1 ಕೊರಿಂಥದವರಿಗೆ 15:32 - ಕನ್ನಡ ಸಮಕಾಲಿಕ ಅನುವಾದ32 ನಾನು ಎಫೆಸದಲ್ಲಿ ಕಾಡು ಮೃಗಗಳೊಂದಿಗೆ ಹೋರಾಟ ಮಾಡಿದ್ದು ಕೇವಲ ಮಾನವ ಕಾರಣಗಳಿಂದ ಮಾತ್ರವಾಗಿದ್ದರೆ, ಅದರಿಂದ ನನಗೇನು ಪ್ರಯೋಜನ? ಸತ್ತವರು ಎದ್ದುಬರುವುದಿಲ್ಲವಾದರೆ, “ತಿನ್ನೋಣ, ಕುಡಿಯೋಣ, ನಾಳೆ ಮರಣ ಹೊಂದೋಣ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ನಾನು ಎಫೆಸದಲ್ಲಿ ಮೃಗ ಯುದ್ಧ ಮಾಡಿದ್ದು ಕೇವಲ ಮಾನುಷಾಭಿಪ್ರಾಯದಿಂದಾದರೆ ನನಗೇನು ಪ್ರಯೋಜನ? ಸತ್ತವರು ಎದ್ದು ಬರುವುದಿಲ್ಲವಾದರೆ, ನಾವು ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಲೋಕ ಪ್ರಶಂಸೆಗಾಗಿ ನಾನು ಈ ಎಫೆಸದ ‘ಕಾಡುಮೃಗ’ಗಳೊಡನೆ ಹೋರಾಡಿದೆನಾದರೆ, ಅದರಿಂದ ಬರುವ ಲಾಭವಾದರೂ ಏನು? ಸತ್ತವರಿಗೆ ಪುನರುತ್ಥಾನವಿಲ್ಲವಾದರೆ, “ಬನ್ನಿರಿ, ತಿನ್ನೋಣ, ಕುಡಿಯೋಣ, ಕಾದಿದೆಯಲ್ಲ ನಾಳೆ ಮರಣ,” ಎಂಬ ನಾಣ್ನುಡಿಯಂತೆ ನಡೆಯಬಹುದಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ನಾನು ಎಫೆಸದಲ್ಲಿ ಮೃಗಗಳೊಂದಿಗೆ ಯುದ್ಧಮಾಡಿದ್ದು ಕೇವಲ ಮಾನುಷಾಭಿಪ್ರಾಯದಿಂದಾದರೆ ನನಗೇನು ಪ್ರಯೋಜನ? ಸತ್ತವರು ಎದ್ದು ಬರುವದಿಲ್ಲವಾದರೆ - ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಕೇವಲ ನನ್ನ ಮಾನುಷ ಸ್ವಭಾವದಿಂದ ನಾನು ಎಫೆಸದಲ್ಲಿ ದುಷ್ಟಮೃಗಗಳೊಂದಿಗೆ ಹೋರಾಡಿದ್ದರೆ, ಅದರಿಂದ ನನಗೇನು ಪ್ರಯೋಜನ? ಸತ್ತವರಿಗೆ ಪುನರುತ್ಥಾನವಿಲ್ಲದಿದ್ದರೆ, “ತಿನ್ನೋಣ, ಕುಡಿಯೋಣ, ಏಕೆಂದರೆ ನಾವು ನಾಳೆ ಸಾಯುತ್ತೇವೆ.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್32 ಮಾಜ್ಯಾ ಹ್ಯಾ ಮಾನುಸ್ ಪಾನಾಚ್ಯಾ ನದ್ರೆನ್ ಬಗುನ್, ಮಿಯಾ ಎಫೆಜಾತ್ ಜನಾವರಾಚ್ಯಾ ವಾಂಗ್ಡಾ ಕುಸ್ತಿ ಧರಿ ಹೊತ್ತೊ ತರ್, ಮಾಕಾ ತ್ಯಾತುರ್ ಕಾಯ್ ಫಾಯ್ದೊ ಗಾವಿ ಹೊತ್ತೊ? ಮರಲ್ಲಿ ಲೊಕಾ ಝಿತ್ತಿ ಹೊವ್ನ್ ಉಟಿನ್ಯಾತ್ ಹೊಲ್ಯಾರ್, “ಯೆವಾ ಅಮಿ ಖಾವ್ನ್ - ಜೆವ್ನ್ ಗಮ್ಮತ್ ಕರುವಾ ಕಶ್ಯಾಕ್ ಮಟ್ಲ್ಯಾರ್ ಅಮಿ ಉದ್ದ್ಯಾ ಮರುನ್ ಜಾತಾಂವ್.” ಮಟ್ಲ್ಯಾ ಸರ್ಕೆ ಕರುಚೆ ಪಡ್ಲೆ. ಅಧ್ಯಾಯವನ್ನು ನೋಡಿ |