Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:3 - ಕನ್ನಡ ಸಮಕಾಲಿಕ ಅನುವಾದ

3 ಏಕೆಂದರೆ ನಾನು ಪಡೆದುಕೊಂಡಿದ್ದರಲ್ಲಿ ಬಹು ಪ್ರಾಮುಖ್ಯವಾದದ್ದನ್ನೇ ನಿಮಗೆ ಕೊಟ್ಟಿದ್ದೇನೆ. ಅದೇನೆಂದರೆ, ಪವಿತ್ರ ವೇದದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾನು ಸಹ ಕಲಿತುಕೊಂಡ ಮೊದಲನೆಯ ಸಂಗತಿಗಳೊಳಗೆ ಪ್ರಮುಖವಾದ ಸಂಗತಿಯನ್ನೇ ನಿಮಗೆ ತಿಳಿಸಿದ್ದೇನೆ ಅದೇನೆಂದರೆ ಧರ್ಮಶಾಸ್ತ್ರದಲ್ಲಿ ತಿಳಿಸಿರುವ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳ ನಿವಾರಣೆಗಾಗಿ ಸತ್ತನು; ಹೂಣಲ್ಪಟ್ಟನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಾನು ಪಡೆದುಕೊಂಡದ್ದನ್ನು ಮುಖ್ಯವಾದುದು ಎಂದೆಣಿಸಿ ನಿಮಗೆ ಒಪ್ಪಿಸಿದ್ದೇನೆ. ಅದು ಯಾವುದೆಂದರೆ, ಪವಿತ್ರಗ್ರಂಥದಲ್ಲಿ ಹೇಳಿರುವ ಪ್ರಕಾರ ಕ್ರಿಸ್ತಯೇಸು ನಮ್ಮ ಪಾಪಗಳ ಪರಿಹಾರಕ್ಕಾಗಿ ಪ್ರಾಣತ್ಯಾಗ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಾನು ನಿಮಗೆ ತಿಳಿಸಿದ ಮೊದಲನೆಯ ಸಂಗತಿಗಳೊಳಗೆ ಒಂದು ಸಂಗತಿಯನ್ನು ನಿಮಗೆ ತಿಳಿಸಿಕೊಟ್ಟೆನು. ಅದು ನಾನು ಸಹ ಕಲಿತುಕೊಂಡದ್ದೇ. ಅದೇನಂದರೆ ಶಾಸ್ತ್ರದಲ್ಲಿ ಮುಂತಿಳಿಸಿರುವ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳ ನಿವಾರಣೆಗಾಗಿ ಸತ್ತನು; ಹೂಣಲ್ಪಟ್ಟನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾನು ಸ್ವೀಕರಿಸಿಕೊಂಡ ಸಂದೇಶವನ್ನು ನಾನು ನಿಮಗೆ ತಿಳಿಸಿದೆನು. ಆ ಸಂಗತಿಗಳು ಬಹಳ ಮುಖ್ಯವಾದುವುಗಳಾಗಿವೆ. ಪವಿತ್ರ ಗ್ರಂಥವು ಹೇಳುವಂತೆ, ಕ್ರಿಸ್ತನು ನಮ್ಮ ಪಾಪಗಳಿಗೋಸ್ಕರವಾಗಿ ಸತ್ತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಮಿಯಾ ಮಾನುನ್ ಘೆಟ್ಲೊ ತಸೆಚ್ ಸಗ್ಳ್ಯಾನ್ ಅದ್ದಿ ತುಮ್ಕಾ ದಿಲ್ಲಿ ಖಬರ್ ಖಲಿ ಕಾಯ್ ಮಟ್ಲ್ಯಾರ್ ಹಿ ತಿ: ಪವಿತ್ರ್ ಪುಸ್ತಕಾತ್ ಲಿವಲ್ಲ್ಯಾ ಪರ್‍ಕಾರ್ ಕ್ರಿಸ್ತ್ ಅಮ್ಚ್ಯಾ ಪಾಪಾಂಚ್ಯಾ ಸಾಟ್ನಿ ಮರ್ಲೊ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:3
38 ತಿಳಿವುಗಳ ಹೋಲಿಕೆ  

ನಾವು ನಮ್ಮ ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಕ್ರಿಸ್ತ ಯೇಸು ಶಿಲುಬೆಯ ಮೇಲೆ, “ನಮ್ಮ ಪಾಪಗಳನ್ನು ತಾವೇ ತಮ್ಮ ದೇಹದಲ್ಲಿ ಹೊತ್ತರು. ಅವರ ಗಾಯಗಳಿಂದ ನಿಮಗೆ ಗುಣವಾಯಿತು.”


ಈ ಯೇಸುವೇ ನಮ್ಮನ್ನು ಈಗಿನ ದುಷ್ಟ ಯುಗದೊಳಗಿಂದ ಬಿಡಿಸಬೇಕೆಂದು ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ ನಮ್ಮ ಪಾಪಗಳಿಗಾಗಿ ತಮ್ಮನ್ನೇ ಬಲಿಯಾಗಿ ಒಪ್ಪಿಸಿದರು.


ಕ್ರಿಸ್ತ ಯೇಸು ನಮ್ಮ ಪಾಪಗಳನ್ನು ಪರಿಹರಿಸುವ ಬಲಿಯಾಗಿದ್ದಾರೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳನ್ನೂ ಪರಿಹರಿಸುತ್ತಾರೆ.


ನಾನು ಅದನ್ನು ಯಾವ ಮನುಷ್ಯನಿಂದಲೂ ಪಡೆಯಲಿಲ್ಲ, ನನಗೆ ಯಾವ ಮನುಷ್ಯನೂ ಉಪದೇಶಿಸಲಿಲ್ಲ, ಆದರೆ ನಾನು ಅದನ್ನು ಕ್ರಿಸ್ತ ಯೇಸುವಿನ ಪ್ರಕಟನೆಯಿಂದಲೇ ಸ್ವೀಕರಿಸಿಕೊಂಡೆನು.


ನಂಬಿಗಸ್ತ ಸಾಕ್ಷಿಯೂ ಸತ್ತವರೊಳಗಿಂದ ಪ್ರಥಮವಾಗಿ ಜೀವಂತವಾಗಿ ಎದ್ದು ಬಂದವರೂ ಭೂರಾಜರಿಗೆ ಒಡೆಯರೂ ಆಗಿರುವ ಕ್ರಿಸ್ತ ಯೇಸುವಿನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ಅವರೇ ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದವರೂ ಆಗಿದ್ದಾರೆ.


ನಮ್ಮ ಪಾಪಗಳ ನಿಮಿತ್ತವಾಗಿ ಯೇಸುವನ್ನು ಮರಣಕ್ಕೆ ಒಪ್ಪಿಸಲಾಯಿತು ಮತ್ತು ನಮ್ಮನ್ನು ನೀತಿವಂತರನ್ನಾಗಿ ನಿರ್ಣಯಿಸಲು, ಜೀವದಿಂದ ಎಬ್ಬಿಸಲಾಯಿತು.


“ಖಡ್ಗವೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ ಎಚ್ಚರವಾಗು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಕುರುಬನನ್ನು ಹೊಡೆ, ಆಗ ಕುರಿಗಳು ಚದರಿಹೋಗುವುವು. ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು.


“ಮನುಷ್ಯಪುತ್ರನೇ, ನಾನು ನಿನ್ನನ್ನು ಇಸ್ರಾಯೇಲಿನ ಮನೆತನದವರಿಗೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಆದ್ದರಿಂದ ನೀನು ನನ್ನ ಬಾಯಿಂದ ಹೊರಡುವ ವಾಕ್ಯವನ್ನು ಕೇಳಿ, ನನ್ನ ಪರವಾಗಿ ಅವರನ್ನು ಎಚ್ಚರಿಸು.


ಕ್ರಿಸ್ತ ಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ದೇವರಿಗೆ ಸುಗಂಧ ಕಾಣಿಕೆಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಸಹ ಪ್ರೀತಿಯಿಂದ ಬಾಳಿರಿ.


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪವನ್ನಾಗಿ ಮಾಡಿದರು. ಹೀಗೆ ಕ್ರಿಸ್ತ ಯೇಸುವಿನಲ್ಲಿ ದೇವರ ನೀತಿಯನ್ನಾಗಿ ದೇವರು ನಮ್ಮನ್ನು ಮಾಡಿದರು.


ನಾನು ಕರ್ತ ದೇವರಿಂದಲೇ ಪಡೆದದ್ದನ್ನು ನಿಮಗೆ ಒಪ್ಪಿಸಿಕೊಟ್ಟಿದ್ದೇನೆ: ಕರ್ತ ಆಗಿರುವ ಯೇಸು ತಮ್ಮನ್ನು ಹಿಡಿದುಕೊಡಲಾದ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು,


ಆದರೆ ತಮ್ಮ ಕ್ರಿಸ್ತ ಯೇಸು ಹಿಂಸೆಗೊಳಗಾಗಬೇಕೆಂದು, ಎಲ್ಲಾ ಪ್ರವಾದಿಗಳ ಬಾಯಿಯ ಮುಖಾಂತರ ದೇವರು ಮುಂತಿಳಿಸಿದ್ದನ್ನು ಈ ರೀತಿ ನೆರವೇರಿಸಿದರು.


ಮರುದಿನ ಯೇಸು ತನ್ನ ಕಡೆಗೆ ಬರುತ್ತಿರುವುದನ್ನು ಯೋಹಾನನು ಕಂಡು, “ಇಗೋ, ಲೋಕದ ಪಾಪವನ್ನು ತೆಗೆದುಹಾಕುವ ದೇವರ ಕುರಿಮರಿ,


ಅವರಲ್ಲಿದ್ದ ಕ್ರಿಸ್ತ ಯೇಸುವಿನ ಆತ್ಮ, ಕ್ರಿಸ್ತ ಯೇಸುವಿಗೆ ಸಂಭವಿಸಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಮಹಿಮೆಗಳನ್ನೂ ಪ್ರವಾದಿಸಿದಾಗ, ಅದರ ಸಮಯ ಸಂದರ್ಭಗಳನ್ನು ಕಂಡುಹಿಡಿಯಲು ಪರಿಶೋಧನೆ ಮಾಡಿದರು.


ದೇವರ ಕೃಪಾ ಐಶ್ವರ್ಯಕ್ಕೆ ಅನುಸಾರವಾಗಿ ಕ್ರಿಸ್ತನಲ್ಲಿ ನಮಗೆ ಅವರ ರಕ್ತದ ಮೂಲಕ ಪಾಪಗಳ ಕ್ಷಮಾಪಣೆಯಾಗಿ ವಿಮೋಚನೆಯಾಯಿತು.


ಪವಿತ್ರ ವೇದದಲ್ಲಿ, “ಮರಕ್ಕೆ ತೂಗುಹಾಕಲಾದ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಬರೆದಿರುವಂತೆ ಕ್ರಿಸ್ತ ಯೇಸು ಮರಕ್ಕೆ ತೂಗುಹಾಕಲಾಗಿ ನಮಗೋಸ್ಕರ ಶಾಪಗ್ರಸ್ಥರಾಗಿ ನಿಯಮದ ಶಾಪದೊಳಗಿಂದ ನಮ್ಮನ್ನು ವಿಮೋಚಿಸಿದರು.


ಇದನ್ನು ನಂಬಿಕೆಯಿಂದ ಕ್ರಿಸ್ತ ಯೇಸುವಿನ ರಕ್ತದ ಮೂಲಕ ದೊರಕುವಂತೆ ದೇವರು ಕ್ರಿಸ್ತ ಯೇಸುವನ್ನು ನಮಗಾಗಿ ಪ್ರಾಯಶ್ಚಿತ್ತ ಬಲಿಯಾಗಿ ಒಪ್ಪಿಸಿದರು. ದೇವರು ಹಿಂದಿನ ಕಾಲದಲ್ಲಿ ಜನರು ಮಾಡಿರುವ ಪಾಪಗಳನ್ನು ದಂಡಿಸದೆ ತಮ್ಮ ನೀತಿಯನ್ನು ತೋರಿಸಿಕೊಡುವುದಕ್ಕಾಗಿಯೂ


ಇದು ಬಹುಜನರ ಪಾಪಗಳ ಪರಿಹಾರಕ್ಕೋಸ್ಕರ ಸುರಿಸಲಾಗುವ ಹೊಸ ಒಡಂಬಡಿಕೆಯ ನನ್ನ ರಕ್ತ.


ಕ್ರಿಸ್ತ ಯೇಸುವು ನೀತಿವಂತರಾಗಿದ್ದರೂ ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವುದಕ್ಕಾಗಿ, ಒಂದೇ ಸಾರಿ ಪಾಪಗಳಿಗೋಸ್ಕರ ಬಾಧೆಪಟ್ಟು ಶರೀರದಲ್ಲಿ ಮರಣಹೊಂದಿದರು. ಆದರೆ ಆತ್ಮದಲ್ಲಿ ಬದುಕುವವರಾದರು.


ಆ ಬಲಹೀನತೆಯ ಕಾರಣದಿಂದ ಆತನು ಜನರಿಗೋಸ್ಕರ ಹೇಗೋ ಹಾಗೆಯೇ ತನಗೋಸ್ಕರವೂ ಪಾಪಗಳಿಗಾಗಿ ಯಜ್ಞಗಳನ್ನು ಅರ್ಪಿಸಬೇಕಾದವನಾಗಿದ್ದಾನೆ.


ಪ್ರತಿಯೊಬ್ಬ ಮಹಾಯಾಜಕ ಮನುಷ್ಯರೊಳಗಿಂದ ಆರಿಸಲಾಗಿ ಕಾಣಿಕೆಗಳನ್ನೂ ಯಜ್ಞಗಳನ್ನೂ ಪಾಪಗಳಿಗಾಗಿ ಸಮರ್ಪಿಸಲು ಮನುಷ್ಯರ ಪರವಾಗಿ ದೇವರ ಕಾರ್ಯಗಳಿಗಾಗಿ ನೇಮಿಸಲಾಗುತ್ತಾನಲ್ಲಾ.


ನೀವು ಎಲ್ಲದರಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಂಡು, ನಾನು ನಿಮಗೆ ಒಪ್ಪಿಸಿಕೊಟ್ಟ ಉಪದೇಶಗಳನ್ನು ಬಿಗಿಯಾಗಿ ಅನುಸರಿಸುತ್ತಿರೆಂದು ನಿಮ್ಮನ್ನು ಹೊಗಳುತ್ತೇನೆ.


ನಾನು ನಿನಗೂ ಸ್ತ್ರೀಗೂ ನಿಮ್ಮ ಸಂತಾನಕ್ಕೂ ಆಕೆಯ ಸಂತಾನಕ್ಕೂ ವೈರತ್ವವನ್ನು ಇಡುವೆನು. ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು ಕಚ್ಚುವಿ.”


ಮನುಷ್ಯಪುತ್ರನಾದ ನನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೊರಟುಹೋಗುತ್ತೇನೆ. ಆದರೆ ಮನುಷ್ಯಪುತ್ರನಾದ ನನಗೆ ಯಾವನು ದ್ರೋಹಬಗೆಯುತ್ತಾನೋ ಆ ಮನುಷ್ಯನಿಗೆ ಕಷ್ಟ! ಆ ಮನುಷ್ಯನು ಹುಟ್ಟದೆ ಹೋಗಿದ್ದರೆ ಅವನಿಗೆ ಎಷ್ಟೋ ಒಳ್ಳೆಯದಾಗುತ್ತಿತ್ತು,” ಎಂದರು.


ಆಗ ಯೇಸು ಅವರಿಗೆ, “ಎಂಥ ಬುದ್ಧಿಹೀನರು ನೀವು, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬುವುದರಲ್ಲಿ ಮಂದ ಹೃದಯದವರೇ!


ಕಂಚುಕಿ ಈ ವಾಕ್ಯಭಾಗವನ್ನು ಓದುತ್ತಿದ್ದನು: “ವಧಿಸಲಿಕ್ಕೆ ಒಯ್ದ ಕುರಿಯಂತೆ ಅವರನ್ನು ಕರೆದುಕೊಂಡು ಹೋದರು. ಉಣ್ಣೆ ಕತ್ತರಿಸುವವರ ಮುಂದೆ ಇರುವ ಕುರಿಮರಿಯಂತೆ ಅವರು ಮೌನವಾಗಿದ್ದರು. ಇನ್ನು ಅವರು ತಮ್ಮ ಬಾಯಿ ತೆರೆಯಲೇ ಇಲ್ಲ.


ಪೌಲನು ತನ್ನ ವಾಡಿಕೆಯಂತೆ ಮೂರು ಸಬ್ಬತ್ ದಿನಗಳಂದು ಅವರ ಬಳಿ ಹೋಗಿ, ಅವರಲ್ಲಿ ಪವಿತ್ರ ವೇದಗಳ ಬಗ್ಗೆ ವಾದಿಸಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು