Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:24 - ಕನ್ನಡ ಸಮಕಾಲಿಕ ಅನುವಾದ

24 ಆಮೇಲೆ ಕ್ರಿಸ್ತನು ಎಲ್ಲಾ ಆಧಿಪತ್ಯವನ್ನೂ ಎಲ್ಲಾ ಅಧಿಕಾರವನ್ನೂ ಎಲ್ಲಾ ಶಕ್ತಿಯನ್ನೂ ತೆಗೆದುಹಾಕಿ, ರಾಜ್ಯವನ್ನು ತಂದೆ ದೇವರಿಗೆ ಒಪ್ಪಿಸಿಕೊಡುವಾಗ ಸಮಾಪ್ತಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅನಂತರ ಆತನು ಎಲ್ಲಾ ದೊರೆತನವನ್ನೂ, ಎಲ್ಲಾ ಅಧಿಕಾರವನ್ನೂ ಮತ್ತು ಬಲವನ್ನೂ ನಿರ್ಮೂಲಗೊಳಿಸಿ ತಂದೆ ದೇವರಿಗೆ ರಾಜ್ಯವನ್ನು ಒಪ್ಪಿಸಿಕೊಡುವಾಗ ಸಮಾಪ್ತಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅಂತ್ಯ ಬರುವುದು ಅನಂತರವೇ. ಆಗ ಯೇಸು ಎಲ್ಲಾ ಆಧಿಪತ್ಯವನ್ನೂ ಅಧಿಕಾರವನ್ನೂ ಶಕ್ತಿಯನ್ನೂ ನಿರ್ಮೂಲಮಾಡಿ ತಂದೆಯಾದ ದೇವರಿಗೆ ಸಾಮ್ರಾಜ್ಯವನ್ನು ಒಪ್ಪಿಸಿಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆಮೇಲೆ ಆತನು ಬೇರೆ ಎಲ್ಲಾ ದೊರೆತನವನ್ನೂ ಎಲ್ಲಾ ಅಧಿಕಾರವನ್ನೂ ಬಲವನ್ನೂ ನಿವೃತ್ತಿಮಾಡಿ ತಂದೆಯಾಗಿರುವ ದೇವರಿಗೆ ರಾಜ್ಯವನ್ನು ಒಪ್ಪಿಸಿಕೊಡುವಾಗ ಸಮಾಪ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಅನಂತರ ಅಂತ್ಯ ಬರುವುದು. ಕ್ರಿಸ್ತನು ಎಲ್ಲಾ ಅಧಿಪತಿಗಳನ್ನು, ಅಧಿಕಾರಗಳನ್ನು ಮತ್ತು ಶಕ್ತಿಗಳನ್ನು ನಾಶಮಾಡುವನು. ಬಳಿಕ ಕ್ರಿಸ್ತನು ತಂದೆಯಾದ ದೇವರಿಗೆ ರಾಜ್ಯವನ್ನು ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಮಾನಾ ಆಕ್ರಿಚೊ ಎಳ್ ಯೆತಾ ತನ್ನಾ ತೊ ಸಗ್ಳಿ ರಾಜ್ವಟ್ಕಿ, ಅಧಿಕಾರ್ ಅನಿ ಪದ್ವಿ ನಾಸ್ ಕರ್‍ತಾ ಅನಿ ಅಪ್ನಾಚೊ ರಾಜ್ ದೆವಾ ಬಾಬಾಚ್ಯಾ ತಾಬೆತ್ ಒಪಸ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:24
22 ತಿಳಿವುಗಳ ಹೋಲಿಕೆ  

ರಾಜ್ಯವೂ, ದೊರೆತನವೂ, ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತೂ ಮಹೋನ್ನತನ ಪರಿಶುದ್ಧವಾದ ಜನರಿಗೆ ದೊರಕುವುದು. ಆತನ ರಾಜ್ಯವು ನಿತ್ಯವಾದ ರಾಜ್ಯ. ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವುವು ಮತ್ತು ವಿಧೇಯವಾಗಿರುವುವು.’


ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು, ಮಹತ್ವವು, ರಾಜ್ಯವು ಇವುಗಳನ್ನು ಕೊಡಲಾಯಿತು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂಥ ರಾಜ್ಯವಾಗಿದೆ.


ಯೇಸು ಬಂದು ಅವರೊಂದಿಗೆ ಮಾತನಾಡಿ, “ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲಾಗಿದೆ.


“ನನ್ನ ತಂದೆ ಎಲ್ಲವನ್ನೂ ನನಗೆ ಒಪ್ಪಿಸಿದ್ದಾರೆ. ತಂದೆಯ ಹೊರತು ಬೇರೆ ಯಾರೂ ಪುತ್ರನನ್ನು ಅರಿಯರು ಮತ್ತು ಪುತ್ರನು ಯಾರಿಗೆ ತಂದೆಯನ್ನು ಪ್ರಕಟಪಡಿಸಲು ಇಷ್ಟಪಡುತ್ತಾನೋ ಅವರೇ ಹೊರತು ಯಾರೂ ತಂದೆಯನ್ನು ಅರಿಯರು.


“ಆ ಅರಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವರು. ಅದು ಬೇರೆ ಜನರಿಗೆ ಸೇರಿ ಹೋಗುವುದಿಲ್ಲ. ಅದು ಆ ರಾಜ್ಯಗಳನ್ನೆಲ್ಲಾ ಧ್ವಂಸಮಾಡಿ, ಮುಗಿಸಿ, ತಾನು ಎಂದೆಂದಿಗೂ ನಿಲ್ಲುವುದು.


ರಾಜಾಧಿರಾಜನೂ ಕರ್ತರ ಕರ್ತನೂ ಭಾಗ್ಯವಂತರಾದ ಏಕಾಧಿಪತಿಯು ತಮ್ಮ ಸಮಯಗಳಲ್ಲೆ ಕ್ರಿಸ್ತ ಯೇಸುವನ್ನು ಪ್ರತ್ಯಕ್ಷಪಡಿಸುವರು.


ತಂದೆಯು ತನ್ನ ಕೈಯಲ್ಲಿ ಎಲ್ಲವನ್ನೂ ಕೊಟ್ಟಿದ್ದಾರೆಂದೂ ತಾನು ದೇವರ ಬಳಿಯಿಂದ ಬಂದು ಮರಳಿ ದೇವರ ಬಳಿಗೆ ಹೋಗುತ್ತೇನೆಂದೂ ಯೇಸುವಿಗೆ ತಿಳಿದಿತ್ತು.


ಅವರ ಆಡಳಿತದ ಶ್ರೇಷ್ಠತೆ ಮತ್ತು ಶಾಂತಿಗೆ ಅಂತ್ಯವಿಲ್ಲ. ಅವರ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವುದು, ದಾವೀದನ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು, ಸೇನಾಧೀಶ್ವರ ಯೆಹೋವ ದೇವರ ಅನುಗ್ರಹವು ಇದನ್ನು ನೆರವೇರಿಸುವುದು.


ತಂದೆಯು ಪುತ್ರನನ್ನು ಪ್ರೀತಿಸಿ ಎಲ್ಲವನ್ನೂ ಅವರ ಕೈಯಲ್ಲಿ ಕೊಟ್ಟಿದ್ದಾರೆ.


ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆಹೊಂದುವನು.


“ನನ್ನ ತಂದೆ ಎಲ್ಲವನ್ನೂ ನನಗೆ ಒಪ್ಪಿಸಿದ್ದಾರೆ. ತಂದೆಯ ಹೊರತು ಯಾರೂ ಪುತ್ರನನ್ನು ಅರಿಯರು ಮತ್ತು ಪುತ್ರನು ಯಾರಿಗೆ ತಂದೆಯನ್ನು ಪ್ರಕಟಪಡಿಸಲು ಇಷ್ಟಪಡುತ್ತಾರೋ ಅವರೇ ಹೊರತು ಯಾರೂ ತಂದೆಯನ್ನು ಅರಿಯರು,” ಎಂದರು.


ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ದ್ವೇಷಮಾಡುವರು. ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆಹೊಂದುವನು.


ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಸ್ವಸ್ಥಚಿತ್ತರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಗೆ ಸಿದ್ಧವಾಗಿರಿ.


“ನೀನು ಅಂತ್ಯದವರೆಗೂ ನಿನ್ನ ಮಾರ್ಗದಲ್ಲಿ ಹೋಗು. ನೀನು ವಿಶ್ರಮಿಸಿಕೊಳ್ಳುವೆ ಮತ್ತು ದಿನಗಳ ಅಂತ್ಯದಲ್ಲಿ ನಿನಗೆ ಪಾಲಾಗಿ ಇಟ್ಟಿರುವ ಬಾಧ್ಯತೆಯನ್ನು ಸ್ವೀಕರಿಸಲು ಎದ್ದು ಬರುವೆ,” ಎಂದು ಹೇಳಿದನು.


ಆಗ ಅವನು, “ದಾನಿಯೇಲನೇ, ನಿನ್ನ ದಾರಿಯಲ್ಲಿ ಹೋಗು, ಏಕೆಂದರೆ ಈ ಮಾತುಗಳು ಅಂತ್ಯಕಾಲದವರೆಗೂ ಮುಚ್ಚಿ, ಮುದ್ರಿತವಾಗಿವೆ.


ಏಕೆಂದರೆ ಮರಣವಾಗಲಿ, ಜೀವವಾಗಲಿ, ದೇವದೂತರಾಗಲಿ, ದುರಾತ್ಮಗಳಾಗಲಿ, ವರ್ತಮಾನಕಾಲದ ಸಂಗತಿಗಳಾಗಲಿ, ಭವಿಷ್ಯತ್ಕಾಲದ ಸಂಗತಿಗಳಾಗಲಿ, ಯಾವುದೇ ಶಕ್ತಿಯಾಗಲಿ,


ಆದರೆ ದಾನಿಯೇಲನೇ ನೀನು, ಅಂತ್ಯಕಾಲದವರೆಗೂ ಈ ಮಾತುಗಳನ್ನು ಮುಚ್ಚಿಡು; ಅವುಗಳನ್ನು ಬರೆದಿರುವ ಆ ಗ್ರಂಥಕ್ಕೆ ಮುದ್ರೆ ಹಾಕು. ಅನೇಕರು ಅತ್ತಿತ್ತ ಓಡಾಡುವರು, ಜ್ಞಾನವು ಹೆಚ್ಚಾಗುವುದು,” ಎಂದು ಹೇಳಿದನು.


ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿ ತಂದೆಯಾದ ದೇವರಿಗೆ, ಯಾವಾಗಲೂ ಎಲ್ಲಾ ಕಾರ್ಯಗಳಿಗೋಸ್ಕರ ಕೃತಜ್ಞತೆಯನ್ನು ಸಲ್ಲಿಸಿರಿ.


ನೀವು ಕ್ರಿಸ್ತ ಯೇಸುವಿನಲ್ಲಿ ಪರಿಪೂರ್ಣರಾಗಿದ್ದೀರಿ. ಅವರೇ ಎಲ್ಲಾ ಆಳಿಕೆಗೂ, ಅಧಿಕಾರಕ್ಕೂ ಶಿರಸ್ಸಾಗಿದ್ದಾರೆ.


ಕ್ರಿಸ್ತ ಯೇಸುವು ಆಳುವ ಅದೃಶ್ಯ ಶಕ್ತಿಗಳನ್ನೂ ಅಧಿಕಾರಗಳನ್ನೂ ನಿರಾಯುಧರನ್ನಾಗಿ ಮಾಡಿ ಶಿಲುಬೆಯಲ್ಲಿ ಅವುಗಳ ಮೇಲೆ ಜಯಹೊಂದಿ, ಬಹಿರಂಗವಾಗಿ ಪ್ರದರ್ಶಿಸಿದರು.


ನಮಗೆ ಕರ್ತ ಹಾಗೂ ರಕ್ಷಕ ಆಗಿರುವ ಕ್ರಿಸ್ತ ಯೇಸುವು ತಮ್ಮ ನಿತ್ಯ ರಾಜ್ಯದಲ್ಲಿ ಪ್ರವೇಶಿಸುವ ಭಾಗ್ಯವನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು