1 ಕೊರಿಂಥದವರಿಗೆ 15:27 - ಕನ್ನಡ ಸಮಕಾಲಿಕ ಅನುವಾದ27 ದೇವರು ಸಮಸ್ತವನ್ನೂ ಕ್ರಿಸ್ತನ ಪಾದಗಳ ಕೆಳಗೆ ಹಾಕಿ ಅವರಿಗೆ ಅಧೀನಮಾಡಿದ್ದಾರೆ. “ಸಮಸ್ತವೂ ಅವರಿಗೆ ಅಧೀನ ಮಾಡಲಾಗಿದೆ” ಎಂದು ಹೇಳುವಾಗ, ಸಮಸ್ತವನ್ನೂ ಕ್ರಿಸ್ತನಿಗೆ ಅಧೀನಮಾಡಿಕೊಟ್ಟ ದೇವರು ಇದರಲ್ಲಿ ಒಳಪಡಲಿಲ್ಲ ಎಂಬುದು ಸ್ಪಷ್ಟವಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 “ದೇವರು ಸಮಸ್ತವನ್ನೂ ಆತನ ಪಾದಗಳ ಕೆಳಗೆ ಹಾಕಿ ಆತನಿಗೆ ಅಧೀನಮಾಡಿದ್ದಾನೆ.” ಆದರೆ “ಸಮಸ್ತವೂ ಆತನಿಗೆ ಅಧೀನಮಾಡಲ್ಪಟ್ಟಿದೆ” ಎಂದು ಹೇಳುವಾಗ ಸಮಸ್ತವನ್ನು ಅಧೀನಮಾಡಿಕೊಟ್ಟಾತನು ಅದರಲ್ಲಿ ಸೇರಲಿಲ್ಲವೆಂಬುದು ಸ್ಪಷ್ಟವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 “ದೇವರು ಎಲ್ಲವನ್ನು ಅಧೀನಪಡಿಸಿ ಆತನ ಪಾದಪೀಠವನ್ನಾಗಿಸಿದ್ದಾರೆ,” ಎಂದು ಲಿಖಿತವಾಗಿದೆ. “ಎಲ್ಲವನ್ನೂ ಅಧೀನಪಡಿಸಲಾಗಿದೆ,” ಎಂದು ಹೇಳುವಾಗ, ಹಾಗೆ ಅಧೀನಪಡಿಸಿದ ದೇವರು ಅವರಲ್ಲಿ ಸೇರಲಿಲ್ಲ ಎಂಬುದು ಸುಸ್ಪಷ್ಟವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ದೇವರು ಸಮಸ್ತವನ್ನೂ ಆತನ ಪಾದಗಳ ಕೆಳಗೆ ಹಾಕಿ ಆತನಿಗೆ ಅಧೀನಮಾಡಿದ್ದಾನೆಂಬದಾಗಿ ಹೇಳಿಯದೆಯಲ್ಲಾ. ಸಮಸ್ತವೂ ಆತನಿಗೆ ಅಧೀನಮಾಡಲ್ಪಟ್ಟಿದೆ ಎಂದು ಹೇಳುವಾಗ ಸಮಸ್ತವನ್ನು ಅಧೀನಮಾಡಿ ಕೊಟ್ಟಾತನು ಅದರಲ್ಲಿ ಸೇರಲಿಲ್ಲವೆಂಬದು ಸ್ಪಷ್ಟವಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 “ದೇವರು ಸಮಸ್ತವನ್ನು ಆತನಿಗೆ ಅಧೀನಗೊಳಿಸುತ್ತಾನೆ” ಎಂದು ಪವಿತ್ರಗ್ರಂಥವು ಹೇಳುತ್ತದೆ. “ಸಮಸ್ತವನ್ನು” ಕ್ರಿಸ್ತನಿಗೆ ಅಧೀನಗೊಳಿಸುತ್ತಾನೆಂದು ಹೇಳುವಾಗ, ಅದು ದೇವರನ್ನು ಒಳಗೊಂಡಿಲ್ಲ ಎಂಬುದು ಸ್ಪಷ್ಟವಾಗಿದೆ. ಸಮಸ್ತವನ್ನು ಕ್ರಿಸ್ತನಿಗೆ ಅಧೀನಗೊಳಿಸಿದಾತನು ದೇವರೇ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ಕಶ್ಯಾಕ್ ಮಟ್ಲ್ಯಾರ್ ದೆವಾನ್ ಸಗ್ಳಿ ಜಿನ್ಸಾ ತೆಚ್ಯಾ ಪಾಯಾಂಚ್ಯಾ ಬುಡಿ ಘಾಟಲ್ಲಿ ಹಾತ್. ಮನುನ್ ಪವಿತ್ರ್ ಪುಸ್ತಕ್ ಮನ್ತಾ. ಸಗ್ಳಿ ಜಿನ್ಸಾ ಮನ್ತಾನಾ ಸಗ್ಳಿ ಜಿನ್ಸಾ ರಚುನ್ ಕ್ರಿಸ್ತಾಚ್ಯಾ ಖಾಲ್ತಿ ರ್‍ಹಾಯ್ ಸರ್ಕೆ ಕರಲ್ಲೊ ದೆವ್ ಖಾಲ್ತಿ ಹೊತಾ ಮನುನ್ ನ್ಹಯ್. ಅಧ್ಯಾಯವನ್ನು ನೋಡಿ |