯಾ ವೈನಾಚ್ ಹೊಲಾ. ತೆನಿ ದಿಲ್ಲಿ ತಿ ಕುರ್ಪಾ ಮಾಜ್ಯಾ ಭುತ್ತುರ್ ಕಾಯ್ಬಿ ಫಾಯ್ದ್ಯಾಕ್ ಪಡಿನಸಲ್ಲಿ ಹೊವ್ನ್ ಜಾವ್ಕ್ ನಾ. ಖರೆಚ್ ಸಾಂಗುಚೆ ಹೊಲ್ಯಾರ್, ಹುರಲ್ಲ್ಯಾ ಅಪೊಸ್ತಲಾಂಚ್ಯಾನ್ಕಿ ಜಾಸ್ತಿ ಮಿಯಾ ಮ್ಹಿನತ್ ಕರುನ್ ರಾಬ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:10
25 ತಿಳಿವುಗಳ ಹೋಲಿಕೆ  

ನನಗೆ ಶಕ್ತಿನೀಡುವ ಕ್ರಿಸ್ತ ಯೇಸುವಿನ ಮೂಲಕ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.


ನಮ್ಮಿಂದಲೇ ಉಂಟಾಯಿತು ಎಂದು ಹೇಳಿಕೊಳ್ಳುವುದಕ್ಕೆ ನಮಗೆ ಯಾವ ಸಾಮರ್ಥ್ಯವೂ ಇಲ್ಲ. ನಮ್ಮ ಸಾಮರ್ಥ್ಯವು ದೇವರಿಂದಲೇ ಬರುತ್ತದೆ.


ಏಕೆಂದರೆ, ತಮ್ಮ ಸದುದ್ದೇಶವನ್ನು ನೆರವೇರಿಸುವಂತೆ ನಿಮ್ಮಲ್ಲಿ ಬಯಕೆಯನ್ನೂ ಕಾರ್ಯಸಾಧನೆಯನ್ನೂ ನಿರ್ಮಿಸುವವರು ದೇವರೇ.


ಏಕೆಂದರೆ, ಯೆಹೂದ್ಯರಿಗೆ ಅಪೊಸ್ತಲನಾಗಿರುವ ಪೇತ್ರನಲ್ಲಿ ಕಾರ್ಯಮಾಡಿದ ದೇವರೇ, ಯೆಹೂದ್ಯರಲ್ಲದವರಿಗೆ ನಾನು ಅಪೊಸ್ತಲನಾಗಿರಲು ನನ್ನಲ್ಲಿ ಕಾರ್ಯಮಾಡಿದರು.


ನನಗೆ ದಯಪಾಲಿಸಿರುವ ಕೃಪೆಯಿಂದ ನಿಮ್ಮಲ್ಲಿ ಪ್ರತಿಯೊಬ್ಬರಿಗೂ ನಾನು ಹೇಳುವುದೇನೆಂದರೆ, ನೀವು ಭಾವಿಸುವುದಕ್ಕಿಂತ ಹೆಚ್ಚಾಗಿ ಯಾರೂ ನಿಮ್ಮನ್ನು ನೀವೇ ಉನ್ನತವಾಗಿ ಭಾವಿಸಿಕೊಳ್ಳಬೇಡಿರಿ. ಅದರ ಬದಲಾಗಿ ದೇವರು ನಿಮಗೆ ಅನುಗ್ರಹಿಸಿರುವ ವಿಶ್ವಾಸದ ಅಳತೆಗೆ ಅನುಸಾರವಾಗಿ ಸ್ವಸ್ಥಚಿತ್ತವುಳ್ಳವರಾಗಿ ಭಾವಿಸಿಕೊಳ್ಳಿರಿ.


ನೀವೇ ನನ್ನನ್ನು ಹೊಗಳಿಕೊಳ್ಳುವಂತೆ ಮಾಡಿ, ನಾನು ಬುದ್ಧಿಹೀನನಾಗಿ ನಡೆಯಲು ಒತ್ತಾಯಿಸಿದ್ದೀರಿ. ನನಗೆ ನಿಮ್ಮಿಂದಲೇ ಹೊಗಳಿಕೆಯು ಬೇಕಾಗಿತ್ತು. ಏಕೆಂದರೆ ನಾನು ಕೇವಲ ಅತ್ಯಲ್ಪನಾದರೂ “ಅತಿಶ್ರೇಷ್ಠರಾದ ಅಪೊಸ್ತಲರಿಗಿಂತ” ಕಡಿಮೆ ಅಲ್ಲ.


ನೀವು ಹೊಂದಿರುವ ದೇವರ ಕೃಪೆಯನ್ನು ವ್ಯರ್ಥಮಾಡಿಕೊಳ್ಳಬೇಡಿರೆಂದು ದೇವರ ಜೊತೆಕೆಲಸದವರಾದ ನಾವು ನಿಮ್ಮಲ್ಲಿ ಬೇಡಿಕೊಳ್ಳುತ್ತೇವೆ,


ನಿಮ್ಮನ್ನು ಇತರರಿಗಿಂತಲೂ ವ್ಯತ್ಯಾಸವುಳ್ಳವರಾಗಿ ಮಾಡಿದವರು ಯಾರು? ನೀವು ದೇವರಿಂದ ಪಡೆಯದಿರುವಂಥದು ನಿಮ್ಮಲ್ಲಿ ಯಾವುದಾದರೂ ಇದೆಯೇ? ಹೀಗೆ ಎಲ್ಲವನ್ನೂ ಪಡೆದ ಮೇಲೆ, ಪಡೆಯದವರಂತೆ ನೀವು ಹೆಮ್ಮೆ ಪಟ್ಟುಕೊಳ್ಳುವುದೇಕೆ?


ನಾನು ಸಾರಿದ ಈ ಸುವಾರ್ತೆಯ ವಾಕ್ಯವನ್ನು ನೀವು ಬಿಗಿಯಾಗಿ ಹಿಡಿದುಕೊಂಡರೆ, ನಿಮಗೆ ರಕ್ಷಣೆಯಾಗುತ್ತದೆ. ಇಲ್ಲದಿದ್ದರೆ, ನಿಮ್ಮ ನಂಬಿಕೆ ವ್ಯರ್ಥವಾಗಿ ಹೋಗುತ್ತದೆ.


ಹಾಗಾದರೆ, ದೇವರು ತಮ್ಮ ಜನರನ್ನು ತ್ಯಜಿಸಿಬಿಟ್ಟಿದ್ದಾರೋ ಎಂದು ಕೇಳುತ್ತೇನೆ? ಎಂದಿಗೂ ಇಲ್ಲ. ನಾನು ಸಹ ಇಸ್ರಾಯೇಲನೂ ಅಬ್ರಹಾಮನ ವಂಶದವನೂ ಬೆನ್ಯಾಮೀನನ ಕುಲದವನೂ ಆಗಿದ್ದೇನೆ.


ಏಕೆಂದರೆ ಮಾತನಾಡುವವರು ನೀವಲ್ಲ, ನಿಮ್ಮ ತಂದೆಯ ಆತ್ಮವೇ ನಿಮ್ಮೊಳಗಿಂದ ಮಾತನಾಡುವರು.


ನಾನು ಬೀಜವನ್ನು ಬಿತ್ತಿದೆನು, ಅಪೊಲ್ಲೋಸನು ನೀರು ಹಾಕಿದನು, ಆದರೆ ಬೆಳೆಸಿದವರು ದೇವರೇ.


ದೇವರು ನನಗೆ ಕೊಟ್ಟ ಕೃಪೆಗೆ ಅನುಸಾರವಾಗಿ, ನಾನು ಜ್ಞಾನಿಯಾದ ಶಿಲ್ಪಿಯಂತೆ ಅಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ. ಆದರೆ ಪ್ರತಿಯೊಬ್ಬನೂ ತಾನು ಅದರ ಮೇಲೆ ಎಷ್ಟು ಶ್ರದ್ಧೆಯಿಂದ ಕಟ್ಟುತ್ತಾನೆಂದು ನೋಡಿಕೊಳ್ಳಬೇಕು.


ಆದ್ದರಿಂದ ನಾನಾದರೇನು, ಅವರಾದರೇನು ಇದನ್ನೇ ನಾವು ಸಾರುವುದು, ಇದನ್ನೇ ನೀವು ನಂಬಿದ್ದೀರಿ.


ಪ್ರಿಯರೇ, ಯಾರು ನಿಮ್ಮ ನಡುವೆ ಪ್ರಯಾಸಪಟ್ಟು ಕರ್ತ ಯೇಸುವಿನಲ್ಲಿ ನಿಮ್ಮನ್ನು ಪರಾಮರಿಸುವವರಾಗಿದ್ದು ನಿಮಗೆ ಬುದ್ಧಿ ಹೇಳುತ್ತಾರೋ ಅವರನ್ನು ಗೌರವಿಸಿರಿ.


ಇದಕ್ಕಾಗಿ ನಾವು ಕಷ್ಟಪಡುತ್ತೇವೆ ಮತ್ತು ಪ್ರಯಾಸ ಪಡುತ್ತೇವೆ. ಏಕೆಂದರೆ ಎಲ್ಲಾ ಮನುಷ್ಯರಿಗೆ ವಿಶೇಷವಾಗಿ ನಂಬುವವರಿಗೆ ರಕ್ಷಕ ಆಗಿರುವ ಜೀವಸ್ವರೂಪರಾದ ದೇವರನ್ನು ನಾವು ನಿರೀಕ್ಷಿಸಿದ್ದೇವೆ.


ಐದು ಚಿನ್ನದ ನಾಣ್ಯಗಳನ್ನು ಹೊಂದಿದವನು ಹೋಗಿ ಅವುಗಳಿಂದ ವ್ಯಾಪಾರಮಾಡಿ ಬೇರೆ ಐದು ಚಿನ್ನದ ನಾಣ್ಯಗಳನ್ನು ಸಂಪಾದಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು